ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಸಂಶೋಧಕ ಬಿ.ಶ್ರೀಕಾಂತ ಪೈ ಮುಂಬೈ ಅವರು ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೋಟದಲ್ಲಿರುವ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿದರು. ಬ್ಲ್ಯಾಕ್ ಫಂಗಸ್ ಔಷಧ ಸಂಶೋಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಬಿ. ಶ್ರೀಕಾಂತ ಪೈ ಅವರನ್ನು ಅಭಿನಂದಿಸಿ ಗೌರವಿಸಿದರು. ಸರಕಾರದಿಂದ ಏನಾದರು ನೆರವು ಬೇಕಾದಲ್ಲಿ ಅದನ್ನು ಒದಗಿಸಿಕೊಡುವ ಭರವಸೆ ನೀಡಿ ಶುಭ ಹಾರೈಸಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಸಚಿವ ಆಪ್ತ ಸಹಾಯಕ ಹರೀಶ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ 2000 ರೂ. ಪರಿಹಾರ ಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆಗಸ್ಟ್ 31 ರೊಳಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಅರ್ಜಿ ಸಲ್ಲಿಸಿ ಪರಿಹಾರ ಮೊತ್ತ ಬಾರದಿರುವವರು ಅರ್ಜಿ ಸಲ್ಲಿಸಬಹುದಾಗಿದೆ ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿಯಲ್ಲಿ ಹಲವಾರು ಆರ್ಥಿಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹರು ನಿಗಮದ ವೆಬ್ಸೈಟ್: https://lidkar.online ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ಕಚೇರಿ ಅಥವಾ ಮೊಬೈಲ್ ಸಂಖ್ಯೆ: 6362891017 ನ್ನು ಸಂಪರ್ಕಿಸಬಹುದೆಂದು ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿ ನಿವಾಸಿ ಸಂತೋಷ ಖಾರ್ವಿ ಎಂಬುವರು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನು ದೊರೆತಿದೆ. ಸಮುದ್ರದಲ್ಲಿ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಈ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸುಮಾರು 5 ಅಡಿ ಎತ್ತರವಿರುವ 25 ಕೆ.ಜಿ ತೂಕ ಕೊಳಸ ಹೆಸರಿನ ಈ ಮೀನಿಗೆ ಮಾರುಕಟ್ಟೆಯಲ್ಲಿ 7 ಸಾವಿರ ರೂ. ಇದೆ. ಬೃಹತ್ ಗಾತ್ರದ ಮೀನನ್ನು ನೋಡಲು ಮೀನುಗಾರರು ಮುಗಿ ಬಿದ್ದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಭಾಷೆಗೆ ಪ್ರಾಧಾನ್ಯತೆ ದೊರಕಿಸಿಕೊಡುವ ಉದ್ದೇಶದಿಂದ ಅಕಾಡೆಮಿ ಸ್ಥಾಪಿಸುವ ಚಿಂತನೆ ನಮ್ಮ ಮುಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಸೋಮವಾರ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿ ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪಿಸಬೇಕೆಂಬ ಮನವಿಯನ್ನು ಈ ಹಿಂದೆಯೂ ಬೇರೆ ಬೇರೆ ಸಂದರ್ಭದಲ್ಲಿ ಮಾಡಿದ್ದೆವು. ಈಗ ಆ ಬಗ್ಗೆ ಸಾಧ್ಯಸಾಧ್ಯತೆಗಳನ್ನು ನೋಡಿಕೊಂಡು ಅಕಾಡೆಮಿ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದರು. ಈ ಸಂದರ್ಭ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದನ್ನೂ ಓದಿ ► ಕುಂದಗನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಮನವಿ – https://kundapraa.com/?p=51024 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ, ಅ16: ಜಿಲ್ಲೆಯಲ್ಲಿ ಸೋಮವಾರ 107 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 39, ಕುಂದಾಪುರ, ಬೈಂದೂರು ತಾಲೂಕಿನ 38, ಕಾರ್ಕಳ, ಹೆಬ್ರಿ ತಾಲೂಕಿನ 29 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 107 ಪ್ರಕರಣಗಳಲ್ಲಿ 84 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 84 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು 133 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1330 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3077ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗೆ ಇಲಾಖೆಯಿಂದ ವರ್ಷಪೂರ್ತಿ ಕಾರ್ಯಕ್ರಮ: ಸಚಿವ ವಿ. ಸುನಿಲ್ ಕುಮಾರ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹೊತ್ತಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಚಿಂತನೆ ಇದೆ ಎಂದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಕೋಟ ಡಾ ಶಿವರಾಮ ಕಾರಂತ ಥೀಮ್ ಪಾರ್ಕ್ ಹಾಗೂ ಅಮೃತೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ಥೀಮ್ ಪಾರ್ಕಿನಲ್ಲಿ ಮಾತನಾಡಿ ಶಿವರಾಮ ಕಾರಂತರದ್ದು ಚಲನಶೀಲ ವ್ಯಕ್ತಿತ್ವವಾಗಿದ್ದು, ಎಲ್ಲಾ ವಿಭಾಗದಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುತ್ತಿದೆ. ಅದನ್ನು ಮುಂದುವರಿಸಲಾಗುವುದು ಎಂದರು. ಈ ಸಂದರ್ಭ ಡಾ. ಶಿವರಾಮ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹುದ್ದೆ ನೇಮಕಾತಿ ಆದೇಶ ರದ್ದುಗೊಳಿಸಿದ್ದ ಅಭ್ಯರ್ಥಿ ಸಂಕಷ್ಟಕ್ಕೆ ಸಿಲುಕುವಂತಾಗಿವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಗಂಗೊಳ್ಳಿ, ಕೊಡಪಾಡಿ ಮತ್ತು ತ್ರಾಸಿ ಗ್ರಾಮದ ರಿಕ್ಷಾ ಚಾಲಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ನ್ನು ಭಾನುವಾರ ವಿತರಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ರೋಟರಿ ಕ್ಲಬ್ನ ನಿಕಟಪೂರ್ವ ಅಧ್ಯಕ್ಷರಾದ ಬಿ. ಲಕ್ಷ್ಮೀಕಾಂತ ಮಡಿವಾಳ, ಪ್ರದೀಪ ಡಿ.ಕೆ., ರೋಟರಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿಯಿಂದ ೭ನೇ ತರಗತಿಯ ತನಕದ ವಿದ್ಯಾರ್ಥಿಗಳಿಗೆ ಎಮ್.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಕೊಡಮಾಡಿದ ನೋಟ್ ಪುಸ್ತಕ ಮತ್ತು ಪಠ್ಯ ಪುಸ್ತಕ ವಿತರಣೆ ಇತ್ತೀಚೆಗೆ ನಡೆಯಿತು. ಪುಸ್ತಕ ವಿತರಿಸಿ ಮಾತನಾಡಿದ ಎಮ್.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು, ಕೋವಿಡ್-19 ನಂತಹ ಕಷ್ಟಕಾಲದಲ್ಲಿಯೂ ನಮ್ಮ ಶಾಲೆಯ 400 ಮಂದಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇರುವುದರಲ್ಲಿ ಸ್ವಲ್ಪ ದಾನ ಮಾಡುವ ಮನದಾಸೆಯಿಂದ ಕಷ್ಟಕಾಲವಾದರೂ ನೀಡುತ್ತಿದ್ದೇನೆ ಎಂದರು. ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ, ಗ್ರಾ.ಪಂ. ಅಧ್ಯಕ್ಷರಾದ ಉದಯ ಕುಮಾರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಈ ಶಾಲೆಗೆ ಕೃಷ್ಣಮೂರ್ತಿ ಮಂಜರ ಸಹಕಾರ ಶ್ಲಾಘನಾರ್ಹವಾದುದು. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಮ್ಮ ಶಾಲೆಗೆ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿ ಅದರ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿರುವುದು ಮೆಚ್ಚುವಂತಹದ್ದು. ಇವರೊಂದಿಗೆ ಶಿಕ್ಷಣ ಇಲಾಖೆ ಸಹಕರಿಸಿದ್ದಲ್ಲಿ ಉತ್ತಮವಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವೈದ್ಯಕೀಯ ಕಾಲೇಜುಗಳ ಭಾಗವಾಗಿ ಆರಂಭಗೊಂಡಿರುವ ‘ಆಳ್ವಾಸ್ ನಿರಾಮಯ’- ಆಯುಷ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ಇಂದು ನಡೆಯಿತು. ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ನಿರ್ಮಾಣಗೊಂಡಿರುವ ಈ ನೂತನ ಆಸ್ಪತ್ರೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರ ತಂದೆ ಶತಾಯುಷಿ ಆನಂದ ಆಳ್ವ ಉದ್ಘಾಟಿಸಿದರು. ಮೂಡುಬಿದಿರೆ ಹಾಗೂ ಸುತ್ತಲಿನ ಪ್ರದೇಶಗಳ ಜನರಿಗೆ ಉನ್ನತ ದರ್ಜೆಯ ವೈದ್ಯಕೀಯ ಸೌಲಭ್ಯಗಳನ್ನು ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ‘ಆಳ್ವಾಸ್ ನಿರಾಮಯ’ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಆಯುರ್ವೇದ, 60 ಬೆಡ್ಗಳ ಈ ಆಸ್ಪತ್ರೆಯಲ್ಲಿ ನ್ಯಾಚುರೋಪತಿ ಹಾಗೂ ಹೋಮಿಯೋಪತಿ ಚಿಕಿತ್ಸಾ ಸೌಲಭ್ಯಗಳಿದ್ದು, ಜನಸಾಮಾನ್ಯರ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೇವೆಯನ್ನು ನೀಡುವ ಆಶಯವನ್ನು ಹೊಂದಿದೆ. ಸುಸಜ್ಜಿತವಾದ ಒಳರೋಗಿ ಹಾಗೂ ಹೊರರೋಗಿ ವಿಭಾಗಗಳಿದ್ದು, ಒಳರೋಗಿಗಳಿಗೆ ಸಕಲ ಸೌಲಭ್ಯಗಳಿರುವ ಸ್ಪೆಷಲ್, ಡಿಲಕ್ಸ್ ಹಾಗೂ ಸೂಟ್ ರೂಮ್ಗಳು ಲಭ್ಯವಿರುತ್ತವೆ. ಚಿಕಿತ್ಸೆಗೆ ಬರುವ ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹಾಸ್ಪಿಟಲ್’ ವಿಶಿಷ್ಟ ಅವಕಾಶವಿದ್ದು, ವೈ ಫೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆ ಪುನಸ್ಕಾರಗಳು ನಡೆಯಿತು. ಈ ಸಂದರ್ಭ ಊರಿನ ಪರಿಣಿತ ನಾಗಸ್ವರ ವಾದಕ ಉಮೇಶ್ ದೇವಾಡಿಗ ಅವರನ್ನು ಧರ್ಮದರ್ಶಿ ವಿ. ತಿಮ್ಮ ದೇವಾಡಿಗ ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಉದ್ಯಮಿ ನಾಣು ಚಂದನ್ ಮುಂಬೈ, ನರಸಿಂಹ ದೇವಾಡಿಗ ಮರವಂತೆ, ವೆಂಕ್ಟ ದೇವಾಡಿಗ ಮರವಂತೆ, ಇತರರು ಇದ್ದರು.
