ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅನುಪಮಾ ಪ್ರಸಾದ್ ಅವರ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಮೂರು ತಲೆಮಾರಿನ ಕಥೆಯನ್ನು ಹೇಳುತ್ತಾ 20ನೇ ಶತಮಾನದ ನಮ್ಮ ಭಾರತದ ಚಿತ್ರಣವನ್ನು ಸೂಕ್ಷ್ಮವಾಗಿ ಬಿತ್ತರಿಸುತ್ತದೆ ಎಂದು ಹಿರಿಯ ಲೇಖಕ ಪ್ರೊ. ಓ.ಎಲ್.ನಾಗಭೂಷಣಸ್ವಾಮಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಹಲವು ಕಾದಂಬರಿಕಾರರ ಕಾದಂಬರಿಗಳಿಗೆ ಹೋಲಿಸಬಹುದು ಆದರೆ ಮೂರು ತಲೆಮಾರಿನ ಸಂಗತಿಗಳನ್ನು ನೈಜತೆಗೆ ಹತ್ತಿರವಾಗಿ ಬಿತ್ತರಿಸುತ್ತದೆ ಎಂಬುದು ಮನಸಿಗೆ ಸ್ಪಷ್ಟವಾಗಿ ಕಾಣುತ್ತದೆ. ಒಂದು ವಿಚಿತ್ರ ಸಂವೇದನೆಯೊಂದಿಗೆ ಕಾದಂಂಬರಿ ಓದಿಸಿಕೊಂಡು ಹೋಗುತ್ತದೆ. ಅಲ್ಲಿನ ಪಾತ್ರಗಳು ಮತ್ತು ಹಲವು ದಷ್ಟಿಕೋನಗಳಲ್ಲಿ ಕಥೆಯನ್ನು ಹೇಳುವ ಶೈಲಿ ಈ ಕಾದಂಬರಿಯಲ್ಲಿದೆ. ಹಾಗೆಯೇ ಈ ಕಾದಂಬರಿಯಲ್ಲಿ ಯಾವ ಪಾತ್ರವು ಮುಖ್ಯವಲ್ಲ. ಆದರೆ ಎಲ್ಲಾ ಪಾತ್ರಗಳು ಅತ್ಯಂತ ಮುಖ್ಯವೆನಿಸುತ್ತದೆ. ಜೀವನದ ಪರಿ ಹಳ್ಳ ನದಿಯಾಗಿ ಸಮುದ್ರ ಸೇರುವ ಪರಿ ಹಾದಿಗುಂಟ ಮನುಷ್ಯನ ಅನೇಕ ಸಂಚಲನಗಳನ್ನು ಹೊರಗೆಡವುತ್ತದೆ. ಗತಕಾಲವನ್ನು ಹೇಳುವುದು ಕಾಲದ ನೀರಿನಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬರಿಗೂ ಜೀವನದಲ್ಲಿ ಶಿಸ್ತು, ತಾಳ್ಮೆ, ಗೌರವ ಅತಿ ಮುಖ್ಯ. ಶಿಸ್ತು ತಾಳ್ಮೆಯಿಂದ ಯಾವುದೇ ಕಾರ್ಯವನ್ನು ಯಶಸ್ವಿಯಾಗಿ ಮಾಡಬಹುದು. ಇಂದಿನ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಬಾಲ್ಯದಲ್ಲಿ ಗುರು ಹಿರಿಯರಿಂದ ಪಡೆದ ಸಂಸ್ಕಾಯುತ ಶಿಕ್ಷಣ ಮುಂದಿನ ನಮ್ಮ ಜೀವನದಲ್ಲಿ ಸಹಾಯಕ್ಕೆ ಬರುತ್ತದೆ. ವಿದ್ಯಾರ್ಥಿ ಜೀವನದ ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನಕ್ಕೇರುವ ಪ್ರಯತ್ನ ಮಾಡಬೇಕು ಎಂದು ಸಂಶೋಧಕ ಬಾಂಡ್ಯ ಶ್ರೀಕಾಂತ ಪೈ ಹೇಳಿದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಹಾಗೂ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರಗಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಅರ್ಪಿಸಿದ ಬಿ.ಶ್ರೀಕಾಂತ ಅಣ್ಣಪ್ಪ ಪೈ ಅವರನ್ನು ಜಿಎಸ್‌ವಿಎಸ್ ಅಸೋಸಿಯೇಶನ್ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಪರವಾಗಿ ಗೌರವಿಸಲಾಯಿತು. 2019-20ನೇ ಸಾಲಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮದಲ್ಲಾದ ನಷ್ಟ ಹಾಗೂ ಸಾಲಬಾಧೆಯಿಂದ ಬೇಸತ್ತು ಕಾಳಾವರ ಗ್ರಾಮ ಶಾಲೆ ಬಳಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಗಾಣಿಗ (42) ಎಂಬವರು ಗುರುವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಘವೇಂದ್ರ ಗಾಣಿಗ ಬುಧವಾರ ಪತ್ನಿ ಸುಜಾತಾ ಬಳಿ ಉಡುಪಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಸಂಜೆ ಪತ್ನಿ ಪೋನ್ ಮಾಡಿ ವಿಚಾರಿಸಿದಾಗ ಹೋಟೆಲ್ ಬಾಗಿಲು ಹಾಕಿ ರಿಕ್ಷಾ ಮಾಡಿಕೊಂಡು ಮನೆಗೆ ಹೋಗು, ನಾನು ಬರೋದು ತಡವಾಗುತ್ತದೆ ಎಂದು ಪೋನ್ ಕಟ್ ಮಾಡಿದ್ದರು. ರಾತ್ರಿ ಪತ್ನಿ ಮತ್ತೆ ಪೋನ್ ಮಾಡಿದಾಗ ಮೊಬೈಲ್ ಚಾಲನೆಯಲ್ಲಿ ಇರಲಿಲ್ಲ. ಪತ್ನಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪುಸ್ತಕ ಓದುವ ಹವ್ಯಾಸ ಇರುವವರಲ್ಲಿ ಜ್ಞಾನ ವೃದ್ಧಿಯಾಗುತ್ತದೆ, ಅಲ್ಲದೇ ಸಾಧಕರ ಬದುಕಿನ ಹೆಜ್ಜೆಗಳು ಪುಸ್ತಕಗಳಿಂದ ತಿಳಿದು ನಮ್ಮ ಬದುಕನ್ನು ರೂಪಿಸಿಕೊಳ್ಳಲು ಒಂದು ದಾರಿದೀಪವಾಗುತ್ತದೆ, ಆದಷ್ಟು ಪುಸ್ತಕವನ್ನು ಓದುವ ಹವ್ಯಾಸ ನಾವು ಇಟ್ಟುಕೊಳ್ಳೋಣ ಎಂದು ಕೋಟತಟ್ಟು ಪಂಚಾಯತ್ ನ ಅಧ್ಯಕ್ಷೆ ಅಶ್ವಿನಿ ದಿನೇಶ್ ಹೇಳಿದರು ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ನಡೆದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸಾಕಷ್ಟು ಪುಸ್ತಕ ಸಂಗ್ರಹವಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ಈ ಸಂದರ್ಭದಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿಓ ಶೈಲಾ ಎಸ್ ಪೂಜಾರಿ, ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ , ಪಂಚಾಯತ್ ಸಿಬ್ಬಂದಿ ಮಮತಾ, ಸುಜಾತ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ರೆಡ್‌ಕ್ರಾಸ್ ಬೈಂದೂರು ಘಟಕದ ಆಶ್ರಯದಲ್ಲಿ ಉಪ್ಪುಂದ ಗ್ರಾಮದ ಹಾಡಿಮನೆ ಗೋವಿಂದು ದೇವಾಡಿಗ ಮನೆಯವರಿಗೆ ಗೃಹ ಉಪಯೋಗಿ ವಸ್ತುಗಳಾದ ಟಾರ್‌ಪಲ್ ಹಾಗೂ ಇತರ ವಸ್ತುಗಳನ್ನು ವಿತರಿಸಲಾಯಿತು. ಹಾಗೆಯೇ ಗ್ರಾಮ ಪಂಚಾಯತಿಗೆ ಆಕ್ಸಿಮೀಟರ್, ಮಾಸ್ಕ್ ವಿತರಿಸಲಾಯಿತು, ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೈಂದೂರು ರೆಡ್‌ಕ್ರಾಸ್‌ನ ಸಭಾಪತಿ ನಿತಿನ್ ಬಿ. ಶೆಟ್ಟಿ, ಕಾರ್ಯದರ್ಶಿ ಮನೋಹರ ಶೆಟ್ಟಿ, ಖಜಾಂಚಿ ಸಂತೋಷ ಶೆಟ್ಟಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ ಶೆಟ್ಟಿ ಸದಸ್ಯರಾದ ಮಂಜುನಾಥ ದೇವಾಡಿಗ, ನಾಗರಾಜ ಶೇಟ್ ರೆಡ್‌ಕ್ರಾಸ್ ಸದಸ್ಯರಾದ ಯೂ. ಸಂದೇಶ ಭಟ್ , ಅನಿಲ್.ಡಿ. ಉಪ್ಪುಂದ, ರಮೇಶ ಜೋಗಿ ಹಳಗೇರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ, ಅ12: ಜಿಲ್ಲೆಯಲ್ಲಿ ಗುರುವಾರ ದಾಖಲೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಂಡಿದೆ. ಇಂದು 191 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 96, ಕುಂದಾಪುರ, ಬೈಂದೂರು ತಾಲೂಕಿನ 49, ಕಾರ್ಕಳ, ಹೆಬ್ರಿ ತಾಲೂಕಿನ 45 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 191 ಪ್ರಕರಣಗಳಲ್ಲಿ 95 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 156 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕುಂದಾಪುರ ತಾಲೂಕಿನ 79 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 136 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1259 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 5756 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2,416 ಮಂದಿಗೆ ಮೊದಲನೇ ಡೋಸ್, 2,185 ಮಂದಿಗೆ ಎರಡನೇ ಡೋಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು, ಅ.12: ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಗಣೇಶ ಚತುರ್ಥಿ, ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ದುರ್ಗಾ ಪೂಜೆ ಮೊದಲಾದ ಹಬ್ಬ ಆಚರಣೆ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಸಲಹೆ ನೀಡಲಾಗಿದೆ. ಮೊಹರಂ ಪ್ರಾರ್ಥನಾ ಸಭೆ, ಮೆರವಣಿಗೆಗಳಿಗೆ ಅವಕಾಶವಿಲ್ಲ. ಕಬರಸ್ಥಾನದಲ್ಲಿಯೂ ಸಭೆ ಮಾಡುವಂತಿಲ್ಲ. ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬೃಹತ್ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಪೂಜಾ ಸ್ಥಳಗಳು ಮತ್ತಿತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಮತ್ತು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಪೂಜಾ ಕಾರ್ಯ ಕೈಗೊಳ್ಳಲು ಅನುಮತಿಸಿದೆ. ಕೋವಿಡ್ ನಿಯಮದೊಂದಿಗೆ ಮಸಿದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಮಸೀದಿ ಪ್ರವೇಶಿಸುವಾಗ ಸ್ಯಾನಿಟೈಸರ್, ದೇಹದ ತಾಪಮಾನ ಪರೀಕ್ಷಿಸುವುದು ಕಡ್ಡಾಯ.ಆದರೆ ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ, ಸಭೆ, ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾವಿರಾರು ಜನರಿಗೆ ಉದ್ಯೋಗವನ್ನು ದೊರಕಿಸಿದ್ದ ಕರಾವಳಿಯ ಮೂಲದ ಐಟಿ ಕಂಪೆನಿ ರೋಬೋಸಾಫ್ಟ್ ಟೆಕ್ನಾಲಜಿಸ್ 805 ಕೋಟಿ ರೂಪಾಯಿಗೆ ಮಾರಾಟವಾಗಿದೆ. ಜಪಾನ್ ಮೂಲದ ಟೆಕ್ನೋಪ್ರೋ ಹೋಲ್ಡಿಂಗ್ ಕಂಪೆನಿ ಡಿಜಿಟಲ್ ಟ್ರಾನ್ಸ್ಫಾರ್ಮೇಶನ್ ಸೆಲ್ಯೂಷನ್ಸ್ ಸಂಸ್ಥೆಯು ರೋಬೋಸಾಫ್ಟ್‌ನ್ನು ತನ್ನ ತೆಗೆದುಕೊಂಡಿದೆ. 1996ರಲ್ಲಿ ಉಡುಪಿ ಜಿಲ್ಲೆಯ ಆರಂಭಗೊಂಡ ರೋಬೋಸಾಫ್ಟ್ ಟೆಕ್ನಾಲಜಿಸ್, ಸಂತೆಕಟ್ಟೆಯಲ್ಲಿ ಅತ್ಯಾಧುನಿಕ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಉಡುಪಿಯ ರೋಹಿತ್ ಭಟ್ ಅವರು ಸಂಸ್ಥೆಯನ್ನು ಸ್ಥಾಪಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚಿಕ್ಕ ಮಟ್ಟದಲ್ಲಿ ಆರಂಭಗೊಂಡ ಕಂಪೆನಿಯಲ್ಲಿ ಪ್ರಸ್ತುತ ಸಾವಿರಾರು ಉದ್ಯೋಗಿಗಳು ದುಡಿಯುತ್ತಿದ್ದು, ಭಾರತ ಪ್ರಮುಖ ಮಾಧ್ಯಮ ಲೋಕದಲ್ಲಿ ಮೊಬೈಲ್ ಆಪ್ಗಳನ್ನು ಅಭಿವೃದ್ದಿ ಪಡಿಸಿದ ಹೆಗ್ಗಳಿಕೆ ಹೊಂದಿದೆ. ಆ್ಯಪಲ್ ಸಂಸ್ಥೆಯೊಂದಿಗೂ ವ್ಯಾವಹಾರಿಕ ಸಂಬಂಧ ಹೊಂದಿದ್ದ ರೋಬೋಸಾಫ್ಟ್, ಅಮೇರಿಕಾ, ಜಪಾನ್ ಸೇರಿದಂತೆ ವಿಶ್ವದ ಹಲವು ಕಡೆಗಳಲ್ಲಿಯೂ ತನ್ನ ವ್ಯವಹಾರವನ್ನು ವಿಸ್ತರಣೆ ಮಾಡಿದೆ. ಜಪಾನ್ ಮೂಲದ ಟೆಕ್ನೋಪ್ರೋ ಸಂಸ್ಥೆಗೆ ರೋಬೋಸಾಫ್ಟ್ನ ಶೇಕಡಾ 100 ರಷ್ಟು ಶೇರುಗಳನ್ನು ಮಾರಾಟ ಮಾಡುವ ಕುರಿತು ಖುದ್ದು ರೋಬೋಸಾಫ್ಟ್ ಸಂಸ್ಥಾಪಕ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೈಲ್ಕೆರೆ, ಗುಡ್ಡೆಟ್ಟು, ಹಾರ್ಯಾಡಿ ಮತ್ತು ಕೊಳನ್ಕಲ್ಲು ಪ್ರದೇಶದಲ್ಲಿ ಒಟ್ಟು 5 ಶಾಸನೋಕ್ತ ಉಭಯಮುಖಿ ದಾನ ಶಿಲೆಗಳನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಹಾಗೂ ರಾಜೇಶ್ವರ ಉಪಾಧ್ಯಾಯ ಕಂಚಾರ್ತಿ ಅವರು ಪತ್ತೆ ಮಾಡಿದ್ದಾರೆ. ಕರ್ನಾಟಕದಲ್ಲಿಯೇ ಇಂತಹ ಉಭಯಮುಖಿ ದಾನ ಶಿಲೆಗಳು ಪತ್ತೆಯಾಗಿರುವುದು ಅಪರೂಪವಾಗಿದೆ. ಪತ್ತೆ ಮಾಡಿದಂತಹ ಎಲ್ಲಾ ದಾನ ಶಿಲೆಗಳಲ್ಲೂ ಶಾಸನಗಳಿದ್ದು ತೃಟಿತಗೊಂಡಿದೆ. ಗೋಚರಿಸುವ ಕೆಲವು ಲಿಪಿಯ ಆಧಾರದ ಮೇಲೆ ಇವುಗಳು 14ನೇ ಶತಮಾನಕ್ಕೆ ಸೇರಿದೆ ಎಂದು ಹೇಳಬಹುದು. ಗೋದಾನಗಳಲ್ಲಿಯೇ ಶ್ರೇಷ್ಠ ದಾನವಾಗಿರುವ ಉಭಯಮುಖಿ ದಾನ (ಗರ್ಭಧಾರಣೆಯಾಗಿರುವ ಹಸುವನ್ನು ಅಥವಾ ಹಸುವಿನ ಹಾಲುಣ್ಣುತ್ತಿರುವ ಕರುವನ್ನು ದಾನ ಮಾಡುವುದು)ವನ್ನು ದೇವಾಲಯ ಅಥವಾ ಬ್ರಾಹ್ಮಣರಿಗೆ ನೀಡಲಾಗುತ್ತಿತ್ತು. ಗುಡ್ಡೆಟ್ಟು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಪತ್ತೆಮಾಡಿದ ಉಭಯಮುಖಿ ದಾನ ಶಿಲೆಯ ಮೇಲ್ಭಾಗದಲ್ಲಿ ಪೀಠದ ಮೇಲೆ ಪದ್ಮಾಸನದಲ್ಲಿ ಕುಳಿತಿರುವ ಚತುರ್ಭುಜಧಾರಿ ವಿಷ್ಣು ಹಾಗೂ ಇಕ್ಕೆಲದಲ್ಲಿ ಕಾಲುದೀಪ ಹಾಗೂ ಕುಳಿತಿರುವ ಗರುಡನ ಕೆತ್ತನೆಯಿದೆ. ಕೆಳಗಿನ ಪಟ್ಟಿಕೆಯಲ್ಲಿ ದನ, ಹಾಲುಣ್ಣುತ್ತಿರುವ ಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಂಡ್ಲೂರು ಶ್ರೀ ಕನ್ನಿಕಾ ಪರಮೇಶ್ವರೀ ದೇವಸ್ಥಾನದ ವತಿಯಿಂದ ನಡೆಯುವ ಮಾರಿಜಾತ್ರೆಯು ಸರಕಾರದ ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ನಡೆಯಿತು. ಈ ಸಂದರ್ಭ ಶ್ರೀ ದೇಗುಲದ ಆಡಳಿತ ಮೊಕ್ತೇಸರ, ಪದಾರಿಕಾರಿಗಳು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
