Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಬೋರ್ಡ್ ಹೈಸ್ಕೂಲ್ನ ಕಲಾಮಂದಿರದಲ್ಲಿ 18 ವರ್ಷ ವಯಸ್ಸಿನ ನಂತರದವರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಸಂದೇಶ ತಲುಪಿದ ನೂರು ಜನರಿಗೆ ಮೊದಲ ಹಂತದ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ರಾಜು ಕೆ, ತಾಲೂಕು ಆರೋಗ್ಯ ಅಧಿಕಾರಿ ಡಾ| ನಾಗಭೂಷಣ ಉಡುಪ ಎಚ್., ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಂಗ ಸಂಸ್ಥೆಯಾದ ಸೇವಾ ಭಾರತಿ ಪ್ರಮುಖರಾದ ಡಾ. ವಾದಿರಾಜ್ ಭಟ್, ಕಲಾಕ್ಷೇತ್ರ-ಕುಂದಾಪುರ ಸಂಸ್ಥೆಯ ಅಧ್ಯಕ್ಷ ಬಿ. ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸದಾಶಿವ ಗವರೋಜಿ, ವೈದ್ಯ ರಾದ ಡಾ. ಶ್ರಾವ್ಯ, ಫಾರ್ಮಸಿ ಅಧಿಕಾರಿ ಬಿ.ಎಮ್ ಚಂದ್ರಶೇಖರ, ಅನ್ನಪೂರ್ಣ ಹಾಗೂ ವೀಣಾ, ರಾಘವೇಂದ್ರ ಭಟ್ ಕೋಟೇಶ್ವರ, ಮುರಳಿಧರ ಜಪ್ತಿ, ಪ್ರಸನ್ನ ಕೋಟೇಶ್ವರ, ಗಣೇಶ್ ಭಟ್ ಕೋಟೇಶ್ವರ, ರತ್ನಾಕರ್ ಶೇರೆಗಾರ್, ಸತ್ಯನಾರಾಯಣ ಮಂಜ ಕೋಟೇಶ್ವರ, ಸುಹಾಸ್ ಕೋಟೇಶ್ವರ, ರಾಮಚಂದ್ರ ಕುಂದಾಪುರ, ರಾಜ ಪೂಜಾರಿ ಉಪಸ್ಥಿತರಿದ್ದರು. ಇವತ್ತು 44 ಜನರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾದ್ಯಂತ ಜಾರಿಯಾಗಿರುವ ಲಾಕ್‌ಡೌನ್ ಮೊದಲ ದಿನ ಕುಂದಾಪುರ ಮತ್ತು ಬೈಂದೂರು ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ತನಕ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿದ್ದರಿಂದ ಜನರು ಕಾಲ್ನಡಿಗೆಯಲ್ಲಿಯೇ ಪೇಟೆಗಳಿಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡುಬಂತು. ಆಸ್ಪತ್ರೆ ಮೊದಲಾದ ಅನುಮತಿ ನೀಡಲಾಗಿರುವ ಸೇವೆಗಳಿಗೆ ತೆರಳುವರ ವಾಹನವನ್ನು ಪೊಲೀಸರು ವಿಚಾರಿಸಿ ನಗರದೊಳಕ್ಕೆ ಪ್ರವೇಶ ನೀಡುತ್ತಿದ್ದರು. ನಿಯಮ ಮೀರಿ ಸಂಚರಿಸಿದ ವಾಹನಗಳನ್ನು ಕುಂದಾಪುರದಲ್ಲಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡರು. ಕುಂದಾಪುರ ನಗರ ಠಾಣೆಯಲ್ಲಿ ಕಳೆದ ಮೂರು ದಿನಗಳಲ್ಲಿ ಕಾರು, ಬೈಕು ಸೇರಿದಂತೆ ಒಟ್ಟು 61 ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ತಾಲೂಕಿನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಕಠಿಣ ಕ್ರಮಗಳನ್ನು ಅನುಸರಿಸಿ ಅನಗತ್ಯ ಸಂಚಾರಕ್ಕೆ ಬೇಕ್ ಹಾಕಲಾಗಿತ್ತು. ದಿನಸಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಖರೀದಿಸಲು ಬಂದವರು ಪಡಿತರವನ್ನು ಹೊತ್ತುಕೊಂಡೇ ತೆರಳಬೇಕಾದ ಅನಿವಾರ್ಯತೆ ಎದುರಾಯಿತು. ಗ್ರಾಮೀಣ ಭಾಗದ ಜನರು ಕೆಲವೆಡೆ ವಾಹನಗಳಲ್ಲಿ ಕೊಂಡೊಯ್ದರೆ, ಹಲವರು ತಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 855 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 452, ಕುಂದಾಪುರ, ಬೈಂದೂರು ತಾಲೂಕಿನ 369, ಕಾರ್ಕಳ, ಹೆಬ್ರಿ ತಾಲೂಕಿನ 30 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 855 ಪ್ರಕರಣಗಳಲ್ಲಿ 227 ಸಿಂಟಮಿಕ್ ಹಾಗೂ 628ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 840 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 72 ವರ್ಷದ ವೃದ್ಧೆ, 50 ವರ್ಷದ ಪುರುಷ ಹಾಗೂ 73 ವರ್ಷದ ವೃದ್ಧ, ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 642 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6582 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2512 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ಕ್ಷೇತ್ರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ ನಿಯಂತ್ರಣಕ್ಕೆ ತರಲು ಶ್ರಮಿಸಬೇಕಿದೆ. ಒಂದೊಂದು ಜೀವವು ಮುಖ್ಯವಾಗಿದ್ದು, ಕೋವಿಡ್‌ನಿಂದ ಜನ ಸಾಯುವುದನ್ನು ತಪ್ಪಿಸಬೇಕಾದರೆ ಲಾಕ್‌ಡೌನ್ ಬಿಗಿಗೊಳಿಸುವುದು ಅನಿವಾರ್ಯ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಹೇಳಿದರು. ಅವರು ಕೊಲ್ಲೂರಿನಲ್ಲಿ ಸೋಮವಾರ ನಡೆದ ಕೋವಿಡ್ ನಿಯಂತ್ರಣಕ್ಕಾಗಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ ಮುಂದಿನ ಎರಡು ವಾರದಲ್ಲಿ ದೇಶದಾದ್ಯಂತ ಕೊರೊನಾ ಕಂಟ್ರೋಲ್ ಆಗುವ ಸಾಧ್ಯತೆಯಿದೆ. ಕೋವಿಡ್ ಎರಡನೆ ಅಲೆ ತೀವೃಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನಿವಾರ‍್ಯವಾಗಿ ಲಾಕ್‌ಡೌನ್ ಘೋಷಿಸಲಾಗಿದ್ದು, ಜನ ಇದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಲಾಕ್‌ಡೌನ್ ಸಂದರ್ಭದಲ್ಲಿ ಅನಗತ್ಯ ಸಂಚಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಅವರು ಅನಗತ್ಯವಾಗಿ ಸಂಚರಿಸುತ್ತಿರುವ ವ್ಯಕ್ತಿಗಳ ವಾಹನಗಳನ್ನು ವಶಪಡಿಸಿಕೊಂಡು ಲಾಕ್‌ಡೌನ್ ಬಳಿಕವೇ ಹಿಂದಿರುಗಿಸಿ, ಈ ಬಗ್ಗೆ ನಾನು, ಶಾಸಕರು ಸೇರಿದಂತೆ ಯಾವುದೇ ಜನಪ್ರತಿನಿಗಳು ಹಸ್ತಕ್ಷೇಪ ಮಾಡುವುದಿಲ್ಲ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 962 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 309, ಕುಂದಾಪುರ, ಬೈಂದೂರು ತಾಲೂಕಿನ 266, ಕಾರ್ಕಳ, ಹೆಬ್ರಿ ತಾಲೂಕಿನ 384 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 962 ಪ್ರಕರಣಗಳಲ್ಲಿ 201 ಸಿಂಟಮಿಕ್ ಹಾಗೂ 761 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 943 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 63 ವರ್ಷದ ವೃದ್ಧ, 58 ವರ್ಷದ ಪುರುಷ, 58 ವರ್ಷದ ಪುರುಷ, ಕುಂದಾಪುರದ 66 ವರ್ಷದ ವೃದ್ಧ, 67 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 543 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6372 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಂಡ್ಸೆ, ಸಿದ್ಧಾಪುರ ಹಾಗೂ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶನಿವಾರ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಹೋಂ ಐಸೊಲೇಶನ್ ಹಾಗೂ ಆಸ್ಪತ್ರೆಗೆ ದಾಖಲಾದ ಕೋವಿಡ್ ರೋಗಿಗಳ ಮಾಹಿತಿ ಪಡೆದುಕೊಂಡ ಬಳಿಕ ಮಾತನಾಡಿ, ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಕೋವಿಡ್ ಅಪಾಯ ತಡೆಯಲು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಉನ್ನತ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದರು. ಈ ಸಂದರ್ಭ ತಾಲೂಕು ವೈದ್ಯಾಧಿಕಾರಿ ನಾಗಭೂಷಣ ಉಡುಪ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸನ್ಮಾನ್ ಶೆಟ್ಟಿ, ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ನಿಶಾ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲತಾ ನಾಯಕ್ ಮೊದಲಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಸರಕಾರ ಜಾರಿಮಾಡಿರುವ ಪರಿಷ್ಕೃತ ಮಾರ್ಗಸೂಚಿ ಉಡುಪಿ ಜಿಲ್ಲಾದ್ಯಂತ ಮೇ.10ರ ಬೆಳಿಗ್ಗೆ 6 ರಿಂದ ಮೇ 24ರ ಬೆಳಿಗ್ಗೆ 6 ಗಂಟೆಯ ತನಕ ಜಾರಿಯಲ್ಲಿರಲಿದ್ದು ಸಿ.ಆರ್.ಪಿ.ಸಿ ಸೆಕ್ಷನ್ 144(3) ಅನ್ವಯ ಮುಂದಿನ ಆದೇಶದ ತನಕ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.  ಜಿಲ್ಲಾಧಿಕಾರಿ ಪ್ರಕಟಿಸಿರುವ ಆದೇಶ ಈ ಕೆಳಗಿನಂತಿದೆ ನಿರ್ಬಂಧಿಸಲಾದ ಚಟುವಟಿಕೆಗಳು A. ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್‌ ಗಳು ಟ್ಯಾಕ್ಸಿಗಳ (including cabs by aggregators) ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕಟ್ ಗಳು ಹಾಗೂ ರೈಲು ಪ್ರಯಾಣದ ಟಿಕೆಟ್‌ ಗಳನ್ನೇ ಪಾಸ್‌ ಗಳಂತೆ ಬಳಸಿಕೊಳ್ಳಬಹುದಾಗಿದೆ. B. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ ಅನುಮತಿಸಿರುವಂತೆ ಸಂಚರಿಸುವ ಟ್ಯಾಕ್ಸಿ (ಆಟೋರಿಕ್ಷಾಗಳೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 1047 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 10 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 645, ಕುಂದಾಪುರ, ಬೈಂದೂರು ತಾಲೂಕಿನ 347, ಕಾರ್ಕಳ, ಹೆಬ್ರಿ ತಾಲೂಕಿನ 45 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 10 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 1047 ಪ್ರಕರಣಗಳಲ್ಲಿ 237 ಸಿಂಟಮಿಕ್ ಹಾಗೂ 810 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 27 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 1020 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ► ಜಿಲ್ಲಾದ್ಯಂತ ಮೇ.10ರಿಂದ ಜಾರಿಯಾಗಲಿರುವ ಲಾಕ್‌ಡೌನ್ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಉಡುಪಿ ಜಿಲ್ಲಾಧಿಕಾರಿ – https://kundapraa.com/?p=48059 . ಇಂದು ಉಡುಪಿಯ 75 ವರ್ಷದ ವೃದ್ಧೆ, 79 ವರ್ಷದ ವೃದ್ಧೆ, 78 ವರ್ಷದ ವೃದ್ದ, 73 ವರ್ಷದ ವೃದ್ಧೆ ಹಾಗೂ 68 ವರ್ಷದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಘಟಕದ ವತಿಯಿಂದ ‘ಹಸಿದವರಿಗೆ ಊಟ’ ಕಾರ್ಯಕ್ರಮದಡಿಯಲ್ಲಿ ಲಾಕ್‌ಡೌನ್‌ನಿಂದ ತೊಂದರೆಗೆ ಸಿಲುಕಿರುವ ಜನರಿಗೆ ಮಧ್ಯಾಹ್ನದ ಊಟ ವಿತರಿಸಲಾಗುತ್ತಿದೆ. ಕುಂದಾಪುರ ಪರಿಸರದ ಸುಮಾರು 150ರಿಂದ 200 ಮಂದಿಗೆ ನಿತ್ಯವೂ ಊಟ ವಿತರಿಸಲಾಗುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿನಿತ್ಯವೂ ಸ್ಥಳೀಯ ಬಾಣಸಿಗರ ಮನೆಯಲ್ಲಿ ಅಡುಗೆ ತಯಾರಿಸಿ ಮಧ್ಯಾಹ್ನದ ಹೊತ್ತಿಗೆ ಕುಂದಾಪುರ ಪರಿಸರದಲ್ಲಿ ತಿರುಗಾಡಿ ಊಟ ವಿತರಿಸಲಾಗುತ್ತಿದೆ. ಸಂಸ್ಥೆಯ ಪದಾಧಿಕಾರಿಗಳು ಹಾಗೂ ದಾನಿಗಳ ಆರ್ಥಿಕ ನೆರವಿನೊಂದಿಗೆ ಕುಂದಾಪುರ ಜೆಸಿಐ ಸಿಟಿ ಈ ಯೋಜನೆ ಹಮ್ಮಿಕೊಂಡಿದ್ದು, ಹೋಟೆಲ್ ಇಲ್ಲದೇ ಊಟವೂ ಸಿಗದ ಕೂಲಿ ಕಾರ್ಮಿಕರು, ಲಾರಿ ಚಾಲಕರು, ನಿರ್ಗತಿಕರು ಹಾಗೂ ಆಸ್ಪತ್ರೆಯ ರೋಗಿಗಳಿಗೆ ನೆರವಾಗಿದೆ. ನಿತ್ಯ ಮಧ್ಯಾಹ್ನದ ಊಟ ವಿತರಿಸುವ ವೇಳೆ ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ವಿಜಯ್ ಭಂಡಾರಿ, ವಲಯಾಧಿಕಾರಿ ಪ್ರಶಾಂತ್ ಹವಾಲ್ದಾರ್, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವ ಅಧ್ಯಕ್ಷ ರಾಘವೇಂದ್ರ ಚರಣ್ ನಾವಡ, ಕಾರ್ಯದರ್ಶಿ ಗುರುರಾಜ್ ಕೊತ್ವಾಲ್ ಸೇರಿದಂತೆ ಜೆಸಿಐನ ವಿವಿಧ ಸದಸ್ಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಳ್ವೆ ಜುಮ್ಮಾ ಮಸೀದಿ ಸಮೀಪದಲ್ಲಿ  ರಾತ್ರಿ 10.30ರ ಸುಮಾರಿಗೆ ಸ್ಕೂಟಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಇಬ್ಬರು ಯುವಕರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತರಾಗಿದ್ದಾರೆ. ಇನ್ನೊಬ್ಬ ಯುವಕ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ವೆ ನಿವಾಸಿ ನಾಗರಾಜ್(17) ನಾಲ್ಕೂರು ಗ್ರಾಮದ ಮೂದ್ದೂರು ನಿವಾಸಿ ಪ್ರಜ್ವಲ್(21) ಮೃತಪಟ್ಟವರು ತೀರ್ಥಹಳ್ಳಿ ಮೂಲದ ಹಿಲಿಯಾಣ ನಿವಾಸಿ ವಿನಯ(20)  ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಡಿವೈಎಸ್‌ಪಿ ಶ್ರೀಕಾಂತ ಕೆ., ಶಂಕರನಾರಾಯಣ ಠಾಣಾಧಿಕಾರಿ ಶ್ರೀಧರ್ ನಾಯ್ಕ್ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

Read More