ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂಜಿನಿಯರಿಂಗ್ ವಿಸ್ತಾರವಾದ ಕ್ಷೇತ್ರವಾಗಿದ್ದು, ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದು ಮಂಗಳೂರಿನ ಎನ್ಎಚ್ಎಐ ಪ್ರೊಜೆಕ್ಟ್ ಡೈರೆಕ್ಟರ್ ಶಿಶು ಮೋಹನ್ ತಿಳಿಸಿದರು. ಮಿಜಾರಿನ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ವಿಭಾಗದ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಇಂಜಿನಿಯರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರಿಂಗ್ಗಳ ಕೊಡುಗೆ ಮಹತ್ವದಾಗಿದೆ. ವಿದ್ಯಾರ್ಥಿಗಳು ವಿವಿಧ ತರಬೇತಿಗಳಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಇಂಜಿನಿಯರ್ಸ್ ಡೇ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಪೀಟರ್ ಫೆನಾಂಡಿಸ್, ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲತಿಕಾ ಸ್ವಾಗತಿಸಿದರು, ಅಭಿಷೇಕ್ ವಂದಿಸಿದರು, ರಮ್ಯಶ್ರೀ ಶೆಟ್ಟಿ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವನಿತಾ ದೇವಾಡಿಗ ಅವರ ಸಾಮಾಜಿಕ ರಂಗದ ಸೇವೆಯನ್ನು ಗುರುತಿಸಿ ಇಂಡಿಯನ್ ಎಂಪೈರ್ ವಿಶ್ವ ವಿದ್ಯಾನಿಲಯವು ಅ.2ರಂದು ತಮಿಳುನಾಡಿನ ಹೊಸೂರಿನಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ. ಅವರು ಪ್ರಸ್ತುತ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೇಂದ್ರ ಸರಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆಯ ವತಿಯಿಂದ ಕಾಮಿ೯ಕರ ಸಮಸ್ಯೆಗಳನ್ನು ಆಲಿಸಲು ಹಾಗೂ ಪರಿಹಾರ ಒದಗಿಸಲು ಕುಂದಾಪುರ, ಬೈಂದೂರು ತಾಲೂಕಿನ ಕಾಮಿ೯ಕರ ಅದಾಲತ್ ಕಾರ್ಯಕ್ರಮ ಇಲ್ಲಿನ ರಾಘವೇಂದ್ರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು. ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾಕಾರ್ಮಿಕ ಅಧಿಕಾರಿ ಬಿ. ಆರ್. ಕುಮಾರ್ , ಕಾಮಿ೯ಕರ ಸಮಸ್ಯೆಗಳ ಕುರಿತಂತೆ ಬಾಕಿ ಇರುವ ಅಜಿ೯ಗಳನ್ನು ಇತ್ಯಥ೯ ಪಡಿಸಲಾಗುವುದು. ಕಾಮಿ೯ಕ ಇಲಾಖೆ ಕಾಮಿ೯ಕರ ಬೆನ್ನೆಲುಬಾಗಿ ಸದಾ ನಿಮ್ಮ ಸೇವೆಗೆ ಬದ್ಧವಾಗಿರುತ್ತದೆ ಎಂದು ಹೇಳಿದರು. ಈ ಸಂದರ್ಭ ಕುಂದಾಪುರ, ಬೈಂದೂರು ತಾಲೂಕಿನ ಕಾಮಿ೯ಕರ ದೂರು, ಅಜಿ೯, ಅಹವಾಲುಗಳನ್ನು ಕಾರ್ಮಿಕ ಅದಾಲತ್ನಲ್ಲಿ ಸ್ವೀಕರಿಸಲಾಯಿತು. ಕಾಮಿ೯ಕ ಮುಖಂಡ ವೆಂಕಟೇಶ್ ಕೋಣಿ ಉಪಸ್ಥಿತರಿದ್ದರು. ಕುಂದಾಪುರ ವೃತ್ತ ಕಾಮಿ೯ಕ ನಿರೀಕ್ಷಕರಾದ ಎಂ.ಪ್ರಸನ್ನ ಕುಮಾರ್ ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿ ದಿನವೂ ಒಂದೊಂದು ಹೊಸ ಹಿಂದಿ ಶಬ್ಧವನ್ನು ಕಲಿಯುವುದರ ಮೂಲಕ ರಾಷ್ಟ್ರಭಾಷಾ ಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು. ದಿನನಿತ್ಯದ ಸಂವಹನದಲ್ಲಿ ಬಳಸುವ ಮೂಲಕ ಮಾತ್ರ ಭಾಷೆಯೊಂದು ಸದಾ ಜೀವಂತವಾಗಿರುವುದಲ್ಲದೇ, ಸತತ ವೃದ್ಧಿಗೊಳ್ಳುವುದು ಎಂದು ಬಸ್ರೂರಿನ ನಿವೇದಿತಾ ಪ್ರೌಢ ಶಾಲೆಯ ಮಾಜಿ ಮುಖ್ಯೋಪಾಧ್ಯಾಯರು, ಹಿಂದಿ ಶಿಕ್ಷಕರಾದ ದಿನಕರ್ ಆರ್. ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅತಿಥಿಗಳನ್ನು ಸ್ವಾಗತಿಸಿ, ಪ್ರಸ್ತಾವನಾ ನುಡಿಗಳಲ್ಲಿ ನಮ್ಮೆಲ್ಲರ ಅಭಿಮಾನದ ರಾಷ್ಟ್ರಭಾಷೆ ಹಿಂದಿಯ ಬೆಳವಣಿಗೆಯ ಅಗತ್ಯತೆಯನ್ನು ತಿಳಿಸಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಹಿಂದಿ ಭಾಷೆಯು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗಲು ಹೇಗೆ ಸಹಕಾರಿಯಾಗುವುದೆಂದು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದಿ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ಹಿಂದಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಲ್ಕೋ ಫೌಂಡೇಶನ್ ವತಿಯಿಂದ ಆರ್.ಎಮ್.ಬಿ ಯೋಜನೆಯಡಿಯಲ್ಲಿ ವಿದ್ಯುತ್ ವಂಚಿತ ಆಶಾಲತಾ ತೆಕ್ಕಟ್ಟೆ ಅವರ ಅಂಗಡಿಗೆ ಪ್ರಿಡ್ಜ್, ಸೋಲಾರ್ ಹೊಲಿಗೆಯಂತ್ರ ಮತ್ತು ಸೋಲಾರ್ ಪ್ರಿಂಜರ್ಗೆ ಸಹಾಯಧನ ನೀಡಲಾಯಿತು. ತೆಕ್ಕಟ್ಟೆ ಪಂಚಾಯತ್ ಅಧ್ಯಕ್ಷರಾದ ಮಮತಾ ದೇವಾಡಿಗ ಉದ್ಘಾಟಿಸಿ, ಆಶಾಲತಾ ಅವರು ಎಲ್ಲಾ ಮಹಿಳೆಯರಿಗೆ ಮಾದರಿಯಾಗಲಿ ಎಂದು ಹೇಳಿದರು. ಸೆಲ್ಕೋ ಸಂಸ್ಥೆಯ ಡಿಜಿಎಮ್ ಗುರುಪ್ರಕಾಶ ಶೆಟ್ಟಿ ಮಾತನಾಡಿ, ಸೆಲ್ಕೋ ಸಂಸ್ಥೆಯ ಕಾರ್ಯವೈಖರಿ, ಮಹಿಳಾ ಸಬಲೀಕರಣ ಸಾಮಾಜಿಕ ಕಾಳಜಿ ಮತ್ತು ಸೆಲ್ಕೋನ ವಿವಿಧ ಯೋಜನೆಯ ಬಗ್ಗೆ ತಿಳಿಸಿದರು. ಒಟ್ಟು 1,25,000 ಮೊತ್ತದಲ್ಲಿ 42,000 ಮೊತ್ತವನ್ನು ಸೆಲ್ಕೋ ಫೌಂಡೇಶನ್ ಸಹಾಯಧನವಾಗಿ ನೀಡಿದೆ ಎಂದು ತಿಳಿಸಿದರು. ಈ ಸಂದರ್ಭ ತೆಕ್ಕಟ್ಟೆ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಮೆ ವ್ಯವಸಾಯ ಸೊಸೈಟಿಯ ಗೋಪಾಲ ಪೂಜಾರಿ, ಕೆನರಾ ಬ್ಯಾಂಕ್ನ ಮ್ಯಾನೇಜರ್ ಚಂದ್ರಶೇಖರ, ನಿವೃತ್ತ ಅಧ್ಯಾಪಕಿ ವಿಶಾಲಾಕ್ಷೀ ಶೆಟ್ಟಿ, ಸೆಲ್ಕೋ ಸಂಸ್ಥೆಯ ವಲಯ ಹಿರಿಯ ಪ್ರಬಂಧಕರಾದ ಶೇಖರ ಶೆಟ್ಟಿ, ಶಾಖಾ ಪ್ರಬಂಧಕರಾದ ಮಂಜು ನಾಡ, ಸ್ಥಳೀಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರಿಂದ ಪಡೆದು, ಒಂದರಿಂದ ಅಂತಿಮ ಪದವಿ/ಡಿಪ್ಲೋಮ ವರೆಗೆ ಅಕ್ಟೋಬರ್ 15ರ ಒಳಗೆ ಹಾಗೂ ವೃತ್ತಿಪರ ಪದವಿ ವ್ಯಾಸಂಗ ಮಾಡುತ್ತಿರುವವರು ನವೆಂಬರ್ 15ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEPT ಮೂಲಕ ನೇರವಾಗಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು. ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಂದನವನ ಗ್ರಾಮದ ನಿವೃತ್ತ ಮುಖ್ಯೋಪಧ್ಯಾಯ ಎನ್. ರಮಾನಂದ ಭಟ್(86) ನಿಧನರಾದರು. ಅವರು ನಾಯ್ಕನಕಟ್ಟೆ ಮತ್ತು ಖಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಧ್ಯಾರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಸಿಟಿ ವತಿಯಿಂದ ಬಂಧನ್ ಜೆಸಿಐ ಸಪ್ತಾಹ 2021 ಇದರ ಮೂರನೇ ದಿನದ ಅಂಗವಾಗಿ ಕಿಟ್ ವಿತರಣೆ ಮತ್ತು ಸ್ಕಾಲರ್ಶಿಪ್ ನೋಟ್ ಬುಕ್ ವಿತರಣೆ, ಹಾಗೂ ಸ್ಪೋರ್ಟ್ಸ್ ಕಾರ್ಯಕ್ರಮ ಇಲ್ಲಿನ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಜೆಸಿಐ ವಲಯಾಧಿಕಾರಿ ಮಣಿಕಂಠ ದೇವಾಡಿಗ ಕಾರ್ಯಕ್ರಮ ಉದ್ಘಾಟಿಸಿದರು, ಜೇಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷರಾದ ಶ್ರೀಧರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ ಪ್ರಸ್ತಾವಿಕ ನುಡಿಗಳನ್ನಾಡಿದರು. ಜೇಸಿರೇಟ್ ಅಧ್ಯಕ್ಷೆ ಅನಿತಾ ಆರ್ ಕೆ ಶುಭ ಹಾರೈಸಿದರು. ಈ ಸಂದರ್ಭ ಬೈಂದೂರು ಸಿಟಿ ಘಟಕದ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಜೆಸಿ ಸವಿತಾ ಗಾಣಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಅಧ್ಯಕ್ಷರಾಗಿ ಹೆಚ್ ರವೀಂದ್ರ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಅವರು ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಳೆದ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಪಧಾದಿಕಾರಿಗಳಾಗಿ ಬೈಂದೂರು ತಾಲೂಕಿನ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2011 ರಲ್ಲಿ ರಾಜ್ಯ ಸರ್ಕಾರ ಅವರ ಸೇವೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ ಹಾಗೂ 2020ರಲ್ಲಿ ರಾಜ್ಯಮಟ್ಟದ ಡಾ. ಶಾಂತಾ ರಾಧಾಕ್ರಷ್ಣ ಧತ್ತಿ ಪ್ರಶಸ್ತಿ ಸಂದಿದೆ.
