ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾಂಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ ಆಯೋಜಿಸಿರುವ ರಜಾ ಮಜಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ವಿಶೇಷವಾಗಿ ಆಚರಿಸಲಾಯಿತು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮಾತನಾಡಿ ಮಗುವಿನ ಶಿಕ್ಷಣಕ್ಕೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದರೆ ಅದು ಸರಿಯಾದ ರೀತಿಯಲ್ಲಿ ಬಳಕೆ ಆಗುತ್ತಿಲ್ಲ ಆ ನಿಟ್ಟಿನಲ್ಲಿ ಶಿಕ್ಷಕರ ಮತ್ತು ಪೋಷಕರಿಬ್ಬರ ಜವಾಬ್ದಾರಿ ದೊಡ್ಡದು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಉದಯ ಗಾಂವ್ಕರ್ ಮಾತನಾಡಿ ಸರಕಾರಿ ಶಾಲೆ ಬಾಗಿಲು ಹಾಕಿತು ಎಂದರೆ ಹಲವಾರು ಸಂಬಂಧಗಳು ಕಡಿದು ಹೋಗುತ್ತದೆ. ಹಾಗಾಗಿ ಒಂದು ಊರಿನಲ್ಲಿ ಯಾವುದೇ ಸರ್ಕಾರಿ ಕಛೇರಿಗಳು ನಶಿಸಿ ಹೋಗಬಾರದು. ಪ್ರತಿ ಮಗುವು ಒಂದು ಊರಿಗೆ ರೇವಣಿ ಇದ್ದ ಹಾಗೆ ಪ್ರತಿ ಮಗುವಿನಲ್ಲಿ ಕೂಡ ವಿಭಿನ್ನವಾದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಪ್ರಯತ್ನ ಶಿಕ್ಷಕರಿಂದ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಸುಬ್ಬಣ್ಣ ಶೆಟ್ಟೆ ಬಾಂಡ್ಯರವರು ವಹಿಸಿದ್ದರು. ಈ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಮಾರಿಕಾಂಬಾ ಯೂತ್ ಕ್ಲಬ್ನ 14ನೇ ವರ್ಷದ ವಾರ್ಷಿಕೋತ್ಸವವನ್ನು ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಉದ್ಘಾಟಿಸಿದರು. ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿ ಮಕ್ಕಳಿಲ್ಲದ ನಾವು ಗಿಡಗಳನ್ನು ನೆಟ್ಟು ಅವುಗಳನ್ನು ಕಷ್ಟಪಟ್ಟು ಮಕ್ಕಳಂತೆ ತಬ್ಬಿಕೊಂಡು ಮುತ್ತಿಕ್ಕಿ ಸಾಕಿ ಸಲಹಿದ್ದರಿಂದ ಇಂದು ನಾನು ಸಾವಿರ ಮಕ್ಕಳ ತಾಯಿಯಾಗಿದ್ದೇನೆ ಎಂದು ಹೇಳಿದರು. ಮಕ್ಕಳಿಲ್ಲದ ಕೊರಗನ್ನು ನೀಗಿಸಿಕೊಳ್ಳುವ ಉದ್ದೇಶದಿಂದ ಅವಿದ್ಯಾವಂತರೂ ಆಗಿದ್ದ ನಾನು ಮತ್ತು ನನ್ನ ಪತಿ ಅತ್ಯಂತ ಕಷ್ಟದಲ್ಲಿ ವರ್ಷಕ್ಕೆ ಹತ್ತು ಗಿಡಗಳಂತೆ ಹತ್ತು ವರ್ಷಗಳಲ್ಲಿ ಸುಮಾರು ನಾಲ್ಕು ಕಿಮಿ ಉದ್ದಕ್ಕೂ ಮರಗಳನ್ನು ಬೆಳೆಸಿದ್ದರಿಂದ ಇಂದು ಪಕ್ಷಿಗಳಿಗೆ ಆಶ್ರಯ ಹಾಗೂ ದಾರಿಹೋಕರಿಗೆ ನೆರಳು ನೀಡುವಂತಾಗಿದೆ. ಈ ನೆಲೆಯಲ್ಲಿ ಇಂದಿನ ಪೀಳಿಗೆಯವರೂ ಕೂಡಾ ಪ್ರಕೃತಿಯನ್ನು ಪ್ರೀತಿಸುವದ ಮೂಲಕ ತಮ್ಮ ಪರಿಸರದಲ್ಲಿ ಗಿಡಗಳನ್ನು ಬೆಳೆಸಿದಲ್ಲಿ ಭೂಮಿ ಹಸಿರಾಗಿ ಸಂಪತ್ಭರಿತವಾಗುತ್ತದೆ ಎಂದರು.ಯೂತ್ ಕ್ಲಬ್ನ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಐಎಫ್ಎಸ್ ಅಧಿಕಾರಿ ಬಿ. ಜಗನ್ನಾಥ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುಂಬಯಿನಿಂದ ಏರ್ನಾಕುಲಂಗೆ ತೆರಳುತ್ತಿದ್ದ ಮಂಗಳ ಎಕ್ಸ್ಪ್ರೆಸ್ನಲ್ಲಿ ರೈಲಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಚಿದಾಗಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಬೈಂದೂರು ತಾಲೂಕಿನ ಕಂಬದಕೋಣೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮುಂಬಯಿನಿಂದ ಎರ್ನಾಕುಲಂಕ್ಕೆ ತೆರಳುತ್ತಿರುವ ಮಂಗಳ ಎಕ್ಸ್ಪ್ರೆಸ್ (೧೨೬೧೮) ರೈಲಿನ ಬಿ-೪ ಎಸಿ ಬೋಗಿಯಲ್ಲಿ, ಎಸಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ, ಅದನ್ನು ದುರಸ್ತಿಪಡಿಸುವಂತೆ ಪ್ರಯಾಣಿಕರೊಬ್ಬರು ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದಿದ್ದು, ತಕ್ಷಣ ಆಗಮಿಸಿದ ತಂತ್ರಜ್ಞರು ಅದನ್ನು ದುರಸ್ತಿ ಮಾಡಿ ತೆರಳಿದ್ದರು ಎನ್ನಲಾಗಿದೆ. ತಡರಾತ್ರಿ ೧.೨೦ರ ಸುಮಾರಿಗೆ ರೈಲು ಬಿಜೂರು ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಕಂಬದಕೋಣೆಯಲ್ಲಿ ತೆರಳುತ್ತಿದ್ದಾಗ ಬೋಗಿಯ ಎಸಿಯ ಫ್ಯಾನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ರೈಲನ್ನು ನಿಲ್ಲಿಸಲಾಗಿದ್ದು ಅಲ್ಲಿನ ಸ್ಥಳೀಯರು ತಮ್ಮ ಪಂಪ್ಸೆಟ್ನಿಂದ ನೀರನ್ನು ಹಾಕಿ ಬೆಂಕಿಯನ್ನು ಹತೋಟಿಗೆ ತರುವ ಕೆಲಸ ಮಾಡಿದ್ದರು. ಬೋಗಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕುಂದಾಪುರದಲ್ಲಿ ಇಳಿಯಬೇಕಾಗಿದ್ದ ಮಹಿಳೆಯೊಬ್ಬರು ಅದನ್ನು ಗಮನಿಸಿ, ತಕ್ಷಣ ಇತರ ಪ್ರಯಾಣಿಕರನ್ನು ಎಚ್ಚರಿಸಿ, ರೈಲ್ವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರು ನಗರಕ್ಕೆ ಉದ್ಯೋಗ, ಸಂದರ್ಶನ, ಪ್ರವೇಶ ಪರೀಕ್ಷೆ, ಇತ್ಯಾದಿಗಳಿಗೆ ಹಾಜರಾಗಲು ಒಂಟಿಯಾಗಿ ಬರುವಂತಹ ಎಲ್ಲಾ ವರ್ಗದ ಮಹಿಳೆಯರಿಗೆ ವರಮಾನ ಮಿತಿಯಿಲ್ಲದೇ 3 ದಿನಗಳವರೆಗೂ ಉಚಿತ ಊಟೋಪಹಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಬೆಂಗಳೂರಿನಲ್ಲಿರುವ ಟ್ರಾನ್ಸಿಟ್ ಹಾಸ್ಟಲ್ಗಳಲ್ಲಿ ಕಲ್ಪಿಸಲಾಗುವುದು. ಬೆಂಗಳೂರು ನಗರದಲ್ಲಿನ ಇಂತಹ 13 ವಸತಿನಿಲಯಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು. ಈ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ವಕ್ವಾಡಿಯ ನಾಗರಾಜ್ ಶೆಟ್ಟಿ ಇವರಿಗೆ ಜೇಸಿಐ ಕುಂದಾಪುರ ಸಿಟಿ ವತಿಯಿಂದ ಧನಸಹಾಯ ಮಾಡಲಾಯಿತು. ಅಧ್ಯಕ್ಷ ಪ್ರಶಾಂತ್ ಹವಾಲ್ದಾರ್ ಪೂರ್ವಾಧ್ಯಕ್ಷ ಶ್ರೀಧರ್ ಸುವರ್ಣ ಹಾಗೂ ಕಾರ್ಯದರ್ಶಿ ಮಹೇಶ್ ಶೇಟ್ ಧನಸಹಾಯವನ್ನು ಅವರ ಪತ್ನಿ ಶಾಂತಾ ಇವರ ಬಳಿ ನೀಡಲಾಯಿತು ಈ ಸಂದರ್ಭದಲ್ಲಿ ಮನೆಯವರಾದ ಸುಜಾತಾ, ಗಣೇಶ್ ಇವರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಏಪ್ರಿಲ್ 27 ರಂದು ಬೆಳಿಗ್ಗೆ 11 ಗಂಟೆಯಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ, 29 ರಂದು ಬೆಳಿಗ್ಗೆ 11 ಗಂಟೆಯಿಂದ 12:30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ 30ರಂದು 11 ಗಂಟೆಯಿಂದ 12:30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಕರ್ನಾಟಕ ಲೋಕಾಯುಕ್ತ ಉಡುಪಿ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ:0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂ.ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೈವಸ್ಥಾನಗಳು ಸ್ವಾಭಿಮಾನ ಹಾಗೂ ಪ್ರತಿಭಟನೆಯ ಕೇಂದ್ರಗಳಾಗಿ ಸ್ಥಾಪಿತವಾದವುಗಳು. ಅವು ನಿಜವಾಗಿ ನಮ್ಮ ಸಮುದಾಯದ ಮೂಲವಾಗಿದ್ದು ಸರಳವಾದ ಆಚರಣೆ, ಎಲ್ಲರನ್ನೂ ಒಳಗೊಳ್ಳುವ ಪ್ರಕ್ರಿಯೆ ಮತ್ತು ಮನುಷ್ಯ ಕೇಂದ್ರವಾಗಿ ಯೋಚನೆ ಮಾಡುವ ಕ್ರಮವೇ ಇಲ್ಲಿ ಪ್ರಧಾನವಾದುದು ಎಂದು ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರದೀಪಕುಮಾರ್ ಶೆಟ್ಟಿ ಕೆಂಚನೂರು ಹೇಳಿದರು. ಇಲ್ಲಿನ ಯಡ್ತರೆ ಶ್ರೀ ಪಾಣ್ತಿಗರಡಿ ಹಾಗುಳಿ ಮತ್ತು ಪರಿವಾರ ದೈವಸ್ಥಾನದಲ್ಲಿ ಪುನರ್ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಶುಕ್ರವಾರ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಒಳ್ಳೆಯದನ್ನು ಹಾಗೂ ಉಪಕಾರ ಮಾಡುವವರನ್ನು ದೇವರಂತೆ ಭಾವಿಸುವುದು ಮನುಷ್ಯಸಹಜ ಗುಣವಾಗಿದ್ದು, ಕರಾವಳಿಯ ಬಹುಪಾಲು ದೈವಗಳು ಇಂತಹ ಗುಣಗಳಿಂದಲೇ ದೈವತ್ವದ ಸ್ಥಾನ ಪಡೆದು ಇಂದಿಗೂ ಪೂಜಿಸಲ್ಪಡುತ್ತಿದೆ. ಇಲ್ಲಿ ಮೇಲು ಕೀಳು ಎಂಬ ಭೇದಭಾವವಿಲ್ಲದೇ, ಹತ್ತಿರದಿಂದ ದೇವರನ್ನು ಕಾಣುವ ಕ್ರಮ ರೂಡಿಯಲ್ಲಿದೆ. ದೈವಸ್ಥಾನದ ಆಚರಣೆಗಳು ಸಮುದಾಯದ ರೂಪಕವಾಗಿದ್ದು ಮುಂದಿನ ತಲೆಮಾರು ಚೈತನ್ಯಶೀಲರಾಗಿ ಪುನಃ ಬೇರನ್ನು ಕಂಡುಕೊಂಡು, ಸಹಬಾಳ್ವೆಯ ಸಮಾಜವನ್ನು ಕಂಡುಕೊಳ್ಳುವಂತಾಗಬೇಕು ಎಂದು ಆಶಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕಿನ ಉಳ್ಳೂರು ಗ್ರಾಮದ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನರಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಶ್ರೀ ಗಣಪತಿ, ಶಾಸ್ತಾ, ನಾಗ ದೇವರ ನೂತನ ಪ್ರತಿಷ್ಠೆ ಹಾಗೂ ನೂತನ ಸುತ್ತು ಪೌಳಿ, ತೀರ್ಥಬಾವಿ, ರಾಜಗೋಪುರಗಳ ಅರ್ಪಣಾ ಮಹೋತ್ಸವವು ಎ.29ರಿಂದ ಮೇ.02ರ ವರೆಗೆ ನಡೆಯಲಿದೆ. ಎ.29ರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ssಸ್ವಸ್ತಿಪುಣ್ಯಾಹ ವಾಚನ ಮತ್ತು ನಾಂದಿ, ಎ.30ರ ಬೆಳಿಗ್ಗೆ ಶ್ರೀ ಗಣಪತಿ ದೇವರಿಗೆ ಬ್ರಹ್ಮ ಬ್ರಹ್ಮಕಲಶ ಸ್ಥಾಪನೆ, ಸಂಜೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸಹಸ್ರ ಕುಂಭ ಸ್ಥಾಪನೆ,ರ ಬೆಳಿಗ್ಗೆ ಸ್ವಸ್ತಿಪುಣ್ಯಾಹ ವಾಚನ, ಮಧುಪರ್ಕ ಪೂಜೆ, ಕೌತುಕ ಬಂಧನ, ಋತ್ವಿಗ್ವರಣೆ, ಗಣಹೋಮ, ನವಗ್ರಹ ಹೋಮ, ಬಿಂಬಶುದ್ಧಿ, ಕಳಶ ಸ್ಥಾಪನೆ, ಬಿಂಬಶುದ್ಧಿ ಹೋಮ, ಬಿಂಬ ಜಲಾಧಿವಾಸ, ಬಿಂಬಶುದ್ಧಿ ಕಲಶಾಭಿಷೇಕ, ನೇತ್ರೋನ್ಮೀಲನ, ಶಯ್ಯಾಕಲ್ಪನ, ಅನ್ನ ಸಂತರ್ಪಣೆ ನಡೆಯುವುದು. ಸಂಜೆ ಸ್ಥಾನ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜಾ, ವಾಸ್ತು ಹೋಮ, ಮಂಟಪ ಸಂಸ್ಕಾರ, ಅಧಿವಾಸ…
ಶಿವಮೊಗ್ಗ ಲೋಕಸಭಾ ಚುನಾವಣೆ: ಶೇ. 73.59 ಮತದಾನ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 75.29 ಮತ ಚಲಾವಣೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿವಮೊಗ್ಗ ಲೋಕಸಭಾ ಚುನಾವಣೆಗೆ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಂತೆ ನಡೆದ ಮತದಾನ ಪೂರ್ಣಗೊಂಡಿದ್ದು, ಅಲ್ಲಲ್ಲಿ ಸಣ್ಣಪುಟ್ಟ ಅಡಚಣೆಗಳ ಹೊರತಾಗಿ ಬಹುಪಾಲು ಯಶಸ್ವಿಯಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ. 73.59ರಷ್ಟು ಮತದಾನವಾಗಿದ್ದರೇ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 75.29ರಷ್ಟು ಮತದಾನವಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೂರು ಗ್ರಾಮ ಗರಡಿಬೆಟ್ಟು ಮತದಾರರ ಮತದಾನ ಬಹಿಷ್ಕಾರ ಮುಂದಾಗಿದ್ದರಿಂದ ಮತದಾನದ ಪ್ರಮಾಣ ಕುಸಿಯಿತು. ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರ ಮಹೇಶ್ ನಾಯ್ಕ್ ಎಂಬುವರ ಹೆಸರು ಚುನಾವಣಾ ಪಟ್ಟಿಯಿಂದ ನಾಪತ್ತೆಯಾಗಿದ್ದು, ಮತದಾನದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹೆಮ್ಮಾಡಿ, ವಂಡ್ಸೆ, ಹಕ್ಲಾಡಿ, ನೆಂಪು ಬೂತ್ಗಳಲ್ಲಿ ತಾಂತ್ರಿಕ ದೋಷ ಉಂಟಾಗಿದ್ದರಿಂದ ಮತದಾನ ಕೊಂಚ ನಿಧಾನವಾಯಿತು. ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಲ್ಲೂರು ಸರ್ಕಾರಿ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಗರಡಿಬೆಟ್ಟು ಪರಿಸರದ ಮತದಾರರು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಬಿಜೂರಿನಲ್ಲಿ ಚುನಾವಣೆ ಬಹಿಷ್ಕಾರ ಬ್ಯಾನರ್ ಹಾಕಿದ್ದನ್ನು ಅಧಿಕಾರಿಗಳು ಮನ ಒಲಿಸಿ ತೆರವು ಮಾಡಿದರು. ಆದರೆ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿ ಚುನಾವಣೆ ಬಹಿಷ್ಕರಿಸಿದ್ದರೆ. ಕಳೆದ ೨೦ ವರ್ಷದಿಂದ ನೀರಿನ ಸಮಸ್ಯೆ ಪರಿಹಾರ ಮಾಡುವಂತೆ ಕೇಳಿಕೊಂಡರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಂಜೆಯ ವೇಳೆಗೆ ಆ ಬೂತ್ನಲ್ಲಿ ಶೇ.50ರಷ್ಟು ಮತದಾನವಷ್ಟೇ ಆಗಿದೆ.
