ಕುದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮುಖ್ಯರಸ್ತೆಯ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಕಟ್ಟಡ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮನುಷ್ಯನಿಗೆ ಆರೋಗ್ಯ ಮುಖ್ಯ. ಮನುಷ್ಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ದೊರೆಯುವಂತಾಗಬೇಕು ಎಂಬ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರತಿಯೊಂದು ಗ್ರಾಮೀಣ ಪ್ರದೇಶಗಳಲ್ಲಿ ಜನೌಷಧಿ ಕೇಂದ್ರಗಳನ್ನು ಆರಂಭಿಸಲು ಸರಕಾರ ಅನುಮತಿ ನೀಡುತ್ತಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಗಂಗೊಳ್ಳಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಶೇರುಗಾರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ, ಶಾಂತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಸರ್ವತೋಮುಖ ಅಭಿವೃದ್ದಿ ಸಾಮಾಜಿಕ ಧಾರ್ಮಿಕ, ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ, ಅಭಿವೃದ್ಧಿಯ ಮೂಲಕ ಸಾಧ್ಯವಿದೆ. ಮರಾಠಿ ಸಮುದಾಯ ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಸಮೃದ್ಧಿಯನ್ನು ಹೊಂದಿದ್ದರು, ಇದುವರೆಗೂ ಆರ್ಥಿಕವಾಗಿ ತನ್ನದೇ ಆದ ಸಂಸ್ಥೆಯನ್ನ ಕಟ್ಟಿಕೊಳ್ಳುವುದರಲ್ಲಿ ಹಿಂದುಳಿದಿದ್ದು, ಸಿದ್ಧೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಜಡ್ಕಲ್ ಸಮುದಾಯದ ಅಭಿವೃದ್ದಿಗೆ ಮತ್ತು ಗಟ್ಟಿತನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಜಡ್ಕಲ್ನಲ್ಲಿ ಸಿದ್ಧೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಪ್ರಥಮ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮಾತನಾಡಿ, ಮರಾಠಿ ಸಮುದಾಯದವರ ಕನಸಿನ ಕೂಸು, ಸುಮಾರು ಮೂವತ್ತು ವ?ಗಳ ಆಶಯ, ಸಹಕಾರಿ ಸಂಸ್ಥೆಯನ್ನು ಹುಟ್ಟುಹಾಕುವುದಾಗಿತ್ತು. ಅದು ಇಂದು ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿದೆ. ತನ್ಮೂಲಕ ಮರಾಠಿಸಮುದಾಯದವರು ಒಗ್ಗಟ್ಟು ಮತ್ತು ಆರ್ಥಿಕ ಸ್ಥಿತಿಯ ಅರಿವಿನ ಅಭಿವೃದ್ಧಿಯ ಸಂಕೇತವನ್ನು ಇದು ಸಾರಿದೆ ಮತ್ತು ಸಮುದಾಯದ ಅಭಿವೃದ್ಧಿಗೆ ಇದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪಾರಂಪರಿಕಾ ಔಷಧ ಭಂಡಾರ ಮತ್ತು ಸಂಶೋಧನಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಔಷಧ ಗಿಡ ಮೂಲಿಕಾ ಪ್ರಾಧಿಕರ ಬೆಂಗಳೂರು ಇವರ ಸಹಯೋಗದೊಂದಿಗೆ ‘ಅಶೋಕ ವನಸಿರಿ’ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಮೂಡುಬಿದಿರೆ ಪರಿಸರದಲ್ಲಿ 1500 ಅಶೋಕ ಗಿಡಗಳನ್ನು ಹಂಚಿ, ಜನರಲ್ಲಿ ಈ ಗಿಡದ ಪ್ರಾಮುಖ್ಯತೆಯನ್ನು ಇನ್ನು ಹೆಚ್ಚು ತಿಳಿಸಲಾಗುವುದು, ಇಂದು ಎಷ್ಟೋ ಗಿಡಮೂಲಿಕೆಗಳು ನಶಿಸಿ ಹೋಗುತ್ತಿದ್ದು, ಅವುಗಳ ಸಂರಕ್ಷಣೆ ಮಾಡಬೇಕಿದೆ. ನಮ್ಮ ದೇಶದ ಆಯುರ್ವೇದ ಚಿಕಿತ್ಸೆಯ ಮಹತ್ವವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದರು. ಕರ್ನಾಟಕ ರಾಜ್ಯ ಔಷಧ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ ಜಿ.ಎ. ಮಾತನಾಡಿ, ಆತ್ಮ ನಿರ್ಭರ ಭಾರತದ ಕನಸನ್ನು ನನಸು ಮಾಡಲು ನಮ್ಮ ಪರಂಪರೆಯಲ್ಲಿ ಅಡಗಿದ ಆಯುರ್ವೇದ ವ್ಯವಸ್ಥೆಗೆ ಮೊದಲ ಪ್ರಾಶಸ್ತ್ಯ ನೀಡಿ ನಾವು ಆಳವಡಿಸಿಕೊಳ್ಳಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿ ಭಾಗದ ಜನರ ಭಾವನಾತ್ಮಕ ಬೆಸುಗೆ ಯಕ್ಷಗಾನವಾಗಿದ್ದು, ಪ್ರತಿಯೊಬ್ಬರ ಮನೆ-ಮನದಲ್ಲೂ ಇದು ಹಾಸು ಹೊಕ್ಕಾಗಿದೆ. ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದ ಡಾ|| ಶಿವರಾಮ ಕಾರಂತರು ದೇಶದಲ್ಲಿ ಅಲ್ಲದೇ ವಿದೇಶದಲ್ಲಿಯೂ ಯಕ್ಷಗಾನದ ಕಂಪನ್ನು ಪಸರಿಸಿದವರು. ಯಕ್ಷಗಾನಕ್ಕೆ ಕಾರಂತರ ಕೊಡುಗೆ ಅನನ್ಯವಾದುದು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರ ಆಪ್ತ ಸಹಾಯಕರಾದ ಹರೀಶ್ ಕುಮಾರ್ ಶೆಟ್ಟಿ ಅವರು ಹೇಳಿದರು. ಅವರು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯಕ್ಷಸುಮನಸ ಹವ್ಯಾಸಿ ಕಲಾರಂಗ(ರಿ)ಕೋಟ ಇವರಿಂದ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಮೈಂದ ದ್ವಿವಿದ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಿವೃತ್ತ ಉಪನ್ಯಾಸಕ ಕಲಾವಿದ ರಾಮಚಂದ್ರ ಐತಾಳ್ ಗುಂಡ್ಮಿ ಅವರು ಮಾತನಾಡಿ ಯಕ್ಷಗಾನವು ಕೇವಲ ಮನೋರಂಜನೆಯ ವಸ್ತುವಲ್ಲ ಅದು ನಮಗೆ ಬದುಕಿನ ಪಾಠ ಕಲಿಸುವ ಒಂದು ಮಾನದಂಡ, ಪ್ರಸ್ತುತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವಸಹಾಯ ಸಂಘಗಳು ಕೇವಲ ಲೇವಾದೇವಿ ಸಂಸ್ಥೆಗಳಾಗದೆ, ಕಾಯಕದ ಮೂಲಕ ಉತ್ಪಾದನಾ ಚಟುವಟಿಕೆ ನಡೆಸಿ ಸದಸ್ಯರ ಸ್ವಾವಲಂಬನೆ ಸಾಧಿಸುವ ಸಾಧನಗಳಾಗಬೇಕು ಎನ್ನುವುದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಆಶಯ. ಸಂಘದ ರೈತಸಿರಿ ಮತ್ತು ನವೋದಯ ಸ್ವಸಹಾಯ ಸಂಘಗಳಿಗೆ ಅಗತ್ಯ ಪರಿಣತಿ ಮತ್ತು ನೆರವು ನೀಡುವ ಮೂಲಕ ಅದು ಈ ಆಶಯವನ್ನು ಸಾಕಾರಗೊಳಿಸಲು ಯತ್ನಿಸುತ್ತಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದರ ಶೆಟ್ಟಿ ಹೇಳಿದರು. ಸಂಘ ಹಾಗೂ ರೈತಸಿರಿ, ರೈತಸೇವಾ ಒಕ್ಕೂಟದ ಪ್ರಾಯೋಜಕತ್ವದಲ್ಲಿ ಸಂಘದ ರೈತಸಿರಿ, ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಆಸಕ್ತ ರೈತರಿಗಾಗಿ ನಾಗೂರಿನ ಶ್ರೀ ಕೃಷ್ಣಲಲಿತಾ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದರು. ಸಹಕಾರಿ ಸಂಘ ರೈತರ ಅಗತ್ಯಗಳಿಗೆ ತಕ್ಕಂತೆ ಯೋಜನೆ ರೂಪಿಸಿ, ಅನುಷ್ಠಾನಿಸುವ ಸ್ವಾತಂತ್ರ್ಯ ಹೊಂದಿದೆ. ಸಂಘದ ವ್ಯಾಪ್ತಿಯ ರೈತರು ಬೆಳೆಯುವ ಕಲ್ಲಂಗಡಿ ಹಣ್ಣಿನ ಮೂಲಕ ವಾರ್ಷಿಕ ರೂ ೪ ಕೋಟಿ ವ್ಯವಹಾರ ನಡೆಯುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಂಗೊಳ್ಳಿ ಶಾಖೆ ಆಶ್ರಯದಲ್ಲಿ ನಬಾರ್ಡ್ ಸಹಯೋಗದೊಂದಿಗೆ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿವೃತ್ತ ಉಪ ಮಹಾಪ್ರಬಂಧಕ ಕೃಷ್ಣ ಬಿಲ್ಲವ ಒಂದು ಶತಮಾನದಷ್ಟು ಸುದೀರ್ಘ ಇತಿಹಾಸವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿದೆ. ವಿವಿಧ ಯೋಜನೆ ಹಾಗೂ ಸವಲತ್ತುಗಳನ್ನು ಗ್ರಾಹಕರಿಗೆ ನೀಡುತ್ತಾ, ಗ್ರಾಹಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ರೈತಾಪಿ ವರ್ಗದ ಮತ್ತು ಗ್ರಾಹಕರ ಸೇವೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಸಹಕಾರ ಕ್ಷೇತ್ರದ ಮೂಲಕ ಆಧುನಿಕ ಬ್ಯಾಂಕಿಂಗ್ ಸೇವೆಯನ್ನು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನೀಡುತ್ತಿರುವ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಶುಭಾಶಂಸನೆಗೈದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಸಿಇಒ ಸುರೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭೆ ವಿರೋಧ ಪಕ್ಷದ ಸದಸ್ಯರನ್ನು ಆಹ್ವಾನಿಸದೆ ಒಳಚರಂಡಿ ಮಂಡಳಿ ನಿರ್ದೇಶಕರ ಜತೆ ಸಭೆ ನಡೆದಿದ್ದು, ಈ ಕುರಿತು ತಪ್ಪೊಪ್ಪಿಕೊಳ್ಳಬೇಕು ಎಂದು ವಿರೋಧ ಪಕ್ಷದವರ ಆಗ್ರಹಿಸಿದರು. ತಪ್ಪೊಪ್ಪಿಕೊಳ್ಳುವ ಪ್ರಸಂಗವೇ ನಡೆದಿಲ್ಲ ಎಂದು ಆಡಳಿತ ಪಕ್ಷದವರು ಸಮರ್ಥನೆ ಮಾಡಿದ ಘಟನೆ ಇಲ್ಲಿನ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು. ಈಚೆಗೆ ಒಳಚರಂಡಿ ಅಭಿವೃದ್ಧಿ ಮಂಡಳಿ ನಿರ್ದೇಶಕರು ಕುಂದಾಪುರಕ್ಕೆ ಬಂದಿದ್ದ ವೇಳೆ ಅಧ್ಯಕ್ಷರು ಮತ್ತು ಆಡಳಿತ ಪಕ್ಷದ ಸದಸ್ಯರು ಅವರೊಂದಿಗೆ ನಡೆಸಿದ ಸಭೆಯಲ್ಲಿ ಬಿಜೆಪಿ ಮುಖಂಡರೂ ಪಾಲ್ಗೊಂಡಿದ್ದರು. ಆದರೆ ವಿರೋಧ ಪಕ್ಷದ ಸದಸ್ಯರಿಗೂ ಮಾಹಿತಿ ನೀಡದೆ ಕಡೆಗಣಿಸಲಾಗಿದೆ. ಈ ಬಗ್ಗೆ ತಪ್ಪೊಪ್ಪಿಕೊಳ್ಳಬೇಕು, ಇಲ್ಲದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ವಿರೋಧ ಪಕ್ಷದ ನಾಯಕ ಚಂದ್ರಶೇಖರ ಖಾರ್ವಿ ಹೇಳಿದರು. ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ್ಯ, ಕೆ. ಜಿ. ನಿತ್ಯಾನಂದ ಬೆಂಬಲಿಸಿದರು. ಹಿರಿಯ ಸದಸ್ಯ ಮೋಹನದಾಸ್ ಶೆಣೈ ಈ ಕುರಿತು ಮಾಹಿತಿ ನೀಡಲು ಮುಂದಾದಾಗ, ಆಕ್ಷೇಪಿಸಿದ ಚಂದ್ರಶೇಖರ ಖಾರ್ವಿ, ಅಧ್ಯಕ್ಷರೇ ಉತ್ತರಿಸುವಂತೆ ಒತ್ತಾಯಿಸಿದರು. ಆಡಳಿತ ಪಕ್ಷದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸೇವಾ ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಶುಕ್ರವಾರ ಜರಗಿದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಮೃತ ಮಹೋತ್ಸವದ ವರ್ಷದ ಲಾಂಛನ ಬಿಡುಗಡೆಗೊಳಿಸಲಾಯಿತು ಗಂಗೊಳ್ಳಿಯ ಉದ್ಯಮಿ ಜಿ.ಭಾಸ್ಕರ ವಿಠಲ ಶೆಣೈ ಮಾತನಾಡಿ, ಆರ್ಥಿಕ ಸಂಸ್ಥೆಯ ಬೆಳವಣಿಗೆಯು ಆ ಸಂಸ್ಥೆಯ ಪ್ರಾಮಾಣಿಕತೆ, ವಿಶ್ವಾಸ ಹಾಗೂ ಸೇವೆಯ ಮೇಲೆ ಅವಲಂಬಿತವಾಗಿದೆ. ಕಳೆದ 75 ವರ್ಷಗಳ ಹಿಂದೆ ಪ್ರಾರಂಭಗೊಂಡ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರ ಅವಶ್ಯಕತೆಗಳಿಗೆ ಸ್ಪಂದಿಸಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸಿಕೊಂಡು ಸದೃಢವಾಗಿ ಬೆಳೆದು ನಿಂತಿದೆ. ಬ್ಯಾಂಕಿನ ಸಂಸ್ಥಾಪಕರ ಆಶಯಗಳಿಗೆ ಅನುಗುಣವಾಗಿ ಮುನ್ನಡೆಯುತ್ತಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರಿಗೆ ಉತ್ತಮ ಸೇವೆ ನೀಡುವ ಮೂಲಕ ಮತ್ತಷ್ಟು ಅಭಿವೃದ್ಧಿ ಹೊಂದುವಂತಾಗಲಿ ಎಂದು ಹೇಳಿದರು. ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಬ್ಯಾಂಕಿನ ಮಾಜಿ ನಿರ್ದೇಶಕ ಚಿಕ್ಕಯ್ಯ ಪೂಜಾರಿ, ನಿರ್ದೇಶಕರಾದ ಹರೀಶ ಮೇಸ್ತ, ಮಾಧವ ಖಾರ್ವಿ, ಸುಭಾಶ್ಚಂದ್ರ ಪೂಜಾರಿ, ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ ನಡೆಯಿತು. ಅತಿಥಿಯಾಗಿ ಡಾ. ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಅದಕ್ಕಿಂತ ಹೆಚ್ಚಿನ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತಾಗಿ ವಿದ್ಯಾರ್ಥಿಗಳ ಪೋಷಕರಿಗೆ ಸವಿಸ್ತಾರವಾಗಿ ತಿಳಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕೆ. ವೆಂಕಟರಮಣ ಹೆಗ್ಡೆ ಸಂಘದ ಧ್ಯೇಯೋದ್ದೇಶ ಹಾಗೂ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ನೂತನ ಸದಸ್ಯರಾಗಿ ಆಯ್ಕೆಯಾದ ಡಾ. ಅತುಲ್ ಕುಮಾರ್ ಶೆಟ್ಟಿಯವರನ್ನು ಗೌರವಿಸಲಾಯಿತು. ರಕ್ಷಕ-ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿಯಾದ ಫಾತಿಮಾ ಲೋಬೊ ಉಪಸ್ಥಿತರಿದ್ದರು ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆಯಲ್ಲಿ ಜಿ. ಎಂ. ಮುಂದಿನಮನಿ ಸಾಧಕ ಮಕ್ಕಳಿಗೆ ಪುರಸ್ಕಾರ ವಿತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಜೀವಿಸುವ, ಶಿಕ್ಷಣ ಮತ್ತು ರಕ್ಷಣೆ ಪಡೆಯುವ, ಭಾಗವಹಿಸುವ ಹಕ್ಕುಗಳಿವೆ. ಇವುಗಳಿಗೆ ಅಡ್ಡಿಯಾದಾಗ ಮಕ್ಕಳು ಪೋಷಕರ, ಶಿಕ್ಷಕರ ಅಥವಾ ಅಧಿಕಾರಿಗಳ ಗಮನಕ್ಕೆ ತಂದು ಅವುಗಳನ್ನು ಪಡೆದುಕೊಳ್ಳಬೇಕು. ಹಾಗೆಯೇ ಮಹಿಳೆಯರೂ ತಮ್ಮ ಶೋಷಣೆಯ ವಿರುದ್ಧ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ವಿಘ್ನೇಶ್ವರ, ಮಕ್ಕಳ ಮಿತ್ರೆ ಅನಿತಾ ಆರ್. ಕೆ, ಮಹಿಳಾ ಮಿತ್ರೆ ಲೋಲಾಕ್ಷಿ, ಶಾಲಾಭಿವೃದ್ಧಿ ಸಮಿತಿಗಳ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಅಬ್ದುಲ್ಲಾ, ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮದ್, ಸಂಪನ್ಮೂಲ ವ್ಯಕ್ತಿ ತಿಲೋತ್ತಮಾ, ಪಂಚಾಯಿತಿ ಸಿಬ್ಬಂದಿ ಶೇಖರ ಮರವಂತೆ ಇದ್ದರು. ಸಾಧಕ ಮಕ್ಕಳಿಗೆ ಪುರಸ್ಕಾರ ವಿತರಣೆ ನಡೆಯಿತು. ವಿದ್ಯಾರ್ಥಿನಿ ಮೇಘನಾ…
