Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ತಾವು ಗವರ್ನರ್ ಆಗಿರುವ ಲಯನ್ಸ್ ಜಿಲ್ಲೆ ೩೧೭ಕ್ಕೆ ಸೇರಿದ ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಅತ್ಯಧಿಕ ನೂತನ ಕ್ಲಬ್ ಸ್ಥಾಪನೆಯ ಜತೆಗೆ ದಾಖಲೆ ಗಾತ್ರದ ಸಾಮಾಜಿಕ ಸೇವಾ ಕಾರ್ಯ ನಡೆಸಲಾಗಿದೆ ಎಂದು ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್‌ಗೆ ನೀಡಿದ ಅಧಿಕೃತ ಬೇಟಿ ಸಂದರ್ಭ ನಾಗೂರಿನ ಕುಸುಮಾ ಸಂಕೀರ್ಣದಲ್ಲಿ ಶನಿವಾರ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮತನಾಡಿದರು. ಬ್ರಹ್ಮಗಿರಿ, ಬ್ರಹ್ಮಾವರ ಟೌನ್, ಉಡುಪಿ ನ್ಯೂಸಿಟಿ, ತಲ್ಲೂರು, ಶಂಕರನಾರಾಯಣದಲ್ಲಿ ನೂತನ ಲಯನ್ಸ್ ಕ್ಲಬ್, ಮಲ್ಪೆ, ಬ್ರಹ್ಮಗಿರಿ, ಕುಂದಾಪುರ ಸಿಟಿ ಸೆಂಟರ್, ಉಡುಪಿ ಸೌತ್ ಲಿಯೋ ಕ್ಲಬ್ ತೆರೆದುದಲ್ಲದೆ, ಇನ್ನೂ ೧೨ ಲಯನ್ಸ್ ಕ್ಲಬ್ ಸ್ಥಾಪನೆ ವಿವಿಧ ಹಂತದಲ್ಲಿದೆ. ಹದಿಹರೆಯದ ಮಕ್ಕಳಿಗೆ ಅಗತ್ಯವಾದ ಮಾಹಿತಿ ವರ್ಗಾಯಿಸುವ ನಿಟ್ಟಿನಲ್ಲಿ ೭೦ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ೨೦ ಶಾಲೆಗಳಲ್ಲಿ ಪೀಸ್ ಪೋಸ್ಟರ್ ಸ್ಪರ್ಧೆ, ಚರ್ಚ್‌ನಲ್ಲಿ ಗೂಡುದೀಪ ಸ್ಪರ್ಧೆ, ದೀಪಾವಳಿಯಂದು ಮೂರು ಧರ್ಮಗಳ ಗುರುಗಳ ಉಪಸ್ಥಿತಿಯಲ್ಲಿ ಸರ್ವಧರ್ಮ ದೀಪಾವಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗೌಡ ಸಾರಸ್ವತ ಸಮಾಜ ಸಾರವಂತವಾಗಬೇಕು. ಸಮಾಜ ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಸಮಾಜ ಹಿರಿಯರು ದೇವಾಲಯಗಳನ್ನು ನಿರ್ಮಿಸಿದ್ದಾರೆ. ೩೫೦ ವರ್ಷಗಳ ಹಿಂದೆ ಪಂಚಗಂಗಾವಳಿ ನದಿ ತೀರದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವರು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಎಲ್ಲರಿಗೂ ಒಳಿತನ್ನು ಮಾಡಿದ್ದಾನೆ. ದೇವಾಲಯದ ಅಭಿವೃದ್ಧಿ ಕೂಡ ಕಾಲ ಕಾಲಕ್ಕೆ ನಡೆದಿದ್ದು, ಗುರುಗಳ ಮಾರ್ಗದರ್ಶನದಂತೆ ದೇವಾಲಯ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಐದು ದಿನಗಳ ಮೊಕ್ಕಾಂಗೆ ದೇವಳಕ್ಕೆ ಚಿತ್ತೈಸಿದ ಶ್ರೀಗಳು ಆಶೀರ್ವಚನ ನೀಡಿದರು. ಸಮಾಜ ಬಾಂಧವರ ಅಪೇಕ್ಷೆಯಂತೆ ದೇವಳದ ವಠಾರದಲ್ಲಿ ಸುಸಜ್ಜಿತವಾದ ಕಲ್ಯಾಣ ಮಂಟಪ ನಿರ್ಮಾಣಗೊಂಡಿದೆ ಅಲ್ಲದೆ ನಾಗದೇವರ ಗುಡಿಯ ಜೀರ್ಣೋದ್ಧಾರ ಕಾರ್ಯ ನಡೆದಿದೆ. ಈ ಕಾರ್ಯಕ್ಕೆ ಅನೇಕ ಸಮಾಜಬಾಂಧವರು ಕೈಜೋಡಿಸಿದ್ದು ಶ್ರೀದೇವರು ಅವರಿಗೆ ಉತ್ತರೋತ್ತರ ಅಭಿವೃದ್ಧಿಯನ್ನು ಕರುಣಿಸಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳ ಆದೇಶದಂತೆ ಮತದಾನದ ಬಗ್ಗೆ ಜನಜಾಗೃತಿ ಮೂಡಿಸಲು ಕುಂದಾಪುರದ ಸಂಗಮ್‌ಯಿಂದ ಆನಗಳ್ಳಿಯವರೆಗೆ ಅಭಿಯಾನ ನಡೆಸಲಾಯಿತು. ಕಾಲೇಜಿನ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕುಂದಾಪುರದ ಕಂದಾಯ ಅಧಿಕಾರಿ ಭರತ್ ವಿ. ಶೆಟ್ಟಿ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರದ ಟ್ರಾಫಿಕ್ ಎ.ಎಸ್.ಐ. ಜನಾರ್ದನ ಎಮ್. ಮತ್ತು ಯು ಸುಧಾ ಪ್ರಭು, ಕಾಲೇಜಿನ ಎನ್.ಎಸ್.ಎಸ್, ಅಧಿಕಾರಿ ಸತೀಶ್ ಶೆಟ್ಟಿ ಹೆಸ್ಕತ್ತೂರು, ಪೊಲೀಸ್ ಸಿಬ್ಬಂದಿಗಳಾದ ಪ್ರಸನ್ನ, ಚೇತನ್, ವಿಜಯ್ ಉಪಸ್ಥಿತರಿದ್ದರು. ಕಾಲೇಜಿನ 1250 ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಧುನಿಕತೆಗೆ ತೆರೆದುಕೊಳ್ಳದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಕ್ಷರ ಪ್ರಪಂಚಕ್ಕೆ ಪರಿಚಯಿಸುತಾ, ಆರೋಗ್ಯಕರ ಸಮಾಜ ಕಟ್ಟುವಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಶ್ರಮಿಸುತ್ತಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ-ಶಿಕ್ಷಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇವಲ ಪುಸ್ತಕದ ಓದಿಗೆ ವಿದ್ಯಾರ್ಥಿಗಳನ್ನು ಸೀಮಿತವಾಗಿರಿಸದೆ, ಭವಿಷ್ಯದ ಬದುಕಿಗೆ ಪೂರಕವಾಗುವಂತೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳ ಪರಿಣಿತರನ್ನಾಗಿಸುತ್ತಿದೆ ಎಂದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಗಣಪತಿ ಎಮ್.ಎಮ್. ಮಾತನಾಡಿ, ವಿದ್ಯಾರ್ಥಿಗಳನ್ನು ಸಮರ್ಥ ಪ್ರಜೆಯನ್ನಾಗಿ ರೂಪುಗೊಳಿಸುವಲ್ಲಿ ಹೆತ್ತವರ-ಶಿಕ್ಷಕರ ಸಹಭಾಗಿತ್ವ ಅಗತ್ಯ ಎಂದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ವಿ.ಕೆ.ಆರ್. ಆಚಾರ್ಯ ಮತ್ತು ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲೆ ಚಿಂತನಾ ರಾಜೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕೃತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕೃತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು ಪಿಇಎಸ್ ಯುನಿವರ್ಸಿಟಿಯ ಪ್ರಾಧ್ಯಪಕ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಹೇಳಿದರು. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವಿಂದು ಬಳಸುವ ಇಂಗ್ಲೀಷ್, ಕನ್ನಡ, ಹಿಂದಿ ಇನ್ನಿತರ ಭಾಷೆಗಳ ಮೂ ಅರ್ಥವನ್ನು ತಿಳಿಯುವ ಪ್ರಯತ್ನವನ್ನು ನಾವು ಮಾಡುತ್ತಿಲ್ಲ. ಸಂಸ್ಕೃತ ಭಾಷೆಯೊಂದೆ ಈ ಎಲ್ಲಾ ಭಾಷೆಗಳ ಮೂಲವಾಗಿದೆ ಎಂದರು. ನಮ್ಮತನವನ್ನು ನಮ್ಮ ಸಂಸ್ಕೃತಿಯನ್ನು ನಾವು ಎಲ್ಲಿ ಮರೆತಿದ್ದೇವೆ ಎಂಬುದನ್ನು ಕಂಡುಕೊಳ್ಳುವ ಕಾರ್ಯವಾಗಬೇಕಿದೆ. ನಮ್ಮ ಮೂಲ ಭಾಷೆ ಸಂಸ್ಕೃತವನ್ನು ಮರೆತು ಅನ್ಯ ಭಾಷೆಯನ್ನು ಕಲಿಯಲು ಪ್ರಯತ್ನಿಸುತ್ತಿರುವುದನ್ನು ನೋಡಿದರೆ ಕಸಿವಿಸಿಯಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ನಾವಿಂದು ಆರ್ಯುವೇದ, ರಾಜ್ಯಶಾಸ್ತ್ರ, ವಿಜ್ಞಾನ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ ಆದರೆ ನಮಗೆ ಇದರ ಮೂಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳೆಯರಿಗೆ ಅವಕಾಶ ದೊರೆತರೆ, ಎಲ್ಲರಿಂದ ಉತ್ತಮ ಸಹಕಾರ ದೊರೆತರೆ ಕೈಹಿಡಿದ ಕಾರ್ಯ ಯಶಸ್ವಿಯಾಗುತ್ತದೆ. ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯ ನಡೆಯಬೇಕು. ಉತ್ತಮ ಗುಣಗಳನ್ನು ಬೆಳೆಸಬೇಕು. ಸಂಜೆ ಮನೆ ಮನೆಗಳಲ್ಲಿ ಭಜನೆ, ಪ್ರಾರ್ಥನೆ ನಡೆದರೆ ಯುವಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಬೆಳೆಯುತ್ತದೆ. ಮನುಷ್ಯನಲ್ಲಿ ಉತ್ತಮ ಗುಣವಿದ್ದರೆ ಆದ ಕಲಿತ ವಿದ್ಯೆಗೆ ಬೆಲೆ ಬರುತ್ತದೆ. ಸ್ವಸಹಾಯ ಸಂಘದ ಸದಸ್ಯರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ತಮ್ಮ ಜೀವನದ ಯಶಸ್ಸಿಗಾಗಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ಶ್ರೀ ಪಂಜುರ್ಲಿ ದೈವಸ್ಥಾನದ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗಂಗೊಳ್ಳಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರಾಸಿ ವಲಯ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ಜರಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿನಿ ಮಾಧ್ಯಮ ಸಮಾಜದಲ್ಲಿ ಪ್ರಭಾವ ಬೀರುವಂತದ್ದು. ಸಿನಿಮಾ ಅನ್ನುವುದು ಓಳ್ಳೆಯದು ಮತ್ತು ಕೆಟ್ಟದ್ದೂ ಇದೆ ಎನ್ನುವುದನ್ನು ಹೇಳುತ್ತಾರೆ. ಭಾರತದ ಸಿನಿಮಾ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಪ್ರತಿಭೆಗಳನ್ನು ಹೊಂದಿರುವ ಕುಂದಾಪುರಕ್ಕೆ ಹೆಮ್ಮೆಯ ವಿಷಯ. ಕುಂದಾಪುರ ಭಾಗದ ಏಳಿಗ್ಗೆಗಾಗಿ ಸಿನಿ ದೃಶ್ಯಗಳನ್ನು ರಚಿಸುವಂತೆ ಆಗಲಿ ಎಂದು ಕುಂದಾಪುರ ಡಿವೈಎಸ್‌ಪಿ ಬಿ.ಪಿ. ದಿನೇಶ್‌ಕುಮಾರ್ ಹೇಳಿದರು. ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಭವನದಲ್ಲಿ ಐಶ್ವರ್ಯ ಮೀಡಿಯಾ ಆಯೋಜನೆಯ ಕುಂದಾಪುರ ಪರಿಸರದಲ್ಲಿ ಪ್ರಥಮ ಕಿರುಚಿತ್ರ ಸ್ಪರ್ಧೆ ಸಿನಿ ಕುಂದಾಪ್ರ 2019 ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅತಿಥಿ ಪ್ರತಕರ್ತ ಜಾನ್ ಡಿಸೋಜಾ ಶುಭಶಂಸನೆ ಮಾಡುತ್ತ ಚಿತ್ರ ದೃಶ್ಯಕರಿಸುವುದು ಪರಿಶ್ರಮ, ಕ್ರೀಯಾತ್ಮಕ ಚಿಂತನೆ ಆಗಿರುವ ಕೆಲಸಗಳು. ನಾವು ಮಾಡಬೇಕಾದ ಕೆಲಸಗಳ ಪ್ರಯತ್ನಗಳಿಗೆ ಅಭಿಲಾಷೆ, ಇಚ್ಚೆ, ಶ್ರಧ್ಧೆ ಇದ್ದಾಗ ಓಳ್ಳೆಯ ಫಲಿತಾಂಶಗಳನ್ನು ಕೊಡಬಹುದು. ಮುಂಬಯಿ ಮತ್ತು ಬೆಂಗಳೂರಿನಲ್ಲಿ ನಡೆಯುವಂತಹ ಸಿನಿಮಾ ಕಾರ್ಯಕ್ರಮಗಳ ಮಾದರಿಯಲ್ಲಿ ಇಂದು ಕೋಟೇಶ್ವರದಲ್ಲಿ ಐಶ್ವರ್ಯ ಮೀಡಿಯಾ ಸಿನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತಿದ ಬಳಿಕ ಪಲ್ವಮಾ ಬಾಂಬ್ ದಾಳಿ ಘಟನೆಯನ್ನು ಖಂಡಿಸಿ ಮತ್ತು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಕುಂದಾಪುರದ ವಿವಿಧ ಸಂಘಟನೆಗಳು ಸೈದ್ಧಾಂತಿಕ ಭೇದವನ್ನು ಮೀರಿ ಒಂದಾಗಿ ಮೊಂಬತ್ತಿ ಬೆಳಗಿ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟದಲ್ಲಿ ನಡೆದ ಅವಳಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್‌ನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಕೋಟ ಕ್ಷೇತ್ರದಿಂದ ಆಯ್ಕೆಯಾಗಿದ್ದ ರಾಘವೇಂದ್ರ ಕಾಂಚನ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ. ಕೋಟದ ಮಣೂರು ಚಿಕ್ಕನಕೆರೆ ಎಂಬಲ್ಲಿ ಜ.೨೬ರಂದು ಯತೀಶ್ ಹಾಗೂ ಭರತ್ ಎಂಬ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚಂದ್ರಶೇಖರ ರೆಡ್ಡಿಯನ್ನು ಫೆ.೧೪ರಂಡು ಪೊಲೀಸರು ಬಂಧಿಸಿದ್ದರು. ಅಲ್ಲದೆ ಪ್ರಕರಣದಲ್ಲಿ ಆರೋಪಿಗಳಿಗೆ ನೆರವಾದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನೂ ಬಂಧಿಸಲಾಗಿದ್ದು, ಇದುವರೆಗೆ ೧೬ ಮಂದಿಯನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇದನ್ನೂ ಓದಿ: ► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 .…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟ ಅವಳಿ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಎಲ್ಲಾ ಹದಿನಾರು ಆಪಾದಿತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ಜನರಿಗೆ ಮಾ.೧ರ ತನಕ ನ್ಯಾಯಾಂಗ ಬಂಧನ ಹಾಗೂ ಇಬ್ಬರಿಗೆ ಫೆ.20ರ ತನಕ ಪೊಲೀಸ್ ಕಸ್ಟಿಡಿಗೆ ಒಪ್ಪಿಸಲಾಗಿದೆ. ಕೋಟ ಪೊಲೀಸ್ ಠಾಣೆ ಸರಿಹದ್ದಿನ ಮಣೂರು ಚಿಕ್ಕಿನಕರೆ ಸಮೀಪ ಸ್ನೇಹಿತರಾದ ಭರತ್ ಶ್ರೀಯಾನ್ ಹಾಗೂ ಯತೀಶ್ ಕರ್ಕೇರ ಎಂಬವರ ತಲವಾರಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ ನಡೆದ ನಂತರ ಆಪಾದಿತರು ತಲೆ ಮರೆಸಿಕೊಂಡಿದ್ದು, ವಿವಿಧ ಸ್ಥಳದಲ್ಲಿ ಕೊಲೆಗೆ ಸಂಬಂಧಿಸಿದ ವ್ಯಕ್ತಿಗಳ ಪೊಲೀಸರು ಬಂಧಿಸಿದ್ದರು. ಕೊಲೆಯಲ್ಲಿ ಭಾಗಿ ಹಾಗೂ ಸಾಕ್ಷಿನಾಶ ಮತ್ತು ಕೊಲೆಗಾರರಿಗೆ ಸಹಕಾರ ಮಾಡಿದ ಆರೋಪದಡಿ ಒಟ್ಟು ೧೬ಜನರ ಬಂಧಿಸಿದ್ದು, ಎಲ್ಲರನ್ನು ಕುಂದಾಪುರ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶ ಶ್ರೀಕಾಂತ್ ಮುಂದೆ ಹಾಜರು ಪಡಿಸಲಾಗಿತ್ತು. ಅಭಿಷೇಕ್ ಪಾಲನ್, ರೊಟ್ಟಿ ನಾಗರಾಜ್, ಸಂತೋಷ್ ಕುಂದರ್, ಪ್ರಣವ್ ರಾವ್, ಪವನ್ ಅಮೀನ್, ವಿರೇಂದ್ರ ಆಚಾರ್ಯ, ರಿತೀಶ್ ಕರ್ಕೇರಾ, ಶಂಕರ ಮೊಗವೀರ, ರಾಜಶೇಖರ…

Read More