ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶಿವಕುಮಾರ್ ಅವರು ಮಾತನಾಡಿ, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ಶನಿವಾರ ಪೋಷಕರ ಸಭೆ ಆಯೋಜಿಸಲಾಯಿತು. ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಕಲಿಕೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿರುವ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಾರ್ಷಿಕ ಯೋಜನೆಯ ಕುರಿತು ಹಾಗೂ ಕಾಲೇಜಿನ ನಿಯಮಗಳ ಕುರಿತು ಮಾತನಾಡಿದರು. ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಡಿ ಕನ್ಯಾಣ ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಸಮುದ್ರ ಪೂಜೆ ಇತ್ತೀಚಿಗೆ ನೆರವೆರಿತು. ಸಮುದ್ರ ಪೂಜಾ ವಿಧಿಗಳನ್ನು ವಿದ್ವಾನ್ ಸುಬ್ರಾಯ ಐತಾಳ್ ನೆರವೆರಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂತೋಷ್ ಖಾರ್ವಿ, ಉಪಾಧ್ಯಕ್ಷರಾದ ಸಂತೋಷ್ ಕುಂದರ್, ಉದಯ್ ಕಾಂಚನ್, ಕಾರ್ಯದರ್ಶಿ ಸುಧೀರ್ ಕುಂದರ್, ಜೊತೆ ಕಾರ್ಯದರ್ಶಿ ವೆಂಕಟೇಶ್ ಮೆಂಡನ್, ವಾಮನ ಸಾಲಿಯಾನ, ಪ್ರಭಾಕರ್ ಮೆಂಡನ್, ನಾರಾಯಣ ಬಂಗೇರ ,ಅಣ್ಣಪ್ಪ ಕುಂದರ್, ಸತೀಶ್ ಕುಂದರ್ ,ರಾಘವ ಕುಂದರ್, ಮಂಜುನಾಥ ಕುಂದರ್, ಗಣೇಶ್ ಕುಂದರ್, ಶ್ರೀರಾಮ ದೇಗುಲದ ಅಧ್ಯಕ್ಷರಾದ ರಾಘವೇಂದ್ರ ಕರ್ಕೇರ, ರಾಮಚಂದ್ರ ಖಾರ್ವಿ, ಆನಂದ ತಂಡೇಲ್ಕರ್, ನಾಗರಾಜ ಖಾರ್ವಿ, ಶ್ರೀನಿವಾಸ ಪೂಜಾರಿ, ವಿಜಯ ತಿಂಗಳಾಯ, ಮುತ್ತಪ್ಪ ಸಾಲಿಯಾನ್, ಸುಬ್ರಮಣ್ಯ ಖಾರ್ವಿ, ಜೀವನ ಖಾರ್ವಿ, ವಿಜಯ ಕರ್ಕೇರ, ಚಂದ್ರ ಕುಂದರ್, ಪ್ರಕಾಶ್ ಬಂಗೇರ, ಸಂತೋಷ್ ಸಾಲಿಯಾನ್, ಮೀನುಗಾರ ಮುಖಂಡರಾದ ಸಂತೋಷ್ ಕುಂದರ್, ಶಂಕರ್ ಸಿರಿಯಾನ್, ನರಸಿಂಹ ಕೋಟ್ಯಾನ್, ಜಯಂತ ಬೆನ್ನು ಉಪಸ್ಥಿರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಡ್ಲೂರು ಝಿಯಾ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಗಗನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಅದೇ ಪಂದ್ಯಾಟದ 25 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಪ್ರೀತೇಶ್ 8ನೇ ತರಗತಿ ವಿದ್ಯಾರ್ಥಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದ 30 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಸುಧನ್ವ 8 ನೇ ತರಗತಿ ವಿದ್ಯಾರ್ಥಿ ತೃತೀಯ ಸ್ಥಾನಗಳಿಸಿರುತ್ತಾರೆ. ಅವರಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜರ್ಮನಿಯ ರಿಯಾನ್-ರೋಹೂರ್ನಲ್ಲಿ ನಡೆದ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2025 (ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025) ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಾಲಿನಿ 20ಕಿಮೀ ನಡಿಗೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡರು. ಈ ಬಾರಿಯ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025ದಲ್ಲಿ ಆಳ್ವಾಸ್ನ ಕ್ರೀಡಾ ದತ್ತು ಯೋಜನೆಯ 11 ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕ್ರೀಡಾಪಟುವಿನ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ವಲಯ ವಿಪ್ರ ಮಹಿಳಾ ತಂಡದಿಂದ ಶ್ರಾವಣ ಸಂಭ್ರಮ ಕಾರ್ಯಕ್ರಮ ಇತ್ತೀಚಿಗೆ ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಜರಗಿತು. ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್. ಕಾರಂತ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ಶ್ರಾವಣ ಮಾಸದ ಶನಿವಾರಕ್ಕೆ ಧಾರ್ಮಿಕ ಮಹತ್ವವಿದ್ದು ವಿಪ್ರ ಮಹಿಳಾ ತಂಡದಿಂದ ಆಯೋಜಿಸಲಾದ ಶ್ರಾವಣ ಸಂಭ್ರಮವು ಈ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗುನೀಡಿದೆ ಹಾಗೂ ಮಹಿಳೆಯರನ್ನು ಒಗ್ಗೂಡಿಸುವಲ್ಲಿ ಸಹಾಯಕವಾಗಿದೆ ಎಂದರು. ವಿಪ್ರ ಮಹಿಳಾ ವಲಯ ಅಧ್ಯಕ್ಷೆ ವನಿತಾ ಉಪಾಧ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯ ಅನಂತಪದ್ಮನಾಭ ಐತಾಳ, ವಿಪ್ರ ಮಹಿಳಾ ತಂಡದ ಗೌರವಾಧ್ಯಕ್ಷೆ ಜಾಹ್ನವಿ ಹೇರ್ಳೆ, ಶ್ರೀ ಗುರುನರಸಿಂಹ ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಸುಜಾತ ಬಾಯರಿ, ಜೆಸಿಐ ಸಂಸ್ಥೆಯ ಅಕ್ಷತಾ ಗಿರೀಶ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ವಾಸುದೇವ ಕೃಪಾ ಆಂಗ್ಲ ಮಾಧ್ಯಮ ಶಾಲೆ ಬೈಲೂರು ಸಂಯೋಜನೆಯಲ್ಲಿ ಮಾಹೆ ಮಣಿಪಾಲ ಇಲ್ಲಿಯ ಎಂ.ಐ.ಟಿ ಈಜು ಕೊಳದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಈಜು ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ದಿಗಂತ ಕೋಟತಟ್ಟು ಅವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ್ ಬಾರಿಕೆರೆ 50 ಮೀಟರ್ ಬ್ರೆಸ್ಟ್ರೋಕ್, 100 ಮೀಟರ್ ಬ್ರೆಸ್ಟ್ರೋಕ್, 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶ್ರೀಧರ್ ಉಳಿತಾಯ ಹಾಗೂ ರಾಜರಾಮ ನಾವಡ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾಸಾಧನೆಯನ್ನು ಗೀತಾನಂದ ಪೌಂಢೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಅಧ್ಯಕ್ಷರು ಸರ್ವಸದಸ್ಯರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು, ಅಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ರಿದಾ ಪರ್ವಿನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕವಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಹೆಚ್ಚುವರಿಯಾಗಿ ಆರಂಭವಾದ ಕಿರಿಯ ಪ್ರಾಥಮಿಕ ವಿಭಾಗಗಳ ವಿದ್ಯಾರ್ಥಿಗಳ ಹೊಸ ಬ್ಲಾಕ್ಗೆ ಸತೀಶ್ ಪೂಜಾರಿ ಹಾಗೂ ರಾಧಿಕಾ ಪೂಜಾರಿ ಅವರು ಕುಡಿಯುವ ನೀರಿನ ಘಟಕವನ್ನು ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. ಕೊಡುಗೆಯನ್ನು ಸ್ವೀಕರಿಸಿದ ಆಡಳಿತ ನಿರ್ದೇಶಕರಾದ ರೆನಿಟಾ ಲೋಬೋ ಅವರು ದಾನಿಗಳಿಗೆ ಕೃತಜ್ಞತಾ ಪೂರ್ವಕ ಮಾತುಗಳ ಮೂಲಕ ಧನ್ಯವಾದ ಅರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಾನಿಗಳಿಗೆ ಶುಭ ಹಾರೈಸಿದರು. ಈ ಶುಭ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮವು ಯಶಸ್ವಿಗೊಂಡಿತು.
