ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಮೈಸೂರಿನಲ್ಲಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೋಮ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ, ಜೆಎಸ್ಎಸ್ ಮಹಾವಿದ್ಯಾಪೀಠವು ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸ್ಥಾಪನೆ ಮಾಡಿದ್ದು, ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊಂದಿಗೆ ತೇರ್ಗಡೆಗೊಂಡ ವಿಶೇಷಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ 2019-20 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾಗಶಃ ಮತ್ತು ಪೂರ್ಣ ಅಂಧತ್ವವುಳ್ಳ ಅಭ್ಯರ್ಥಿಗಳು ಇಂಗ್ಲೀಷ್ ಬ್ರೈಲ್ ಭಾಷೆಯ ಜ್ಞಾನ ಹೊಂದಿದ್ದಲ್ಲಿ ಆದ್ಯತೆಯನ್ನು ನೀಡಲಾಗುವುದು. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯವಿದೆ. ಪ್ರವೇಶಕ್ಕೆ ಅರ್ಜಿಗಳನ್ನು ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ, ಮೈಸೂರು (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಹಾಗೂ ಎಸ್ಸಿ/ಎಸ್ಟಿ/ಸಿ1 ವರ್ಗದವರಿಗೆ ರೂ.50) ನಗದು ಅಥವಾ ಡಿಡಿ/ ಎಂಒ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಡಿಕೆರೆ ಮತ್ತು ಕೋಟೆಕೆರೆಗಳ ಮೀನು ಪಾಶುವಾರು ಹಕ್ಕನ್ನು 2019-20 ನೇ ಮೀನುಗಾರಿಕೆ ಫಸಲಿ ವರ್ಷದಿಂದ 2023-24 ನೇ ಮೀನುಗಾರಿಕೆ ಫಸಲಿ ವರ್ಷದವರೆಗೆ ಗರಿಷ್ಟ 5 ವರ್ಷಗಳಿಗೆ ಸರ್ಕಾರದ ನಿಯಮ, ಷರತ್ತು ಮತ್ತು ನಿಬಂಧನೆಗೊಳಪಟ್ಟಂತೆ ಅರ್ಹ ಮೀನುಗಾರಿಕೆ ಸಹಕಾರಿ ಸಂಘಕ್ಕೆ ಗುತ್ತಿಗೆ ನೀಡಲಾಗುವುದು. ಗುತ್ತಿಗೆ ಪಡೆಯಲಿಚ್ಛಿಸುವ ಅರ್ಹ ಮೀನುಗಾರರ ಸಹಕಾರ ಸಂಘದವರು ಮಾತ್ರ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಮೇ 23 ರ ಒಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಶ್ರೇಣಿ-೨, ಕುಂದಾಪುರ, ಕಚೇರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08254-230534 ಅನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶಂಕರ ಜಯಂತಿ ಆಚರಣೆಯು ಬಹಳ ಪವಿತ್ರವಾದ ಕಾರ್ಯ. ಮನುಕುಲದ ಉದ್ಧಾರಕ್ಕೆ ಧಾರ್ಮಿಕ, ಸಂಸ್ಕೃತಿಯನ್ನು ಎತ್ತಿ ಹಿಡಿದು ಹೊಸ ಚರಿತ್ರೆ ಬರೆದ ಪುಣ್ಯತಮ ವ್ಯಕ್ತಿಯ ಕಾರ್ಯ, ಅಳಿವಿನಂಚಿನಲ್ಲಿದ್ದ ಹಿಂದೂ ಸನಾತನ ಧರ್ಮದ ಉಳಿವಿಗಾಗಿ ಯಾವುದೇ ಯುದ್ಧಗಳನ್ನು ಮಾಡದೇ ತರ್ಕಗಳ ಮೂಲಕ ಅನ್ಯ ಧರ್ಮದ ಲೋಪ ದೋಷಗಳ ತಿಳಿಸಿ ತರ್ಕಗಳಲ್ಲಿ ಗೆಲ್ಲುದರ ಜೊತೆ ಮನ ಪರಿವರ್ತನೆ ಮಾಡಿ ಹಿಂದೂ ಧರ್ಮದ ಪುನರುತ್ಥಾನಕ್ಕೆ ಶ್ರೀ ಶಂಕರರು ಕಾರಣರು, ಶ್ರೀ ಶಂಕರರು ಸಾಕ್ಷತ್ ದೇವರ ಅವತಾರವಾಗಿದ್ದು, ಮನುಕುಲದ ಉದ್ಧಾರಕ್ಕೆ ಶ್ರೀ ಶಂಕರರ ಕೊಡುಗೆ ಅಪಾರವಾದುದ್ದು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ದಕ್ಷಿಣಾಮ್ನಾಯ ಇವರ ಪ್ರಾಂತೀಯ ಧರ್ಮಧಿಕಾರಿಗಳಾದ ವೇದಮೂರ್ತಿ ಬಡಾಕೆರೆ ಲೋಕೇಶ ಅಡಿಗ ಹೇಳಿದರು. ಅವರು ಶಾಂಕರ ತತ್ವ ಪ್ರಸರಣಾ ಸಮಿತಿ ಬೈಂದೂರು ತಾಲೂಕು ಇವರ ವತಿಯಿಂದ ಉಪ್ಪುಂದ ಸುವಿಚಾರ ಬಳಗ ಟ್ರಸ್ಟ್ನ ಸಹಯೋಗದಲ್ಲಿ ಉಪ್ಪುಂದ ಶ್ರೀ ಶಂಕರ ಕಲಾ ಮಂದಿರದ ಸಮೃದ್ಧ ಸಭಾ ಭವನದಲ್ಲಿ ಭಾನುವಾರ ಸಂಜೆ ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ ಸತತ 9 ನೇ ಬಾರಿ ಸಿ.ಬಿ.ಎಸ್.ಇ. 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 26 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 42 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಪಾಲಕರ ಮತ್ತು ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿದ್ದು ಸುತ್ತಮುತ್ತಲಿನ ಪರಿಸರದಲ್ಲಿ ದಾಖಲೆಯ ಫಲಿತಾಂಶವಾಗಿರುತ್ತದೆ. ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಈ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒಡಹುಟ್ಟಿದ ಅಣ್ಣನನ್ನೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆಗೈದು ಪೈಶಾಚಿಕ ಕೃತ್ಯ ನಡೆಸಿದ್ದ ಘಟನೆ ಹಸಿಯಾಗಿರುವಾಗಲೇ ಅಣ್ಣ ತಮ್ಮಂದಿರ ಜಗಳ ತಪ್ಪಿಸುವ ಸಚಿದರ್ಭ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆದಿದ್ದ ಅವರ ಭಾವ ಭಾನುವಾರ ರಾತ್ರಿ ತಮ್ಮ ಮನೆಯ ಬಳಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ವಂಡ್ಸೆ ಮೂಲದ ಬಾಬು (47) ಮೃತಪಟ್ಟ ದುರ್ದೈವಿ ಬಿಜೂರು ಗ್ರಾಮದ ಬವಳಾಡಿ ಮೇಲ್ಮಕಿ ಚೌಕಿ ಕುಪ್ಪು ಕೊರಗ ಪುತ್ರನಾದ ಸಂತೋಷ (೨೦) ಮೇ. ೨ರ ತಡರಾತ್ರಿ ಕುಡಿದ ಮತ್ತಿನಲ್ಲಿ, ಕ್ಷುಲ್ಲಕ ಕಾರಣಕ್ಕೆ ತನ್ನ ಒಡಹುಟ್ಟಿದ ಅಣ್ಣನಾದ ನಾಗರಾಜ ಎಂಬುವವನನ್ನು ತನ್ನ ತಂದೆಯ ಊರುಗೋಲಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸುತ್ತಿದ್ದಾಗ, ಅದನ್ನು ತಪ್ಪಿಸಲು ಹೋದ ಅವನ ಬಾವ (ನಾಗರಾಜನ ತಂಗಿಯ ಗಂಡ) ಬಾಬುವಿನ ಮೇಲೂ ಹಲ್ಲೆ ಮಾಡಿದ್ದನು, ತೀವ್ರ ಹಲ್ಲೆಗೊಳಗಾದ ನಾಗರಾಜ ಅದೇ ದಿನ ತಡರಾತ್ರಿ ಮೃತಪಟ್ಟರೇ, ಆತನ ಬಾವನಾದ ಬಾಬು ಅವನನ್ನು ಚಿಕಿತ್ಸೆಗಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿತ್ತು. ಆತನನ್ನು ತಪಾಸಣೆ ಮಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲಾಂತರದಲ್ಲಿ ನಮ್ಮ ಸಮಾಜದಲ್ಲಿ ಅಗಾಧವಾದ ಬದಲಾವಣೆಗಳು ಆಗಿವೆ. ಹೊಸ ವಿಚಾರಗಳು ಅದರಲ್ಲಿ ಪ್ರವೇಶ ಪಡೆದಿವೆ. ಇಂದು ರಚಿಸುವ ಸಾಹಿತ್ಯ ಅದನ್ನು ಪ್ರತಿಬಿಂಬಿಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಪರಿಷತ್ತಿನ ಆಶ್ರಯದಲ್ಲಿ ಖಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓ. ಆರ್. ಪ್ರಕಾಶ್ ಅವರು ರಚಿಸಿರುವ ’ಪ್ರಾಪ್ತಿ’ ಕಾದಂಬರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಆಧುನಿಕ ಬದುಕಿನ ಶೈಲಿಯಿಂದ ಬಂಜೆತನ ಹೆಚ್ಚುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಬಂಜೆತನ, ಪ್ರಣಾಳ ಸಂತಾನ ಮತ್ತು ಮಕ್ಕಳ ದತ್ತು ಸ್ವೀಕಾರದ ಸುತ್ತ ಹೆಣೆದಿರುವ ಪ್ರಕಾಶ್ ಅವರ ಕಾದಂಬರಿ ಹೊಸ ವಸ್ತುವನ್ನು ಓದುಗರ ಮುಂದಿರಿಸುತ್ತದೆ. ಅದರ ಕುರಿತಾದ ನೈತಿಕ, ಸಾಮಾಜಿಕ ಪ್ರಶ್ನೆಗಳ ಚರ್ಚೆಯನ್ನು ಹುಟ್ಟುಹಾಕುತ್ತದೆ. ಸರಳ ಭಾಷೆ, ಆಕರ್ಷಕ ಶೈಲಿ, ಕಣ್ಣಿಗೆ ಕಟ್ಟುವಂತಹ ಸನ್ನಿವೇಶಗಳ ಚಿತ್ರಣ ಓದುಗರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲಿಚ್ಛಿಸುವ 21 ರಿಂದ 35 ವರ್ಷದೊಳಗಿನ ಯುವಕ/ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸುವವರು, ಯುವ ಜನರ ಪ್ರೌಢಾವಸ್ಥೆಯ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ಪರಿಹಾರ ಕಂಡುಕೊಳ್ಳುವ ಬಗ್ಗೆ ಸಾರ್ವಜನಿಕ ಅರಿವು ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಶ್ರಮಿಸಬೇಕಾಗುತ್ತದೆ. ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ- ಯುವತಿಯರು ತಮ್ಮ ಸ್ವ-ವಿವರಗಳೊಂದಿಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇಲ್ಲಿಗೆ ಮೇ 9 ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ನಿವಾಸಿಗಳಾಗಿರಬೇಕು. ಕನ್ನಡ ಸ್ಪಷ್ಟವಾಗಿ ಮಾತನಾಡಲು ಮತ್ತು ಸಂವಹನ ಕಲೆ, ಕೌಶಲ್ಯ ಹೊಂದಿ ಸಮುದಾಯದಲ್ಲಿ ಕೆಲಸ…
ಮೂಲ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅನುವು ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ 6: ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಅಂಗ ಸಂಸ್ಥೆಗಳು ಸಾರ್ವಜನಿಕರಿಂದ ವಿವಿಧ ರೀತಿಯ ಠೇವಣಿಗಳನ್ನು ಸಂಗ್ರಹಿಸಿದ್ದು ಅವುಗಳ ನಿಗಧಿತ ಅವಧಿ ಮುಗಿದ ನಂತರ ಅದರ ಹೂಡಿಕೆದಾರರಿಗೆ ಹಿಂತಿರುಗಿಸದೆ ವಂಚಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ವಂಚಿತ ಸಂಸ್ಥೆಯ ಆಸ್ತಿಯನ್ನು ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಸಂರಕ್ಷಣಾ ಕಾಯ್ದೆಯಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದು, ಹರಾಜು ಪ್ರಕ್ರಿಯೆಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿರುತ್ತದೆ. ನ್ಯಾಯಾಲಯದ ಆದೇಶದಂತೆ ಹರಾಜಿನಿಂದ ಬಂದ ಹಣವನ್ನು ಠೇವಣಿದಾರರಿಗೆ ವಿತರಿಸಲು ನ್ಯಾಯಾಲಯಕ್ಕೆ ಠೇವಣಿದಾರರ ವಿವರಗಳನ್ನು ಸಲ್ಲಿಸಬೇಕಾಗಿರುತ್ತದೆ. ಆದ್ದರಿಂದ ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಮತ್ತು ಅದರ ಅಂಗ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವ ಠೇವಣಿದಾರರು ಅವರ ಠೇವಣಿಗಳಿಗೆ ಸಂಬಂಧಿಸಿದಂತೆ ಸದರಿ ಸಂಸ್ಥೆಯವರು ನೀಡಿರುವ ಬಾಂಡ್/ಪಾಸ್ ಪುಸ್ತಕ ಇತ್ಯಾದಿ ಮೂಲ ದಾಖಲೆಗಳೊಂದಿಗೆ ಅರ್ಜಿಗಳನ್ನು ೩೦ ದಿನಗಳ ಒಳಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯ ನಂತರ…
ಕುಂದಾಪ್ರ ಡಾಟ್ ಕಾಂ’ ಸುದ್ದಿ ಉಡುಪಿ: 2019-20 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಆಸಕ್ತ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗೇರು, ತೆಂಗು, ಕಾಳುಮೆಣಸು, ಅನಾನಸು, ಬಾಳೆ, ಕೊಕ್ಕೋ, ಮ್ಯಾಂಗೋ ಸ್ಟೀನ್, ರಾಂಬುಟಾನ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಲಭ್ಯವಿದೆ. ತೋಟಗಾರಿಕಾ ಬೆಳೆಗಳಲ್ಲಿ ರೋಗ/ ಕೀಟಗಳ ನಿಯಂತ್ರಣಕ್ಕೆ ಖರೀದಿಸಿದ ಸಸ್ಯ ಸಂರಕ್ಷಣಾ ಔಷಧಿಗಳಿಗೆ, ಸಸ್ಯ ಪೋಷಕಾಂಶಗಳಿಗೆ ಗೇರು, ತೆಂಗು ಹಾಗೂ ಕಾಳುಮೆಣಸು ಹಳೆ ತೋಟಗಳ ಪುನಶ್ಚೇತನಕ್ಕಾಗಿ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ, ಹಸಿರು ಮನೆ, ನೆರಳು ಪರದೆ ನಿರ್ಮಾಣಕ್ಕಾಗಿ ಸಣ್ಣ ಪ್ರಮಾಣದ ಸಸ್ಯಗಾರ ಸ್ಥಾಪನೆಗೆ, ತೆಂಗಿನಲ್ಲಿ ರೋಗ / ಕೀಟ ನಿಯಂತ್ರಣಕ್ಕಾಗಿ ಪರಿಕರಗಳ ಖರೀದಿಗೆ ಜೇನು ಕೃಷಿ ತರಬೇತಿಯೊಂದಿಗೆ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರಗಳ ಖರೀದಿಗೆ ಹಾಗೂ ಮಧುವನಗಳ ಸ್ಥಾಪನೆಗೆ ಸಹಾಯಧನ ಲಭ್ಯವಿದೆ. ತೋಟಗಾರಿಕೆಯಲ್ಲಿ ಬಳಸುವ ಯಂತ್ರಗಳ ಖರೀದಿಗೆ 20 HP ಕ್ಕಿಂತ ಕಡಿಮೆ ಸಾಮರ್ಥ್ಯದ ಟ್ರಾಕ್ಟರ್ ಖರೀದಿಗೆ, ಪ್ಯಾಕ್ ಹೌಸ್ ಹಾಗೂ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಂಡುಬರಬಹುದಾದ ಎಲ್ಲಾ ಸಮಸ್ಯೆಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಇರುವ ಅಡಚಣೆ ನಿವಾರಣೆಗೆ ಒಂದು ವಾರದೊಳಗೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ದೇಶಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಬರುವ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಸಿದ್ಧತೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವೆಡೆ ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಸಮರ್ಪಕ ರೀತಿಯಲ್ಲಿ ಪೂರ್ಣಗೊಳ್ಳದೇ ಮಳೆಗಾಲದಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ. ಸರಿಯಾದ ರಿಫ್ಲೆಕ್ಟರ್ ಹಾಗೂ ಫಲಕಗಳನ್ನು ಅಳವಡಿಸದೆ ಜೀವಕ್ಕೆ ಅಪಾಯ ಒದಗಬಹುದು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಕೂಡಲೇ ಕಾರ್ಯಪ್ರವೃತ್ತವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಹೆದ್ದಾರಿಗಳಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಅವರು ನಿರ್ದೇಶಿಸಿದರು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹ…
