Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.29: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು, ಕಾಪು, ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ನಡೆಸುವ ಸಲುವಾಗಿ, ಜನವರಿ 01, 2022 ರ ಅರ್ಹತಾ ದಿನಾಂಕಕ್ಕೆ 18 ವರ್ಷ ತುಂಬಿದ ಕೃಷಿಕರು, ಕೃಷಿಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರಾಗಿದ್ದು, ಕರ್ನಾಟಕ ವ್ಯವಸಾಯೋತ್ನನ್ನ ಮಾರುಕಟ್ಟೆ ಸಮಿತಿಗಳಿಗೆ ಸಂಕ್ಷಿಪ್ತವಾಗಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ಧಪಡಿಸಲು ಆಯಾಯ ತಾಲೂಕು ತಹಶೀಲ್ದಾರರನ್ನು ಅಧಿಕೃತ ಅಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕೃಷಿಕ ಮತದಾರರ ಪಟ್ಟಿಗಳನ್ನು ಪಹಣಿ ಪತ್ರಿಕೆಯ ಆಧಾರದಲ್ಲಿ ತಯಾರಿಸಲು ಜನವರಿ 17 ಕೊನೆಯ ದಿನವಾಗಿದ್ದು, ಕೃಷಿಕ ಮತದಾರರ ಪಟ್ಟಿಯ ಕರಡು ಪ್ರಕಟಣೆಯನ್ನು ಜ.18 ರಂದು ಪ್ರಕಟಿಸಿ, ಜ.18 ರಿಂದ ಫೆ.2 ರ ವರೆಗೆ ಮತದಾರರ ಕರಡು ಪಟ್ಟಿಗಳಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿ, ಫೆ.3 ರಿಂದ 6ರ ವರೆಗೆ ಮತದಾರರ ಕರಡು ಪಟ್ಟಿಗೆ ಸಂಬAಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಪತ್ರಕರ್ತ, ಛಾಯಾಗ್ರಾಹಕ, ಸಾಹಿತಿ, ಸಂಘಟಕ, ಪ್ರಕಾಶಕ, ಪ್ರತಿಭಾ ಪೋಷಕ ಡಾ. ಶೇಖರ ಅಜೆಕಾರು ಅವರಿಗೆ ಮಾಧ್ಯಮ ಕ್ಷೇತ್ರದ ಸುದೀರ್ಘ ಸೇವೆಗಾಗಿ ಕರ್ನಾಟಕ ಪ್ರೆಸ್ ಕೌನ್ಸಿಲ್ನ 2021 ರ ಸಾಲಿನ ಪ್ರತಿಷ್ಠಿತ ರಾಜ್ಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರದಾನಿಸಲಾಯಿತು. 20 ಮಂದಿ ಹಿರಿಯ ಸಾಧಕರಿಗೆ ಈ ಗೌರವ ನೀಡಲಾಗುತ್ತಿದ್ದು ಕರಾವಳಿಯಿಂದ ಆಯ್ಕೆಯಾಗಿರುವ ಏಕೈಕ ಪತ್ರಕರ್ತರಾಗಿದ್ದಾರೆ. ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಡಾ. ಟಿ.ಎಸ್. ನಾಗಾಭರಣ ಸಹಿತ ಗಣ್ಯರು ಈ ಗೌರವ ಪ್ರಧಾನಿಸುವರು. ವಿದ್ಯಾರ್ಥಿ ಜೀವನದಲ್ಲಿ ಯುವಸ್ಪಂದನ ಪತ್ರಿಕೆಯ ಮೂಲಕ ಗಮನ ಸೆಳೆದಿದ್ದ ಅಜೆಕಾರು ಅವರು ಕುಂದಪ್ರಭ ವಾರಪತ್ರಿಕೆಯ ಮೂಲಕ ವೃತ್ತಿ ಪತ್ರಿಕೋದ್ಯಮಕ್ಕೆ ಕಾಲಿರಿಸಿದರು. ಮುಂಬಯಿಯ ಕರ್ನಾಟಕ ಮಲ್ಲದಲ್ಲಿ ಸುಮಾರು ದಶಕಗಳ ಕಾಲ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ ಅವರು ಸಂಕಷ್ಟ ಕಾಲದಲ್ಲಿ ಸಂಪಾದಕ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಜನವಾಹಿನಿಯ ಪ್ರಧಾನ ವರದಿಗಾರರಾಗಿದ್ದರು. ಬಳಿಕ ಕನ್ನಡಪ್ರಭ, ಉಷಾಕಿರಣ ಪತ್ರಿಕೆಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ (ITAT) ಸದಸ್ಯರಾಗಿ ಉಪ್ಪುಂದದ ಯೋಗೀಶ್ ಕುಮಾರ್ ಯು.ಎಸ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಳೆದ 21 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಅವರನ್ನು ಕೇಂದ್ರ ಸರಕಾರದ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿ ಆದೇಶಿಸಿರುವ ಬಗ್ಗೆ ಕೇಂದ್ರ ಕಾನೂನು ವ್ಯವಹಾರಗಳ ಇಲಾಖೆ ಅಧೀನ ಕಾರ್ಯದರ್ಶಿ ಸುನೀಲ್ ಸಚ್ಚದೇವ್ ಅವರು ಪತ್ರದಲ್ಲಿ ತಿಳಿಸಿದ್ದು, ಡಿ.31ರಂದು ನಡೆಯುವ ಪರಿಚಯ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ. ಯೋಗೀಶ್ ಕುಮಾರ್ ಅವರು ನಿವೃತ್ತ ಮುಖ್ಯೋಪಾಧ್ಯಾಯರಾದ ಉಪ್ಪುಂದ ಸೋಮನಮನೆ ದಿ. ಸೋಮಯ್ಯ ಅವರ ಪುತ್ರರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಕೊರಗ ಸಮುದಾಯದವರನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ ಅವರನ್ನು ಅಮಾನತು ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್ಐ ಅವರನ್ನು ಪಶ್ಚಿಮ ವಲಯ ಐಜಿಪಿಯವರು ಅಮಾನತು ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿನ ಐದು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ, ಲಯನ್ಸ್ ಕ್ಲಬ್ ಕುಂದಾಪುರ, ರೋಟರ‍್ಯಾಕ್ಟ್ ಕ್ಲಬ್ ಗಂಗೊಳ್ಳಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ನೇತೃತ್ವದಲ್ಲಿ ಬೃಹತ್ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಕೃಷ್ಣ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪಾರ್ಥ, ಕುಂದಾಪುರ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ರಾಜೀವ ಕೋಟ್ಯಾನ್, ಡಾ.ರವೀಂದ್ರ, ಗಂಗೊಳ್ಳಿ ರೋಟರಿ ಕ್ಲಬ್ ಸದಸ್ಯರು, ಕೆಎಂಸಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ರಾಜೇಶ ಎಂ.ಜಿ. ಸ್ವಾಗತಿಸಿದರು. ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಟರಿ ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ರೋಟರ‍್ಯಾಕ್ಟ್ ಅಧ್ಯಕ್ಷೆ ಅಮೀಕ್ಷಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.28: ಬಹುತೇಕ ಕುಂದಾಪುರ ಭಾಗದ ತಾರಾಗಣದಲ್ಲಿರುವ ‘ಆ 90 ದಿನಗಳು’ ಸಿನೆಮಾದ ಪೋಸ್ಟರ್, ಟೈಲರ್ ಹಾಗೂ ಆಡಿಯೋ ಬಿಡುಗಡೆ ಜ. 2ರಂದು ಗುಲ್ವಾಡಿಯಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರೊನಾಲ್ಗೊ ಲೋಬೊ ಹೇಳಿದರು. ಅವರು ಕುಂದಾಪುರದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಚಿತ್ರಕ್ಕಾಗಿ ಪ್ರತ್ಯೇಕ ಸೆಟ್ ಹಾಕದೆ, ಕುಂದಾಪುರ ಭಾಗದ ಸಹಜ, ಸುಂದರ ನೈಸರ್ಗಿಕ ಪರಿಸರದಲ್ಲಿಯೇ ಚಿತ್ರೀಕರಣಗೊಂಡಿದ್ದು ಸುಂದರವಾಗಿ ಮೂಡಿ ಬಂದಿದೆ. ಕುಂದಾಪುರದವರೇ ಆದ ರಿತಿಕ್ ಮುರ್ಡೇಶ್ವರ ಅವರು ನಾಯಕ ನಟನಾಗಿ, ಬೆಂಗಳೂರಿನ ಚಂದ್ರಿಕಾ ನಾಯಕಿ ನಟಿಯಾಗಿದ್ದು ಜೊತೆಗೆ ಕೃತಿಕಾ, ಖಳನಟನಾಗಿ ಪ್ರದೀಪ್ ಪೂಜಾರಿ ಸೇರಿದಂತೆ ಯುವ ಪ್ರತಿಭಾವಂತ ತಾರೆಯರು ಮನೋಜ್ಞವಾಗಿ ಅಭಿನಯಿಸಿದ್ದಾರೆ. ಹಿರಿಯ ನಟಿ ಭವ್ಯಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ, ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣ, ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಅವರ ಹಾಡುಗಳು, ರಾಧಾಕೃಷ್ಣ ಬಸ್ರೂರು ಅವರ ಸಂಗೀತ ಚಿತ್ರದಲ್ಲಿದೆ ಎಂದರು. ಸಹ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ ಮಾತನಾಡಿ, ಅದ್ಭುತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.27: ಓಮಿಕ್ರಾನ್ ನಿಯಂತ್ರಣ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್ಕರ್ಫ್ಯೂ ಮತ್ತು ಹೊಸ ವರ್ಷಾಚರಣೆ ಕುರಿತ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಾದ್ಯಂತ ಡಿ.28 ರಿಂದ ಜನವರಿ 7ರ ವರಗೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ಕರ್ಫ್ಯೂ ಜಾರಿಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಅಗತ್ಯ ಚಟುವಟಿಕೆ ಹೊರತುಪಡಿಸಿ ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವೈದ್ಯಕೀಯ ಮತ್ತು ತುರ್ತು ಸೇವೆಗಳು ಯಥಾ ಪ್ರಕಾರ ಮುಂದುವರೆಯಲಿದ್ದು, ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಕೈಗಾರಿಕೆ/ ಕಂಪೆನಿಗಳಿಗೆ ಅನುಮತಿ ನೀಡಿದ್ದು, ಅಲ್ಲಿನ ನೌಕರರು ಸೂಕ್ತ ಗುರುತಿನ ಚೀಟಿ ಸಲ್ಲಿಸುವ ಮೂಲಕ ಸಂಚರಿಸಬಹುದು. ಬಸ್, ರೈಲು ಮತ್ತು ವಿಮಾನ ಪ್ರಯಾಣ ಅನುಮತಿಸಲಾಗಿದ್ದು, ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು ಸಲ್ಲಿಸುವುದು ಕಡ್ಡಾಯವಾಗಿದೆ. ಎಲ್ಲಾ ತರಹದ ಸರಕು ಸಾಗಾಟ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ಇ-ಕಾಮರ್ಸ್ ಮತ್ತು ಹೋಮ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಕರ್ನಾಟಕ ಮುಸ್ಲಿಮ್ ಜಮಾತ್ ಬೈಂದೂರು ಘಟಕದ ಜಂಟಿ ಆಶ್ರಯದಲ್ಲಿ ತಾಲೂಕು ಅಧ್ಯಕ್ಷ ಅಬ್ದುಲ್ ಸಮಿ ಹಳಗೇರಿ ರವರ ಅಧ್ಯಕ್ಷತೆಯಲ್ಲಿ ಆಯುಷ್ಮಾನ್ ಕಾರ್ಡ್, ಮತ್ತು ಈ-ಶ್ರಮ್ ಕಾರ್ಡ್ ಶಿಬಿರವು ಮೊಹಿದ್ದಿನ್ ಜುಮ್ಮಾ ಮಸ್ಜಿದ್ ಮರವಂತೆ ನಾವುಂದದಲ್ಲಿ ಜರುಗಿತು. ಮೌಲಾನಾ ಹನೀಫ್ ಸಹದಿ ರವರ ಕಿರಾತ್ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕಿ ಡಾ. ತೇಜಸ್ವಿನಿ ಎ. ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಸವಿವರವಾಗಿ ವಿವರಿಸಿದರು. ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಬಗ್ಗೆ ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಎಸ್. ಎಮ್. ಇರ್ಷಾದ್ ನಮ್ಮ ನಾಡ ಒಕ್ಕೂಟದ ಕಾರ್ಯ ಚಟುವಟಿಕೆಗಳನ್ನು ತಿಳಿಸಿದರು. ಕಾರ್ಯಕ್ರಮದ ರೂವಾರಿಗಳಾದ ಮನ್ಸೂರ್ ಇಬ್ರಾಹೀಮ್ ಮತ್ತು ಇಕ್ಬಾಲ್ ಕತಾರ್ ಶುಭ ಹಾರೈಸಿದರು. ಕರ್ನಾಟಕ ಮುಸ್ಲಿಮ್ ಜಮಾತಿನ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.26: ಭಂಡಾರಿ ಯುವವೇದಿಕೆ ಕುಂದಾಪುರ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಕುಂದಾಪುರ ಜ್ಯೂನಿಯರ್ ಕಾಲೇಜು ವಠಾರದಲ್ಲಿ ನಡೆಯಿತು. ಕುಂದಾಪುರ ಸಾರ್ವಜನಿಕ ಆಸ್ಪತ್ರೆ ವೈದ್ಯರಾದ ಡಾ. ನಾಗೇಶ್ ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಜೀವನಶೈಲಿ, ಸೇವಿಸುವ ಆಹಾರ ಕ್ರಮದಿಂದ ವಿವಿಧ ಆರೋಗ್ಯ ಸಮಸ್ಯೆಗಳು ಬರುತ್ತದೆ. ಅದನ್ನು ಪ್ರಾಥಮಿಕವಾಗಿ ತಿಳಿದು ಪರಿಣಾಮಕಾರಿ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರು ರಕ್ತದ ಮಹತ್ವವನ್ನು ಅರಿಯುವ ಕಾರ್ಯವಾಗಬೇಕು. ರಕ್ತಕ್ಕೆ ತತ್ಸಮಾನವಾಗಿ ಕೃತಕವಾದ ಔಷಧವನ್ನು ಈವರೆಗೆ ಕಂಡುಕೊಳ್ಳಲಾಗಿಲ್ಲ. ರಕ್ತಕ್ಕೆ ರಕ್ತವೇ ಸಮಾನ. ಬೇರೆಬೇರೆ ರೋಗಗಳಿಂದ ಬಳಲುವ ವ್ಯಕ್ತಿಗಳನ್ನು ಉಳಿಸಿಕೊಳ್ಳಲು ರಕ್ತ ದಾನದಿಂದ ಮಾತ್ರ ಸಾಧ್ಯ. ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಒಂದರಿಂದ ನಾಲ್ಕು ಬಾರಿ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸುವ ಮಹತ್ಕಾರ್ಯ ಮಾಡಬಹುದು. ಈ ನಿಟ್ಟಿನಲ್ಲಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆಯಂತಹ ಸಮಾಜಮುಖಿ ಕಾರ್ಯ ಹಮ್ಮಿಕೊಂಡು ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್‌.ಎನ್.ಶೆಟ್ಟಿ ಸಭಾ ಭವನದಲ್ಲಿ ಭಾನುವಾರ ಕುಂದಾಪುರ ತಾಲ್ಲೂಕು ಯುವ ಬಂಟರ ಸಂಘದ ವತಿಯಿಂದ ಸಂಸ್ಮರಣಾ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು. ಡಾ.ಮಧುಕರ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ ಸ್ವೀಕರಿಸಿದ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ ಬದುಕಿದ್ದ ದಿನಗಳಲ್ಲಿ ವೃತ್ತಿಪರ, ನಿಷ್ಠಾವಂತ, ಕರ್ತವ್ಯ ದಕ್ಷತೆಯ ಕಾರ್ಯದಿಂದಾಗಿ ಇಂದಿಗೂ ಜನಮಾನಸಲ್ಲಿ ಜೀವಂತವಾಗಿರುವ, ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಡಾ.ಮಧುಕರ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನ್ನ ಜೀವನದ ಅಮೃತ ಕ್ಷಣಗಳಾಗಿದೆ. ಇಂದಿನ ಯುವ ಜನಾಂಗಕ್ಕೆ ಅವರ ಜೀವನವೇ ಒಂದು ಅಧ್ಯಾಯವಿದ್ದಂತೆ ಎಂದು ಹೇಳಿದರು. ಸಂಸ್ಮರಣಾ ಪ್ರಶಸ್ತಿ ವಿತರಿಸಿ ಮಾತನಾಡಿದ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ ಶೆಟ್ಟಿ ಅವರು, ಸಂಘ-ಸಂಸ್ಥೆಗಳು ಹಾಗೂ ದಾನಿಗಳು ವಿದ್ಯಾರ್ಜನೆಗಾಗಿ ನೀಡುವ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳು, ಇದರ ಸದುದ್ದೇಶಗಳನ್ನು ಅರ್ಥ ಮಾಡಿಕೊಂಡು ಒಳ್ಳೆಯ ರೀತಿಯಲ್ಲಿ ವಿದ್ಯಾಭ್ಯಾಸ…

Read More