Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಪ್ರಾರಂಭವಾಗದಿರುವುದರಿಂದ ರಾಜ್ಯದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹ ಹೆಚ್ಚಾಗುವ ಸಂಭವವಿದ್ದು, ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಜ.1ರಿಂದ ಸುರಕ್ಷತೆ ಹಾಗೂ ಮುಂಜಾಗ್ರತೆಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಡಿಡಿಪಿಐ ನಾಗೂರ ತಿಳಿಸಿದ್ದಾರೆ. ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ ಎಲ್ಲ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಯರ ಸಭೆಯಲ್ಲಿ ಶಾಲೆಗಳ ಮುಖ್ಯಸ್ಥರು ಪಾಲಿಸಬೇಕಾದ ಸೂಚನೆಗಳನ್ನು ತಿಳಿಸಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ. ಜ.1ರಿಂದ ಶಾಲಾ ಆವರಣದಲ್ಲಿ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ–2 ಕಾರ್ಯಕ್ರಮ ಆರಂಭಿಸಬೇಕು, 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧದಿನ ತರಗತಿ ನಡೆಸಬೇಕು, ಒಂದು ತಂಡದಲ್ಲಿ 15 ವಿದ್ಯಾರ್ಥಿಗಳು ಮಾತ್ರ ಇರುವಂತೆ ನೋಡಿಕೊಳ್ಳಬೇಕು. ಇದಕ್ಕೂ ಮುನ್ನ ಶಾಲಾ ಆವರಣ ಹಾಗೂ ಕೊಠಡಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸ್ವಚ್ಛಗೊಳಿಸಬೇಕು, ಶೌಚಾಲಯದಲ್ಲಿ ನಿರಂತರ ನೀರು ಸರಬರಾಜು ಇರಬೇಕು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ವಿಭಾಗದ ಆಶ್ರಯದಲ್ಲಿ ನನ್ನ ಕನಸಿನ ಉದ್ಯೋಗ – ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯ ತರಬೇತಿ ಕುರಿತು ವೆಬಿನಾರ್ ನಡೆಯಿತು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವರುಣ್ ಕಟ್ಟಿ ಮಾತನಾಡಿ, ಮುಖ್ಯವಾಗಿ ಉತ್ತಮ ಉದ್ಯೊಗವನ್ನು ಪಡೆಯಬೇಕು ಎಂಬ ಆಶಯವನ್ನ ನಮ್ಮದಾಗಿಸಿಕೊಳ್ಳಬೇಕು. ಅದಕ್ಕೆ ಪೂರಕ ವಾತಾವರಣವನ್ನು ನಾವಿ ಸೃಷ್ಟಿಸಿಕೊಳ್ಳಬೇಕು. ಅಂದರೆ ಒಳ್ಳೆಯ ಉದ್ಯೋಗಕ್ಕೆ ಬೇಕಾದಂತಹ ಪರಿಪೂರ್ಣ ಕಲಿಕೆ ನಿರಂತರ ಅಧ್ಯಯನ, ತಲ್ಲೀನತೆ ಭಿನ್ನ ನೆಲೆಗಳ ಆಲೋಚನೆ ಮತ್ತು ನಿಮ್ಮ ಬಗ್ಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಮಾತುಗಾರಿಕೆ ಸಂವಹನ ಕಲೆ, ಇಂಗ್ಲೀಷ್ ವ್ಯಾಕರಣ ಜ್ಞಾನಸಾಮಾನ್ಯ ಜ್ಞಾನವನ್ನು ಆದಷ್ಟು ಹೆಚ್ಚಿಸಿಕೊಳ್ಳಬೇಕು. ದೊಡ್ಡ ಆಲೋಚನೆಯೊಂದಿಗೆ ವಿವಿಧ ಉದ್ಯೋಗಕ್ಕೆ ಬೇಕಾದ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮಾಡಿ ನಿಮ್ಮ ವಿದ್ಯಾರ್ಹತೆಯನ್ನು ಹೆಚ್ಚಿಸಿಕೊಳ್ಳಬೇಕು. ಇದೆಲ್ಲದರ ಜೊತೆಗೆ ಬಹುಮುಖ್ಯವಾಗಿ ನಿರಂತರ ಕಲಿಯುವಿಕೆಯ ಮೂಲಕ ನಿಮ್ಮನ್ನು ಯಾವುದೇ ಉತ್ತಮ ಹುದ್ದೆಗೆ ತಯಾರಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ, ಆನ್‌ಲೈನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೀಚ್ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕುಂದಾಪುರ ಕೋಸ್ಟಲ್ ಲಯನ್ಸ್ ಕ್ಲಬ್ ಅಧ್ಯಕ್ಷ ರತ್ನಾಕರ ಶೆಟ್ಟಿ ಕಂದಾವರ ಹೇಳಿದರು. ಕುಂದಾಪುರ ಕೋಡಿ ಕಡಲತೀರದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದ್ರ ತೀರಗಳು ಸ್ವಚ್ಛವಾಗಿದ್ದರೆ ಪರಿಸರದಲ್ಲಿ ವಾಸಿಸುವವರ ಆರೋಗ್ಯ ಚೆನ್ನಾಗಿರುತ್ತದೆ. ಅಂತಹ ಸ್ಥಳಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಗೊಳ್ಳುವುದರ ಜತೆಗೆ ಸ್ಥಳೀಯರಿಗೆ ಆದಾಯ ಬರುತ್ತದೆ ಎಂದು ತಿಳಿಸಿದರು. ಕ್ಲಬ್ ಪ್ರಧಾನ ಕಾರ್ಯದರ್ಶಿ ವಸಂತರಾಜ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಅಶೋಕ್ ಶೆಟ್ಟಿ ಸಂಸಾಡಿ, ಪ್ರಥಮ ಉಪಾಧ್ಯಕ್ಷ ಜಯಶೀಲ ಶೆಟ್ಟಿ ಕಂದಾವರ, ನಿಕಟ ಪೂರ್ವ ಖಜಾಂಚಿ ಸುಕುಮಾರ ಶೆಟ್ಟಿ, ನಿರ್ದೇಶಕರಾದ ಅಂಪಾರು ನಿತ್ಯಾನಂದ ಶೆಟ್ಟಿ, ಗಿರೀಶ್ ಮೇಸ್ತ, ಉದಯ ಶೆಟ್ಟಿ ಮಚ್ಚಟ್ಟು, ಮಹಮದ್ ಅಶ್ರಫ್, ಅಣ್ಣಪ್ಪ ಶೆಟ್ಟಿ, ವೆಂಕಟರಮಣ ನಾಯಕ್, ಪ್ರಭಾಕರ ಶೆಟ್ಟಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2019-20ನೇ ಸಾಲಿನ ಮಹಾಸಭೆಯು ಇಲ್ಲಿನ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರುಗಿತು ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಅಮೃತ ಮಹೋತ್ಸವ ವರ್ಷದ ಸಂಭ್ರಮಾಚರಣೆಯಲ್ಲಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. 2019-20ನೇ ಸಾಲಿನ ಅಂತ್ಯಕ್ಕೆ ಸಂಘವು 26.19 ಕೋಟಿ ರೂ. ಠೇವಣಿ ಹೊಂದಿದ್ದು, 12.89 ಕೋಟಿ ರೂ.ಗಳನ್ನು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರದಿ ವರ್ಷದಲ್ಲಿ ಸಂಘವು 96 ಕೋಟಿ ರೂ. ವ್ಯವಹಾರ ನಡೆಸಿದ್ದು, ವರ್ಷಾಂತ್ಯಕ್ಕೆ ಸಂಘವು 39.07 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಜಿ.ಗೋಪಾಲ ನಾಯ್ಕ್, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಯಮುನಾ, ಆಶಾಲತಾ, ನಾಗರಾಜ ಎಂ. ಮತ್ತು ಲಕ್ಷö್ಮಣ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಯುವಜನಾಂಗಕ್ಕೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಇಂದು ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು. ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರತಿಬಿಂಬಿಸಿ ಬೆಳೆಸುವ ಉದ್ಧೇಶ ಯುವಜನೋತ್ಸವ ಕಾರ್ಯಕ್ರಮದ್ದಾಗಿದ್ದು, ಯುವಜನಾಂಗಗಳು ಒಂದುಗೂಡಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಮಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮೀನು ಮರಿಗಳ ಸಾಕಣಿಕಾ ಕೇಂದ್ರಕ್ಕೆ ಬಂದರು ಮತ್ತು ಮೀನುಗಾರಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಮೀನು ಸಾಕಣಿಕಾ ಕೇಂದ್ರವು 1ಎಕರೆಗೂ ಹೆಚ್ಚು ವಿಸ್ತಾರವಿದ್ದು, 18 ಸಾವಿರಕ್ಕೂ ಅಧಿಕ ಮೀನು ಮರಿಗಳನ್ನು ಸಾಕುವ ಉದ್ದೇಶ ಹೊಂದಿದೆ ಎಂದರು. ಈ ಸಂದರ್ಭ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೈಂದೂರು ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಶಾಂತ ಪೂಜಾರಿ ಬೈಂದೂರು ಪಾಲುದಾರರಾದ ಗುರು ಪ್ರಸಾದ ಬೈಂದೂರು, ಸಂತೋಷ, ಗೌರೀಶ್ ಉಪ್ಪುಂದ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟದ ಜನತಾ ಫಿಶ್ ಮೀಲ್ ಮತ್ತು ಆಯಿಲ್ ಪ್ರಾಡಕ್ಟಸ್ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಕೇಂದ್ರದ ಸಾರ್ವಜನಿಕ ಸಂಬಂಧ ಮತ್ತು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಅಧಿಕಾರಿಯಾದ ರವಿಕಿರಣ್ ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿಗೆ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಚೈತ್ರಾರವರು ವಂದಿಸಿದರು. ಕಾಲೇಜಿನ ವತಿಯಿಂದ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ದೀಕ್ಷಿತಾ ಯು. ಜಿ. ಸ್ಮರಣಿಕೆ ನೀಡಿ ಗೌರವಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ 2019-20ನೇ ಸಾಲಿನ ಮಹಾಸಭೆಯು ಇಲ್ಲಿನ ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಶಾರದಾ ಎಸ್.ಖಾರ್ವಿ ಮಾತನಾಡಿ, ಸಂಘವು 18.07 ಲಕ್ಷ ರೂ. ಪಾಲು ಬಂಡವಾಳ ಮತ್ತು 9.44 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದೆ. 2.28 ಕೋಟಿ ರೂ.ಗಳನ್ನು ವಿವಿಧ ಇತರ ಸಂಘ ಹಾಗೂ ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಸಂಘವು 10.53 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10% ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ಉಪಾಧ್ಯಕ್ಷೆ ಮಾಲತಿ ಜಿ. ಖಾರ್ವಿ, ನಿರ್ದೇಶಕಿಯರಾದ ನೀಲಾವತಿ ಎಸ್. ಖಾರ್ವಿ, ಸುಶೀಲಾ ಎ. ಖಾರ್ವಿ, ಶಾರದಾ ಆರ್. ಹೆಗ್ಡೆ, ಶೈಲಾ ಎಂ. ಖಾರ್ವಿ, ಜಯಂತಿ ಆರ್. ಪಠೇಲ್, ದೀಪಾ ಎನ್. ಖಾರ್ವಿ, ರೇಖಾ ಜಿ. ಖಾರ್ವಿ ಉಪಸ್ಥಿತರಿದ್ದರು. ನಿರ್ದೇಶಕಿ ಪಾರ್ವತಿ ಬಿ. ಖಾರ್ವಿ ಸ್ವಾಗತಿಸಿದರು. ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಯಲ್ಲಿ ಶೇ.71.28ರಷ್ಟು ಮತದಾನವಾಗಿದೆ. ತಾಲೂಕಿನ 128 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉತ್ಸುಕತೆಯಿಂದ ಮತದಾನ ನಡೆಯುತ್ತಿರುವುದು ಕಂಡುಬಂತು. ಹಿರಿಯ ನಾಗರಿಕರು, ವಿಕಲಚೇತನರು ಹೆಚ್ಚು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು. ಬೈಂದೂರು ತಾಲೂಕಿನಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ತನಕ ಶೇ.11.49 ಮತದಾನವಾಗಿದ್ದರೇ, 11 ಗಂಟೆಯ ತನಕ ಶೇ. 28.49, ಮಧ್ಯಾಹ್ನ 1 ಗಂಟೆಯ ತನಕ ಶೇ.46.53 ಹಾಗೂ 3 ಗಂಟೆಯ ಒಟ್ಟು ಶೇ.57.18 ಮತದಾನವಾಗಿದೆ. ಅಂತಿಮವಾಗಿ ಶೇ.71.28 ಮತದಾನವಾಗಿದೆ. ಮಹಿಳೆಯರದ್ದೇ ಅಧಿಕ ಮತದಾನ: 43,374 ಪುರುಷರ ಪೈಕಿ 28507 (65.72%) ಪುರುಷರು ಮತದಾನ ಮಾಡಿದ್ದರೆ, 45284 ಮಹಿಳೆಯರ ಪೈಕಿ 34,692 (76.61) ಮಂದಿ ಮತದಾನ ಮಾಡಿದ್ದಾರೆ. ಒಟ್ಟು 63,199 (71.28) ಮತದಾನವಾಗಿದೆ. ಮತ ಕೇಂದ್ರಗಳಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತಿದ್ದು, ಮತದಾನಕ್ಕೂ ಮುನ್ನ ಸ್ಯಾನಿಟೈಜ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ. ಎಸ್ಪಿ, ಡಿವೈಎಸ್ಪಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದ್ದು, ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಜನರು ಸೇರುವ ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಿ, ಈ ಕೆಳಗಿನಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ. ಡಿಸೆಂಬರ್ 30ರಿಂದ ಜನವರಿ 2ರ ವರೆಗೆ ಕ್ಲಬ್ / ಪಬ್/ ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮ, ವಿಶೇಷ ಪಾರ್ಟಿ ಇತ್ಯಾದಿಗಳನ್ನು ನಿಷೇಧಿಸಲಾಗಿದ್ದು,…

Read More