Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಸಿದ್ಧಾಪುರ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಅತ್ಯಂತ ಅಪರೂಪದ ಶ್ರೀ ಅಯುತ ಚಂಡಿಕಾ ಮಹಾಯಾಗ ಯಶಸ್ವಿಯಾಗಿ ಸಂಪನ್ನಗೊಂಡಿತು.ಮೇ.8ರಂದು ಏಕಕಾಲದಲ್ಲಿ 100 ಯಾಗಕುಂಡಗಳಲ್ಲಿ ಯಾಗ ಆರಂಭಗೊಂಡಿತು. ಶ್ರೀ ಚಂಡಿಕಾ ಪಾರಾಯಣ ಮತ್ತು ಜಪ, ಸೋಮವಾರ ಶ್ರೀ ಚಂಡಿಕಾ ಪಾರಾಯಣ ಮತ್ತು ಜಪ, ಮೇ.10 ಮಂಗಳವಾರ ಶ್ರೀ ಅಯುತ ಮಹಾಯಾಗದ ಪೂರ್ಣಾಹುತಿಯೊಂದಿಗೆ ಸಂಪನ್ನ ಕಂಡಿತು. ಜ್ಯೋತಿಶಾಸ್ತ್ರ ವಿದ್ವಾನ್ ಶ್ರೀ ಟಿ.ವಾಸುದೇವ ಜೋಯಿಸರ ಧಾರ್ಮಿಕ ಮಾರ್ಗದರ್ಶನ ನೀಡಿದರು. ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಎಸ್. ಸಚ್ಚಿದಾನಂದ ಚಾತ್ರ, ಅನುವಂಶಿಕ ಧರ್ಮದರ್ಶಿ ಎ.ಚಂದ್ರಶೇಖರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮೂರು ದಿನಗಳ ಕಾಲ ಕಮಲಶಿಲೆಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ಪೂರ್ಣಾಹುತಿಯ ಮಂಗಳವಾರ ಬೆಳಿಗ್ಗೆಯಿಂದ ಭಕ್ತಸಂದಣಿ ನೆರೆದಿತ್ತು. ಉಡುಪಿ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ಭಕ್ತರ ದಂಡು ಹರಿದು ಬಂತು. ಏಕಕಾಲದಲ್ಲಿ ನೂರು ಯಾಗ ಕುಂಡಗಳಲ್ಲಿ ಮೇಲೇದ್ದ ಹೊಗೆ ಗಗನಗಾಮಿಯಾಯಿತು. ಬೃಹತ್ ಯಾಗಶಾಲೆಯ ಯಜ್ಞಕುಂಡಗಳಿಂದ ಸುವಸ್ತುಗಳಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಶುಭಹಾರೈಸಿದರು. ಖ್ಯಾತ ಚಲನಚಿತ್ರ ನಿರ್ದೇಶಕ ಗುರದತ್ತ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಚಿತ್ರಕಲಾ ಸ್ವರ್ಧೆಯಲ್ಲಿ ವಿಜೇತರಾದ ಸುರಭಿಯ ವಿದ್ಯಾರ್ಥಿಗಳು ಹಾಗೂ ಸುರಭಿಯ ವಿದ್ಯಾರ್ಥಿ ಪೋಷಕರಿಗೆ ನಡೆಸಿದ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್ಐಸಿ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್., ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ನ ಮಣಿಕಂಠ ದೇವಾಡಿಗ, ರೋಟರಿ ಜಿಲ್ಲಾ ಲಿಟ್ರಸಿ ವೈಸ್ ಚೇರ್ಮನ್ ಐ ನಾರಾಯಣ, ಇಂಡಿಯನ್ ರೆಡ್ಕ್ರಾಸ್ ಸೊಸೈಟ್ ಬೈಂದೂರು ಘಟಕದ ಛೇರ್ಮನ್ ನಿತಿನ್ ಕುಮಾರ್ ಶೆಟ್ಟಿ, ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. ಸುರಭಿ ನಿರ್ದೇಶಕ ಸುಧಾಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ವಿಶಿ? ಹಾಗೂ ಅಪರೂಪದ ಹಳೆ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ ಮತ್ತು ಶಾಶ್ವತ ನಿಧಿ ಸಂಗ್ರಹಣೆ ಅಭಿಯಾನ ಬೆಂಗಳೂರಿನ ಪೈವಿಸ್ತಾ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ನಡೆಯಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಶಾಲೆಗಳ ಹಳೆ ವಿದ್ಯಾರ್ಥಿಗಳಿಂದ ಆಯೋಜಿಸಲ್ಪಟ್ಟ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಆತ್ಮರಾಮ ಕಿಣಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಅವರು ಶಾಲೆಯ ಇತಿಹಾಸ, ನಡೆದು ಬಂದ ದಾರಿ, ಆಗಿರುವ ಅಭಿವೃದ್ಧಿ ಕಾರ್ಯಗಳು, ಶಾಲಾಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಸಹಕಾರ, ಕೊಡುಗೆಗಳನ್ನು ಸ್ಮರಿಸಿದರು. ಹಳೆ ವಿದ್ಯಾರ್ಥಿಗಳು ಶಾಲೆಯ ಮೇಲಿಟ್ಟಿರುವ ಪ್ರೀತಿ, ಅಭಿಮಾನವನ್ನು ಅವರು ಶ್ಲಾಘಿಸಿದರು. ಶಾಲೆ ಸಂಚಾಲಕ ಎನ್. ಸದಾಶಿವ ನಾಯಕ್ ಮಾತನಾಡಿ, ಶಾಲೆಗಳಲ್ಲಿ ಪ್ರಸ್ತುತ ಸಿಗುತ್ತಿರುವ ಸೌಲಭ್ಯಗಳು, ಮುಂದಿನ ಯೋಜನೆಗಳು, ಪ್ರಸಕ್ತ ಶಾಲಾ ಹಣಕಾಸಿನ ಪರಿಸ್ಥಿತಿ, ಕೋವಿಡ್-೧೯ ನಿಂದ ಶಾಲಾ ದೈನಂದಿನ ಚಟುವಟಿಕೆ ಹಾಗೂ ಆರ್ಥಿಕತೆಯ ಮೇಲಾದ ದುಷ್ಪರಿಣಾಮಗಳು ಮತ್ತು ಚೇತರಿಕೆಗಾಗಿ ಕೈಗೊಂಡಿರುವ ಪ್ರಯತ್ನಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.10: ಸಮಾಜದಲ್ಲಿ ಕರುಣೆ ಮತ್ತು ಮಾನವೀಯ ವ್ಯಕ್ತಿತ್ವ ಹೆಚ್ಚು ಇರಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗಲಿದೆ. ಮಾನವರಲ್ಲಿ ಕರುಣೆ ಕಳೆದುಕೊಂಡಾಗ ಸ್ವಾರ್ಥ ಭಾವನೆ ಅಧಿಕವಾಗುತ್ತದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಇಂದು ನಗರದ ಭಾರತೀಯ ರೆಡ್ ಕ್ರಾಸ್ ಭವನದಲ್ಲಿ ನಡೆದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಹೆಚ್ಚಿನ ಮಾನವೀಯ ಮತ್ತು ಕರುಣೆಯ ಗುಣಗಳನ್ನು ಹೊಂದಿದ್ದು, ಹಲವು ಜನಪರ ಕಾರ್ಯಗಳು ಮಾಡಿ, ಸಮಾಜಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅವುಗಳನ್ನು ಮುಂದುವರೆಸುವುದು ನಮ್ಮ ಕರ್ತವ್ಯವಾಗಬೇಕು. ಮನುಷ್ಯ ಕರುಣೆ ಮತ್ತು ಮಾನವೀಯ ಗುಣಗಳನ್ನು ಕಳೆದುಕೊಂಡಾಗ ಸ್ವಾರ್ಥ ಮೂಡಿ, ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳುತ್ತಾನೆ. ಆದ್ದರಿಂದ ಪ್ರತಿಯೊಂದು ಕ್ಷೇತ್ರದಲ್ಲೂ ಮಾನವೀಯ ಗುಣಗಳಿಂದ ಕಾರ್ಯನಿರ್ವಹಿಸಬೇಕು ಎಂದರು. ನಮ್ಮ ದೇಶದ ಮಣ್ಣಿನಲ್ಲಿ ಮಾನವೀಯ ಗುಣಗಳು ಇದ್ದು, ಜಗತ್ತಿನ ಎಲ್ಲಾ ಜಾತಿಗಳನ್ನು ನಾವು ಪ್ರೀತಿಸುತ್ತೇವೆ. ದೇಶದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಕಗಳನ್ನು ಪಡೆದು ಕೊಳ್ಳುದಕೋಸ್ಕರ ಮಕ್ಕಳನ್ನು ಶಾಲೆಗೆ ಕಳುಹಿಸ ಬಾರದು ಸಂಸ್ಕಾರಯುತ ಬದುಕಿನ ನಿರ್ಮಾಣಕ್ಕೆ ವಿದ್ಯೆ ಪೂರಕವಾಗಿರಬೇಕು ಹಣದಿಂದ ಜೀವನವನ್ನು ಸಫಲ ಮಾಡಿಕೊಳ್ಳಲು ಸಾಧ್ಯವಿಲ್ಲ ನಮ್ಮ ಸಂಸ್ಕೃತಿ ಸಂಸ್ಕಾರಯುತ ಬದುಕಿನಿಂದ ಅದು ಸಾಧ್ಯವಿದೆ ಶಂಕರಾಚಾರ್ಯರ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರ ಅನುಕರಣೀಯವಾಗಿದೆ ಎಂದು ಉಳ್ಳೂರು ಸ.ಹಿ.ಪ್ರಾ ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಅಡಿಗರು ಹೇಳಿದರು. ನಾವುಂದ ಬಡಾಕೆರೆ ವೈದಿಕ ಮಂದಿರದ ವಠಾರದಲ್ಲಿ ಭಾನುವಾರ ನಡೆದ ಶ್ರೀ ಶಾರದಾ ಸದ್ವಿದ್ಯಾ ವಸಂತ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಶ್ರೀ ಶಾರದಾ ವಿದ್ಯಾ ಪೀಠಂ ಶೃಂಗೇರಿಯ ದಕ್ಷಿಣ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇ.ಮೂ.ಲೋಕೇಶ್ ಅಡಿಗ ಬಡಾಕೆರೆ ಅವರು ಮಾತನಾಡಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಶಿಬಿರಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಬಾಲ್ಯದ ನೆನಪುಗಳ ಜತೆಗೆ ಸಮಯ ಕಳೆದಿರುವುದು ಮಕ್ಕಳಿಗೂ ಸಂತೃಪ್ತಿಯನ್ನು ಕೊಟ್ಟಿದೆ ಮಕ್ಕಳು ಪ್ರತಿಭಾನ್ವಿತ ರಾಗಬೇಕು ಎನ್ನುವ ದೃಷ್ಟಿಯಿಂದ ಬೇಸಿಗೆ ಶಿಬಿರ ಆಯೋಜನೆ ಮಾಡಲಾಗಿದೆ ಎಂದರು. ಕಿರಿಮಂಜೇಶ್ವರ ದೇವಳದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರು ಅಭಿವೃದ್ಧಿ ಹೊಂದಿದಂತೆ ಸೌಂದರ್ಯಪ್ರಜ್ಞೆಯುಳ್ಳ ವ್ಯಕ್ತಿಗಳು ನಮ್ಮ ನಡುವೆ ಇರುವಂತೆ ಮಾಡುವುದು ಬಹುಮುಖ್ಯ. ಸೌಂದರ್ಯಪ್ರಜ್ಞೆ ಇದ್ದವರಿಗೆ ದೇಶ, ಭಾಷೆ, ಕಲೆ, ಬದುಕು, ಸಾಮರಸ್ಯದ ಬದುಕು ಸೇರಿದಂತೆ ಎಲ್ಲವನ್ನೂ ಪ್ರೀತಿಸುವ ಗುಣವಿರುತ್ತದೆ. ಅಂತವರೇ ದೇಶದ ಬಹುದೊಡ್ಡ ಸಂಪತ್ತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಸೋಮವಾರ ಜರುಗಿದ ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಸಾಮಾಜಿಕ, ಶೈಕ್ಷಣಿಕ ಮೊದಲಾದ ಕ್ಷೇತ್ರದಲ್ಲಿ ಕಂದಕಗಳನ್ನು ಗಮನಿಸುತ್ತಿದ್ದೇವೆ. ಇಂತಹ ಅಂತರ ತಗ್ಗಿಸಲು ಶೈಕ್ಷಣಿಕವಾಗಿ ಹಾಗೂ ಭೌದ್ಧಿಕವಾಗಿ ಮಾತ್ರ ಬಲಾಢ್ಯರಾದರೆ ಸಾಲದು, ಜೊತೆಗೆ ಸುಂದರ ಮನಸ್ಸುಗಳನ್ನು ಕಟ್ಟುವ ಮೂಲಕ ಮಾಡಬೇಕಿದೆ. ಮಾಡಬೇಕಿದೆ ಎಂದರು. ಮಕ್ಕಳನ್ನು ದೇಶದ ಸಂಪನ್ಮೂಲ ವ್ಯಕ್ತಿಗಳನ್ನಾಗಿ ರೂಪಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ. ಶೈಕ್ಷಣಿಕ ಕಲಿಕೆಯ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಹೆಚ್ಚೆಚ್ಚು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ 71ನೇ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗಾಗಿ ‘ಸೂತ್ರ ಸಂಕಲ್ಪ’ ಉಚಿತ ಗೊಂಬೆಯಾಟ ಮಾಹಿತಿ ಕಾರ್ಯಾಗಾರ ಶಿಬಿರ ಇತ್ತೀಚೆಗೆ ನಡೆಯಿತು. ಕುಂದಾಪುರದ ಲೆಕ್ಕ ಪರಿಶೋಧಕರಾದ ಪಿ. ಪ್ರಭಾಕರ ಮಯ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಂಗೋಲಿ ಕಲಾವಿದೆ ಡಾ. ಭಾರತಿ ಮರವಂತೆ, ಸರಕಾರಿ ಪ್ರೌಢ ಶಾಲೆ, ಹಕ್ಲಾಡಿಯ ಕನ್ನಡ ಭಾಷಾ ಶಿಕ್ಷಕರಾದ ಡಾ. ಕಿಶೋರ್ ಕುಮಾರ್ ಶೆಟ್ಟಿ, ಶಿಕ್ಷಕ ಉದಯ ಭಂಡಾರ್ಕಾರ್ ಹಟ್ಟಿಯಂಗಡಿ, ಶಿಕ್ಷಕಿ ರೇವತಿ ಸುವರ್ಣ ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಈ ವೇಳೆ ಪಿ. ಪ್ರಭಾಕರ ಮಯ್ಯ ರವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಈ ಒಂದು ಕಾರ್ಯಾಗಾರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗೇರಿ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ವಂಡ್ಸೆ, ಸರಕಾರಿ ಪ್ರೌಢ ಶಾಲೆ, ಹಕ್ಲಾಡಿ ಮತ್ತು ಡಾ. ಬಿ.ಬಿ. ಹೆಗ್ಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.09: ಉಡುಪಿಯ ವೆಂಟನಾ ಫೌಂಡೇಶನ್ ನೇತೃತ್ವದಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರವಡಿ ರಸ್ತೆಯ ಶ್ರೀ ವಿಷ್ಣು ಮೂರ್ತಿ ದೇವಾಸ್ಥಾನ ಸಮೀಪ ಕೊಯ್ಯಾರಿ ಕೆರೆಯನ್ನು ಸ್ಚಚ್ಚಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮೊದಲು ನೀರನ್ನು ಬರಿದಾಗಿಸಿ, ಹೂಳನ್ನು ಎತ್ತಿ ಸಂಪೂರ್ಣವಾಗಿ ಸ್ವಚ್ಚಗೊಳಿಸಿ ಸುತ್ತಲಿನ ಗದ್ದೆಗಳಿಗೆ ನೀರು ಸಿಗುವಂತೆ ಮಾಡಲಾಗುವುದು. ಸ್ಥಳೀಯ ರೈತರಿಗೆ ಬೇಸಾಯದ ಜೊತೆಯಲ್ಲಿ ತರಕಾರಿ, ವಾಣಿಜ್ಯ ಬೆಳೆಯನ್ನು ವರ್ಷವಿಡಿ ಬೆಳೆಯಲು ಸಹಕಾರಿಯಾಗಲಿದೆ. ಹತ್ತು ದಿನಗಳ ಕಾಲ ನಡೆಯುವ ಸ್ವಚ್ಚತಾ ಕಾರ್ಯದ ಸಂಪೂರ್ಣ ವೆಚ್ಚವನ್ನು ವೆಂಟನ ಫೌಂಡೇಶನ್ ಭರಿಸಲಿದೆ. ಉಡುಪಿಯ ವೆಂಟನಾ ಫೌಂಡೇಶನ್ ಅಧ್ಯಕ್ಷ ಹಾಗೂ ಮಾಹಿತಿ ತಂತ್ರಜ್ಞಾನದ ದಿಗ್ಗಜ 99ಗೇಮ್ಸ್ ಆನ್ಲೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಭಟ್ ಚಾಲನೆ ನೀಡಿ ಪರಿಸರದ ಉಳಿವಿಗಾಗಿ ಜಲ ಸಂರಕ್ಷಣೆ ಅತ್ಯಗತ್ಯ. ಅದರಂತೆಯೇ ಕೆರೆಯ ಮರು ನಿರ್ಮಾಣ ಮಾಡಿ ನೀರನ್ನು ಉಳಿಸುವುದರೊಂದಿಗೆ ಈ ಪರಿಸರದ ಜನರಿಗೆ ಹಾಗೂ ಪಕ್ಷಿಸಂಕುಲಕ್ಕೆ ಸಹಕಾರಿಯಾಗಲಿದೆ ಎಂದರು. ಇತ್ತೀಚೆಗೆ ಆರಂಭಗೊಂಡ ಈ ಫೌಂಡೇಶನ್ ಮೂಲಕ ಕೊರವಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಘ ಸಂಸ್ಥೆಗಳ ಮೂಲಕ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಬಹುಮುಖ್ಯ. ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಇರುವವರನ್ನು ಗುರುತಿಸಿ ಬೆನ್ನು ತಟ್ಟುವ ಕೆಲಸ ಮಾಡಿದರೆ, ಅವರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಸುರಭಿ ಜೈಸಿರಿ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸುರಭಿ ಸಂಸ್ಥೆ ಎರಡು ದಶಕಗಳಿಂದ ಹತ್ತಾರು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಿ ಮನೆಮಾತಾಗಿದೆ. ಬೈಂದೂರಿನ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನಾರ್ಹ ಎಂದರು. ಡಿಜಿಟಲ್ ಆರ್ಟ್ ಕಲಾವಿದ ಕಿಶನ್ ಪ್ರಭು ಅವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ಗುರುಗಳಾದ ಪ್ರಶಾಂತ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಬೈಂದೂರು ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ, ಬೈಂದೂರು ಸೇವಾ ಸಂಗಮ ಶಿಶುಮಂದಿರದ ಅಧ್ಯಕ್ಷರಾದ ಮಂಜುನಾಥ ಶೆಟ್ಟಿ, ಪಡುವರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂಗ್ಲೀಷ ಕೇವಲ ಭಾಷೆಯಗಿದೆ. ಆದರೆ ಪ್ರತಿಯೊಬ್ಬರ ಮಾತೃಭಾಷೆಯೇ ಅವರ ಅಸ್ಮಿತೆಯಾಗಿರುತ್ತದೆ ಎಂದು ನಾಗಾಲ್ಯಾಂಡಿನ ಮಾಜಿ ರಾಜ್ಯಪಾಲ ಪಿ. ಬಿ ಆಚಾರ್ಯ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ ವಿಶೇ? ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡುವುದು ಒಳಿತು ಇದರಿಂದ ಮಕ್ಕಳು ಸಂಸ್ಕಾರವಂತರಾಗಲು ಅವಕಾಶವಿದೆ. ಶಿಕ್ಷಣದ ಮುಖ್ಯ ಉದ್ದೇಶ ಪದವಿ ಅಥವಾ ಅಂಕ ಗಳಿಸುವುದಲ್ಲ, ಹೊರತಾಗಿ ಸಮಾಜಮುಖಿ ಚಿಂತನೆಗಳ ಮೂಲಕ ದೇಶವನ್ನು ನಿರ್ಮಾಣ ಮಾಡುವುದು. ಭಾರತವು ಎಲ್ಲಾ ಆಯಾಮಗಳಲ್ಲಿ ಸಮೃದ್ಧ ದೇಶ. ಭಾರತೀಯರಾಗಿ ಜನಿಸಿದ್ದಕ್ಕೆ ನಾವೆಲ್ಲ ಹೆಮ್ಮೆಪಡಬೇಕು ಎಂದು ಹೇಳಿದರು. ಈಶಾನ್ಯ ರಾಜ್ಯಗಳ ನಡುವೆ ಸಾಂಸ್ಕೃತಿಕ ಏಕೀಕರಣವನ್ನು ಸಾಧಿಸಲು ಆ ಭಾಗದ ಜನರೊಂದಿಗೆ ಆಗಾಗ್ಗೆ ಸಂವಹನ ನಡೆಸಬೇಕು. ಅಲ್ಲಿನ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಲಭಿಸದೆ, ಆಧುನಿಕ ಮಾರುಕಟ್ಟೆ ವ್ಯವಸ್ಥೆಯಲ್ಲಿ ಮೋಸ ಹೋಗುವಂತಾಗಿದೆ. ವಿದ್ಯಾವಂತ ಯುವಕರು ಅಂತಹ ಸಮುದಾಯಗಳ…

Read More