Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲ್ಗದ್ದೆಕೇರಿ ಸಿದ್ದುಮನೆ ಎಂಬಲ್ಲಿ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ವೆಂಟೆಡ್ ಡ್ಯಾಂ ಮತ್ತು ಸೇತುವೆಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಗುದ್ದಲಿಪೂಜೆ ನೇರವೆರಿಸಿದರು. ಪ್ರಾಸ್ತಾವಿಕ ಮಾತನಾಡಿದ ಮಾಜಿ ಪಂಚಾಯತ್ ಅಧ್ಯಕ್ಷರಾದ ಅಶೋಕ ಕುಮಾರ ಶೆಟ್ಟಿ, ಗ್ರಾಮೀಣ ಭಾಗದ ಬಹುದಿನದ ಬೇಡಿಕೆ ಸೇತುವೆ ಹಾಗೂ ವೆಂಟೆಡ್ ಡ್ಯಾಂ ನಿರ್ಮಾಣವಾಗುವುದರಿಂದ ಕೇರಿಸಿದ್ದುಮನೆ ಜೋಗಿಜೆಡ್ಡು ಮತ್ತು ಸ್ಥಳೀಯರಿಗೆ ಅಂತರ್ಜಲ ವೃದ್ಧಿಯಾಗುವುದರೊಂದಿಗೆ ಸಾರಿಗೆ ವ್ಯವಸ್ಥೆ ತುಂಬಾ ಅನುಕೂಲವಾಗಿದೆ ಈ ವ್ಯವಸ್ಥೆಗೆ ಅನುದಾನ ಒದಗಿಸಲು ನೆರವಾದ ಅಭಿವೃದ್ಧಿಯ ಹರಿಕಾರ ನಮ್ಮ ಹೆಮ್ಮಯ ಶಾಸಕರು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಪಂಚಾಯತ್ ಸದಸ್ಯರಾದ ಸೂಲಿಯಣ್ಣ ಶೆಟ್ಟಿ, ಶ್ರೀನಿವಾಸ ಪೂಜಾರಿ, ಬಾಬು ಆಚಾರ್ಯ, ಕಿರಣ್ ಶೆಟ್ಟಿ ಮರವಂತೆ, ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಭೋಜ ನಾಯ್ಕ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 74,049 ಮಕ್ಕಳಿಗೆ (ಗ್ರಾಮೀಣ ಪ್ರದೇಶ 65326+ ನಗರ ಪ್ರದೇಶ 8723) ಜನವರಿ 31ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 657 ಲಸಿಕಾ ಕೇಂದ್ರಗಳನ್ನು ತೆರೆಯಲಿದ್ದು, (ಗ್ರಾಮೀಣ ಪ್ರದೇಶ 585 ನಗರ ಪ್ರದೇಶ 72) ಅಲ್ಲದೇ 8 ಮೊಬೈಲ್ ಟೀಮ್ ಮತ್ತು 37 ಟ್ರಾನ್ಸಿಟ್ ಬೂತ್‌ಗಳನ್ನು ತೆರೆದು ಮತ್ತು ಜಿಲ್ಲೆಯ ಎಲ್ಲಾ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು , 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ 2768 ಲಸಿಕಾ ಸ್ವಯಂಸೇವಕರು ಮತ್ತು 133 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದು, . ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಹುತೇಕ ಹೊರರಾಜ್ಯದ ಸಿಬ್ಬಂದಿಗಳೇ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರಿಗೆ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಿಂದ, ಬ್ಯಾಂಕ್‌ನ ಕೆಲಸ ಕಾರ್ಯಗಳಲ್ಲಿ ತೊಂದರೆಯಾಗುತ್ತಿದ್ದು, ಬ್ಯಾಂಕ್ ಸೇವೆಗಳಲ್ಲಿ ಸ್ಥಳೀಯರಿಗೆ ನೆರವಾಗುವಂತೆ ಕನಿಷ್ಠ ಪ್ರಮಾಣದಲ್ಲಿಯಾದರೂ ಕರ್ನಾಟಕ ರಾಜ್ಯದ ಸಿಬ್ಬಂದಿಯನ್ನು ನೇಮಿಸುವಂತೆ ಜಿಲ್ಲಾ ಪಂಚಾಯತ್‌ನಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿಯಾದರೂ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಅನ್ಯರಾಜ್ಯದ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಿಂದ, ಬ್ಯಾಂಕ್‌ಗಳಲ್ಲಿ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಲಭ್ಯವಾಗುವುದಿಲ್ಲ ಎಂದು ಸದಸ್ಯ ಬಾಬು ಶೆಟ್ಟಿ ತಿಳಿಸಿದರು. ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಂಧ್ರ ಪ್ರದೇಶ, ಬಿಹಾರ ಹಾಗೂ ಉತ್ತರ ಪ್ರದೇಶದ ಸಿಬ್ಬಂದಿ ಆಯ್ಕೆಯಾಗುತ್ತಿದ್ದಾರೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ರುದ್ರೇಶ್ ತಿಳಿಸಿದರು. ಬ್ಯಾಂಕ್‌ಗಳಲ್ಲಿ ವಿದ್ಯಾಭ್ಯಾಸ ಸಾಲ ಮತ್ತು ಮುದ್ರಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ 2020ನೇ ಸಾಲಿನ ವಿದ್ಯಾರ್ಥಿ ಬ್ಯಾಚ್ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಐಸಕ್ ವಾಸ್, ಒಂದು ಸಂಸ್ಥೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಪ್ರತಿಯೊಬ್ಬರು ಗಮನಿಸಬೇಕು. ತಿಳಿಯದ ವಿಷಯಗಳನ್ನು ಇನ್ನೊಬ್ಬರಿಂದ ತಿಳಿದುಕೊಳ್ಳಬೇಕು .ಪ್ರಶ್ನಿಸುವ ಸಾಮರ್ಥ್ಯವನ್ನು ಪ್ರತಿಯೊಬ್ಬರು ಕರಗತ ಮಾಡಿಕೊಳ್ಳಬೇಕು. ಮನುಷ್ಯ ಬಡವನಿದ್ದಾನೆ ಎಂದರೆ ಅವನಲ್ಲಿ ಕೊರತೆ ಇದೆ ಎಂಬ ಅರ್ಥವಲ್ಲ ಬಡತನವನ್ನು ಪ್ರಯೋಜನ ಎಂದುಕೊಂಡು ಮುನ್ನಡೆಯುವುದು ಒಬ್ಬ ಆದರ್ಶ ವ್ಯಕ್ತಿಯ ಲಕ್ಷಣ. ಒಬ್ಬ ಪರಿಪೂರ್ಣ ವ್ಯಕ್ತಿ ತನ್ನಲ್ಲಿರುವ ಜ್ಞಾನವನ್ನು ಸಮಾಜಕ್ಕೆ ಧಾರೆ ಎರೆಯಬೇಕು. ಇದರಿಂದ ಮುಂದಿನ ಪೀಳಿಗೆಗೆ ಸಹಾಯವಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಪದವಿಗಳನ್ನು ಮುಗಿಸಿದ ತಕ್ಷಣ ಉದ್ಯೋಗ ದೊರಕುವುದು ಎಂಬ ಭ್ರಮೆಯಿಂದ ಹೊರಬರುವುದು ಅಗತ್ಯ. ಅನುಭವ ಇಲ್ಲದೇ ಪದವಿಗಳ ಪ್ರಯೋಜನವೇನು? ಪ್ರತಿನಿತ್ಯ ಕೆಲಸವನ್ನು ಮಾಡಬೇಕು, ತಮ್ಮನ್ನು ತಾವು ತೊಡಗಿಸಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ 2020-21ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬಿದ್ಕಲ್‌ಕಟ್ಟೆಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ, ಯೋಜನೆಯ ಉದ್ದೇಶ ಪ್ರಯೋಜನದ ಕುರಿತು ಹಾಗೂ ದೇಶದ ಭವಿಷ್ಯಕ್ಕೆ ಪರಿಶುದ್ಧ ಮತ್ತು ಕಡ್ಡಾಯ ಮತದಾನ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಘಟನೆಯ ಪ್ರವೃತ್ತಿ ರೂಡಿಸಿಕೊಳ್ಳಬೇಕು. ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯೋಜನಾಧಿಕಾರಿ ಸಂದೀಪ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ನುಡಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿ ಮೊಹಮ್ಮದ ಅಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ವಿದ್ಯಾರ್ಥಿನಿ ಕಾವ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಮಿತಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್‌ಸಿಸಿ ಆರ್ಮಿ ವಿಂಗ್‌ನ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ, ವಿದ್ಯಾರ್ಥಿ ಸಮುದಾಯದಲ್ಲಿ ಶಿಸ್ತು ಕೇಂದ್ರಿತ ನಾಗರಿಕ ಪ್ರಜ್ಞೆಯನ್ನು ಪಡಿಮೂಡಿಸಿ ತನ್ಮೂಲಕ ಏಕತೆಯ ಭಾರತವನ್ನು ಕಟ್ಟುವಲ್ಲಿ ಎನ್.ಸಿ.ಸಿ. ನಿರ್ಣಾಯಕ ಪಾತ್ರ ವಹಿಸಿದ್ದು, ಕಾಲೇಜಿಗೆ ಎನ್‌ಸಿಸಿ ಆರ್ಮಿ ವಿಂಗ್‌ನ ಪ್ರವೇಶ ನಮ್ಮ ಶಿಸ್ತು ಕೇಂದ್ರಿತ ಶಿಕ್ಷಣದ ಪರಿಕಲ್ಪನೆಯನ್ನು ಪುಷ್ಠೀಕರಿಸಿದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭ ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಗಣಪತಿ ಖಾರ್ವಿ ಬಸ್ರೂರು ಮತ್ತು ಉಡುಪಿ ಜಿಲ್ಲಾ ಅತ್ಯುತ್ತಮ ರೆಡ್‌ಕ್ರಾಸ್ ಅಧಿಕಾರಿ ಗೌರವಕ್ಕೆ ಪಾತ್ರರಾದ ವಾಣಿಜ್ಯ ಉಪನ್ಯಾಸಕರಾದ ಶಿವರಾಜ್ ಸಿ. ನಾವುಂದ ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿ ಕೆ ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಕೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಇಲ್ಲಿನ ಜಟ್ಟಿಗೇಶ್ವರ ಗ್ರೂಪ್, ಸ್ನೇಹಾ ಮಹಿಳಾ ಮಂಡಲ, ಸಂಗಮ ಯುವಕ ಮಂಡಲ, ಆಸರೆ ಟ್ರಸ್ಟ್, ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ 72ನೇ ಗಣರಾಜ್ಯೋತ್ಸವವನ್ನು ಮರವಂತೆಯ ಕಡಲತೀರದಲ್ಲಿ ಸ್ವಚ್ಛತೋತ್ಸವವಾಗಿ ಆಚರಿಸಲಾಯಿತು. ಎಲ್ಲ ದಿನಗಳಲ್ಲಿ ಪ್ರವಾಸಿಗಳು ಹೆಚ್ಚು ಸಂಖ್ಯೆಯಲ್ಲಿ ವಿಹರಿಸುವ ಮಾರಸ್ವಾಮಿ ಕಡಲತೀರದಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿರುವುದರಿಂದ ಸಂಘಟನೆಗಳ ಸ್ವಯಂಸೇವಕರು ಈ ಸ್ಥಳವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಹರಡಿಕೊಂಡಿದ್ದ ಬಾಟಲಿ, ಪ್ಲಾಸ್ಟಿಕ್ ಚೀಲ ಮತ್ತಿತರ ತ್ಯಾಜ್ಯವನ್ನು ಒಟ್ಟುಗೂಡಿಸಿದರು. ಆ ಬಳಿಕ ಅದನ್ನು ಗ್ರಾಮ ಪಂಚಾಯಿತಿಯ ಸ್ವಚ್ಛ ವಾಹಿನಿ ವಾಹನದಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಕೇಂದ್ರಕ್ಕೆ ಸಾಗಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ಮಡಿವಾಳ, ಮಾಜಿ ಅಧ್ಯಕ್ಷ ದಯಾನಂದ ಬಳೆಗಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರುಣಾಕರ ಆಚಾರ್ಯ, ಸಂಗಮ ಯುವಕ ಮಂಡಲದ ಅಧ್ಯಕ್ಷ ನಾಗರಾಜ ಪಟ್ಕಾರ್, ಸ್ನೇಹಾ ಮಹಿಳಾ ಮಂಡಲದ ಅಧ್ಯಕ್ಷೆ ಅನಿತಾ ಆರ್. ಕೆ, ಶೋಭಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಸಿ ಮೂವಿಸ್‌ರವರ ‘ದಿ ಸ್ಟ್ರೇಂಜ್ ಕೇಸ್ ಆಫ್ ಕುಂದಾಪುರ’ ಚಿತ್ರದ ಟ್ರೇಲರ್ ಗುರುವಾರ ಇಲ್ಲಿನ ಕುಂದೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ ನಮ್ಮೂರಿನ ಪ್ರತಿಭೆಗಳೆ ನಿರ್ಮಿಸಲಿರುವ ಚಲನಚಿತ್ರ ನಮ್ಮೂರಿನ ವೈಶಿಷ್ಟ್ಯತೆಯನ್ನು ತೋರಿಸಲಿದೆ. ಚಲನಚಿತ್ರದಲ್ಲಿ ಹಲವು ಸ್ಥಳೀಯ ಪ್ರತಿಭೆಗಳು ಬೆಳಕಿಗೆ ಬರಲಿದ್ದಾರೆ ಎಂದ ಅವರು ನಮ್ಮತನವನ್ನು ಉಳಿಸಿಕೊಳ್ಳಲು ಚಲನಚಿತ್ರ ಸ್ಥೂರ್ತಿಯಾಗುವಂತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ, ಉದ್ಯಮಿ ಪ್ರವೀಣ್ ಕುಮಾರ್, ನಟ ರಾಹುಲ್ ಹೆಗ್ಡೆ, ಸಿನೆಮಾ ನಿರ್ದೇಶಕ, ನಟ ಓಂಗುರು ಬಸ್ರೂರು, ನಿರ್ಮಾಪಕ, ನಟ ಚಂದ್ರಶೇಖರ್ ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ ಸಾರಂಗ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ವ್ಯಾಪ್ತಿಯ 45 ಗ್ರಾಮ ಪಂಚಾಯತ್ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೋಟೇಶ್ವರದ ಯುವ ಮೆರಿಡಿಯನ್ ಹಾಲ್‌ನಲ್ಲಿ ನಡೆಯಿತು. ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ನೂತನ ಸದಸ್ಯರು ಆಯ್ಕೆ ಪ್ರಕ್ರಿಯೆ ಸಂದರ್ಭ ಭಾಗವಹಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಎಸಿ ರಾಜು ತಹಶೀಲ್ದಾರ್ ಆನಂದಪ್ಪ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಕೇಶವ ಶೆಟ್ಟಿಗಾರ್ ಹಾಗೂ ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕುಂದಾಪುರ ತಾಲೂಕಿನ 45 ಪಂಚಾಯತಿಗಳಿಗೆ ಆಯ್ಕೆಯಾದವರ ವಿವರ ಈ ಕೆಳಗಿನಂತಿದೆ. ಮೀಸಲಾತಿ ವಿವರ : ಆಲೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ –    ಹಿಂದುಳಿದ ವರ್ಗ- ಬ . ಕೆರಾಡಿ : ಅಧ್ಯಕ್ಷ ಸ್ಥಾನ –  ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ಪದವಿ ಪತ್ರಿಕೋದ್ಯಮ ವಿಭಾಗದಿಂದ ನಡೆದ ಆಳ್ವಾಸ್ ಮುದಮ್-ಪಾಡ್‌ಕಾಸ್ಟ್‌ನ ಮೊದಲ ಸಂಚಿಕೆ ಬಿಡುಗಡೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಕೊಳ್ಳಬೇಕು. ಅದೇ ನಮ್ಮನ್ನು ಉತ್ತಮ ಬರಹಗಾರರಾಗಿ, ಸಂವಹನಕಾರರಾಗಿ ರೂಪುಗೊಳಿಸಬಲ್ಲದು. ಕಲಿಕೆ ಎಂಬುದು ನಿರಂತರ ಪಕ್ರಿಯೆ ಹೊಸ ಹೊಸ ಪ್ರಯತ್ನಗಳ ಮೂಲಕ ವಿಷಯಗಳನ್ನು ಕಲಿಯುತ್ತಿರಬೇಕು. ವಿದ್ಯಾರ್ಥಿಗಳು ಓದಿನ ಜೊತೆಗೆ ವಿಭಾಗದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಬೆಳವಣಿಗೆ ಸಾಧ್ಯವಾಗುತ್ತದೆ. ಕಾಲೇಜಿನ ಪತ್ರಿಕೋದ್ಯಮ ವಿಭಾಗವು ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿ ನೂತನ ಪ್ರಯೋಗಗಳಲ್ಲಿ ತೊಡಗಿಸಿಕೊಂಡು, ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಅದಕ್ಕಾಗಿ ವಿದ್ಯಾರ್ಥಿಗಳು ಈಗಲೇ ತಯಾರಾಗಿರಬೇಕು. ಕಾಲೇಜುಗಳಲ್ಲಿ ಕಲಿತ ಪ್ರಾಯೋಗಿಕ ಪಾಠಗಳು ಮುಂದೆ ವೃತ್ತಿಕ್ಷೇತ್ರಕ್ಕೆ ಸುಲಭವಾದ ದಾರಿಯನ್ನು ಮಾಡಿಕೊಡುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮನ್ನು ತಾವು ಪ್ರತಿಯೊಂದು…

Read More