ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯಿತಿಯ ಕಾಳಜಿಯಿಂದಾಗಿ ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಈಗ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕಗಳು ಆರಂಭವಾಗಿ, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಮೂಲಕ ಪ್ರತಿದಿನ ಟನ್ಗಟ್ಟಲೆ ತ್ಯಾಜ್ಯ ಸಂಗ್ರಹವಾಗಿ ಸಂಪನ್ಮೂಲವಾಗಿ ಪರಿವರ್ತಿಸಿ ವಿಲೇವಾರಿಯಾಗುತ್ತಿದೆ. ಇದರ ಪೂರ್ವದಲ್ಲಿ ಜಿಲ್ಲೆಯ ಗ್ರಾಮೀಣ ನೈರ್ಮಲ್ಯ ಸ್ಥಿತಿ ಹೇಗಿತ್ತು ಎನ್ನುವುದನ್ನು ಯಾರೂ ಊಹಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು. ಮರವಂತೆ ಸ್ವಚ್ಛತಾ ಮಾಸ ತಂಡ’ದ ಆಶ್ರಯದಲ್ಲಿ ಇಲ್ಲಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಆವರಣದಲ್ಲಿ ಭಾನುವಾರ ಸ್ವಚ್ಛತೆಯ ಐವತ್ತುದಿನದ ಅಂಗವಾಗಿ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವ ಪ್ರವೃತ್ತಿಯಿಂದ ಜೀವ ಸಂಕುಲಕ್ಕೆ ಅಪಾಯ ಸಂಭವಿಸುತ್ತಿದೆ. ಇದನ್ನು ತಡೆಯಲು ಸ್ಥಳೀಯಾಡತಗಳು ಅದರ ನಿರ್ವಹಣೆಯ ಜತೆಗೆ ಅರಿವು ಮೂಡಿಸುವ ಮತ್ತು ದಂಡನೀಯ ಕ್ರಮಗಳನ್ನೂ ಕೈಗೊಳ್ಳಬೇಕು. ಮರವಂತೆಯ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ ಪಟಗಾರ, ಕರುಣಾಕರ ಆಚಾರ್ಯ ನೇತೃತ್ವದಲ್ಲಿ ೫೦ ದಿನ ನಡೆದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ 9ನೇ ವರ್ಷದ ಟ್ರಸ್ಟ್ ದಿನಾಚರಣೆ ಶ್ರೀ ಸೀತಾರಾನಚಂದ್ರ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿತು. ಕಾರ್ಯಕ್ರಮದ ಅತಿಥಿಯಾಗಿದ್ದ ಬೆಂಗಳೂರು ರಾಮರಾಜ ಕ್ಷತ್ರಿಯ ಸಮಾಜದ ಮಾಜಿ ಅಧ್ಯಕ್ಷ ಡಿ. ಕೆ. ಮಂಜುನಾಥ ಮಾತನಾಡಿ ಬದುಕಿನಲ್ಲಿ ನಾವು ಗಳಿಸಿದ ಹಣ-ಸಂಪತ್ತು ಕರಗಿ ಹೊಗಬಹುದು ಆದರೆ ಮಾಡಿದ ದಾನ ಧರ್ಮ ಪುಣ್ಯ ಕಾರ್ಯಗಳು ಸದಾ ಹಸಿರಾಗಿ ಉಳಿಯುತ್ತದೆ. ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಮಾಡುವ ಕಾರ್ಯಕ್ಕೆ ಎಲ್ಲರೂ ಜೊತೆಗೂಡಬೇಕು. ಸಮಾಜದಿಂದ ಪ್ರಯೋಜನ ಪಡೆದವರು ಸಮಾಜಕ್ಕೆ ಮತ್ತಷ್ಟು ಉತ್ತಮ ಕಾರ್ಯ ಮಾಡುವಂತಾಗಬೇಕು ಎಂದರು. ಶ್ರೀರಾಮ ಗೃಹನಿರ್ಮಾಣ ಯೋಜನೆಯ ಘಲಾನುಭವಿಗೆ ಬೀಗದಕೈ ಹಸ್ತಾಂತರ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ವಿಶೇಷ ಪ್ರೋತ್ಸಾಹ ನಿಧಿ ವಿತರಣೆ ಈ ಸಂದರ್ಭ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಮಾತನಾಡಿ, ರಾಮಕ್ಷತ್ರಿಯ ಸಮಾಜದವರಿಗಾಗಿ ಬಡವರು, ಅಶಕ್ತರಿಗೆ ಸಹಾಯ, ನೆರವು ನೀಡುವ ಉದ್ದೇಶದಿಂದ ಆರಂಭಿಸಲಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು ಶುಕ್ರವಾರ ಭೇಟಿ ನೀಡಿದರು. ಪ್ರಥಮ ಭಾರಿ ಶಾಲೆಗೆ ಭೇಟಿ ನೀಡಿದ ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಶಾಲಾ ಶಿಕ್ಷಕರು, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಶಾಲೆಗೆ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷರಾದ ಪ್ರಭಾಕರ ಗಾಣಿಗ, ಸದಸ್ಯರಾದ ಆನಂದ ಗಾಣಿಗ, ವೀರಭದ್ರ ಗಾಣಿಗ, ಶ್ಯಾಮಲಾ ಪೂಜಾರಿ, ರೇವತಿ ಶೆಟ್ಟಿ, ಗೋವಿಂದ ಮೊಗವೀರ, ಹಳೆ ವಿದ್ಯಾರ್ಥಿ ಸಂಘದ ವಸಂತ ಮೊಗವೀರ, ಮಹದೇವ ಬಿಲ್ಲವ, ರವೀಂದ್ರ ಗಾಣಿಗ, ಚಂದ್ರಶೇಖರ ಗಾಣಿಗ, ಸುರೇಶ್ ಪೂಜಾರಿ, ಪತ್ರಕರ್ತ ಮಹೇಶ್ ಗಾಣಿಗ, ಶಾಲಾ ಮುಖ್ಯ ಶಿಕ್ಷಕರಾದ ಜ್ಯೋತಿ ಶ್ರೀಧರ್, ಶಿಕ್ಷಕರಾದ ಅಂಬಾಬಾಯಿ, ಸಂಗೀತಾ, ಸಾರಿಕಾ, ಮಾಲತಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಹೊಸಾಡು ಗ್ರಾಮ ಪಂಚಾಯಿತಿ ಮುಳ್ಳಿಕಟ್ಟೆಯಲ್ಲಿ ಹಾರ್ಡ್ವೇರ್ ಅಂಗಡಿಗೆ ಶನಿವಾರ ಸಂಜೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಹೆದ್ದಾರಿ ಬ್ಲಾಕ್ ಆಗಿದ್ದರಿಂದ ಅಗ್ನಶಾಮಕ ದಳಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿ ಕೆನ್ನಾನಿಗೆ ಅಂಗಡಿ ಪೂರಾ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸಲು ಅಗ್ನಶಾಮಕ ದಳ ಪ್ರಯತ್ನ ನಡೆಸುತ್ತಿದ್ದು, ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಲಕ್ಷಾಂತರ ಮೌಲ್ಯದ ಸೊತ್ತು ನಷ್ಟವಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ ಜೊಸೆಫ್ ಚರ್ಚ್, ಫ್ರಾನ್ಸಿಸ್ ಆಸಿಸಿ ಚರ್ಚ್, ಬೈಂದೂರು ಹೊಲಿಕ್ರಾಸ್ ಚರ್ಚ್ ಸೇರಿದಂತೆ ವಿವಿಧ ಚರ್ಚುಗಳು ಹಾಗೂ ಕ್ರೈಸ್ತ ಸಮುದಾಯ ಕ್ರಿಸ್ಮಸ್ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ಚರ್ಚ್’ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶೀಲುಬೆ ಮುಂದೆ ನಿಂತು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ ಆವರಣದಲ್ಲಿ ನಿರ್ಮಿಸಿರುವ ಕಣ್ಮನ ಸೆಳೆಯುವ ಗೋದಲಿಗಳು ವಿದ್ಯುತ್ ದೀಪಾಲಂಕಾರ ಗಮನ ಸೆಳೆಯುತ್ತಿದ್ದವು. ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮನೆಮಾಡಿದ್ದು, ಗೋದಲಿ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಕುಂದಾಪುರ ಚರ್ಚಿನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಕಥೊಲಿಕ್ ವಿಧ್ಯಾ ಮಂಡಳಿಯ ಕಾರ್ಯದರ್ಶಿಗಳಾದ ವಂ|ಧರ್ಮಗುರು ಅಂಟೋನಿ ಸೆರಾವೊ ಸಂದೇಶ ನೀಡಿದರು. ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ, ಕ್ರಿಸ್ಮಸ್ ಹಬ್ಬದ ಭವ್ಯ ಭಕ್ತಿ ಪ್ರಧಾನ ಬಲಿಪೂಜೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯಗಳನ್ನು ಕೋರಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಕ್ಕಳ ಸಂಖ್ಯೆ ಕುಸಿಯುತ್ತಿದೆ ಎಂಬುದು ವಾಸ್ತವಾದರೂ ಊರವರು ಹಳೆವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ಸರಕಾರಿ ಶಾಲೆಯನ್ನು ಉನ್ನತೀಕರಿಸಲು ಸಾಧ್ಯವಿದೆ ಎಂದು ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ಯಳಜಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ.1,60,000 ಮೌಲ್ಯದ ಪೀಠೋಪಕರಣ ಹಸ್ತಾಂತರಿಸಿ ಮಾತನಾಡಿ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಮನಸ್ಸಿದ್ದರೆ ಯಾವುದೇ ರೂಪದಲ್ಲಾದರೂ ಸೇವೆ ಮಾಡಬಹುದು. ನಾವು ಮಾಡುವ ಉತ್ತಮ ಕಾರ್ಯಗಳಿಗೆ ಕೆಲವರು ತಡೆಯೊಡ್ಡಿದರೂ ಅದು ಹಲವರಿಂದ ಪ್ರಶಂಸೆಗೊಳಪಡುತ್ತದೆ ಎಂದರು. ಎಸ್ಡಿಎಂಸಿ ಅಧ್ಯಕ್ಷ ಸುಕುಮಾರ ಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಸದಸ್ಯ ಕುಪ್ಪಯ್ಯ ಪೂಜಾರಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷೆ ಇಂದಿರಾ, ಕೆಸರಿ ಯುವಕ ಮಂಡಲ ದ ಅಧ್ಯಕ್ಷ ರಾಘವೇಂದ್ರ ಪೂಜಾರಿ, ರಮೇಶ್ ಪೂಜಾರಿ, ಗ್ರಾ.ಪಂ ಮಾಜಿ ಅಧ್ಯಕ್ಷ ಮಹಾಬಲ ಕೊಠಾರಿ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಕ್ಷಯರೋಗ ತಪಾಸಣೆ ಮಾಡುವುದರೊಂದಿಗೆ ಪ್ರಾಥಮಿಕ ಹಂತದಲ್ಲಿಯೇ ಇದನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡಿ, ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಟಿ.ಬಿ ಫೋರಂ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ಕ್ಷಯರೋಗಿಗಳ ಸಂಖ್ಯೆಯು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬರುತ್ತಿದೆ. ಇದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಸಂಶಯಾಸ್ಪದ ಕ್ಷಯರೋಗ ಲಕ್ಷಣ ಹೊಂದಿರುವವರನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದಾಗ ಇದರ ನಿಯಂತ್ರಣ ಸಾಧ್ಯ ಎಂದರು. ಕ್ಷಯರೋಗದ ಹರಡುವಿಕೆ, ಅವುಗಳ ಸಾಮಾನ್ಯ ಲಕ್ಷಣ ಬಗ್ಗೆ ಜನರಲ್ಲಿ ಅರಿವು ಮೂಡಿಸಿದಾಗ ಜನರು ಆ ಬಗ್ಗೆ ಕಾಳಜಿ ತೋರಿ ನಿರ್ಲಕ್ಷö್ಯ ವಹಿಸದೇ ಸೂಕ್ತ ಪರೀಕ್ಷೆ ಹಾಗೂ ಚಿಕಿತ್ಸೆಗೆ ಒಳಗೊಳ್ಳುತ್ತಾರೆ. ಇದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು. ಜಿಲ್ಲೆಯ ಯಾವ ಗ್ರಾಮ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚಿನ್ನಕ್ಕಿಂತ ಅನ್ನ ಶ್ರೇಷ್ಠ, ಅನ್ನಕ್ಕಿಂತ ಮಣ್ಣು ಶ್ರೇಷ್ಠ ಎನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ. ರೈತರು ಮಣ್ಣಿನ ಫಲವತ್ತತೆ ಉಳಿಸಿಕೊಳ್ಳಬೇಕಾದರೆ ಸಾವಯವ ಗೊಬ್ಬರ ತಯಾರಿಗೆ ಅಗತ್ಯವಾದ ಹೈನುಗಾರಿಕೆ ಕೂಡ ನಡೆಸಬೇಕು ಎಂದು ದಕ್ಷಿಣ ಕನ್ನಡ-ಉಡುಪಿ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಮತ್ತು ರೈತಸಿರಿ, ರೈತಸೇವಾ ಒಕ್ಕೂಟದ ಆಶ್ರಯದಲ್ಲಿ ನಾಗೂರು ಶ್ರೀಕೃಷ್ಣಲಲಿತ ಕಲಾಮಂದಿರದಲ್ಲಿ ಗುರುವಾರ ನಡೆದ ರೈತರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಸಂಕಷ್ಟದ ಕಾಲದಲ್ಲಿ ಎಲ್ಲ ಉತ್ಪಾದಕ ವೃತ್ತಿಗಳಂತೆ ರೈತರೂ ತಮ್ಮ ವೃತ್ತಿಯಿಂದ ಬಿಡುವು ಪಡೆದಿದ್ದರೆ ಏನಾಗುತ್ತಿತ್ತು ಎನ್ನುವುದನ್ನು ಊಹಿಸುವುದೂ ಅಸಾಧ್ಯ. ಆದರೆ ಸಮುದಾಯ, ಸರ್ಕಾರ ರೈತರನ್ನು ಅವರ ಘನತೆಗೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅವರು ವಿಷಾದಿಸಿದರು. ಅಧ್ಯಕ್ಷತೆವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸಂಘದ ಲಾಭಾಂಶದಲ್ಲಿ ಈ ಬಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ 2020-21 ನೇ ಸಾಲಿನ ವಾರ್ಷಿಕ ಮಹಾಸಭೆ ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. ಸಂಘದ ಸಲಹೆ ಸೂಚನೆಗಳನ್ನು ಸದಸ್ಯರು ಅನುಸರಿಸಬೇಕು ಎಂದ ಅವರು ಕೊಡೇರಿ ಬಂದರಿನ ನಿಧಾನಗತಿಯ ಕಾಮಗಾರಿಕೆ ಆಕ್ಷೇಪ ವ್ಯಕ್ತಪಡಿಸಿ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ವೀನುಗಾರರ ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಮೀನುಗಾರಿಕೆ ಸಂದರ್ಭ ಮರಣ ಹೊಂದುವ ಸಂಘದ ಸದಸ್ಯರಿಗೆ ರೂ.5ಲಕ್ಷ ಹಾಗೂ ಇತರೆ ಸಂದರ್ಭದಲ್ಲಿ ರೂ.2ಲಕ್ಷ ಸಹಾಯಧನ ಮತ್ತು ಶೇ.25ರಷ್ಟು ವೈದ್ಯಕೀಯ ವೆಚ್ಚ ಭರಿಸಲು ಹಾಗೂ ದೋಣಿ ಮತ್ತು ಸಲಕರಣೆಗಳಿಗೆ ಶೇ.10ರಷ್ಟು ಪರಿಹಾರ ಧನ ನೀಡುವ ತೀರ್ಮಾನ ಕೈಗೊಳ್ಳಲಾಯಿತು. ಕೊಡೇರಿ ಬಂದರು ನಿಧಾನಗತಿಯ ಕಾಮಗಾರಿ ಮತ್ತು ಹೈಕೋರ್ಟ್ನಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಚರ್ಚೆ ನಡೆಯಿತು. ಉಪ್ಪುಂದ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಾ ಧರ್ಮಗಳ ಹಬ್ಬದ ಆಚರಣೆಯ ಹಿಂದೆಯೂ ಉತ್ತಮವಾದ ಸಂದೇಶವಿದೆ. ಹಬ್ಬ, ಉತ್ಸವಗಳ ಆಚರಣೆಯ ಸಂದರ್ಭಗಳಲ್ಲಿ ಕಷ್ಟದಲ್ಲಿರುವವರಿಗೆ ಆದಷ್ಟು ಸಹಾಯ ಮಾಡುವ ಕೆಲಸ ಮಾಡಬೇಕು ಎಂದು ಕುಂದಾಪುರ ಹೋಲಿ ರೋಸರಿ ಚರ್ಚ್’ನ ಸಹಾಯಕ ಧರ್ಮಗುರು ವಂ| ವಿಜಯ್ ಜಾಯ್ಸನ್ ಡಿ’ಸೋಜಾ ಹೇಳಿದರು. ಅವರು ಶುಕ್ರವಾರ ಕೋಟೇಶ್ವರ ಸಮೀಪದ ಸುಣ್ಣಾರಿಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ 2021ರ ಕ್ರಿಸ್ಮಸ್ ಆಚರಣೆ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿ ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವ ಗುಣ, ಎಲ್ಲಾ ಧರ್ಮವನ್ನು ಪ್ರೀತಿಸುವ ವಿಶಾಲ ಮನಸ್ಸು ಈ ಗುಣಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಸಲುವಾಗಿ ಎಲ್ಲಾ ಧರ್ಮಗಳ ಹಬ್ಬದ ಆಚರಣೆಯನ್ನು ವಿದ್ಯಾರ್ಥಿಗಳ ಮುಖಾಂತರ ಮಾಡುತ್ತಿದ್ದೇವೆ. ದೇಶದಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ನಮ್ಮನ್ನಮ್ಮಲ್ಲಿ ಹೊಡೆದಾಟ ನಡೆಯುತ್ತಿದೆ. ಯಾವ ಧರ್ಮದಲ್ಲಿಯೂ ಇನ್ನೊಂದು ಧರ್ಮವನ್ನು ಅನ್ಯಾಯ ಮಾಡಲು ಹೇಳುದಿಲ್ಲ. ಎಲ್ಲಾ ಧರ್ಮದಲ್ಲಿಯೂ…
