Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಡಿ.17: ದಾಖಲೆಗಳಿಲ್ಲದೇ ಎರ್ನಾಕುಲಂನಿಂದ ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಾಣಿಕ ಮಾಡುತ್ತಿದ್ದ ಆರೋಪದಲ್ಲಿ ಕುಂದಾಪುರ ಹಾಗೂ ಭಟ್ಕಳ ಉಪವಿಭಾಗದ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್ ಉಮ್ಮೆರ್ ಭಟ್ಕಳ್ ಅವರುಗಳಿಂದ ಒಟ್ಟು 61.47 ಲಕ್ಷ ರೂ. ಬೆಲೆಯ,1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ರೈಲಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಅವರು ಕುಂದಾಪುರ, ಬೈಂದೂರು, ಭಟ್ಕಳ ರೈಲು ನಿಲ್ದಾಣಗಳಲ್ಲಿ ಪೊಲೀಸರನ್ನು ನಿಯೋಜಿಸಿ, ಅದರಂತೆ ಬೈಂದೂರಿನಲ್ಲಿ ಓರ್ವ ಹಾಗೂ ಭಟ್ಕಳ ರೈಲ್ವೆ ನಿಲ್ದಾಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಎಸ್‌ಪಿ ನಿಶಾ ಜೇಮ್ಸ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್, ಭಟ್ಕಳ ಎಎಸ್‌ಪಿ ನಿಖಿಲ್, ಬೈಂದೂರು ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ, ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ ೨೧ವರ್ಷಗಳಿಂದ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸಿವರ್ಗಾವಣೆಗೊಂಡ ರೂಪ ಅವರಿಗೆ ವಿನಾಯಕ ಬುಕ್ ಸ್ಟಾಲ್ ಮಾಲಕರಾದ ವಿನೋದ್ ಮೇಸ್ತ ಸನ್ಮಾನಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿಯ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಉರ್ದು ಶಾಲೆಯ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷನಾಗಿದ್ದ ಮೋಹನ್ ಚಂದ್ರ (೪೧) ಬಂಧಿತ ಆರೋಪಿ. ಆರೋಪಿಗೆ ತಲೆಮರೆಸಿಕೊಳ್ಳಲು ಸಹಾಯ ನೀಡಿದ ಆರೋಪದ ಮೇಲೆ ಗಂಗಾಧರ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಉರ್ದು ಶಾಲೆಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಅವರಿಗೆ ಆರೋಪಿ ಮೋಹನ್ ಚಂದ್ರ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಮಾಡಿರುರುವುದಲ್ಲದೇ ಲೈಂಗಿಕ ದೌರ್ಜನ್ಯವೆಸಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಬೈಂದೂರು ಠಾಣೆಯಲ್ಲಿ ಡಿಸೆಂಬರ್ 10ರಂದು ಪ್ರಕರಣ ದಾಖಲಾಗಿತ್ತು. ಆರೋಪಿ ಮೋಹನ್ ಚಂದ್ರ ವಿರುದ್ದ ಈ ಹಿಂದೆಯೂ ಅದೇ ಶಾಲೆಯ ಮಮತಾ ಎನ್ನುವ ಶಿಕ್ಷಕಿಗೂ ಕಿರುಕುಳ ನೀಡಿದ ಆರೋಪವಿದ್ದು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದನು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ್‌ಚಂದ್ರನನ್ನು ಇದೀಗ ವಾರಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಈರ್ವರು ಆರೋಪಿಗಳನ್ನು ಹದಿನೈದು ದಿನಗಳ ಕಾಲ ನ್ಯಾಯಾಂಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ.ಡಿ17: ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವಾಪ್ತಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ನೆತ್ತರು ಹರಿದ ಘಟನೆ ನಡೆದಿದ್ದು, ವ್ಯಕ್ತಿಯೋರ್ವನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ಕಂಡ್ಲೂರು ಸಮೀಪದ ಜೋರ್‌ಮಕ್ಕಿ ನಿವಾಸಿ ಬಾಬು ಶೆಟ್ಟಿ (55) ಎಂದು ಗುರುತಿಸಲಾಗಿದೆ. ಹೆಮ್ಮಾಡಿ – ಕೊಲ್ಲೂರು ರಾಜ್ಯ ಹೆದ್ದಾರಿ ಹಾಗೂ ತಲ್ಲೂರು ನೇರಳಕಟ್ಟೆ ಸಂಪರ್ಕ ರಸ್ತೆಯ ಜಾಡಿ ಕಲ್ಕಂಬ ಎಂಬಲ್ಲಿನ ಮಣ್ಣಿನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ದಾರಿಹೋಕರೊಬ್ಬರು ರಕ್ತಸಿಕ್ತ ದೇಹವನ್ನು ಕಂಡು ಹಟ್ಟಿಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೀವ ಶೆಟ್ಟಿ ಅವರ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ತಿಳಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಲಾರಿ ಚಾಲಕರಾಗಿರುವ ಮೃತ ಬಾಬು ಶೆಟ್ಟಿ ತಮ್ಮ ಮನೆಯಿಂದ ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ತನ್ನ ಹೀರೋ ಹೋಂಡಾ ಬೈಕಿನಲ್ಲಿ ತೆರಳಿದ್ದರು. ಇದರ ನಡುವೆಯೇ ಮಾರ್ಗಮಧ್ಯೆ ಈ ದುಷ್ಕೃತ್ಯ ನಡೆದಿದೆ. ಮೃತರ ಕುತ್ತಿಗೆ, ತಲೆ, ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಇರಿತದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಜನರು ಪ್ರತಿನಿತ್ಯವೂ ತೊಂದರೆಗೆ ಸಿಲುಕುವಂತಾಗಿದೆ. ರಸ್ತೆ ಕಾಮಗಾರಿ ಆರಂಭಕ್ಕೂ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾದುಹೋಗುವ ಪ್ರತಿ ಪಂಚಾಯತಿಯಿಂದಲೂ ಲಿಖಿತವಾಗಿ ಮನವಿಗಳನ್ನು ನೀಡಿದ ಹೊರತಾಗಿಯೂ ಹೆದ್ದಾರಿ ಪ್ರಾಧಿಕಾರ ಜನರ ಸಮಸ್ಯೆಗೆ ಸ್ಪಂದಿಸದೇ ಮೊಂಡುತನ ಮೆರೆದಿದೆ. ಕೇಂದ್ರ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ಜನರ ಗಂಭೀರ ಸಮಸ್ಯೆಗೆ ಯಾವುದೇ ಸ್ಪಂದನೆ ಇಲ್ಲದಂತಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ್ಲೂರಿನಿಂದ ಶಿರೂರು ವರೆಗಿನ ಚತುಷ್ಪಥ ಹೆದ್ದಾರಿ ಕಾಮಗಾರಿ ತೀರ ಅವ್ಯವಸ್ಥಿತವಾಗಿ ನಡೆದಿದ್ದು ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮರವಂತೆಯಿಂದ ಬೈಂದೂರು ವರೆಗೆ ಹಮ್ಮಿಕೊಂಡ ಪಾದಯಾತ್ರೆಯ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಮಾತನಾಡಿ ಕಾಮಗಾರಿ ಅಪೂರ್ಣವಾಗಿರುವಾಗಲೇ ಶಿರೂರು ಗಡಿಭಾಗದಲ್ಲಿ ಟೋಲ್ ಸಂಗ್ರಹಕ್ಕೆ ಐಆರ್‌ಬಿ ಕಂಪೆನಿ ಅಣಿಯಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಅವರ ಮೇಲೆ ಹಲ್ಲೆಗೈದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಅವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಬೈಂದೂರು ವಲಯದ ಶಿಕ್ಷಕರು ಧರಣಿ ನಡೆಸಿ ಬೈಂದೂರು ತಹಶಿಲ್ದಾರ್ ಹಾಗೂ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಮಾತನಾಡಿ ಉಪ್ಪುಂದ ಸರಕಾರಿ ಉರ್ದು ಶಾಲೆಯಲ್ಲಿ ಹಿಂದೆ ನಾಲ್ಕು ಜನ ಖಾಯಂ ಶಿಕ್ಷಕರಿದ್ದರು. ಆದರೆ ಎಲ್ಲರಿಗೂ ಕಿರುಕುಳ ನೀಡಿದ್ದರಿಂದ ಅವರು ವರ್ಗಾವಣೆ ತೆಗೆದುಕೊಂಡಿದ್ದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹಿಂದೆ ಮಮತಾ ಎಂಬ ಶಿಕ್ಷಕಿಗೆ ಹಲ್ಲೆ ನಡೆಸಿದ್ದ. ಈಗ ಮಲ್ಲಿಕಾ ಎಂಬ ಶಿಕ್ಷಕಿಗೆ ಹಲ್ಲೆ ನಡೆಸಿದ್ದಾರೆ. ಇನ್ನೋರ್ವ ಶಿಕ್ಷಕಿಯಲ್ಲಿ ಅಗತ್ಯವಾಗಿ ಮಾಹಿತಿ ಹಕ್ಕು ಮೂಲಕ ಕಿರುಕುಳ ನೀಡಲು ತಯಾರಾಗಿದ್ದ. ಎಸ್‌ಡಿಎಂಸಿ ಅವರಿಂದಲೇ ಶಿಕ್ಷಕರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ್ಲೂರಿನಿಂದ ಶಿರೂರು ವರೆಗಿನ ಚತುಷ್ಪಥ ಹೆದ್ದಾರಿ ಕಾಮಗಾರಿ ತೀರ ಅವ್ಯವಸ್ಥಿತವಾಗಿ ನಡೆದಿದ್ದು ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮರವಂತೆಯಿಂದ ಬೈಂದೂರು ವರೆಗೆ ಹಮ್ಮಿಕೊಂಡ ಪಾದಯಾತ್ರೆಗೆ ಮರವಂತೆಯಲ್ಲಿ ಚಾಲನೆ ದೊರೆಯಿತು. ಹೆದ್ದಾರಿ ಬದಿ ಸೂಕ್ತ ಚರಂಡಿ ಇಲ್ಲವಾದುದರಿಂದ ಮಳೆಗಾಲದಲ್ಲಿ ಹೆದ್ದಾರಿ ಮೇಲೆ ನೀರು ಹರಿಯುತ್ತದೆ. ಕೆಲವೆಡೆ ಕೃತಕ ನೆರೆ ಏರ್ಪಟ್ಟು ಕೃಷಿ ಭೂಮಿಗೆ, ಮನೆಗಳಿಗೆ ನುಗ್ಗಿ ಅನಾಹುತ ಸೃಷ್ಟಿಸುತ್ತಿದೆ. ಅದು ಸರಿಯಾಗಬೇಕು. ಪ್ರತೀ ಮೂರು ಕಿಲೋಮೀಟರಿಗೆ ಒಂದರಂತೆ ನಿರ್ಮಿಸಿರುವ ಯು ತಿರುವುಗಳು ರಾಷ್ಟ್ರೀಯ ಹೆದ್ದಾರಿ ವಿನ್ಯಾಸ ಹಾಗೂ ಗುಣಮಟ್ಟದವುಗಳಲ್ಲ. ಅಲ್ಲಿಯೇ ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಅವುಗಳನ್ನು ಅಪಾಯಹಿತ ಸ್ಥಿತಿಗೆ ತರಬೇಕು. ಬೈಂದೂರು-ಕೊಲ್ಲೂರು ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿತವಾಗಿದೆ. ಅದು ಹೆದ್ದಾರಿಗೆ ಸೇರುವ ಯಡ್ತರೆ ಜಂಕ್ಷನ್‌ನಲ್ಲಿ ಅಂಡರ್ ಪಾಸ್ ನಿರ್ಮಿಸದಿದ್ದರೆ ಪರಿಣಾಮವನ್ನು ಊಹಿಸಲೂ ಅಸಾಧ್ಯ. ಜನ, ಸಂಚಾರ ದಟ್ಟಣೆ ಇರುವೆಡೆ ಸಮಾನಾಂತರ ಸರ್ವೀಸ್ ರಸ್ತೆ ಬೇಕು. ಹೆದ್ದಾರಿ ಕಾಮಗಾರಿ ನಡೆಸುವಾಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎಸ್. ಮಯ್ಯಾಡಿ ಅವರಿಗೆ ಜ್ಞಾನ ಜ್ಯೋತಿ ಪ್ರಶಸ್ತಿ ದೊರೆತಿದೆ. ಡಿ.22ರಂದು ಕಲಬುರಗಿ ಕನ್ನಡ ಭವನದಲ್ಲಿ ನಡೆಯಲಿರುವ ಶಿಕ್ಷಣ ಜ್ಞಾನ ಮಾಸಪತ್ರಿಕೆಯ 17ನೇ ವಾರ್ಷಿಕೋತ್ಸವ, ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ರಾಜು ಎಸ್. ಅವರು ಮಯ್ಯಾಡಿ ಶಾಲೆಯ ಹಳೆ ವಿದ್ಯಾರ್ಥಿ. ಕಳೆದ 34 ವರ್ಷಗಳಿಂದ ಅದೇ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತಮ ಕ್ರೀಡಾಪಟುವೂ ಎಂದೆಸಿನಿಕೊಂಡಿರುವ ಅವರು ತಮ್ಮ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವಲ್ಲಿ ಶ್ರಮವಹಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘಟನಾ ಕೌಶಲ್ಯವನ್ನೂ ಮೆರೆದಿದ್ದಾರೆ. ಅದರೊಂದಿಗೆ ಕಳೆದ 9 ವರ್ಷಗಳಿಂದ ತನ್ನ ವೃತ್ತಿಯ ಜೊತೆಗೆ ಶಾಲಾ ವಾಹನದ ಚಾಲಕರಾಗಿಯೂ ರಾಜು ಎಸ್. ಮಯ್ಯಾಡಿ ಅವರು ನಿಸ್ವಾರ್ಥವಾಗಿ ಸೇವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮರವಂತೆ ಜುಮ್ಮಾ ಮಸೀದಿ ಎದುರು ಶುಕ್ರವಾರ ನಾವುಂದ-ಮರವಂತೆ ಜಮಾತ್‌ನ ಸದಸ್ಯರು ಪ್ರತಿಭಟನೆ ನಡೆಸಿದರು. ಮಾತನಾಡಿದ ಜಮಾತ್ ಅಧ್ಯಕ್ಷ ಹಾಜಿ ತೌಫೀಕ್ ಅಬ್ದುಲ್ಲಾ ಈ ಕಾಯ್ದೆಯು ಸಂವಿಧಾನದ ಜಾತ್ಯತೀತ ಸ್ವರೂಪಕ್ಕೆ ಅಪಚಾರವೆಸಗುತ್ತದೆ. ಇದು ಒಂದು ನಿರ್ದಿಷ್ಟ ವರ್ಗವನ್ನು ಗುರಿಯಾಗಿರಿಸಿಕೊಂಡು ರಚಿಸಿದಂತೆ ಕಂಡುಬರುತ್ತದೆ. ಯಾವುದೇ ಕಾರಣಕ್ಕೂ ಇದನ್ನು ಜಾರಿಗೊಳಿಸಬಾರದು ಎಂದರು. ಉಪಾಧ್ಯಕ್ಷ ಮನ್ಸೂರ್ ಇಬ್ರಾಹಿಂ ಮರವಂತೆ, ಕಾರ್ಯದರ್ಶಿ ಸತ್ತಾರ್, ಖಜಾಂಚಿ ಕೆ. ಪಿ. ಹುಸೇನ್ ಹಾಜಿ, ಮುತವಲ್ಲಿ ಬಿ.ಎ. ಸಯ್ಯದ್, ಪ್ರಮುಖರಾದ ಅಬ್ದುಲ್ ಹಮೀದ್ ಬಿ. ಎಚ್, ಮಾಣಿಕೊಳಲು ಅಬ್ಬಾಸ್, ಇರ್ಷಾದ್ ಕೋಯಾನಗರ, ಎನ್. ಸಿ. ಮೊಯ್ದಿನ್, ಬಿ. ಎಚ್. ಮೊಯ್ದಿನ್, ಸುಲೇಮಾನ್, ಇಮಾಮ್ ಅಬ್ದುಲ್ ಲತೀಫ್ ಫಾಲಿಲಿ, ವಕೀಲ ಇಲ್ಯಾಸ್ ನೇತೃತ್ವ ವಹಿಸಿದ್ದರು. ಜಮಾತ್‌ನ ಸರ್ವ ಸದಸ್ಯರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು. ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಮಧ್ಯಾಹ್ನ ದೇವಳದ ಸಭಾಭವನದಲ್ಲಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ವಿಶೇಷ ಆಸಕ್ತಿಯಿಂದ ಹೆಚ್ಚಿನ ಮಹಿಳೆಯರು ಏಲಂನಲ್ಲಿ ಭಾಗವಹಿಸಿ ಪ್ರಸಾದ ರೂಪದಲ್ಲಿ ಸೀರೆಗಳನ್ನು ಖರೀದಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಹಾಗೂ…

Read More