Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ವಂಡ್ಸೆಯ ಬೆಳ್ಳಾಲದ ಮೂಡಮುಂದ ಶಾಲೆಯಲ್ಲಿ ಮತ ಚಲಾಯಿಸಿದರು. ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕನ್ಯಾನ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬಿಕರ ಜೊತೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಹುಟ್ಟೂರು ಕೆರಾಡಿಯಲ್ಲಿ ಮತದಾನ ಮಾಡಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿಯಲ್ಲಿ ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದ ನಟ ರಿಷಬ್ ಶೆಟ್ಟಿ ಬಳಿಕ ಎಲ್ಲೂರು ತಪ್ಪದೇ ಮತದಾನ ಮಾಡುವಂತೆ ಕೇಳಿಕೊಂಡರು. https://publish.twitter.com/oembed? url=https://twitter.com/kundapra/status/1120719281149239298

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ೨೩ರಂದು ನಡೆಯಬೇಕಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆಯನ್ನು ನಿರ್ವಹಿಸಬೇಕಾದ ಎಲ್ಲ ಸಿಬ್ಬಂದಿ ಸೋಮವಾರ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಿಸಿರುವ ಮಸ್ಟರಿಂಗ್ ಕೇಂದ್ರದಲ್ಲಿ ಹಾಜರಾಗಿ ತಮ್ಮತಮ್ಮ ಕೇಂದ್ರಗಳಿಗೆ ಅಗತ್ಯವಿರುವ ಮತದಾನ ಯಂತ್ರ ಮತ್ತು ಅನ್ಯ ಪರಿಕರಗಳನ್ನು ಸ್ವೀಕರಿಸಿ, ತಮಗೆ ನಿಗದಿಗೊಳಿಸಿದ ವಾಹನಗಳಲ್ಲಿ ತೆರಳಿದರು. ಸಿಬ್ಬಂದಿ ಹಾಜರಾತಿ ದಾಖಲಿಸಲು ಮತ್ತು ಪರಿಕರಗಳನ್ನು ವಿತರಿಸಲು ಸೆಕ್ಟರ್ ಅಧಿಕಾರಿಗಳ ನೇತೃತ್ವದ ೨೦ ವಿಭಾಗಗಳನ್ನು ತೆರೆಯಲಾಗಿತ್ತು. ಅವುಗಳಿಗೆ ಸಂಬಂಧಿಸಿದ ವಿವರಗಳ ಫಲಕಗಳನ್ನು ಅಲ್ಲಲ್ಲಿ ಪ್ರದರ್ಶಿಸಲಾಗಿತ್ತು. ಬೆಳಗ್ಗಿನಿಂದ ಬಂದ ಸಿಬ್ಬಂದಿ ಫಲಾಹಾರ ಪೂರೈಸಿ, ತಮ್ಮ ವಿಭಾಗದಲ್ಲಿ ಸೇರಿ ಪರಸ್ಪರ ಪರಿಚಯ ಮಾಡಿಕೊಂಡು, ಪರಿಕರಗಳನ್ನು ಸ್ವೀಕರಿಸಿ, ಪರಿಶೀಲನೆ ನಡೆಸಿದರು. ಮಧ್ಯಾಹ್ನದ ಊಟದ ಬಳಿಕ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದ್ದ ಮತಯಂತ್ರಗಳನ್ನು ಪಡೆದು, ಅವುಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಂಡರು. ಆ ಬಳಿಕ ತಮಗೆ ನಿಗದಿಯಾಗಿದ್ದ ವಾಹನಗಳ ಮೂಲಕ ಮತಗಟ್ಟೆಗಳತ್ತ ಮುಖ ಮಾಡಿದರು. ಅತ್ತ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸುವ ಕಾರ್ಯ ಕಾಲೇಜಿನ…

Read More

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲೂ ಗೆಲುವಿನ ಅಂತರ ಹೆಚ್ಚಿಸಿಕೊಳ್ಳಲು ಸರ್ಕಸ್ ಬೈಂದೂರು: ರಾಜ್ಯದಲ್ಲಿ 23ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡ ಸಿದ್ಧಗೊಂಡಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಕ್ಕೆ ಸೇರಿರುವ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಅಧಿಕ ಮತಗಳನ್ನು ಗಳಿಸಿ ಮೇಲುಗೈ ಸಾಧಿಸಲು ಹಾಲಿ ಸಂಸದ ಬಿಜೆಪಿಯ ಬಿ. ವೈ. ರಾಘವೇಂದ್ರ ಮತ್ತು ಅವರ ಪ್ರತಿಸ್ಪರ್ಧಿ ಮೈತ್ರಿಕೂಟದ ಭಾಗವಾದ ಜೆಡಿಎಸ್ನ ಮಧು ಬಂಗಾರಪ್ಪ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಕಾರಣ ತೆರವಾದ ಸ್ಥಾನಕ್ಕೆ ಕಳೆದ ವರ್ಷ ನವೆಂಬರ್ 3ರಂದು ಉಪ ಚುನಾವಣೆ ನಡೆದಿತ್ತು. ಅದರಲ್ಲಿ ಅವರ ಪುತ್ರ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರೇ ಎದುರಾಳಿಗಳಾಗಿದ್ದು, ರಾಘವೇಂದ್ರ ವಿಜಯಿಯಾಗಿದ್ದರು. ಇದೀಗ ಐದು ತಿಂಗಳು, ಇಪ್ಪತ್ತು ದಿನಗಳ ಬಳಿಕ ಇದೇ 23ರಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಆಶ್ರಯದಲ್ಲಿ ಒಂದು ತಿಂಗಳಿನಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಶನಿವಾರ ತ್ರಾಸಿ ಕಡಲತೀರದಲ್ಲಿ ವಿಶಿಷ್ಟವಾಗಿ ಸಮಾಪನಗೊಂಡಿತು. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧು ಬಿ. ರೂಪೇಶ್, ಜಿಲ್ಲಾ ಪೊಲೀಸ್ ಅಧಿಕಾರಿ ನಿಶಾ ಜೇಮ್ಸ್ ಮತ್ತು ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮವಾಗಲಿ, ಭಾಷಣಗಳಾಗಲಿ ಇರಲಿಲ್ಲ. ಭಾಗವಹಿಸಿದ್ದ ಎಲ್ಲರೂ ಮತದಾನದ ಪಾವಿತ್ರ್ಯ ರಕ್ಷಿಸುವ ಪ್ರತಿಜ್ಞೆ ಸ್ವೀಕರಿಸಿದರು. ಪ್ರಮುಖರು ಬಲೂನ್‌ಗಳನ್ನು ಹಾರಿ ಬಿಡುವುದರ ಮೂಲಕ ಅಭಿಯಾನದ ಸಮಾಪನ ಘೋಷಿಸಿದರು. ಅದರ ಪೂರ್ವದಲ್ಲಿ ಖ್ಯಾತ ಗಾಯಕ ಗಣೇಶ ಗಂಗೊಳ್ಳಿ ಭಾವಗೀತೆಗಳನ್ನು, ಮತದಾನದ ಮಹತ್ವ ಸಾರುವ ಹಾಡುಗಳನ್ನು ಹಾಡಿದರು. ಮರವಂತೆಯ ಕೊರಗ ತನಿಯ ಕಲಾತಂಡದ ಸದಸ್ಯರು ಡೋಲು ವಾದನ ಪ್ರಸ್ತುತ ಪಡಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮೀನುಗಾರರ ಸಮುದಾಯದ ಮುಖಂಡ ಹಾಗೂ ಉದ್ಯಮಿ ಜಿ.ಶಂಕರ್ ಅವರು ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕರಾದ ತಾರಾ ಅವರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಜಾಲತಾಣಗಳಲ್ಲಿ ಸುದ್ದಿಯಾಗಿದೆ. ಶುಕ್ರವಾರ ಬೈಂದೂರಿನ ಬಗ್ವಾಡಿಯಲ್ಲಿ ಮಹಿಷಾಸುರ ಮರ್ಧಿನಿ ದೇವಸ್ಥಾನದ ರಥೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯುತ್ತಿತ್ತು. ಈ ಸಂದರ್ಭ ಅಲ್ಲಿಗೆ ಬಂದ ತಾರಾ ಹಾಗೂ ಶಾಸಕ ಸುಕುಮಾರ ಶೆಟ್ಟಿ ಅವರ ವಿರುದ್ಧ ಶಂಕರ್ ವಾಗ್ದಾಳಿ ನಡೆಸಿದರು. ‘ಸಜ್ಜನರು (ಮೊಗವೀರರು) ರೊಚ್ಚಿಗೆದ್ದರೆ ಯಾರ ಮಾತನ್ನೂ ಕೇಳುವುದಿಲ್ಲ. ಅದಕ್ಕೆ ಅವಕಾಶ ಕೊಡಬೇಡಿ. ಮೀನುಗಾರರು ನಾಪತ್ತೆಯಾಗಿ 150 ದಿನಗಳು ಕಳೆದಿವೆ. ಇನ್ನೂ ಹುಡುಕುತ್ತಲೇ ಇದ್ದೇವೆ ಎಂದರೆ ಏನರ್ಥ. ಸರ್ಜಿಕಲ್ ಸ್ಟ್ರೈಕ್ ಮಾಡಲು ಸಾಧ್ಯವಿದೆ, ಬಡಪಾಯಿ ಮೀನುಗಾರರನ್ನು ಹುಡುಕಿಕೊಡಲು ನಿಮಗೆ ಸಾಧ್ಯವಿಲ್ಲವೇ ಎಂದು ತಾರಾ ಅವರನ್ನು ಜಿ.ಶಂಕರ್ ತರಾಟೆಗೆ ತೆಗೆದುಕೊಂಡರು. ‘ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಈಚೆಗೆ ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಭೇಟಿನೀಡಿ ಸಾಂತ್ವನ ಹೇಳಿದ್ದಾರೆ. ಶೋಧ ಕಾರ್ಯಾಚರಣೆಯನ್ನು…

Read More

ಸರ್ಜಿಕಲ್ ಸ್ಟೈಕ್ ಆಗಬೇಕಿರುವುದು ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದ ಸೈನಿಕರ ಬಗ್ಗೆ ಎಲ್ಲಾ ಪಕ್ಷಗಳಿಗೂ ಗೌರವವಿದೆ. ಆದರೆ ಪ್ರಧಾನಿ ಮೋದಿಯವರು ಸೈನಿಕರನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿದ್ದಾರೆ. ದೇಶದಲ್ಲಿನ ನಿರುದ್ಯೋಗ, ಭೃಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಸರ್ಜಿಕಲ್ ಸ್ಟೈಕ್ ಮಾಡಬೇಕಿದ್ದ ಅವರು ಭ್ರಮೆಯಿಂದ ಜನರನ್ನು ಮರಳು ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಆರೋಪಿಸಿದರು. ಶನಿವಾರ ಮಧ್ಯಾಹ್ನ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಈ ಹಿಂದೆ ೧೪ ಬಾರಿ ಸರ್ಜಿಕಲ್ ಸ್ಟೈಕ್ ನಡೆದಿತ್ತು, ಅಂದಿನ ಪ್ರಧಾನಿಗಳು ಯಾರೂ ಇದನ್ನು ತಮ್ಮ ಸಾಧನೆ ಎಂಬಂತೆ ಬಿಂಬಿಸಿಕೊಳ್ಳದೆ ಗೌಪ್ಯತೆ ಕಾಪಾಡಿಕೊಂಡಿದ್ದರು. ಜಿಎಸ್‌ಟಿ ರೂಪದಲ್ಲಿ ಹಿಂದಿನ ಕಾಲದ ತಲೆ ಕಂದಾಯವನ್ನು ಜನರಿಂದ ವಸೂಲಿ ಮಾಡುತ್ತಿದ್ದಾರೆ ಎಂದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದು, ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ, ಮುಂದೆ ಈ ದೇಶದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ, ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಯಡ್ತರೆ ಶ್ರೀ ಪಾಣ್ತಿಗರಡಿ ಹಾಗುಳಿ ಮತ್ತು ಪರಿವಾರ ದೈವಸ್ಥಾನದಲ್ಲಿ ಶುಕ್ರವಾರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಯಶಸ್ವಿಯಾಗಿ ನೆರವೇರಿದವು. ಅಂದು ಬೇರೀತಾಡನ ಸಹಿತ ವಾದ್ಯ ಘೋಷದೊಂದಿಗೆ ಪ್ರಾತಃ ಪೂಜೆ, ಶ್ರೀ ದೈವಗಳಿಗೆ ಕಲಾ ತತ್ವಹೋಮ, ಮಿಥುನ ಲಗ್ನದಲ್ಲಿ ಅಷ್ಟೋತ್ತರ ಪರಿಕಲಶ ಸಹಿತ ಬ್ರಹ್ಮಕಲಷಾಭಿಷೇಕ, ಪುಪ್ಪಾಲಂಕಾರ ಅಷ್ಟೋತ್ತರ ಅರ್ಚನೆ, ಮಹಾ ನೈವೇದ್ಯ ಸಮರ್ಪಣೆ, ಮಹಾಮಂಗಳಾರತಿ, ಪ್ರಸನ್ನ ಪೂಜೆ, ಪ್ರಾರ್ಥನೆ, ದಿಗ್ಬಿಲಿ, ಧ್ವಜ ಅವರೋಹಣ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವೇ. ಮೂ. ಜ್ಯೋತಿಷಿ ರಮೇಶ್ ಭಟ್ ಭಟ್ಕಳ ಅವರ ಆದ್ವರ್ಯದಲ್ಲಿ ಜರುಗಿದವು. ಈ ಸಂದರ್ಭ ಶ್ರೀ ಪಾಣ್ತಿಗರಡಿ ಹಾಗುಳಿ ಮತ್ತು ಪರಿವಾರ ದೈವಸ್ಥಾನ ಜೀಣೋದ್ಧಾರ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮೊಕ್ತೇಸರರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು. ಧಾರ್ಮಿಕ ಕಾರ್ಯಕ್ರಮದ ಬಳಿಕ ಮಹಾಅನ್ನಸಂತರ್ಪಣೆ ಜರುಗಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಲವತ್ತಾರು ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ ಎಷ್ಟು ಜನ ರೈತರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂಬುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಮನ್ನಾ ಮಾಡಿದ್ದೇವೆಂದು ಹೇಳುವವರು ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಚುನಾವಣೆಯ ಮುನ್ನಾವಾದರೂ ಶ್ವೇತಪತ್ರ ಹೊರಡಿಸಲಿ ಆಗ ಜನರಿಗೆ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ರಾಜ್ಯ ಬಿಜೆಪಿ ನಾಯಕಿ, ಚಿತ್ರ ನಟಿ ತಾರಾ ಹೇಳಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಕೃಷಿಕರ ಕಲ್ಯಾಣಕ್ಕಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿತ್ತು. ಆದರೆ ರಾಜ್ಯದಲ್ಲಿನ ಸಂಮಿಶ್ರ ಸರಕಾರ ಅರ್ಹ ರೈತರ ಪಟ್ಟಿಯನ್ನೇ ಕೇಂದ್ರಕ್ಕೆ ಸಮರ್ಪಕವಾಗಿ ನೀಡದೇ ಕೃಷಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಈಗ ಮೋದಿ ಅವರು ಕೇವಲ ವ್ಯಕ್ತಿಯಾಗಿರದೇ ದೇಶದ ಬಹುದೊಡ್ಡ ಶಕ್ತಿಯಾಗಿದ್ದಾರೆ. ೨೦೧೪ರಲ್ಲಿ ಕೇವಲ ಮೋದಿ ಅವರ ಹೆಸರಿನಲ್ಲಿ ಚುನಾವಣೆ ಎದುರಿತ್ತಿದ್ದೇವೆ. ಆದರೆ ಈಗ ಮೋದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ಶ್ರೀ ಪಾಣ್ತಿಗರಡಿ ಹಾಗುಳಿ ಮತ್ತು ಪರಿವಾರ ದೈವಸ್ಥಾನದಲ್ಲಿ ಜರುಗುತ್ತಿರುವ ಪುನರ್‌ಪ್ರತಿಷ್ಠಾ ಬ್ರಹ್ಮಕಶಾಭಿಷೇಕ ಮಹೋತ್ಸವದ ಅಂಗವಾಗಿ ದೈವಗಳ ಬಿಂಬಗಳನ್ನು ಗುರುವಾರ ಪುರಮೆರವಣಿಗೆಯ ಮೂಲಕ ದೈವಸ್ಥಾನಕ್ಕೆ ಕೊಂಡೊಯ್ಯಲಾಯಿತು. ಶ್ರೀ ಪಾಣ್ತಿಗರಡಿ ಹಾಗುಳಿ ಮತ್ತು ಪರಿವಾರ ದೈವಗಳ ಬಿಂಬಗಳನ್ನು ವಾಸ್ತುಶಿಲ್ಪಿಗಳು ಶಿಲ್ಪಿ ಶಸ್ತ್ರ ಪೂಜೆಯ ಬಳಿಕ ದೇವಳದ ಜೀಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮೋಹನ ಪೂಜಾರಿ ಉಪ್ಪುಂದ ಅವರಿಗೆ ಹಸ್ತಾಂತರಿಸಿದರು. ಬಳಿಕ ಶಿಲ್ಪಿಗಳನ್ನು ಗೌರವಿಸಲಾಯಿತು. ಬಳಿಕ ಬಿಂಬ ಪರಿಗ್ರಹ ಬಿಂಬ ಶುದ್ಧಿ ಹೋಮ, ಪೂಜೆ, ಶಯ್ಯಾಕಲ್ಪ ಬಿಂಬಾಧಿವಾಸ ಹೋಮ, ಕಲಶ ಮಂಡಲ ರಚನೆ, ಮಂಡಲ ಪೂಜೆ, ಅಷ್ಟೋತ್ತರ ಪರಿಕಲಶ ಸಹಿತ ಬ್ರಹ್ಮಕಲಶ ಸ್ಥಾನನೆ, ಕಲಶಾಧಿವಾಸ ಹೋಮ, ಶ್ರೀ ದೈವಗಳ ಬಿಂಬ ಪ್ರತಿಷ್ಠಾ ಸಹಿತ ಜೀವ ಕುಂಭಾಭಿಷೇಕ ಪ್ರತಿಷ್ಠಾ ಕಲಶಾಭಿಷೇಕ, ಪ್ರಾಣ ಪ್ರತಿಷ್ಠೆ, ಕಲಾತತ್ವನ್ಯಾಸ ಲಿಪಿನ್ಯಾಸಧಿ ಸಹಿತ ಪೂಜೆ, ಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ಜರುಗಿದವು.

Read More