ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಪ್ರಥಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದಿಂದ ಆಯೋಜಿಸಲ್ಪಟ್ಟ ‘ಓರಿಯೆಂಟೇಷನ್ ಕಾರ್ಯಕ್ರಮ’ ನಡೆಯಿತು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಗುಣಮಟ್ಟದ ಉನ್ನತ ಶಿಕ್ಷಣ ನಮ್ಮೆಲ್ಲರ ಆದ್ಯತೆಯಾಗಿ, ಶೈಕ್ಷಣಿಕ ಜಗತ್ತಿನ ಮುಂಚೂಣಿಯಲ್ಲಿ ಭಾರತ ನಿಲ್ಲುವಂತಾಗಬೇಕು. ಒಂದು ದೇಶದ ನಿಜವಾದ ಅಭಿವೃದ್ದಿಯನ್ನು ಆ ದೇಶದ ಉನ್ನತ ಶಿಕ್ಷಣದ ಗುಣಮಟ್ಟದ ಸೂಚ್ಯಂಕದ ಮೇಲೆ ನಿರ್ಧರಿಸಲಾಗುತ್ತದೆ. ಈ ಕಾಲಕ್ಕನುಗುಣವಾದ ಮೌಲ್ಯಯುತ ಶಿಕ್ಷಣವನ್ನು ಪಡೆದಾಗ ಮಾತ್ರ ನಮ್ಮ ಬೆಳವಣಿಗೆಯೊಂದಿಗೆ ದೇಶದ ಬೆಳವಣಿಗೆಗೆ ನಾವು ಕೊಡುಗೆ ನೀಡಲು ಸಾಧ್ಯ. ಉನ್ನತ ಶಿಕ್ಷಣ ಪಡೆದ ಪ್ರತಿಯೊಬ್ಬರೂ, ತನ್ನ ಜ್ಞಾನದ ನೆಲೆಯಲ್ಲಿ ಈ ದೇಶಕ್ಕೆ ಕೊಡುಗೆ ನೀಡಲು ಮುಂದಾಗಬೇಕು. ನಾವು ಈ ನೆಲದಿಂದ ಪಾಂಡಿತ್ಯವನ್ನು ಪಡೆಯುವವರು ಮಾತ್ರ ಆಗದೆ, ಜ್ಞಾನವನ್ನು ಇನ್ನೊಬ್ಬರಿಗೆ ನೀಡುವವರಾಗಬೇಕು. ಈ ಹಿನ್ನಲೆಯಲ್ಲಿ ನಮ್ಮ ಉನ್ನತ ಶಿಕ್ಷಣದ ತರಗತಿಯ ಬೋಧನೆಗಳು ರಚನಾತ್ಮಕತೆಯಿಂದ ಕೂಡಿರಬೇಕು ಎಂದರು. ವಿದ್ಯಾರ್ಥಿಗಳು ಜ್ಞಾನದೊಂದಿಗೆ ತಮ್ಮ ಬೆಳವಣಿಗೆಯನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿವೃತ್ತ ಉಪನ್ಯಾಸಕ ಡಾ. ಶ್ರೀಧರ ಉಪ್ಪೂರು(68) ಕೋಟೇಶ್ವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಸ್ರೂರು ಶಾರದಾ ಕಾಲೇಜಿನಲ್ಲಿ ಉಪನ್ಯಾಸಕ ವೃತ್ತಿ ಆರಂಭಿಸಿದ ಶ್ರೀಧರ ಉಪ್ಪೂರು ಯಕ್ಷಗಾನ ಪರಂಪರೆ ಹಾಗೂ ಪ್ರಯೋಗ ಎನ್ನುವ ಮಹಾ ಪ್ರಬಂಧವನ್ನಲ್ಲದೆ ಹಲವಾರು ಪ್ರಸಂಗಗಳನ್ನೂ ಬರೆದಿದಿದ್ದಾರೆ. ಭಾಗವತಿಕೆಯನ್ನೂ ಬಲ್ಲ ಡಾ.ಶ್ರೀಧರ ಉಪ್ಪೂರು ಬಸ್ರೂರು ಶಾರದಾ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆಸಲ್ಲಿಸಿ ಪ್ರಸ್ತುತ ನಿವೃತ್ತರಾಗಿದ್ದರು. ಪ್ರಾಚಾರ್ಯ ನಾರಣಪ್ಪ ಉಪ್ಪೂರ ಮಗರಾಗಿದ್ದು, ಪರಂಪರೆ ಮತ್ತು ಪ್ರಯೋಗ ಎಂಬ ಮಹಾ ಪ್ರಬಂಧ ಬರೆದು ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದರು. ಮೃತರು ಪತ್ನಿ ಇಬ್ಬರು ಪುತ್ರರ ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ಸಮೀಪದ ರಾಹುತನಕಟ್ಟೆ ಶಾಲೆಯ ಎದುರು ಇನ್ನೋವಾವೊಂದು ದನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದನಗಳು ಮೃತಪಟ್ಟಿದೆ. ಇನ್ನೋವಾ ವಾಹನವೂ ಸಂಪೂರ್ಣ ಜಖಂಗೊಂಡಿದ್ದು ಅದರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭಟ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದನಗಳು ಅಡ್ಡ ಬಂದಿದ್ದು, ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಇನ್ನೋವಾ ಕಾರು ದನಕ್ಕೆ ಡಿಕ್ಕಿಯಾಗಿ ಹಾಗೆಯೇ ಬಲಬದಿಯ ರಸ್ತೆಗೆ ಜಿಗಿದು, ಶಾಲೆಯ ಬಳಿಯ ತೋಡಿಗೆ ಬಿದ್ದಿತ್ತು. ವಾಹನದಲ್ಲಿದ್ದವರೆಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರ ತಕ್ಷಣ ಎಲ್ಲರನ್ನೂ ರಕ್ಷಿಸಿ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ತೆರಳಲು ನೆರವಾದರು. ಅಪಾಯಕಾರಿ ವಲಯವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ: ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹಲವಾರು ಅಪಘಾತಗಳು ಸಂಭವಿಸುತ್ತಲೇ ಇದ್ದು, ಗುತ್ತಿಗೆದಾರ ಕಂಪೆನಿ ಮಾತ್ರ ಜಾಣಮೌನ ಅನುಸರಿಸುತ್ತಿದೆ. ಕಳೆದ ಕೆಲವು ತಿಂಗಳಿನಲ್ಲಿ ರಾಹುತನಕಟ್ಟೆ ಭಾಗದಲ್ಲಿಯೇ 5 ದನಗಳು ಅಪಘಾತದಿಂದ ಮೃತಪಟ್ಟಿವೆ. ಯಡ್ತರೆ ಬೈಪಾಸ್ ಬಳಿ ನಿರಂತರವಾಗಿ ಅಫಘಾತ ಸಂಭವಿಸುತ್ತಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕಲಬುರಗಿ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ಭಾಗ್ಯ ದೊರೆತಾಗ ಜೀವನ ಯಶಸ್ಸುಗೊಳ್ಳುತ್ತದೆ. ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ದೊರೆತಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಕಲಬುರಗಿ ಮಿನಿವಿಧಾನ ಸೌಧ ಆವರಣದಲ್ಲಿ ಕಲಬುರಗಿ ದಕ್ಷಿಣ ಕನ್ನಡ ಸಂಘ ಆಯೋಜಿಸಿದ್ದ ಮಾಸಿಕ ಸಭೆ ಹಾಗೂ ಚಿತ್ರಕಲಾ ಸ್ಪರ್ಧೆ ಮತ್ತು ಮಾಸ್ಕ್ ವಿತರಣೆ ಕಾರ್ಯಕ್ರಮವನ್ನುಕ್ಕೆ ಚಾಲನೆ ನೀಡಿ ಮಾತನಾಡಿ ಕರಾವಳಿಯಿಂದ ಬಯಲುಸೀಮೆಗೆ ಬಂದು ಒಗ್ಗಟ್ಟಿನಿಂದ ಪ್ರಶಂಸೆಗೆ ಪಾತ್ರರಾಗುವ ರೀತಿ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಮಕ್ಕಳು ಚಿತ್ರ ರಚನೆಯ ಮೂಲಕ ಕರೋನ ಜಾಗೃತಿ ಸಂದೇಶ ಬಿತ್ತರಿಸುತ್ತಿದ್ದಾರೆ. ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾತ ಹಾಗೂ ಶಿಕ್ಷಣ ನೀಡಿ ಉದ್ಯೋಗ ಲಭಿಸಿ ಸುಂದರ ಜೀವನ ಕಾಣುವತಾಗಬೇಕು ಎಂದರು. ಬೈಂದೂರು ಕ್ಷೇತ್ರದಲ್ಲಿ ಕನ್ನಡ ಶಾಲೆ ಆರಂಭಕ್ಕೆ ಚಿಂತನೆಯಿದೆ. ಕರೋನದಿಂದ ಕ್ಷೇತ್ರದಲ್ಲೂ 42000 ವಲಸೆ ಕಾರ್ಮಿಕರಿಗೆ ನೆರವು ನೀಡಲಾಗಿದೆ. ಇದರಲ್ಲಿ ನಮ್ಮ ಆಡಳಿತ ಸಂಸ್ಥೆಯ ಶಾಲೆಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾರಿಯೊಂದು (ಇಕೋಮೇಟ್) ನಿಯಂತ್ರಿಣ ತಪ್ಪಿ ಅಭಿಮುಖ ರಸ್ತೆಗೆ ಪಲ್ಟಿಯಾಗಿ, ಎದುರಿನಿಂದ ಬರುತ್ತಿದ್ದ ಇಕೋ ವಾಹನಕ್ಕೆ ಡಿಕ್ಕಿ ಹೊಡೆದ್ದು, ಘಟನೆಯಲ್ಲಿ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಂಬೈನಿಂದ ಕೇರಳ ಕಡೆಗೆ ತೆರಳುತ್ತಿದ್ದ ಬೇಕರಿ ಉತ್ಪನ್ನಗಳನ್ನು ತುಂಬಿದ್ದ ಲಾರಿಯು ಬೈಂದೂರು ತಾಲೂಕಿನ ಒತ್ತಿನಣೆಯ ರಾಷ್ಟ್ರೀಯ ಹೆದ್ದಾರಿ 66ರ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎದುರಿನ ರಸ್ತೆಗೆ ಬಿದ್ದಿದ್ದು, ಇದೇ ಸಂದರ್ಭ ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಇಕೋ ವಾಹನಕ್ಕೂ ಡಿಕ್ಕಿ ಹೊಡಿದಿದೆ. ಲಾರಿ ಮೇಲ್ಬಾಗದ ರಸ್ತೆಯಿಂದ ಕೆಳಕ್ಕೆ ಬಿದ್ದ ಕಾರಣ ಚಾಲಕನಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಕ್ಲೀನರ್‌ಗೆ ಕೂಡ ಗಂಭೀರ ಗಾಯಗಳಾಗಿದ್ದು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇಕೋ ವಾಹನವೂ ಉರುಳಿ ಬಿದ್ದಿರುತ್ತದೆ. ಪರಿಣಾಮ ಇಕೋ ವಾಹನ ಚಾಲಕನಿಗೆ ಕುತ್ತಿಗೆಗೆ ಒಳಜಖಂ ಆಗಿದ್ದು, ಕಾರಿನಲ್ಲಿದ್ದ ಹೆಂಗಸಿಗೆ ತಲೆಯ ಹಿಂಭಾಗಕ್ಕೆ ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುತ್ತದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಮೀನುಗಾರಿಕಾ ಬೋಟ್‌ಗಳಿಗೆ ಈಗ ಬಳಸಲಾಗುತ್ತಿರುವ ಚೈನಾ ಮೇಡ್ ಯಂತ್ರಗಳ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆಯ ಆತ್ಮನಿರ್ಭರ ಭಾರತ ಹಾಗೂ ಮೇಕ್ ಇನ್ ಇಂಡಿಯ ಪರಿಕಲ್ಪನೆಯಂತೆ ದೇಶೀ ನಿರ್ಮಿತ ಯಂತ್ರಗಳನ್ನು ಬಳಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ನಾವುಂದಕ್ಕೆ ಭೇಟಿನೀಡಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ 333 ಕಿಲೋಮೀಟರು ಉದ್ದದ ಕರಾವಳಿಯಲ್ಲಿ ಒಟ್ಟು 22,500 ಯಾಂತ್ರಿಕ ಮೀನುಗಾರಿಕಾ ಬೋಟ್‌ಗಳು ಕಾರ್ಯಾಚರಿಸುತ್ತಿವೆ. ಅವುಗಳಲ್ಲಿ 7,500 ಸಾಂಪ್ರದಾಯಿಕ ನಾಡದೋಣಿಗಳು 9 ಅಶ್ವಶಕ್ತಿಯ ಯಂತ್ರ ಅಳವಡಿಸಿಕೊಂಡಿವೆ. ದೊಡ್ಡ ಬೋಟ್‌ಗಳು 350 ಅಶ್ವಶಕ್ತಿಯ ವರೆಗಿನ ಯಂತ್ರಗಳನ್ನು ಹೊಂದಿವೆ. ಇವುಗಳಲ್ಲಿ ಶೇ 90ರಷ್ಟು ಚೀನಾನಿರ್ಮಿತವಾದುವುಗಳು. ಉಳಿದವು ಜಪಾನ್ ಮತ್ತಿತರ ದೇಶಗಳವು. ಮೀನುಗಾರರು ದೇಶೀಯ ಉತ್ಪನ್ನಗಳನ್ನು ಬಳಸಲು ಒಲವು ಹೊಂದಿದ್ದಾರೆ. ಬದಲಾವಣೆಗೆ ಚಾಲನೆ ನೀಡುವ ಗುರಿಯೊಂದಿಗೆ ಈಚೆಗೆ ವಿಕಾಸ ಸೌಧದಲ್ಲಿ ಮಹೇಂದ್ರ, ಕಿರ್ಲೋಸ್ಕರ ಮತ್ತಿತರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಚುನಾವಣೆಯಲ್ಲಿ ಪಕ್ಷದತ್ತ ಬದ್ಧತೆಯಿಂದ ದುಡಿದ ಕಾರ್ಯಕರ್ತರನ್ನು ಸಂಘಟನೆಯಲ್ಲಿ ತೊಡಗಿಸಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುವುದು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ನಾವುಂದದ ಸ್ಕಂದ ಸಭಾಭವನದಲ್ಲಿ ಭಾನುವಾರ ನಡೆದ ಬೈಂದೂರು ವ್ಯಾಪ್ತಿಯ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಸ್ಪರ್ಧಾಳುಗಳ ಅಭಿನಂದನಾ ಸಭೆಯಲ್ಲಿ ಮಾತನಾಡಿ ರಾಜಕೀಯ ಹೋರಾಟದಲ್ಲಿ ಸೋಲು, ಗೆಲುವು ಸಹಜ. ಅವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಚುನಾವಣಾ ಪ್ರಚಾರದ ಆರಂಭದ ಹಂತದಲ್ಲಿ ಪಕ್ಷದೆಡೆಗೆ ಕಂಡುಬಂದ ಜನಬೆಂಬಲ, ಬಿಜೆಪಿಯ ಪೊಳ್ಳು ಆಶ್ವಾಸನೆಗಳ, ಹಣ, ಹೆಂಡ ಹಂಚಿಕೆಯ ಎದುರು ಕುಸಿಯತೊಡಗಿತು. ಶಾಸಕರು ಮತ್ತು ಇತರ ನಾಯಕರು ಕೂಡ ಪ್ರತ್ಯಕ್ಷ ಪ್ರಚಾರ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಇದರ ನಡುವೆ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಾಧನೆ ದೊಡ್ಡದು ಎಂದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕಕುಮಾರ ಕೊಡವೂರು ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ ಈಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ರಂಗೇನಹಳ್ಳಿ ಗ್ರಾಮದ ಹಲಸೂರು ಕೆರೆ ಸಮೀಪ ಶನಿವಾರ ಮಧ್ಯಾಹ್ನ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದಂಪತಿ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಕಾರು ಚಾಲಾಯಿಸುತ್ತಿದ್ದ ಕುಂದಾಪುರ ಕೋಡಿಯ ವೆಂಕಟರಮಣ ಶೇರುಗಾರ್ ಅವರ ಪುತ್ರ ನಾಗೇಂದ್ರ ಶೇರುಗಾರ್ (28), ಕೋಟೇಶ್ವರ ನೇರಂಬಳ್ಳಿಯ ರಾಮಚಂದ್ರ ಶೇರುಗಾರ್ ಅವರ ಪುತ್ರ ಅನಿಲ್ ಕುಮಾರ್ (30), ಪತ್ನಿ ಸುಜಿತಾ (29) ಮೃತ ದುರ್ದೈವಿಗಳು. ಅನಿಲ್ ಕುಮಾರ್ ದಂಪತಿಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ದಲ್ಲಿರುವ ಅನಿಲ್ ಕುಮಾರ್ ಕುಟುಂಬವು ಇತ್ತೀಚೆಗೆ ಕುಂದಾಪುರಕ್ಕೆ ಬಂದಿದ್ದರು. ಬೆಂಗಳೂರಿಗೆ ರೈಲಿನ ಮೂಲಕ ವಾಪಸಾಗಲು ಅವರು ಮೊದಲು ನಿರ್ಧರಿಸಿದ್ದರು. ಕೊನೆಯ ಕ್ಷಣದಲ್ಲಿ ನಿರ್ಧಾರವನ್ನು ಬದಲಾಯಿಸಿ ಸಂಬಂಧಿಯಾಗಿದ್ದ ನಾಗೇಂದ್ರನ ಕಾರ್ನಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕುಂದಾಪುರದಿಂದ ಹೊರಟಿದ್ದರು. ರಂಗೇನಹಳ್ಳಿ ಬಳಿ ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಿಂದ ತೀರ್ಥಹಳ್ಳಿಗೆ ಹೊರಟಿದ್ದ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2020-21ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಮತ್ತು 14ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭನದಲ್ಲಿ ನಡೆಯಿತು. ಕುಂದಾಪುರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪಂಚಾಯತ್‌ನ ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ಸುಕುಮಾರ ಬಿ. ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಪಂ ಸದಸ್ಯರು, ಯೋಜನೆಯ ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು. ಪಿಡಿಒ ಚಂದ್ರಶೇಖರ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ ಶೇರುಗಾರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಕುಂದಾಪುರ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಕೋಟೇಶ್ವರ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮವು ಶುಕ್ರವಾರ ಕೋಟೇಶ್ವರದಲ್ಲಿ ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಜಾಥಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಿಂದ ಒಂದು ಗುಲಾಬಿ ಹೂ ನೀಡುವುದರ ಮೂಲಕ ಪ್ರತಿ ಅಂಗಡಿಯ ಮಾಲೀಕರಿಗೆ ತಂಬಾಕು ತ್ಯಜಿಸಿ, ಜೀವನವನ್ನು ಆಯ್ದಕೊಳ್ಳಿ ಮತ್ತು ತಂಬಾಕು ಮುಕ್ತ ನಾಡನ್ನು ನಿರ್ಮಿಸೋಣ ಎಂಬ ಘೋಷಣೆಯೊಂದಿಗೆ ಅರಿವು ಮೂಡಿಸಲಾಯಿತು. ಸಭಾ ಕಾರ್ಯಕ್ರಮವನ್ನು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಪ್ರಾಸ್ತವಿಕವಾಗಿ ಮಾತನಾಡಿ, ತಂಬಾಕು ಸೇವನೆಯು ಜೀವನಕ್ಕೆ ಮಾರಕವಾಗಿದ್ದು, ಅದರಿಂದ ವಿವಿಧ ರೀತಿಯ ಕಾಯಿಲೆಗಳು ಬರುವ ಸಾಧ್ಯತೆ ಇದ್ದು, ಪ್ರಸ್ತುತ ಕೋವಿಡ್ -19 ಕೂಡ ಅತೀ ವೇಗವಾಗಿ ಹರಡಲು ಕಾರಣವಾಗಿದೆ ಎಂದರು. ತಾಲೂಕು…
