ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಕೀಲರ ರಕ್ಷಣಾ ಕಾಯಿದೆಯನ್ನು ಬೆಳಗಾವಿಯ ಅಧಿವೇಶನದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿ ಬೈಂದೂರು ವಕೀಲರ ಸಂಘವು ಬೈಂದೂರು ನ್ಯಾಯಾಲಯದಿಂದ ತಹಶೀಲ್ದಾರ ಅವರ ಕಚೇರಿಯ ವರೆಗೆ ಜಾಥ ನಡೆಸಿ, ಬೈಂದೂರು ತಹಶೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೈಂದೂರು ವಕೀಲ ಸಂಘದ ಅಧ್ಯಕ್ಷರಾದ ಮೋಬಿ ಪಿ.ಸಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಮಾಜಿ ಅಧ್ಯಕ್ಷರಾದ ದೇವಿದಾಸ್ ಮೇಸ್ತ, ಲಿಂಗಪ್ಪ ಆರ್ ಮೇಸ್ತ, ಮೊಹಮ್ಮದ್ ಇಲಿಯಾಸ್ ಹಾಗೂ ಬೈಂದೂರು ವಕೀಲ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಮನವಿ ಸ್ವೀಕರಿಸಿದ ಶ್ರೀಕಾಂತ್ ಹೆಗ್ಡೆ ಮಾತನಾಡಿ ತಕ್ಷಣವೇ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.17: ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆಗಿಂದಾಗ್ಗೆ ಅರಿವು ಮೂಡಿಸಿದ್ದಲ್ಲಿ ಮಾತ್ರ ಜನರು ರೋಗಗಳಿಂದ ದೂರ ಉಳಿಸಲು ಸಾಧ್ಯ. ಈ ಬಗ್ಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ರೋಗ ರುಜಿನಗಳು ಹವಾಮಾನಕ್ಕೆ ಅನುಗುಣವಾಗಿ ಹರಡುತ್ತವೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ವರ್ಷದ ಮೊದಲನೇ ಮಾಸದಿಂದ ಕೊನೆಯ ಮಾಸದವರೆಗೆ ಮುನ್ನೆಚ್ಚರಿಕೆ ಕ್ರಮಗಳು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದ್ದಲ್ಲಿ ಸಮಾಜವು ಆರೋಗ್ಯಯುಕ್ತವಾಗಿ ಇರಲು ಸಾಧ್ಯ ಎಂದರು. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಕಡಿತಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ಗಳು, ಆರೋಗ್ಯ ಇಲಾಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಹಾಗೂ ಹಿರಿಯ ಸಾಹಿತಿ ಪ್ರೊ. ಎ.ವಿ. ನಾವಡ ಅವರಿಗೆ ಈ ಬಾರಿಯ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ ನೀಡಲಾಗುವುದು ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ದತ್ತಿನಿಧಿ ಪ್ರತಿಷ್ಠಾನದ ರಾಮ್ ಕಿಶನ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.24 ರಂದು ಸಂಜೆ 4ಕ್ಕೆ ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ, ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ನಡೆಯುವ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ 88 ನೇ ಹುಟ್ಟುಹಬ್ಬ ಆಚರಣೆ, ದತ್ತಿನಿಧಿ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಅಶಕ್ತರಿಗೆ ದತ್ತಿನಿಧಿ ವತಿಯಿಂದ ಸಹಾಯ ಧನ ವಿತರಣೆ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ನಿಕೇತನ ಕೊಡವೂರು ಅವರಿಂದ ನೃತ್ಯ ಸಿಂಚನ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ್ ರೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಡಿ.16: ಇಲ್ಲಿನ ಗಾಂಧಿ ಮೈದಾನವು ಮಿಲಿಟರಿ ಗ್ರೌಂಡ್ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಪುರಭವನ ನಿರ್ಮಾಣದಿಂದ ಪ್ರಸ್ತುತ ಮೈದಾನದಲ್ಲಿ ನಡೆಯುತ್ತಿರುವ ಯಾವ ಚಟುವಟಿಕೆಗೂ ತೊಂದರೆಯಾಗುವುದೂ ಇಲ್ಲ. ಬಳಕೆಯಾಗದ ಮೈದಾನದ ಒಂದು ಭಾಗದಲ್ಲಷ್ಟೇ ಸಾರ್ವಜನಿಕರಿಗೆ ಉಪಯೋಗವಾಗಲಿರುವ ಪುರಭವನ ನಿರ್ಮಾಣವಾಗಲಿದೆ. ಸ್ಥಳಕ್ಕೆ ಬಂದು ವಾಸ್ತವಾಂಶ ಅರಿಯದೇ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಜಿಪಂ ಮಾಜಿ ಸದಸ್ಯ ಟಿ. ಬಾಬು ಶೆಟ್ಟಿ ಹೇಳಿದರು. ಅವರು ಬೈಂದೂರಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಅಭಿವೃದ್ಧಿ ಹೊಂದುತ್ತಿರುವ ಬೈಂದೂರು ತಾಲೂಕಿಗೆ ಸಂಸದರು, ಶಾಸಕರ ಪ್ರಯತ್ನದಿಂದ ಹೆಚ್ಚಿನ ಅನುದಾನ ದೊರೆತಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ ಎಂದರು. 3.45 ಎಕ್ರೆ ಜಾಗ ಕ್ರೀಡಾ ಇಲಾಖೆ & 1.50 ಎಕ್ರೆ ನಗರಾಭಿವೃದ್ಧಿ ಇಲಾಖೆಗೆ ಈಗಾಗಲೇ ಹಸ್ತಾಂತರವಾಗಿದೆ. 4.95ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ಪುರಭವನ ನಿರ್ಮಾಣ ಕಾರ್ಯ ಸದ್ಯದಲ್ಲಿಯೇ ಆರಂಭವಾಗಲಿದೆ. ಕ್ರೀಡಾ ಇಲಾಖೆಯ ಮೂಲಕ ಮೈದಾನ ಅಭಿವೃದ್ಧಿಗಾಗಿ ಪ್ರತ್ಯೇಕ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಅನುದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಬಿವಿಪಿ ಕುಂದಾಪುರ ಆಶ್ರಯದಲ್ಲಿ ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪದವಿ ಕಾಲೇಜು, ಭಂಡಾರ್ಕಾರ್ಸ್ ಕಾಲೇಜು ಹಾಗೂ ಕೋಟೇಶ್ವರ ಕಾಗೇರಿ ವರದರಾಜ ಶೆಟ್ಟಿ ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮಿನಿ ವಿಧಾನ ಸೌಧ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಆಕ್ರೋಶ ಹೊರಹಾಕಿದ ವಿದ್ಯಾರ್ಥಿಗಳು ಫಲಿತಾಂಶ ಕ್ಲಪ್ತ ಸಮಯದಲ್ಲಿ ಪ್ರಕಟವಾಗುತ್ತಿಲ್ಲ. ಪರೀಕ್ಷೆ ಮುಗಿದು ವರ್ಷ ಹತ್ತಿರವಾದರೂ ಮೌಲ್ಯಮಾಪನ ನೆನೆಗುದಿಗೆ. ಅಂಕಪಟ್ಟಿ ಇಲ್ಲದೆ ವಿದ್ಯಾರ್ಥಿಗಳು ಸ್ನಾತಕೋತ್ತರ ಶಿಕ್ಷಣ, ಉದ್ಯೋಗ ದಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ನ್ಯಾಯ ಕೊಡಲಾಗದಿದ್ದರೆ ಮಂಗಳೂರು ವಿವಿ ಕುಲಪತಿ ಕುರ್ಚಿ ಖಾಲಿಮಾಡಲಿ ಎಂದು ಎಚ್ಚರಿಕೆ ನೀಡಿದರು. ಕೋಟೇಶ್ವರ ಕಾಗೇರಿ ವರದರಾಜ ಶೆಟ್ಟಿ ಪದವಿ ಕಾಲೇಜು ವಿದ್ಯಾರ್ಥಿ ಪ್ರಮುಖ್ ರಾಹುಲ್ ಶೆಟ್ಟಿ ಮಾತನಾಡಿ, ಅಂಕಪಟ್ಟಿ ಬರದ ಕಾರಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಆಗುತ್ತಿಲ್ಲ. ಅಂಕಪಟ್ಟಿಕೊಳ್ಳಲು ಬೈಂದೂರಿನಿಂದ ಮಂಗಳೂರು ವಿಶ್ವ ವಿದ್ಯಾಲಯಕ್ಕೆ ಹೋಗುವುದಕ್ಕೆ ಸಾವಿರಾರು ರೂ. ಖರ್ಚು ಮಾಡಿದರು ಸಹ ಅದೇ ದಿನದಲ್ಲಿ ಅಂಕಪಟ್ಟಿ ಸಿಗುವುದಿಲ್ಲ. ಎರಡು ಮೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಡಿ.21ರಿಂದ 27ರವರೆಗೆ ಆಳ್ವಾಸ್ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ನಿಮಿತ್ತ ಆಯೋಜಿಸಿರುವ ಕಲಾ ಮೇಳದ ಒಂದು ಭಾಗವಾದ ಶಿಲ್ಪಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮzಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿ?ನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಅಂತರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಜಾಂಬೂರಿ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ, ಜಾಂಬೂರಿಯಲ್ಲಿ ದೇಶದ ಅನೇಕ ಸಂಸ್ಕೃತಿಗಳನ್ನು ಜನರಿಗೆ ಪರಿಚಯಿಸುವ ಸಲುವಾಗಿ ಕೃಷಿಮೇಳ, ವಿಜ್ಞಾನ ಮೇಳ, ಆಹಾರ ಮೇಳ ಮುಂತಾದ ಅನೇಕ ಮೇಳಗಳನ್ನು ಹಮ್ಮಿಕೊಳ್ಳಲಾಗಿದೆ. ಕಲೆಯ ಕುರಿತಾದ ಪ್ರಜ್ಞೆಯನ್ನು ಜನರಿಗೆ ಬಿತ್ತರಿಸುವ ಸಲುವಾಗಿ ಕಲಾಮೇಳವನ್ನು ಆಯೋಜಿಸಲಾಗಿದೆ. ಮಕ್ಕಳು ಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದಾಗ ಅವರ ಮನೋ ವಿಕಸನದ ಜತೆಗೆ ಚಿಂತನೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ಕಾಣಬಹುದು. ಪ್ರತಿನಿತ್ಯ ಪಾಠ ಪ್ರವಚನಗಳಲ್ಲಿ ಮಗ್ನರಾಗಿರುವ ವಿದ್ಯಾರ್ಥಿಗಳಿಗೆ ಕಲಾವಿದರ ಕೈ ಚಳಕದಿಂದ ಮೂಡಿದ ವಿವಿಧ ಕಲಾಕೃತಿಗಳು ಮನಸ್ಸಿಗೆ ಮುದ ನೀಡುವುದರ ಜೊತೆಗೆ ಮಾಹಿತಿಯನ್ನೂ ನೀಡುತ್ತದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಧನೆ ಅಥವಾ ಸೇವೆಯ ಗುಣವಿದ್ದಾಗ ಮಾತ್ರ ಒಂದು ಸಂಸ್ಥೆ ದೊಡ್ಡ ಶಕ್ತಿಯಾಗಿ ಸಮಾಜದಲ್ಲಿ ಹೊರ ಹೊಮ್ಮುತ್ತದೆ. ದಾನಿಗಳ ಸಹಕಾರದಿಂದ ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಮೂಲಕ ನೊಂದವರ ಬದುಕಿಗೊಂದು ಬೆಳಕು ನೀಡುವ ಹೆಲ್ಪಿಂಗ್ ಹ್ಯಾಂಡ್ಸ್ ತಂಡದ ಕೆಲಸ ಶ್ಲಾಘನೀಯ ಎಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ್ ಎಂ. ಶೆಟ್ಟಿ ಹೇಳಿದರು. ಕೋಟೇಶ್ವರ ಕೊಡಿ ಹಬ್ಬ ಜಾತ್ರೆಯಲ್ಲಿ 6 ಮಂದಿ ಪುಟ್ಟ ಮಕ್ಕಳ ಚಿಕಿತ್ಸೆಗಾಗಿ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ ಪ್ರದೀಪ್ ಮೊಗವೀರ ಅವರು ತಂಡದ ಸದಸ್ಯರೊಂದಿಗೆ ವಿಭಿನ್ನ ವೇಷ ತೊಟ್ಟು ಸಂಗ್ರಹಿಸಿದ ಹಣವನ್ನು ದೇವಳದ ಸಭಾಂಗಣದಲ್ಲಿ ಜರುಗಿದ ಹಸ್ತಾಂತರ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಕುಟುಂಬಿಕರಿಗೆ ಹಣವನ್ನು ವಿತರಿಸಿ ಅವರು ಮಾತನಾಡಿದರು. ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ ಪ್ರದೀಪ್ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯರಾದ ಸುರೇಶ್ ಬೆಟ್ಟಿನ್, ಮಂಜುನಾಥ್ ಆಚಾರ್ ಅರಸರಬೆಟ್ಟು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದಿಂದ ವ್ಯಕ್ತಿತ್ವದಲ್ಲಿ ಪಡೆದ ಬದಲಾವಣೆಯನ್ನು ನಿತ್ಯ ಜೀವನದಲ್ಲಿ ಹೇಗೆ ಬಳಸಿಕೊಳ್ಳುತ್ತೀರಿ ಅನ್ನುವುದು ಮುಖ್ಯ. ಈ ನಿಟ್ಟಿನಲ್ಲಿ ಉನ್ನತ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳು ಭಾರತದಲ್ಲಿಯೇ ಉದ್ಯೋಗ ಪಡೆದು, ದೇಶದ ರಾಷ್ಟ್ರೀಯ ಆದಾಯವನ್ನು ಹೆಚ್ಚಿಸುವಂತಾಗಬೇಕು’ ಎಂದು ಉಡುಪಿಯ ಎಮ್.ಜಿ.ಎಮ್ ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾರಂತ ರವರು ತಿಳಿಸಿದರು. ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಇವರು ಪದವಿ ಪೂರ್ವ ವಿಭಾಗದ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಯಾವ ವಿಭಾಗವನ್ನು ಆಯ್ಕೆ ಮಾಡಿದರೂ ಶುದ್ಧ ಮನದ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಜೀವನದಲ್ಲಿ ಸಂತೃಪ್ತಿ ಪಡೆಯಲು ಸಾಧ್ಯ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಸಂಚಾಲಕರೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಶ್ರೀ ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶ್ಲಾಘಿಸಿದರು. ಕಾಲೇಜಿನ ಆಡಳಿತ ಮಂಡಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಳಮಟ್ಟದ ಸಂಘಟನೆ ಹೊಂದಿರುವ ಬಿಜೆಪಿ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ಮಾಡಲಿದ್ದಾರೆ. ತನಗೇ ಟಿಕೆಟ್ ಆಗಿದೆ ಎಂದು ತಿರುಗಾಡುವುದು, ಅನಧಿಕೃತ ಸಭೆ, ಹೇಳಿಕೆಗಳನ್ನು ನೀಡಿ ಗೊಂದಲ ನಿರ್ಮಾಣ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸಂಜೆ ಹೆಮ್ಮಾಡಿಯ ಖಾಸಗಿ ಹೋಟೇಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಕ್ಷದ ಸಂಘಟನೆಗಾಗಿ ಕೆಲಸ ಮಾಡುವ ಎಲ್ಲರನ್ನೂ ಪಕ್ಷ ಸ್ವಾಗತಿಸುತ್ತದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ. ಹಾಗೆಯೇ 3 – 4 ಬಾರಿ ಶಾಸಕರಾದವರು, ಹೊಸಬರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್.ಎನ್.ಎಸ್. ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ‘ಇಂಡಸ್ಟ್ರಿಯಲ್ ವಿಸಿಟ್’ ಅಂಗವಾಗಿ ಕೋಟಶ್ವರದ ಎಲ್.ಜಿ. ಇಂಡಸ್ಟ್ರೀಸ್ ಸನ್ ರೈಸ್ ಪಿ.ವಿ.ಸಿ. ಪೈಪ್ಸ್ ಕೈಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಲ್.ಜಿ.ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕರಾದ ಹರ್ಷಾ ಆರ್. ಕಾಮತ್, ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಸುಷ್ಮಾ ಶೆಣೈ, ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.
