Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.4: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇಂದೂ ಕೂಡಾ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದು, ಕಾಲೇಜು ಆವರಣದೊಳಗೆ ಪ್ರವೇಶ ನಿರಾಕರಣೆ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಒಂದಷ್ಟು ದ್ಯಾರ್ಥಿಗಳು ಕೆಸರಿ ಶಾಲು ಧರಿಸಿದ ಘಟನೆ ನಡೆದಿದೆ. ಗೇಟ್ ಒಳಕ್ಕೆ ಪ್ರವೇಶಿಸಿದ ವಿದ್ಯಾರ್ಥಿನಿಯರು:ಕಾಲೇಜು ಆವರಣದೊಳಕ್ಕೆ ಪ್ರವೇಶಿಸುವಂತಿಲ್ಲ ಎಂದು ಪ್ರಾಂಶುಪಾಲರು ಸೂಚಿಸಿದ ಹೊರತಾಗಿಯೂ ವಿದ್ಯಾರ್ಥಿಗಳು ಗೇಟ್ ತಳ್ಳಿ ಒಳಕ್ಕೆ ಪ್ರವೇಶಿಸಿ ಕಾಲೇಜು ಆವರಣದಲ್ಲಿ ಇರಲು ಅವಕಾಶ ನೀಡುವಂತೆ ಆಗ್ರಹಿಸಿದರು. ಪೋಷಕರಿಂದ ಆಕ್ಷೇಪ:ವಿದ್ಯಾರ್ಥಿನಿಯರನ್ನು ತರಗತಿಗೆ ಸ್ಕಾರ್ಫ್ ಧರಿಸಿ ತೆರಳು ಅನುಮತಿ ನೀಡದ ಕಾಲೇಜು ಆಡಳಿತದ ವಿರುದ್ಧ ಪೊಷಕರು ಆಕ್ಷೇಪಿಸಿ, ಗೇಟ್ ಹೊರಭಾಗದಲ್ಲಿ ನಿಂತು ಪ್ರತಿಭಟಿಸಿದರು. ಇಲ್ಲಿ ಪ್ರತಿಭಟನೆ ಮಾಡುವಂತಿಲ್ಲ ಎಂದು ಕುಂದಾಪುರ ಡಿವೈಎಸ್‌ಪಿ ಹೇಳಿದಾಗ ಮಾತಿನ ಚಕಮಕಿ ನಡೆಯಿತು. ಕೇಸರಿ ಶಾಲು ಧರಿಸಿ ಘೋಷಣೆ:ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜು ಆವರಣ ಪ್ರವೇಶಿಸುತ್ತಿದ್ದಂತೆ ಒಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತಗರತಿಗಳಲ್ಲಿ ಓಡಾಡಲು ಆರಂಭಿಸಿದರು. ಅವರನ್ನೂ ಹೊರಕ್ಕೆ ಕಳುಹಿಸುವಂತೆ ಪೋಷಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.4: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 9 ರಿಂದ 12 ನೇ ವರ್ಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 9 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ 5,000 ರೂ. ಹಾಗೂ ದ್ವಿತೀಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ 3,000 ರೂ. ನಗದು ಹಾಗೂ ಅಭಿನಂದನಾ ಪತ್ರ ನೀಡಲಾಗುವುದು. ಜಿಲ್ಲಾ ಹಂತದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ 10,000 ರೂ. ನಗದು ಬಹುಮಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿದೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು- 3 ಹುದ್ದೆ, ಪಂಚಕರ್ಮ ತಜ್ಞ ವೈದ್ಯರು, ಆರ್.ಎಮ್.ಎನ್.ಸಿ.ಹೆಚ್ ಸಮಾಲೋಚಕರು, ನೇತ್ರ ಸಹಾಯಕರು, ಡೆಂಟಲ್ ಹೈಜಿನಿಸ್ಟ್, ಡೆಂಟಲ್ ಟೆಕ್ನೀಷಿಯನ್ ಮತ್ತು ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪಾರ್ಡ್ ಚಿಲ್ಡçನ್ ರ ತಲಾ 1 ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಫೆಬ್ರವರಿ 5 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಸರಕಾರಿ ಸೌಲಭ್ಯ, ಪ್ರಯೋಜನಗಳನ್ನು ಪಡೆದುಕೊಳ್ಳಲು ಜನಸಾಮಾನ್ಯರು ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದ್ದು, ಇಂದು ಸರಕಾರ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಜನಸಾಮಾನ್ಯರಿಗೆ ಸರಕಾರಿ ಸೇವೆ ಒದಗಿಸುವ ಪ್ರಯತ್ನ ಮಾಡುತ್ತಿದೆ. ಜನರು ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಡಿಜಿಟಲ್ ಸೇವಾ ಕೇಂದ್ರಗಳ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿತ್ವದ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಿಜಿಟಲ್ ಸೇವಾ ಕೇಂದ್ರಗಳು ಕಾರ್ಯಾಚರಿಸುತ್ತಿದೆ ಎಂದು ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ಸಮೀಪದ ಕಟ್ಟಡದಲ್ಲಿ ಗುರುವಾರ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಂದರು ಒಕ್ಕೂಟದ ಅಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಇದರ ಉದ್ಘಾಟನಾ ಕಾರ್ಯಕ್ರಮ ಕೊಲ್ಲೂರು ಯೋಜನಾ ಕೇಂದ್ರದಲ್ಲಿ ನೆರವೇರಿತು. ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಶಿವರಾಮ್ ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಹಾಗೂ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರು ಮಂಜುನಾಥ ಪೂಜಾರಿ, ವಲಯದ ಮೇಲ್ವಿಚಾರಕರು ಮಂಜುನಾಥ, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ವಲಯದ ಸೇವಾಪ್ರತಿನಿಧಿಗಳು, ಸುವಿಧಾ ಸಹಾಯಕರು ಹಾಗೂ, ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸೇವಾಪ್ರತಿನಿಧಿ ರಾಘವೇಂದ್ರ ಅವರು ಅತಿಥಿಗಳಿಗೆ ಸ್ವಾಗತಿಸಿದರು ಹಾಗೂ ಸೇವಾಪ್ರತಿನಿಧಿ ಗಣೇಶ್ ಕೊಠಾರಿ ಇವರು ಧನ್ಯವಾದ ಸಮಾರ್ಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರಿಗೆ ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ ಇಂತಹ ಉಚಿತ ಶಿಬಿರಗಳನ್ನು ಆಯೋಜಿಸುತ್ತಿರುವು ಅತ್ಯಂತ ಶ್ಲಾಘನೀಯ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಬೈಂದೂರು ರೋಟರಿ ಕ್ಲಬ್ ನೇತೃತ್ವದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಇನ್ನರ್‌ವೀಲ್ ಕ್ಲಬ್ ಬೈಂದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮುದ್ದುಮನೆ ಶಿರೂರು ಇವರ ಸಹಯೋಗದಲ್ಲಿ ಮಂಗಳವಾರ ಮೇಕೋಡು ಶ್ರೀ ಮೇಕೋಡಮ್ಮ ಸಭಾಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಮತ್ತು ಮಧುಮೇಹ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರವೀಣ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ನೇತ್ರತಜ್ಞ್ಞೆ ಡಾ. ರಶ್ಮಿ ಶೆಟ್ಟಿ ಕಣ್ಣಿನ ಆರೋಗ್ಯದ ಮಹತ್ವವನ್ನು ತಿಳಿಸಿದರು. ಟ್ರಸ್ಟ್‌ನ ಪ್ರತಿನಿಧಿ ಶಂಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಾಂಧಿಯ ವಿಚಾರಧಾರೆಗಳನ್ನು ಸರಿಯಾಗಿ ತಿಳಿದುಕೊಳ್ಳದೆ ಹಲವು ಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಎಳೆಯ ಮಕ್ಕಳು ಕೂಡ ತಪ್ಪು ತಪ್ಪಾಗಿ ಗಾಂಧಿಯನ್ನು ತಿಳಿದುಕೊಳ್ಳುತ್ತಿದ್ದಾರೆ. ಇದು ಅಪಾಯಕಾರಿ ಎಂದು ಶಿಕ್ಷಕ, ಸಂಘಟಕ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಗಾಂಧಿ ವಿಚಾರ ವೇದಿಕೆ ಬ್ರಹ್ಮಾವರ ಘಟಕ, ಕೋಟ ಕ.ಸಾ.ಪ ಕಚೇರಿಯಲಲ್ಲಿ ಏರ್ಪಡಿಸಿದ ಗಾಂಧಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಗಾಂಧಿಗೆ ನುಡಿನಮನ ಸಲ್ಲಿಸಿ ಮಾತನಾಡಿ ಇದಕ್ಕೆ ಸಾಮಾಜಿಕ ಜಾಲತಾಣಗಳ ಪ್ರಭಾವ ಬಹಳಷ್ಟಿದೆ. ಹಿರಿಯರು ಗಾಂಧಿಯ ವಿಚಾರಧಾರೆಗಳನ್ನು ಅರ್ಥಮಾಡಿಕೊಂಡವರು ಗಾಂಧಿಯ ವಿಚಾರಧಾರೆಗಳನ್ನು ಎಳೆಯರಿಗೆ ತಲುಪಿಸಬೇಕಾಗಿದೆ ಸ್ವಾತಂತ್ರ್ಯ ಪೂರ್ವದ ಭಾರತದ ಸಾಮಾಜಿಕ ಸ್ತರವಿನ್ಯಾಸದ ಆಧಾರದಮೇಲೆ ಗಾಂಧಿಯನ್ನು ಯುವ ಜನತೆಗೆ ಅರ್ಥೈಸಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಗಾಂಧಿ ವಿಚಾರವೇದಿಕೆ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಪ್ರೊಫೆಸರ್ ಸಿ ಉಪೇಂದ್ರ ಸೋಮಯಾಜಿಯವರು ಮಾತನಾಡಿ ಪರಿಪೂರ್ಣತೆಗೆ ಬಹಳ? ಹತ್ತಿರವಾಗಿದ್ದ ಗಾಂಧಿ ವಿಚಾರಧಾರೆಗಳು ಸರ್ವಕಾಲಕ್ಕೂ ಸಲ್ಲುವಂತಹದು. ಐನ್ಸ್ಟೈನ್ ಹೇಳಿದಂತೆ ಇಂತಹ ಒಬ್ಬ ವ್ಯಕ್ತಿ ಭೂಮಿಯ ಮೇಲೆ ಜೀವಿಸಿದ್ದ ಅನ್ನೋದು ನಂಬುವುದು ಕಷ್ಟ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಗೆ ಕಾಲೇಜು ಆವರಣದೊಳಗೆ ಪ್ರವೇಶ ನಿರಾಕರಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಗೇಟಿನ ಬಳಿಯೇ ತಡೆದು, ಸರ್ಕಾರದ ಆದೇಶದಂತೆ ಕಾಲೇಜು ವಸ್ತ್ರಸಂಹೀತೆಯನ್ನು ಎಲ್ಲಾ ವಿದ್ಯಾರ್ಥಿಗಳು ಪಾಲಿಸಬೇಕು ಎಂದು ನಿನ್ನೆಯೇ ಪೋಷಕರ ಸಭೆಯಲ್ಲಿ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಆದೇಶ ಪಾಲಿಸುವುದಿದ್ದರೆ ಮಾತ್ರ ಕಾಲೇಜು ಆವರಣದೊಳಕ್ಕೆ ಬನ್ನಿ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಕಾಲೇಜಿನ ಆವರಣದ ಹೊರಗೆ ನಿಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ನಾವು ಭಾರತದ ಪ್ರಜೆಗಳು, ನಮಗೂ ಕಲಿಕೆಗೆ ಅವಕಾಶ ಕೊಡಿ. ಕಾಲೇಜು ಶಿಕ್ಷಣ ಅಂತಿಮ ಹಂತದಲ್ಲಿರುವಾಗ ಇಂತಹ ಕಾನೂನು ತರುವುದು ಸರಿಯಲ್ಲ. ಮೊದಲೇ ಹೇಳಿದ್ದರೆ ನಾವು ಈ ಕಾಲೇಜಿಗೆ ಪ್ರವೇಶ ಪಡೆಯುತ್ತಿರಲಿಲ್ಲ. ಹಿಜಾಬ್ ಕಾರಣವಿಟ್ಟುಕೊಂಡು ನಮ್ಮ ಭವಿಷ್ಯ ಹಾಳುಮಾಡಬೇಡಿ ಎಂದು ಮನವಿ ಮಾಡುತ್ತಾ ಕಣ್ಣೀರು ಹಾಕಿದರು. ಒಂದು ಹಂತದಲ್ಲಿ ಪ್ರಾಂಶುಪಾಲರು ಕಾಲೇಜು ಗೇಟು ಮುಚ್ಚಲು ಮುಂದಾದಾಗ ಆಕ್ರೋಶಗೊಂಡ…

Read More

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ದುಡಿಯುವ ಶಕ್ತಿಯನ್ನು ಕಳೆದುಕೊಂಡಾಗ, ಪ್ರತಿ ತಿಂಗಳೂ ಜೀವನ ನಿರ್ವಹಣೆಗಾಗಿ ನಿಶ್ಚಿತ ಮಾಸಿಕ ಆದಾಯ ಬರುವಂತಿರಬೇಕು ಎಂಬ ಆಶಯ ಹೊಂದಿರುತ್ತಾನೆ. ಸರ್ಕಾರಿ ನೌಕರರಿಗಾದರೆ ಸರ್ಕಾರವೇ ಪ್ರತೀ ತಿಂಗಳೂ ನಿವೃತ್ತಿ ವೇತನ ನೀಡುತ್ತದೆ. ಆದರೆ ಯಾವುದೇ ಉದ್ಯೋಗ ಭದ್ರತೆ ಇಲ್ಲದ ಅಸಂಘಟಿತ ಕಾರ್ಮಿಕರು ಮತ್ತು ಸ್ವಯಂ ಉದ್ಯೋಗಿಗಳು ತನ್ನ ದುಡಿಮೆಯ ಅವಧಿಯಲ್ಲಿ ಸಾಕಷ್ಟು ಹಣವನ್ನೂ ಕೂಡಿಡಲೂ ಆಗದೇ ಜೀವನದ ಸಂಧ್ಯಾಕಾಲದಲ್ಲಿ ಆರ್ಥಿಕ ಸಂಕಷ್ಠಕ್ಕೆ ಸಿಲುಕುತ್ತಾರೆ. ಇವರು ಪಿಂಚಣಿ ಸೌಲಭ್ಯದಿಂದ ವಂಚಿತರಾಗುವುದನ್ನು ತಡೆಯಲು ಇವರಿಗೂ ಸಹ 60 ವರ್ಷದ ನಂತರ ಸರ್ಕಾರದಿಂದಲೇ ಪಿಂಚಣಿ ಪಡೆಯುವ ಯೋಜನೆ ಲಭ್ಯವಿದೆ. ಭಾರತ ದೇಶದ ಶೇ.50ರಷ್ಟು ಆದಾಯವು ಅಸಂಘಟಿತ ವಲಯದ ಅಂದಾಜು 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದ್ದು, ಅಸಂಘಟಿತ ವಲಯದಲ್ಲಿ ಗೃಹ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಫೆ.2: ಕುಂದಾಪುರದ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಸ್ಕಾರ್ಫ್ (ಹಿಜಾಬ್) ಧರಿಸುವುದನ್ನು ವಿರೋಧಿಸಿ, ಹಿಂದೂ ಸಮುದಾಯದ ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ತೆರಳಿರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ಘಟನೆಯನ್ನು ತಿಳಿಗೊಳಿಸಲು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರ ಪೋಷಕರ ಸಭೆ ಫಲಪ್ರದವಾಗಿಲ್ಲ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಒಂದಷ್ಟು ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದನ್ನು ವಿರೋಧಿಸಿ ಮತ್ತೊಂದಷ್ಟು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ತೆರಳಿದ್ದರು. ಸುಮಾರು 28 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸುತ್ತಿದ್ದು ಇಂದು 100ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಪರಿಸ್ಥಿತಿ ವಿಕೋಪಕ್ಕೆ ಬರುವ ಲಕ್ಷಣಗಳು ಕಾಣುತ್ತಲೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕರಣವನ್ನು ಸುಖಾಂತ್ಯಗೊಳಿಸಲು ಖುದ್ದು ಕಾಲೇಜಿಗೆ ಭೇಟಿ ನೀಡಿದ್ದರು. ಕೇಸರಿ ಶಾಲು ತೆಗೆಯಬೇಕಿದ್ದರೆ, ಹಿಜಾಬ್ ಕೂಡ ಧರಿಸಬಾರದು ಎಂದು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು…

Read More