ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಹೊಂಬಾಡಿ-ಮೊಂಡಾಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಗುರುವಾರ ಅನಿರೀಕ್ಷಿತ ಭೇಟಿ ನೀಡಿ, ಅಂಗನವಾಡಿಯ ಸ್ವಚ್ಛತೆ, ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು. ಈ ಸಂದರ್ಭ ಅವರು ಅಂಗನವಾಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಂಗನವಾಡಿಯಲ್ಲಿ ಅವರ ದಿನಚರಿಯ ಬಗೆಗೆ ತಿಳಿದುಕೊಂಡರು. ಕಾರ್ಯದೋತ್ತಡದ ನಡುವೆಯೂ ಜಿಲ್ಲಾಧಿಕಾರಿಗಳ ದಿಢೀರ್ ಅಂಗನವಾಡಿ ಭೇಟಿಯ ಬಗ್ಗೆ ನಾಗರಿಕರು ಮೆಚ್ಚುಗೆ ಸೂಚಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸ್ವಿಟ್ಸರ್ಲಂಡ್‌ನ ದಾವೋಸ್‌ನಲ್ಲಿ 21ರಿಂದ 24ರ ವರೆಗೆ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ೫೦ನೆ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ರಾಜ್ಯದ ತಂಡಕ್ಕೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಮೂಲದ ಅಪರ್ಣಾ ಮಾರ್ಗದರ್ಶಿ ಹುದ್ದೆ ನಿರ್ವಹಿಸುತ್ತಿದ್ದಾರೆ. ಆಕೆ ಕಿರಿಮಂಜೇಶ್ವರ ರಥಬೀದಿಯಲ್ಲಿರುವ ಶ್ಯಾನುಭಾಗ್ ಕುಟುಂಬದ ’ನಮ್ಮನೆ’ಯ ಸುಧಾಕರ ಶ್ಯಾನುಭಾಗ್ ಅವರ ಪುತ್ರಿ. ಮುಂಬೈಯಲ್ಲಿ ಜನಿಸಿ ತಂದೆಯೊಂದಿಗೆ ಅಲ್ಲಿಯೇ ವಾಸವಾಗಿರುವ ಅಪರ್ಣಾ ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಗಳಿಸಿರುವರು. ಭಾರತ ಮತ್ತು ದಕ್ಷಿಣ ಏಷ್ಯಾ ಸಮುದಾಯ ಕುರಿತು ಪರಿಣತರಾಗಿರುವ ಅವರು ಮುಂಬಯಿಯ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯಲ್ಲಿ ಉದ್ಯೋಗದಲ್ಲಿದ್ದಾರೆ. ಎರಡು ವರ್ಷಗಳ ಅವಧಿಗೆ ವಿಶ್ವ ಆರ್ಥಿಕ ಒಕ್ಕೂಟದ ಜತೆ ಕೆಲಸ ಮಾಡಲು ನಿಯುಕ್ತರಾಗಿ, ೪ ತಿಂಗಳಿನಿಂದ ಅದರ ಜಿನೇವಾ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸುಧಾಕರ ಶ್ಯಾನುಭಾಗ್ ವಿವಿಧೆಡೆ ಉದ್ಯೋಗ ನಡೆಸಿ, ನಿವೃತ್ತಿಯ ಬಳಿಕ ಮುಂಬೈಯಲ್ಲಿ ನೆಲೆಸಿದ್ದಾರೆ. ಅಪರ್ಣಾ ಅವರ ಪತಿ ಸಾಫ್ಟ್‌ವೇರ್ ಎಂಜಿನಿಯರ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಬೈಂದೂರು ರತ್ತೂಬಾಯಿ ಜನತಾ ಹೈಸ್ಕೂಲು ಹಾಗೂ ಬಿಜೂರು ಸರಕಾರಿ ಪ್ರೌಢಶಾಲೆಗೆ ಒಟ್ಟು 60,000ರೂ. ಮೌಲ್ಯದ ಎರಡು ಗ್ಯಾಸ್ ರೇಂಜ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಬೈಂದೂರು ರತ್ತೂಬಾಯಿ ಜನತಾ ಹೈಸ್ಕೂಲಿನಲ್ಲಿ ಶಾಲೆಯ ಮುಖ್ಯೋಪಧ್ಯಾಯರಾದ ಮಂಜು ಕಾಳವಾರ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಟ್ರಸ್ಟಿ ರಾಮ ಬಿಜೂರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಬಿಜೂರು ರತ್ತೂಬಾಯಿ ಜನತಾ ಹೈಸ್ಕೂಲಿನಲ್ಲಿ ಶಾಲಾ ಮುಖ್ಯೋಪಧ್ಯಾಯರಾದ ಸುಬ್ರಹ್ಮಣ್ಯ ಮದ್ದೋಡಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಟ್ರಸ್ಟೀ ರಾಮ ಬಿಜೂರು, ಎಸ್‌ಡಿಎಂಸಿ ಅಧ್ಯಕ್ಷ ರಾಜೇಂದ್ರ ಬಿಜೂರು, ಎಸ್‌ಡಿಎಂಸಿ ಸದಸ್ಯರುಗಳಾ ಸುರೇಶ್ ಬಿಜೂರು, ಉಮೇಶ್ ದೇವಾಡಿಗ, ತಿಮ್ಮಪ್ಪ ದೇವಾಡಿಗ ಹಾಗೂ ಇತರರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರೋಟರಿ ಭವನದಲ್ಲಿ ಮಂಗಳವಾರ ವಿಂಶತಿ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಸಂಸ್ಥೆಯು ಫೆ.2 ರಿಂದ ಫೆ.4ರ ತನಕ ಆಯೋಜಿಸಿರುವ ’ಸುರಭಿ ಜೈಸಿರಿ’ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಜೀವ ವಿಮಾದ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್. ಬಿಡುಗಡೆಗೊಳಿಸಿದರು. ಬಳಿಕ ಅವರು ಮಾತನಾಡಿ ಬದುಕಿನಲ್ಲಿ ಗುರಿ ತಲುಪಲು ಹಲವು ಅಡೆತಡೆಗಳು ಎದುರಾಗುತ್ತವೆ. ಆದರೆ ಎಲ್ಲವನ್ನೂ ಸಮಚಿತ್ತದಿಂದ ಎದುರಿಸುತ್ತಾ ಮುನ್ನುಗ್ಗಿದಾಗ ಸಾಧನೆ ಸಾಧ್ಯವಿದೆ. ಯಾವುದೇ ಸಂಘಟನೆಯಲ್ಲಿ ಪ್ರತಿಯೊಬ್ಬರ ತೊಡಗಿಸಿಕೊಳ್ಳುವಿಕೆ ಇದ್ದಾಗ ಅದು ಯಶಸ್ಸಿನತ್ತ ಸಾಗುತ್ತದೆ ಎಂದರು. ಸುರಭಿ ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆನಂದ ಮದ್ದೋಡಿ, ಸಲಹೆಗಾರರಾದ ಜಿ. ತಿಮ್ಮಪ್ಪಯ್ಯ, ನಿರ್ದೇಶಕ ಸುಧಾಕರ ಪಿ., ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಂಪ್ರದಾಯಿಕ ಶಕ್ತಿಮೂಲಗಳು ಕ್ಷಯಿಸುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ಮೂಲಗಳ ಅವಲಂಬನೆ ಅನಿವಾರ್ಯವೆನಿಸಿದೆ. ಧಾರಾಳವಾಗಿ, ಉಚಿತವಾಗಿ ಲಭ್ಯವಿರುವ ಹಾಗೂ ಪರಿಸರ ಸ್ನೇಹಿಯಾಗಿರುವ ಸೌರಶಕ್ತಿಯನ್ನು ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳಲು ಸಾಧ್ಯವಿರುವುದರಿಂದ ಜನರು ಅದರತ್ತ ಹೊರಳಬೇಕು ಎಂದು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ಅಧ್ಯಕ್ಷ ಪಿ. ಗೋಪಿಕೃಷ್ಣ ಹೇಳಿದರು. ಗೋಳಿಹೊಳೆಯ ಮಹಿಷಾಸುರ ಮರ್ಧಿನಿ ಸಭಾಭವನದಲ್ಲಿ ಬ್ಯಾಂಕ್ ಮತ್ತು ಸೆಲ್ಕೋ ಸೋಲಾರ್ ಲೈಟ್ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ’ವಿಕಾಸ ಸೌರ ಸ್ವಾವಲಂಬನೆಯ ಮೊದಲ ಸಾಧನೆ’ಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮೆಲ್ಲ ದಿನಬಳಕೆಯ ಉಪಕರಣಗಳಿಗೆ ಈಗ ವಿದ್ಯುತ್ ಅನಿವಾರ್ಯ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸುಲಭ ಲಭ್ಯವಲ್ಲ. ಆದುದರಿಂದ ಸೆಲ್ಕೋ ಸೋಲಾರ್ ಲೈಟ್ಸ್ ಸಂಸ್ಥೆ ಬೆಳಕಿಗೆ ಮಾತ್ರವಲ್ಲದೆ ಸ್ವೋದ್ಯೋಗ ನಡೆಸಲು ಅಗತ್ಯವಿರುವ ೬೦ ಯಂತ್ರಗಳಿಗೆ ಸೌರಶಕ್ತಿ ಅಳವಡಿಸುತ್ತಿದೆ. ಅವುಗಳನ್ನು ಅಳವಡಿಸಿಕೊಳ್ಳಲು ಗ್ರಾಮೀಣ ಬ್ಯಾಂಕ್ ಸಹಾಯಧನ ಸಹಿತವಾದ ಸಾಲ ನೀಡುತ್ತದೆ. ಜನರು ಈ ಸೌಲಭ್ಯದ ಗರಿಷ್ಠ ಲಾಭ ಪಡೆಯಬೇಕು ಎಂದ ಅವರು, ಸ್ಥಳೀಯರ ಕೋರಿಕೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ. ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಅಂಗವಾಗಿ ಸೈಕಲ್ ರ‍್ಯಾಲಿಗೆ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಚಾಲನೆ ನೀಡಿದರು. ಕೊಲ್ಲೂರು ದೇವಳದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ ವ್ಯಾಯಾಮದ ಮೂಲಕ ಶರೀರದ ಫಿಟ್ನೆಸ್‌ಗೆ ಸೈಕ್ಲಿಂಗ್ ಅತ್ಯಂತ ಉಪಯೋಗಕಾರಿದೆ. ಈಗಿನ ಕಾಲದಲ್ಲಿ ಎಲ್ಲರೂ ಕುಳಿತಲ್ಲೇ ಕೆಲಸ ಮಾಡುವುದು, ವ್ಯಾಯಾಮ ಮಾಡದೆ ಇರುವುದು ಸರಿಯಾದ ಸಮಯಕ್ಕೆ ಆಹಾರ ಸೇವಿಸದೆ ಇರುವುದರಿಂದ ಖಾಯಿಲೆಗಳು ಅವರನ್ನು ಕಾಡುತ್ತಿದೆ. ಸದೃಢ ದೇಹದಿಂದ, ಸದೃಢ ಮನಸ್ಸು, ಸದೃಢ ಭಾರತ ಸೃಷ್ಟಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮೂಕಾಂಬಿಕ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ, ಶಾಲಾ ಮುಖ್ಯೋಪಾಧ್ಯಾಯರಾದ…
ಕುಂದಾಪ್ರ ಡಾಟ್ ಕಾಂ’ ಸುದ್ದಿ ಕೊಲ್ಲೂರು: ಸ್ಯಾಂಡಲ್‍ವುಡ್ ನಟಿ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು. ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಬಳಿಕ ರಚಿತಾ ರಾಮ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಮೂಕಾಂಬಿಕೆ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ರಚಿತಾ ರಾಮ್ ಅವರಿಗೆ ಫಲ-ಪ್ರಸಾದಗಳನ್ನು ನೀಡಿ ಗೌರವ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕುಂದಪ್ರಭ ಸಂಸ್ಥೆ ಕೊಡ ಮಾಡುವ ೨೦ನೇ ವರ್ಷದ “ಕೋ.ಮ.ಕಾರಂತ” ಪ್ರಶಸ್ತಿಯನ್ನು ಕಾಂಕ್ರಿಟ್ ತಾಂತ್ರಿಕ ತಜ್ಞರೆಂದೇ ಖ್ಯಾತಿ ಗಳಿಸಿದ ಭಾರತ ಸರಕಾರದ ರಕ್ಷಣಾ ಇಲಾಖೆಯ ಕಾಲೇಜ್ ಆಫ್ ಮಿಲಿಟರಿ ಇಂಜಿನಿಯರಿಂಗ್‌ನ ನಿವೃತ್ತ ಹಿರಿಯ ಪ್ರೊಫೆಸರ್, ಕೋಟೇಶ್ವರದ ಪ್ರೊ. ಎಂ.ಎಸ್. ಶೆಟ್ಟಿಯವರಿಗೆ ಸ.ಪ.ಪೂ.ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯ ಮುಜುರಾಯಿ, ಬಂದರು, ಒಳನಾಡು ಜಲಸಾರಿಗೆ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಪ್ರಶಸ್ತಿಗಾಗಿ ತಡಕಾಟ, ಪ್ರಭಾವ ಬೀರುವ ಈ ಕಾಲದಲ್ಲಿ ಎಂ.ಎಸ್.ಶೆಟ್ಟಿಯಂತಹ ನೈಜ ಸಾಧಕರನ್ನು ಈ ಪ್ರಶಸ್ತಿಯೇ ಅರಸಿಕೊಂಡು ಬಂದಿದೆ. ಇವರ ಜೀವನಾನುಭವ, ತಾಂತ್ರಿಕ ಪರಿಣತಿಯನ್ನು ಸರಕಾರ ಸಮಾಜಕ್ಕೆ ಪ್ರಯೋಜನವಾಗುವ ನಿಟ್ಟಿನಲ್ಲಿ ಬಳಸಿಕೊಳ್ಳಲು ಚಿಂತಿಸಲಾಗುವುದು. ಕುಂದಪ್ರಭ ಕಳೆದ ಮೂರು ದಶಕಗಳಲ್ಲಿ ಸಮಾಜಕ್ಕೆ ಅನುಕೂಲವಾಗುವ ಹಲವು ಕಾರ್ಯಗಳನ್ನು ಮಾಡಿದೆ, ಅಪೂರ್ವ ಸಾಧಕರನ್ನು ಗುರುತಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜ.21: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕಳ್ಳಂಗಡಿ ಸಮೀಪದ ರೈಲ್ವೆ ಟ್ರ್ಯಾಕ್‌ನಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕಿರಿಮಂಜೇಶ್ವರ ಸಮೀಪದ ಶಾಲೆಬಾಗಿಲು ರಸ್ತೆ ನಿವಾಸಿ ರಾಮ ಪೂಜಾರಿ (32) ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪೂರ್ವದಲ್ಲಿ ಪೊಲೀಸರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಕುಟುಂಬಿಕರು ಶವವನ್ನು ರೈಲ್ವೆ ಹಳಿಯ ಪಕ್ಕಕ್ಕಿಟ್ಟು ಮಧ್ಯಾಹ್ನದ ತನಕವೂ ಪ್ರತಿಭಟಿಸಿದ ಘಟನೆಯೂ ನಡೆಯಿತು. ಘಟನೆಯ ವಿವರ: ಚಾಲಕ ವೃತ್ತಿ ಮಾಡಿಕೊಂಡಿರುವ ರಾಮ ಪೂಜಾರಿಯನ್ನು ಸೋಮವಾರ ಮಧ್ಯಾಹ್ನ 3:30ರ ಸುಮಾರಿಗೆ ಪೊಲೀಸರು ಗಂಗೊಳ್ಳಿ ಠಾಣೆಗೆ ಕರೆದೊಯ್ದಿದ್ದರು. ಈ ಬಗ್ಗೆ ಅವರ ಸ್ನೇಹಿತರು ವಿಚಾರಿಸಿದಾಗ, ರಾಮ ಪೂಜಾರಿ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದು, ಅದರ ವಿಚಾರಣೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು ಎನ್ನಲಾಗಿದೆ. ವಿಚಾರಣೆಯ ಬಳಿಕ ರಾತ್ರಿ ರಾಮ ಪೂಜಾರಿ ಮನೆಗೆ ಮರಳಿದ್ದು, ಸೋಮವಾರ ಬೆಳಿಗ್ಗೆ ನಾಗೂರು ಸಮೀಪದ ರೈಲ್ವೇ ಟ್ರ್ಯಾಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಛಿದ್ರಗೊಂಡ ದೇಹ ಪತ್ತೆಯಾಗಿದೆ. ಕುಂದಾಪ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಭಟ್ಕಳ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆಇಇ) ಮೈನ್ಸ್ ಇದರ 2020ನೇ ಸಾಲಿನ ಪ್ರಥಮ ಹಂತದ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳ ತಾಲೂಕಿನ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ 30ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿ, 10ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಶೇಕಡಾವಾರು 90ಕ್ಕಿಂತ ಹೆಚ್ಚಿನ ಅಂಕ ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಅಭಿಷೇಕ ಎನ್.ಎನ್ 98%, ಅಭಿಷೇಕ್ ವಿ. ನಾಯ್ಕ್ 98%, ಜಯದೀಪ ಪ್ರಭು 95%, ಆದರ್ಶ ಎಸ್. ನಾಯ್ಕ್ 94%, ಪ್ರಸನ್ನ ನಾಯ್ಕ್ 94%, ಅಶ್ವಿನಿ 93%, ಪ್ರಶಾಂತ ನಾಯ್ಕ್ 94%, ಸಾಗರ್ ಎಸ್. ನಾಯ್ಕ್ 89%, ಪುಂಡಲೀಕ ನಾಯಕ್ 86%, ದರ್ಶನ್ 82% ಫಲಿತಾಂಶ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಕ್ಯಾ. ಕೆ.ಆರ್. ನಾಯ್ಕ್ ಹಾಗೂ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
