Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾಲೇಜಿನ ವಾಣಿಜ್ಯ – ನಿರ್ವಹಣಾ ಸಂಘ ಮತ್ತು ಉದ್ಯಮಶೀಲತೆ ಕೇಂದ್ರದ ವತಿಯಿಂದ ಕೈಗಾರಿಕಾ ಭೇಟಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಇರುವ ಏಸ್ ಬಾಂಡ್ ಕಂಪೆನಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು. ಅದೇ ವೇಳೆಯಲ್ಲಿ ಏಸ್ ಬಾಂಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸಂದೀಪ್ ಅವರು ಕಂಪೆನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ವೀಣಾ ಭಟ್ ಮತ್ತು ಸ್ವಸ್ತಿ ಆರ್. ಶೆಟ್ಟಿ, ಉದ್ಯಮಶೀಲತೆ ಕೇಂದ್ರದ ಸಂಯೋಜಕರಾದ ಯೋಗೀಶ್ ಶಾನುಭೋಗ್ ಮತ್ತು ಧನಶ್ರೀ ಎಮ್. ಕಿಣಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವದ ಅಂಗವಾಗಿ ಗ್ರೀಷ್ಮಾ ಕಿಣಿ ಮಂಗಳೂರು ಇವರಿಂದ ಭಜನ ಗಂಗಾ ಭಜನೆ ಕಾರ್ಯಕ್ರಮ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಭವನದಲ್ಲಿ ಜರಗಿತು. ಹಾರ‍್ಮೋನಿಯಂನಲ್ಲಿ ಎಂ.ಮುಕುಂದ ಪೈ ಗಂಗೊಳ್ಳಿ, ಕೆ.ಕಾರ್ತಿಕ ಕಾಮತ್ ಕೋಟೇಶ್ವರ ತಬಲಾದಲ್ಲಿ ಮತ್ತು ಎನ್.ಅಜಿತ್ ನಾಯಕ್ ತಾಳದಲ್ಲಿ ಸಹಕರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಜಿ.ವೇದವ್ಯಾಸ ಕೆ.ಆಚಾರ್ಯ, ಎಚ್.ಸುನೀಲ್ ನಾಯಕ್, ಟಿ.ರತ್ನಾಕರ ಶೆಣೈ, ಗಣೇಶ ಕಿಣಿ ಕಾರ್ಯಕ್ರಮ ಉದ್ಘಾಟಿಸಿದರು. ಸುಧಾ ವಿ.ಪೈ ಹಾಗೂ ಎಂ.ರಾಮಕೃಷ್ಣ ಪೈ ಕಲಾವಿದರನ್ನು ಗೌರವಿಸಿದರು. ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ಸಂಸ್ಥೆಯ ಸದಸ್ಯರು, ಸಮಾಜಬಾಂದವರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದಲ್ಲಿ ಕೊಂಕಣ ಖಾರ್ವಿ ಸಮಾಜದವರು ಮಾ. 8 ರಿಂದ 10 ರ ವರೆಗೆ ಹೋಳಿ ಹಬ್ಬವನ್ನು ಆಚರಿಸಲಿದ್ದು, ಮಾರ್ಚ್ 10 ರಂದು ಹೋಳಿ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಾರ್ಚ್ 10 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹರಿ ಓಂ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಜರಗಿದ ಗಂಗೊಳ್ಳಿ ಜಿಎಸ್‌ಬಿ ಪ್ರೀಮಿಯರ್ ಲೀಗ್ ಪಂದ್ಯಾಟದಲ್ಲಿ ಗಂಗೊಳ್ಳಿಯ ವಿ.ಕೆ. ಪೊವಾಸ್ ತಂಡ ಪ್ರಥಮ ಸ್ಥಾನ ಗಳಿಸಿ ಹರಿಓಂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯಾಟದಲ್ಲಿ ವಿ.ಕೆ. ಪೊವಾಸ್ ತಂಡ ಗಂಗೊಳ್ಳಿಯ ಕಾರ್ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ ವಿ.ಕೆ. ಪೊವಾಸ್ ತಂಡ ತಾನಾಡಿದ ಎಲ್ಲಾ ಲೀಗ್ ಹಂತದ ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರೆ, ಕಾರ್ ಸೂಪರ್ ಕಿಂಗ್ಸ್ ತಂಡವು ವಿ.ವಿ. ಫೈಟರ‍್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಕಾರ್ ಸೂಪರ್ ಕಿಂಗ್ಸ್ ತಂಡದ ವಿಜೇತ ಪಡಿಯಾರ್ ಉತ್ತಮ ದಾಂಡಿಗ, ವಿ.ಕೆ. ಪೊವಾಸ್ ತಂಡದ ಪ್ರದೀಪ ಭಟ್ ಉತ್ತಮ ಎಸೆತಗಾರ ಮತ್ತು ವಿ.ಕೆ. ಪೊವಾಸ್ ತಂಡದ ಶ್ರೇಯಸ್ ಶೆಣೈ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪುರುಷ ಪ್ರಧಾನ ವ್ಯವಸ್ಥೆ ಬದಲಾಗಿದೆ. ಸಾಮಾಜಿಕವಾಗಿ ಮಹಿಳೆ ಬಹುಮುಖಿ ನೆಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವುದರ ಜತೆಗೆ ಯಶಸ್ಸನ್ನು ಕಂಡಿದ್ದಾಳೆ. ಮಹಿಳೆ ಹಠವಾದಿ ಮಾತ್ರವಲ್ಲ ಛಲವಾದಿ ಎಂದು ಜೇಸಿಐ 15 ವಲಯಾಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ ಹೇಳಿದರು . ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆ ಹಾಗೂ ಕುಂದಾಪುರ ಸಿಟಿ ಜೇಸಿಐ ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ‘ಸಮ್ಮಿಲನ’ ಕಾರ್ಯಕ್ರಮದಲ್ಲಿ ಮಾತನಾಡಿದರು . ಇದೇ ಸಂದರ್ಭದಲ್ಲಿ ಸಾರ್ವಜನಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಕುಂದಾಪುರದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಇಂದಿರಾ, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ| ಅಮ್ಮಾಜಿ, ಕಾಲೇಜಿನ ಕ್ರೀಡಾ ಪ್ರತಿಭೆ ತೃತೀಯ ಬಿ.ಕಾಂ. ಬಿ ವಿಭಾಗದ ರೂಪಾ ಶೆಟ್ಟಿ, ರಂಗಭೂಮಿ ಪ್ರತಿಭೆ ತೃತೀಯ ಬಿ.ಬಿ.ಎ. ಪೌರ್ಣಮಿ, ಶೈಕ್ಷಣಿಕ ಪ್ರತಿಭೆ ದ್ವಿತೀಯ ಬಿ.ಸಿ.ಎ. ಕಾವ್ಯ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾ| ಅಮ್ಮಾಜಿ ಅವರು ಮಾತನಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಹಾಗೂ ಪೂರ್ವ ಪ್ರಾಥಮಿಕ (ಹವೇ) ಶಾಲೆ ವತಿಯಿಂದ ದಾಖಲಾತಿ ಆಂದೋಲನ-ವಿಚಾರ ಸಂಕೀರ್ಣ ಡಾ.ಅಂಬೇಡ್ಕರ್ ಸಭಾಭವನದಲ್ಲಿ ವಠಾರದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ, ಕನ್ನಡ ಶಾಲೆ ಉಳಿಸಿ ಎಂಬ ಅಭಿಯಾನದಲ್ಲಿ ಪ್ರತಿ ಮನೆ ಮನೆಗೂ ಭೇಟಿ ನೀಡಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ನಡೆಯಲಿದೆ. ಪ್ರತಿಯೊಬ್ಬರೂ ಕನ್ನಡ ಶಾಲೆ ಉಳಿಸಿ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ದಿಲ್‌ಶಾದ್, ಪಲ್ಲವಿ, ಮೀನಾಕ್ಷಿ, ದೀಪಾ ಖಾರ್ವಿ, ನೇತ್ರಾವತಿ, ಆಶಾ ಖಾರ್ವಿ, ಅನಿತಾ ಖಾರ್ವಿ, ಲಕ್ಷ್ಮೀ, ತುಳಸಿ, ನಟರಾಜ್, ಸುಮಿತ್, ಶಾರದಾ ಮೊದಲಾದವರು ಉಪಸ್ಥಿತರಿದ್ದರು. ಗೌರವ ಶಿಕ್ಷಕಿ ಸುನೀತಾ ದಿನೇಶ್ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಟೀಚರ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಕುಂದಾಪುರ ಇವರ ಸಂಯೋಜನೆಯ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಸಂಪೂರ್ಣ ಸಾಕ್ಷರತಾ ಅಭಿಯಾನ – 2020. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಿಂದ 10 ತಂಡದ ಭೋಧಕ/ಭೋಧಕೇತರ ಸಿಬ್ಬಂದಿಗಳನ್ನೊಳಗೊಂಡು ಊರ ಗಣ್ಯರ ಸಮಕ್ಷಮದಲ್ಲಿ, ಶ್ರೀ. ಕ್ಷೇತ್ರ ಚಕ್ರೇಶ್ವರಿ ಕೋಡಿ ಇಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಕೋಡಿ ಕುಂದಾಪುರ ಇವರ ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಇವರು ಮಾದಕ ವ್ಯಸನದಿಂದ ಮುಕ್ತ ಕೋಡಿ ನಿರ್ಮಾಣ ಆಗುವುದರೊಂದಿಗೆ ಬ್ಯಾರೀಸ್‌ನ ಶಿಕ್ಷಣದ ಫಲ ಸರ್ವರಿಗೂ ತಲುಪುವುದರ ಮೂಲಕ ಯಶಸ್ಸನ್ನು ಕಾಣಬೇಕಾದದ್ದು ಈ ಅಭಿಯಾನದ ಗುರಿ ಎಂದು ಪ್ರಾಸ್ತಾವಿಕವಾಗಿ ನುಡಿದರು. ಕುಂದಾಪುರ ಪುರಸಭಾ ಸದಸ್ಯೆ ಲಕ್ಷ್ಮೀಭಾಯಿ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಜನಜಾಗೃತಿ ಆಂದೋಲನದ ಸ್ಟಿಕ್ಕರ್ ಬಿಡುಗಡೆಗೊಳಿಸಿ ಅಭಿಯಾನಕ್ಕೆ ಶುಭ ಹಾರೈಸಿದರು. ಶ್ರೀ.ಕ್ಷೇತ್ರ ಚಕ್ರೇಶ್ವರಿಯ ಟ್ರಸ್ಟೀ ಸಂಜೀವ ಪೂಜಾರಿ ಇವರು ಬ್ಯಾರೀಸ್ ಸಮೂಹ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಅತ್ಯಂತ ಹಿಂದುಳಿದ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ವಿವಿಧ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರದ ಅನುದಾನ ಒದಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಗಂಗೊಳ್ಳಿ ಮುಖ್ಯರಸ್ತೆ ಕಾಂಕ್ರೀಟಿಕರಣಕ್ಕೆ 1.47 ಕೋಟಿ ರೂ. ಮಂಜೂರಾಗಿದ್ದು, ಅತೀ ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ. ಈ ಭಾಗದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಇದರ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುವುದು. ಮಳೆಗಾಲದ ನೀರು ಹರಿದು ಹೋಗುವ ಗೋಧಿ ತೋಡು ಅಭಿವೃದ್ಧಿಗೆ ಸರಕಾರದಿಂದ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಗ್ರಾಮದ ಶ್ರೀ ವೀರೇಶ್ವರ ದೇವಸ್ಥಾನದ ಬಳಿಯಿಂದ ಗುಡ್ಡೆಕೇರಿ ಸಂಪರ್ಕ ರಸ್ತೆಯ ಸುಮಾರು 35 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕತಾರ್‌: ಸತತವಾಗಿ 20 ವರ್ಷಗಳಿಂದ ಸೇವೆ, ಸಂಸ್ಕೃತಿಗಳ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ‘ಕರ್ನಾಟಕ ಸಂಘ ಕತಾರ್‌ನ 2020-2021 ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಮೈರ್ಪಾಡಿ ನಾಗೇಶ್ ರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಸಮಿತಿ 2020-2021 ಮೈರ್ಪಾಡಿ ನಾಗೇಶ್ ರಾವ್ – ಅಧ್ಯಕ್ಷರು ಅನೀಲ್ ಕುಮಾರ್ ಬೋಲೂರ್ – ಉಪಾಧ್ಯಕ್ಷರು ಮುರಳಿಧರ್ ರಮನಾಥ್ ರಾವ್ – ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಲಕ್ಕೇಗೌಡ – ಖಜಾಂಚಿ ಅಕ್ಷಯ ಶೆಟ್ಟಿ – ಸಾಂಸ್ಕೃತಿಕ ಕಾರ್ಯದರ್ಶಿ ಸಂಜಯ್ ಕುದರಿ – ಕ್ರೀಡಾ ಕಾರ್ಯದರ್ಶಿ ಕಿಶೋರ್.ವಿ – ಜಂಟಿ ಕಾರ್ಯದರ್ಶಿ ಮತ್ತು ಕನ್ನಡ ಸಂಬಂಧಿತ ಸಂಚಾಲಕರು ಕುಮಾರಸ್ವಾಮಿ. ಸಿ.ಅರ್ – ಪರಿಸರ ಮತ್ತು ಮಾಹಿತಿ ತಂತ್ರಜ್ಞಾನ ಸಂಚಾಲಕರು ಸುಶೀಲ ಸುನೀಲ್ – ಮಹಿಳಾ ಸಂಚಾಲಕರು ರಶ್ಮಿ ಜಯರಾಮ – ಮಕ್ಕಳ ಮತ್ತು ವಿಷೇಶ ಅವಶ್ಯಕತೆಗಳ ಸಂಚಾಲಕರು ನೂರ್ ಅಹ್ಮದ್ – ಸದಸ್ಯತ್ವ ಮತ್ತು ನಿರ್ದೇಶಾಂಕ ಸಂಚಾಲಕರು ಅಧ್ಯಕ್ಷರ ಕಿರು ಪರಿಚಯ ನಾಗೇಶ ರಾಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿ ಬಂದರು ಬೇಲಿಕೇರಿ ಜನರ ಹಲವು ದಶಕಗಳ ಪ್ರಾಮಾಣಿಕ ಹೋರಾಟದ ಫಲವಾಗಿ ಬೇಲಿಕೇರಿ ರಸ್ತೆ ಕಾಂಕ್ರೀಟಕರಣಕ್ಕೆ ವಾರಾಹಿ ನೀರಾವರಿ ನಿಗಮದ ಮೂಲಕ ಅನುದಾನ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಗಂಗೊಳ್ಳಿಯ ಮಲ್ಯರಬೆಟ್ಟು ಮತ್ತು ರಥಬೀದಿ ಅಡ್ಡರಸ್ತೆ ಹಾಗೂ ಮುಖ್ಯರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾಗಿದ್ದು, ಕಾಮಗಾರಿಯನ್ನು ಅತಿ ಶೀಘ್ರ ಪ್ರಾರಂಭಿಸಲು ಸೂಚನೆ ನೀಡಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಗ್ರಾಮದ ಬಂದರು ಬೇಲಿಕೇರಿ ರಸ್ತೆಯ ಸುಮಾರು 25 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗಂಗೊಳ್ಳಿಯ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ನೀಡಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಈ ಭಾಗದ ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸಲು ಶಕ್ತಿಮೀರಿ ಪ್ರಯತ್ನ ನಡೆಸುವುದಾಗಿ ಅವರು ಭರವಸೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ…

Read More