ಬೈಂದೂರು: ಇಲ್ಲಿನ ಬಹುಪ್ರಸಿದ್ಧ ಪುರಾತನ ಕಾರಣಿಕ ಕ್ಷೇತ್ರ ತಗ್ಗರ್ಸೆ ದೊಡ್ಡ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನದಲ್ಲಿ ಜನವರಿ 16ರಿಂದ 20ರ ವರೆಗೆ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವ ಹಾಗೂ ನಾಗದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಗೆಂಡಸೇವೆ, ಹಾಲುಹಬ್ಬ ವಿಜೃಂಭಣೆಯಿಂದ ಜರುಗಲಿದೆ. ದೊಡ್ಡಮೊಗವೀರ ಗರಡಿಯಲ್ಲಿ ಶ್ರೀ ಜೈನಜಟ್ಟಿಗೇಶ್ವರ ಹಾಗೂ ನಲವತ್ತೆಂಟು ಸಪರಿವಾರ ದೈವಗಳಿವೆ. ಅನಾದಿ ಕಾಲದಿಂದಲೂ ಪೂಜಿಸುತ್ತಾ ಬಂದಿರುವ ಈ ದೈವಸ್ಥಾನದ ಬಗ್ಗೆ ಭಕ್ತರಲ್ಲಿಯೂ ಅಪಾರವಾದ ನಂಬಿಕೆ ಬೇರೂರಿದೆ. ಎಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಾನು ನಂಬಿದ ದೈವವನ್ನು ಸ್ಮರಿಸಿದರೇ ಕಷ್ಟ ದೂರವಾಗುವುದು ಎಂಬುದು ಹಲವಾರು ನಿದರ್ಶನಗಳ ಮೂಲಕವೂ ಸಾಬೀತಾಗಿದೆ. ಹಾಗಾಗಿಯೇ ವರ್ಷಕ್ಕೊಮ್ಮೆಯಾದರೂ ಎಲ್ಲಿಯೇ ಇರಲಿ ಮೊಗವೀರ ಗರಡಿಗೆ ಬಂದು ದೇವರಿಗೆ ಹರಕೆ, ಪೂಜೆ ಸಲ್ಲಿಸಿ ತೆರಳುತ್ತಾರೆ. ತಗ್ಗರ್ಸೆ, ಬೈಂದೂರು ಭಾಗದ ಭಕ್ತರಷ್ಟೇ ಅಲ್ಲದೇ ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ಜನರು, ಬೆಂಗಳೂರು, ಮುಂಬೈಗಳಲ್ಲಿ ನೆಲೆಸಿರುವವರು ತಾವು ನಂಬಿದ ದೇವರನ್ನು ಕಾಣಲು ಹಬ್ಬದ ದಿನ ಬಂದು, ಹರಕೆ, ಪೂಜೆ…
Author: ನ್ಯೂಸ್ ಬ್ಯೂರೋ
ಕುಂದಾಪುರ: ಕೊಡಿಯ ಕಡಲ ಕಿನಾರೆಯಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಪ್ರಥಮ ಪರಿಸರ ಸ್ನೇಹಿ, ಶೂನ್ಯ ವಿದ್ಯುತ್ ಹಸಿರು ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬದ್ರಿಯಾ ಜುಮಾ ಮಸೀದಿಯನ್ನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ನ ಅಧ್ಯಕ್ಷರಾದ ಹಝರತ್ ಮೌಲಾನಾ ಸೈಯ್ಯದ್ ಮುಹಮ್ಮದ್ ರಬೇ ಹಸನಿ ನದ್ವಿ ಶುಕ್ರವಾರ ಉದ್ಘಾಟಿಸಿ, ದುವಾ ನೆರವೇರಿಸಿದರು. ಬೆಂಗಳೂರು ಸಬೀಲುರ್ ರಶಾದ್ನ ಪ್ರಾಂಶುಪಾಲರಾದ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ಬೊಕಾವಿ ಮಾತನಾಡಿ ಮಸೀದಿ ಪರಸ್ಪರ ಪ್ರೀತಿ ವಿಶ್ವಾಸ ಬೆಳೆಸುವ ಕೇಂದ್ರ ಆಗಬೇಕು. ಮಸೀದಿ ನಿರ್ಜನವಾಗಿರದೆ ಸದಾ ಸಕ್ರೀಯವಾಗಿರುವಂತೆ ಮಾಡಬೇಕು ಎಂದರು. ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್, ಮಸೀದಿ ಖತೀಬ್ ಇಸ್ಮಾಯಿಲ್ ಝುಹರಿ ಶುಭಾ ಹಾರೈಸಿದರು. ಈ ಸಂದರ್ಭದಲ್ಲಿ ಮಸೀದಿ ಕಟ್ಟಡದ ಆರ್ಕಿಟೆಕ್ಚರ್ ಸಂದೀಪ್ ಸಹಿತ ಮಸೀದಿ ನಿರ್ಮಾಣ ಕಾರ್ಯದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲೆಯ ಕಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್, ಮಾಜಿ ಖತೀಬ್ ಇಸ್ಮಾಯಿಲ್ ಮುಸ್ಲಿಯಾರ್ ಬ್ಯಾರೀಸ್ ಗ್ರೂಪ್ನ ಅಧ್ಯಕ್ಷ ಹಾಜಿ ಮಾಸ್ಟರ್ ಮೊಹಮ್ಮದ್, ಬ್ಯಾರೀಸ್ ಗ್ರೂಫ್ ಚೇರ್ಮನ್…
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2015-16ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮಂಗಳವಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಪಂಚಾಯತ್ನ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಲಕ್ಷ್ಮೀನಾರಾಯಣ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ವರ್ಷದಲ್ಲಿ ಕನಿಷ್ಠ 100 ದಿನ ಉದ್ಯೋಗ ನೀಡುವ ದೃಷ್ಟಿಯಿಂದ ಆರಂಭಿಸಲಾಗಿರುವ ಈ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಆನರು ಈ ಯೋಜನೆಯಡಿ ಹೆಸರನ್ನು ನೊಂದಾಯಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಯ ಮಾರ್ಗಸೂಚಿಯಂತೆ ಕಾಮಗಾರಿಯನ್ನು ನಿರ್ವಹಿಸಬಹುದು. ಈ ಯೋಜನೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದರು. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮಸಭೆಯ ನಡಾವಳಿಯಲ್ಲಿ ಕೆಲವೊಂದು ನಿರ್ಣಯಗಳನ್ನು ಬರೆದಿಲ್ಲ ಮತ್ತು ಕಳೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಗ್ರಾಪಂ ಸದಸ್ಯರನ್ನು ಅವಹೇಳನ…
ಬೈಂದೂರು: ಕಲಿಯುಗದ ಪ್ರತ್ಯಕ್ಷ ದೇವರಾಗಿರುವ ನಾಗನ ಆರಾಧನೆ ಶ್ರೇಷ್ಠವಾಗಿದ್ದು, ವಿಶಿಷ್ಠ ಪೂಜಾ ಕೈಂಕರ್ಯಗಳನ್ನು ಮೂಲಕ ಆರಾಧನೆ ಮಾಡಲಾಗುವುದು. ಲೋಕ ಕಲ್ಯಾಣಾರ್ಥವಾಗಿ ಮಾಡುವ ನಾಗಮಂಡಲೋತ್ಸವವನ್ನು ಗ್ರಾಮದ ಎಲ್ಲಾ ಜನರು ಸಂಘಟಿತರಾಗಿ, ಸಧ್ಭಕ್ತಿಯಿಂದ ಆಚರಿಸಿದಾಗ ಸಾರ್ಥಕತೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಲಾಷ ಸೋಮಯಾಜಿ ಹೇಳಿದರು. ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಸನ್ನಿಧಾನದಲ್ಲಿ ಫೆ. 9ರಿಂದ 13 ರ ತನಕ ನಡೆಯುವ ಸಾರ್ವಜನಿಕ ಲಕ್ಷಮೋದಕ ಗಣಪತಿಯಾಗ ಹಾಗೂ ಚತುಃ ಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಗುರುವಾರ ಚಪ್ಪರ ಮುಹೂರ್ತ ನೆರವೇರಿಸಿ ಅವರು ಮಾತನಾಡಿದರು.ನಾಗನನ್ನು ಭೂಮಿಯ ಅಧಿಪತಿ ಎಂದು ನಾವು ವೈಜ್ಞಾನಿಕವಾಗಿ ಹಾಗೂ ಪೌರಾಣಿಕವಾಗಿಯೂ ಹೇಳಲಾಗುತ್ತಿದೆ, ಆದಿಶೇಷ ಎಂದರೆ ನಾಗನು ಈ ಭೂಮಿಯನ್ನು ಹೊತ್ತುಕೊಂಡಿದ್ದಾನೆ ಎಂದು ಹೇಳಲಾಗಿದ್ದರೇ, ವಿಜ್ಞಾನಿ ಡಾರ್ವಿನ್ ಎನ್ನುವವರು ಸರಿಸ್ರಪಗಳು ಈ ಭೂಮಿಯಲ್ಲಿ ಮೊದಲ ಹುಟ್ಟಿದ ಜೀವಿ ಎಂದು ತನ್ನ ಸಿದ್ದಾಂತದಲ್ಲಿ ತಿಳಿಸಿದ್ದಾನೆ, ಹೀಗೆ ನಾಗನನ್ನು ಭೂಮಿಯ ಅಧಿಪತಿ ಎಂದು ಹೇಳಲಾಗುತ್ತಿದೆ. ನಾಗನ ಆರಾಧನೆಯನ್ನು ಸಂಘಟಿತರಾಗಿ, ಭಕ್ತಿಯಿಂದ ಆರಾಧನೆ ಮಾಡುವುದರಿಂದ ಇಡೀ ಊರಿಗೆ ವಿಶೇಷ…
ಕುಂದಾಪುರ: ತಾಲೂಕಿನ ಪ್ರಸಿದ್ಧ ಕಾರಣಿಕ ಸ್ಥಳ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರೆ ವೈಭವದಿಂದ ಜರುಗಿತು. ಬೆಳಿಗ್ಗಿನಿಂದ ದೇವಳದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡವು. ಶ್ರೀ ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸೇವಂತಿ ಹೂ ಅರ್ಪಣೆ, ಪೂಜೆ, ಹರಕೆ ಅರ್ಪಣೆ ನಡೆಯಿತು. ನಾಡಿನ ವಿವಿಧೆಡೆಗಳಲ್ಲಿ ನೆಲೆಸಿರುವ ಭಕ್ತರು ಜಾತ್ರೆಯ ಸಂದರ್ಭದಲ್ಲಿ ಮಾರಣಕಟ್ಟೆಗೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.
ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ದೇಶದ ಯುವ ಶಕ್ತಿಗೆ ಪ್ರೇರಣೆ. ಹಿಂದೆ ವಿದೇಶಿಯರ ದೃಷ್ಟಿಯಲ್ಲಿ ಭಾರತವೆಂದರೆ ಅನಾಗರಿಕರು ಎಂಬ ಕಲ್ಪನೆ ಇದ್ದಿತು. ಆದರೆ ಆ ಕಲ್ಪನೆಯನ್ನು ತೊಡೆದು ಹಾಕಿ ಭಾರತವೆಂದರೆ ಹಿಂದು ಸಂಸ್ಕೃತಿ ಎಂದು ಜಗತ್ತಿಗೆ ತೋರಿಸಿಕೊಟ್ಟವರು ಸ್ವಾಮಿ ವಿವೇಕಾನಂದರು ಎಂದು ಹಿಂದು ಜಾಗರಣ ವೇದಿಕೆಯ ಮಂಗಳೂರು ವಿಭಾಗದ ಸಂಘಟನಾ ಕಾರ್ಯನಿರ್ವಾಹಕ ಪ್ರಕಾಶ ಕುಕ್ಕೆಹಳ್ಳಿ ಹೇಳಿದರು. ಅವರು ಗಂಗೊಳ್ಳಿಯ ದಾಕುಹಿತ್ಲುವಿನ ಶ್ರೀ ರಾಮ ದೇವಸ್ಥಾನದ ವಠಾರದಲ್ಲಿ ಸ್ವಾಮಿ ವಿವೇಕಾನಂದರ ದೇಶ ಪ್ರೇಮಿಗಳ ಬಳಗ ದಾಕುಹಿತ್ಲು ಗಂಗೊಳ್ಳಿ ಇವರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 153ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಸಂಚಾಲಕ ವಾಸು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಾಕುಹಿತ್ಲು ಶ್ರೀ ರಾಮ ದೇವಸ್ಥಾನದ ಅಧ್ಯಕ್ಷ ಜಿ.ಪಿ.ನಾಗೇಶ ಖಾರ್ವಿ, ಕರಾವಳಿ ಯುತ್ ಕ್ಲಬ್ ಅಧ್ಯಕ್ಷ ಸಂತೋಷ ಖಾರ್ವಿ, ಸ್ವಾಮಿ ವಿವೇಕಾನಂದರ ದೇಶ ಪ್ರೇಮಿಗಳ ಬಳಗದ ಅಧ್ಯಕ್ಷ ರಾಜೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ರಘು…
ಕುಂದಾಪುರ: ಅವಿಭಕ್ತ ಕುಂಟುಂಬ ಕಣ್ಮರೆಯಾಗಿ ಪ್ಲಾಟ್ ಸಂಸ್ಕೃತಿ ಹೆಚ್ಚುತ್ತಿದ್ದು, ಸನಾತನ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸುವ, ಸಮಾಜ ತಪ್ಪು ದಾರಿಹಿಡಿದರೆ ಕಿವಿಹಿಂಡಿ ಬುದ್ದಿ ಹೇಳುವ ಕೆಲಸ ಯುವಕ ಮತ್ತು ಯುವ ಸಂಘಟನೆಯಿಂದ ಆಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟಿದ್ದಾರೆ. ಹೊಸೂರು ಕಾನ್ಬೇರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಹೊಸೂರು ಸ್ಪೂರ್ತಿ ಯುವ ವೇದಿಕೆ ವಾರ್ಷಿಕ ಉತ್ಸವ ಮತ್ತು ಸೌಲತ್ತು ವಿತರಣೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಸಮಸ್ಯೆಗೆ ಯುವಕರು ಕಣ್ಣಾಗಬೇಕು ಎಂದ ಅವರು, ಯುವಕರು ಸಮಸ್ಯೆ ನಡುವೆ ಕೆಲಸ ಮಾಡುವ ಅನಿವಾರ್ಯತೆಯಿದ್ದರೂ, ದಿಕ್ಕೆಡದೆ ಸಮಸ್ಯೆ ಮಟ್ಟೆನಿಂತಿ ಊರಿನ ಅಭಿವೃದ್ಧಿಗೆ ಸಂಘಟಿಕರಾಗುವ ಅನಿವಾರ್ಯತೆ ಇದೆ. ಯುವಕರು ಸಾಗಬೇಕಿದ್ದ ದಾರಿ ಬಹಳವಿದ್ದು, ಕಠಿಣ ನಿ ಲುವುಗಳ ಮೂಲಕ ಊರಿನ ಅಭಿವೃದ್ಧಿಗೆ ಹೆಚ್ಚು ಗಮನ ಹರಿಬೇಕು ಎಂದು ಸಲಹೆ ಮಾಡಿದರು. ರಾಜಕಾರಣ ಹೊರತಾದ ಸಂಘಟನಾ ತಂಡ ಕಟ್ಟಬೇಕು ಎಂದು ಸಲಹೆ ಮಾಡಿದ ಅವರು, ಜನ ಜಾಗೃತಿ ಮೂಡಿಸುವ…
ಕುಂದಾಪುರ: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ರೋಟರಿ ಕ್ಲಬ್ ಕುಂದಾಪುರ, ಕೆ.ಎಸ್.ಎಸ್. ಪ್ರೌಢಶಾಲೆ ಹಕ್ಲಾಡಿ ಹಾಗೂ ಸ್ಪಂದನ ಯುವಕ ಮಂಡಲ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಬುಧವಾರ ಹಕ್ಲಾಡಿಯ ಕೆ.ಎಸ್.ಎಸ್. ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗೇಶ ಶೆಣೈ ಉದ್ಘಾಟಿಸಿದರು. ಕಿಶೋರ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಫುರ ರೋಟರಿ ಕ್ಲಬ್ನ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಸಂತೋಷ ಕೋಣಿ, ಉಡುಪಿ ನೆಹರು ಯುವಕೇಂದ್ರದ ಜಿಲ್ಲಾ ಸಲಹೆಗಾರ ನರಸಿಂಹ ಗಾಣಿಗ, ಗುಜ್ಜಾಡಿ ಸ್ಪಂದನ ಯುವಕ ಮಂಡಲದ ಅಧ್ಯಕ್ಷ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು. ವಸುಧಾ ಎಸ್.ಎಸ್. ಸ್ವಾಗತಿಸಿದರು. ಸುಜಾತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಯೋಗೇಶ ಹೆಬ್ಬಾರ್ ವಂದಿಸಿದರು.
ಗಂಗೊಳ್ಳಿ: ಸ್ವಾಮಿ ವಿವೇಕಾನಂದರು ಬಿಟ್ಟು ಹೋದ ಆದರ್ಶಗಳು, ಚಿಂತನೆಗಳಿಂದ ವಿಶ್ವದಲ್ಲಿಯೇ ಓರ್ವ ಮಹಾನ್ ಪುರುಷರಾಗಿ ಗುರುತಿಸಲ್ಪಡುತ್ತಿದ್ದಾರೆ. ಹಿಂದು ಧರ್ಮವನ್ನು ಜಗತ್ತಿಗೇ ಸಾರುವ ಕೈಂಕರ್ಯವನ್ನು ಮಾಡುತ್ತಿದ್ದ ವಿವೇಕಾನಂದರಿಗೆ ಹಿಂದು ಧರ್ಮದ ಬಗ್ಗೆ ಅಪಾರ ಪ್ರೀತಿ ಕಾಳಜಿ ಇದ್ದಿತ್ತು. ಹಿಂದು ಧರ್ಮದ ಉನ್ನತಿಗಾಗಿ ವಿಶ್ವದೆಲ್ಲೆಡೆ ಸಂಚಾರ ಮಾಡಿದ ನಮ್ಮ ದೇಶದ ಸ್ವಾಮೀ ವಿವೇಕಾನಂದರ ಜನ್ಮ ದಿನವನ್ನು ಆಚರಿಸಿ ಅವರಿಗೆ ಗೌರವ ಸಲ್ಲಿಸಬೇಕಾಗಿರುವುದು ಈ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ನ ಉಡುಪಿ ಜಿಲ್ಲಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಕ್ರಾಂತಿ ವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಜರಗಿದ ಸ್ವಾಮಿ ವಿವೇಕಾನಂದರ 153ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸ್ವಾಮಿ ವಿವೇಕಾನಂದ ಆದರ್ಶ ಚಿಂತನೆಗಳು ನಮ್ಮ ಯುವ ಜನಾಂಗಕ್ಕೆ ಮಾದರಿಯಾಗಬೇಕು. ಅತಿ ಚಿಕ್ಕ ವಯಸ್ಸಿನಲ್ಲಿ ಇವರು ಚಿಕಾಗೋದಲ್ಲಿ ಮಾಡಿದ ಭಾಷಣ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಎಲ್ಲರಲ್ಲೂ ಸಹೋದರ ಸಹೋದರಿಯರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆ ಸಂಬಳವನ್ನೂ ಮೂರು ತಿಂಗಳಿನಿಂದ ನೀಡದೆ ಸತಾಯಿಸುತ್ತಿರುವುದಲ್ಲದೇ ನಮ್ಮ ಬೇಡಿಕೆಗಳಿಗೂ ಸರಕಾರ ಕಿವಿಗೊಡುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ ತರಗತಿ ಪಾಠಗಳನ್ನು ನಿಲ್ಲಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ರಂಜಿತ್ಕುಮಾರ್ ಶೆಟ್ಟಿ ವಕ್ವಾಡಿ ಹೇಳಿದರು. ಕುಂದಾಪುರ ಮಿನಿ ವಿಧಾನಸೌಧದ ಎದುರು ಅತಿಥಿ ಉಪನ್ಯಾಸಕರ ಬಾಕಿ ಇರುವ ಸಂಬಳ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ) ಅತಿಥಿ ಉಪನ್ಯಾಸಕರುಗಳು ಹಲವಾರು ವರ್ಷಗಳಿಂದ ಸೇವೆಯಲ್ಲಿದ್ದರೂ ಅವರನ್ನು ಸೇವಾ ಭದ್ರತೆ ಕಾಡುತ್ತಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ತಿಂಗಳಿಗೆ ಇಪ್ಪತ್ತೈದು ಸಾವಿರ ವೇತನ ನಿಗದಿಪಡಿಸಬೇಕು ಹಾಗೂ ಖಾಯಂಗೊಳಿಸುವವರೆಗೆ ಅವರ ಸೇವಾ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ ಕ್ಲಪ್ತ…
