ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್ನ ಮಾಜಿ ನಿರ್ದೇಶಕ ಸಿದ್ಧರಾಜು ಅವರು ಶ್ರಿರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ನ ಪ್ರಧಾನ ಕಛೇರಿಗೆ ಭೇಟಿ ನೀಡಿ ಸಹಕಾರಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸಹಕಾರಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರನ್ನು ಗೌರವಿಸಿದರು. ನಿರ್ದೇಶಕ ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಅರಮನೆಹಕ್ಲು ಸನ್ನಿ ಕ್ರಿಕೆಟರ್ಸ್ ತಂಡಕ್ಕೆ ಕ್ರೀಡೋಪಕರಣ ವಿತರಣೆ ಮಾಡಲಾಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು ಮೊದಲಾದವರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಶಿರೂರು ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು ಮೊದಲಾದವರು ಹಾಜರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ ಮತ್ತು ಲೇಖಕಿ ಡಾ. ಪಾರ್ವತಿ ಜಿ.ಐತಾಳ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ 2018ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಲಭಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಮಲೆಯಾಳ ಮತ್ತು ತುಳು-ಹೀಗೆ ಐದು ಭಾಷೆಗಳಲ್ಲಿ ಬರೆಯುವ ಪಾರ್ವತಿ ಐತಾಳ್ ಈ ಭಾಷೆಗಳ ನಡುವೆ ಪ್ರಸಿದ್ಧ ಲೇಖಕರ ಹಲವಾರು ಕೃತಿಗಳನ್ನು ಅನುವಾದಿಸಿದ್ದಾರಲ್ಲದೆ, ಸ್ವತಂತ್ರವಾಗಿಯೂ ಸಣ್ಣಕಥೆ, ಕಾದಂಬರಿ, ವಿಮರ್ಶೆ, ನಾಟಕ ಮತ್ತು ವೈಚಾರಿಕ ಪ್ರಬಂಧ ಕೃತಿಗಳನ್ನು ಪ್ರಕಟಿಸಿದ್ದಾರೆ. ಇದುವರೆಗೆ 40 ಅನುವಾದಿತ ಕೃತಿಗಳು, 23 ಸ್ವತಂತ್ರ ಕೃತಿಗಳು, ನಾಲ್ಕು ಸಂಪಾದಿತ ಮತ್ತು ಸಹಲೇಖಕರಾಗಿ ೯ಕೃತಿಗಳನ್ನು ಪ್ರಕಟಿಸಿದ್ದಾರೆ. ೮ ಕೃತಿಗಳು ಪ್ರಕಟಣೆಯ ಹಂತದಲ್ಲಿವೆ. ಹಲವಾರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಾಗಾರ ಮತ್ತು ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 3 ರಂದು ಜರಗಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಇವರು ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇತ್ತೀಚೆಗೆ ಗುಜ್ಜಾಡಿಯ ಶ್ರೀ ಬ್ರಹ್ಮ ಬಂಟರ ಮತ್ತು ಕೋಟಿ ಚೆನ್ನಯ್ಯ ದೈವಗಳ ಗರಡಿಯಲ್ಲಿ ನಡೆದ ಯಕ್ಷಗಾನದ ಸಂದರ್ಭದಲ್ಲಿ ರಾಜ್ಯಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್ ಕಟೀಲು ಇವರನ್ನು ಗರಡಿಯ ಆಡಳಿತಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಢಳಿತ ಮಂಡಳಿಯ ಅಧ್ಯಕ್ಷ ಶಿವ ನಾಯ್ಕ್, ಕಾರ್ಯದರ್ಶಿ ಜಿ.ಸುಕ್ರ ಪೂಜಾರಿ, ದೈವ ಪಾತ್ರಿ ರಾಘವೇಂದ್ರ ಪೂಜಾರಿ. ಅರ್ಚಕರಾದ ಸುಬ್ಬ ಪೂಜಾರಿ, ಮತ್ತು ಆಡಳಿತ ಮಂಡಳಿಯ ಸದಸ್ಯರಾದ ಆನಂದ ಪೂಜಾರಿ , ರಾಜು ಶ್ರೀಯಾನ್ , ಸುರೇಂದ್ರ ಕೊಠಾರಿ, ಉಪನ್ಯಾಸಕ ಕೃಷ್ಣ ಗುಜ್ಜಾಡಿ ಮತ್ತು ಕೋಟಿ ಚೆನ್ನಯ್ಯ ಯುವಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದಲ್ಲಿಯೇ ಮೊದಲ ಭಾರಿಗೆ ತೆರಿಗೆ ಇಲಾಖೆ ಮಂಗಳೂರು ವಿಭಾಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಬ್ಯಾಂಕಿಂಗ್ ವ್ಯವಹಾರ ಹಾಗೂ ಲಾಭದ ಮೇಲೆ ತೆರಿಗೆ ವಿಧಿಸಿರುವ ಕ್ರಮ ಕಾನೂನಿಗೂ ವಿರುದ್ಧವಾಗಿದ್ದು, ಕೃಷಿಕರ ನೆರವಿಗಾಗಿರುವ ಸಂಸ್ಥೆಗಳ ಮೇಲಿನ ತೆರಿಗೆ ಇಲಾಖೆಯ ಅಧಿಕಾರಿಗಳ ಪ್ರಹಾರದ ಬಗೆಗೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿ, ಅವರು ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಶನಿವಾರ ಉಪ್ಪುಂದದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ರೈತ ಸಿರಿ ಸಭಾಭವನದಲ್ಲಿ ಜರುಗಿದ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವಿವಿಧ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಜರುಗಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 2006ರ ಹಣಕಾಸು ಕಾಯಿದೆ 80ಪಿ ತಿದ್ದುಪಡಿಯಲ್ಲಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘ ಹಾಗೂ ಪ್ರಾಥಮಿಕ ಸಹಕಾರಿ ಕೃಷಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಲತಃ ಕುಂದಾಪುರದ ನಾಗೂರಿನ ನಿವಾಸಿ ಯಾಗಿದ್ದು, ಕನ್ನಡ ಹಾಗೂ ಇನ್ನಿತರ ಭಾಷೆಯ ಚಲನ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು, ಬೈಕ್ ಕಾರುಗಳನ್ನು ವಿಶಿಷ್ಠ ರೀತಿಯಲ್ಲಿ ಸಜ್ಜು ಗೊಳಿಸುತಲಿದ್ದ ದಿಲೀಪ್ ರಾಜ್(48) ಅವರು ಬೆಂಗಳೂರಿನ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಅವರಿಗೆ ಅವರ ಮನೆಯಲ್ಲಿದ್ದಾಗ ಹೃದಯಾಘಾತವಾಗಿದೆ. ಮನೆಯಿಂದ ಜಯದೇವ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಹಲವಾರು ನಾಯಕ ನಟರೊಂದಿಗೆ, ನಿರ್ದೇಶಕ ನಿರ್ಮಾಪಕರೊಂದಿಗೆ ಒಡನಾಟಹೊಂದಿದ್ದ ಅವರು. ಕಿರಿಕ್ ಪಾರ್ಟಿ, ರಾಜರಥ, ಅಣ್ಣಾ ಬಾಂಡ್, ಉಪ್ಪಿ-೨ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಿಗಾಗಿ ತನ್ನದೇ ವರ್ಕ ಶಾಪ್ ನಲ್ಲಿ ವಿಶಿಷ್ಟ ಶೈಲಿಯ ಬೈಕ್ ಕಾರುಗಳನ್ನು ಸಿದ್ಧಪಡಿಸಿ ಜನಪ್ರಿಯರಾಗಿದ್ದರು. ಸಿನೆಮಾಗಳಿಗಾಗಿಯೇ ಅವರು ಸಿದ್ಧಪಡಿಸಿದ ವಾಹನಗಳು ಆಕರ್ಷಣೆ ಪಡೆದುಕೊಂಡಿದ್ದವು. ಸೋಮಕ್ಷತ್ರೀಯ ಗಾಣಿಗ ಸಮಾಜದಲ್ಲಿ ಅತ್ಯಂತ ಚಟುವಟಿಕೆಯಿಂದಿದ್ದ ದಿಲೀಪ್ ರಾಜ್ ಇತ್ತೀಚಿಗೆ ನಡೆದ ಸಮಾಜದ ಕಾರ್ಯಕ್ರಮ ಪ್ರತಿಭಾ ಸಂಭ್ರಮದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು ಲವಲವಿಕೆಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮೂಕಾಂಬು ಶ್ರೀನಿವಾಸ ದೇವಾಡಿಗ ಅಧ್ಯಕ್ಷರಾಗಿ ಮತ್ತು ವೆರೋನಿಕಾ ಡಿಸೋಜಾ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಬೈಂದೂರು ತಹಶೀಲ್ದಾರ್ ರವಿ ಕಲಾಲ್ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಬಹುಮತ ಪಡೆದಿದ್ದ ಕಾಂಗ್ರೆಸ್ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಕಾಂಗ್ರೆಸ್ ಬೈಂದೂರು ಬ್ಲಾಕ್ ಅಧ್ಯಕ್ಷ ಎಸ್. ಮದನಕುಮಾರ್ ಉಪ್ಪುಂದ, ಹಿರಿಯ ಮುಖಂಡ ಎಸ್. ರಾಜು ಪೂಜಾರಿ ಮೊದಲಾದವರು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಭಾಗೀರಥಿ ಅಧ್ಯಕ್ಷರಾಗಿ ಮತ್ತು ವೆಂಕಟ ಪೂಜಾರಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಬೈಂದೂರು ತಹಶೀಲ್ದಾರ್ ರವಿ ಕಲಾಲ್ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಬಹುಮತ ಪಡೆದಿದ್ದ ಬಿಜೆಪಿ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ನೂತನವಾಗಿ ಆಯ್ಕೆಯಾದ ವೈ.ಶ್ರೀನಿವಾಸ ಖಾರ್ವಿ ಮತ್ತು ಪ್ರೇಮಾ ಸಿ.ಎಸ್. ಪೂಜಾರಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಜಿ.ಪುತ್ರನ್ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಸೋಡಿಗದ್ದೆ ಶಾಲೆಯಲ್ಲಿ ಜಂತು ಹುಳು ನಿವಾರಣೆ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು, ಶಾಲಾ ಶಿಕ್ಷಕರು ಮೊದಲಾದವರು ಹಾಜರಿದ್ದರು
