Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯ ಧಾರ್ಮಿಕ ಕ್ಷೇತ್ರದ, ಪರಿಸರದ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಶ್ರೀ ಇಂದುಧರ ದೇವಾಲಯದ ಪರಿಸರ ಸ್ವಚ್ಛತೆಯನ್ನು ಇಲ್ಲಿನ ಶ್ರೀ ಇಂದುಶ್ರೀ ಮಹಿಳಾ ಸಂಘದ ವತಿಯಿಂದ ನಡೆಸಲಾಯಿತು. ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಸದಸ್ಯರು ದೇವಸ್ಥಾನದ ಪರಿಸರ, ನಾಗದೇವರ ಸ್ವಾಮೀ ಹಾಗೂ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಅವರ ನಡೆ ಗಮನ ಸೆಳೆಯಿತು. ರವೀಂದ್ರ ಕಲಾಕ್ಷೇತ್ರದ ಮುಂಭಾಗದಲ್ಲಿ ಭಾರತಾಂಬೆ ಮತ್ತು ನಾಡ ದೇವತೆಯ ಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ಬಳಿಕ ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆಯೇ ಕುಳಿತು ಕಡತಕ್ಕೆ ಸಹಿ ಹಾಕಿ ಇಲಾಖಾ ಕಾರ್ಯ ಆರಂಭಿಸಿದರು. ಈ ಸಂದರ್ಭ 2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಪುರಸ್ಕೃತೆ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆ ಕ್ಯಾತರ ಮತ್ತು ಬಿಬಿ ಕೊರಂಟೈನ್ ಪ್ರಶಸ್ತಿಗೆ ಭಾಜನರಾದ ಹೆಚ್ ವಿ ವೆಂಕಟಸುಬ್ಬಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಅಧಿಕಾರ ಸ್ವೀಕರಿಸಿದ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಯಲ್ಲಿ ಪುಸ್ತಕ ಖರೀದಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ಸಾಹಿತಿ ಮತ್ತು ಕಲಾವಿದರೊಂದಿಗೆ ಅಲ್ಲಿಯೇ ಇದ್ದ ಕ್ಯಾಂಟೀನ್ ನಲ್ಲಿ ಕಾಫಿ ಸೇವನೆ ಮಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್ ನಿಂದ ಹಗಲು ರಾತ್ರಿ ಎನ್ನದೇ ಕಷ್ಟದಲ್ಲಿರುವ ಜನರಿಗೆ ಎಂಬುಲೆನ್ಸ್ ಸೇವೆಯನ್ನು ಬಹಳ ವರ್ಷಗಳಿಂದಲೂ ನೀಡುತ್ತಾ ಬಂದಿರುವ ಸಮಾಜ ಸೇವಕ ಇಬ್ರಾಹಿಮ್ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು. ರೋಟರಿಯ ಸುಗುಣಾ ಸನ್ಮಾನಿತರನ್ನು ಪರಿಚಸಿಯಿದರು, ಗಿರೀಶ್ ಮತ್ತು ಕೃಷ್ಣ ಇವರ ಸೇವೆಯ ಕುರಿತು ಹೇಳಿದರು, ಕ್ಲಬ್ ಅಧ್ಯಕ್ಷರಾದ ರಾಜೇಶ್ ಎಂ ಜಿ. ಹಾಗೂ ಹಿರಿಯ ಸದಸ್ಯರನ್ನೊಳಗೊಂಡು ಇಬ್ರಾಹಿಮ್ ಅವರನ್ನು ಗೌರವಿಸಲಾಯಿತು. ಸನ್ಮಾನಿತರಾದ ಇಬ್ರಾಹಿಮ್ ಅವರು ಸಂತಸ ವ್ಯಕ್ತ ಪಡಿಸಿದರು. ಕಾರ್ಯದರ್ಶಿ ನಾರಾಯಣ ನಾಯ್ಕ ಧನ್ಯವಾದ ಸಮರ್ಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಭಾರತೀಯ ಸಮುದಾಯ ಹಿತೈಷಿ ವೇದಿಕೆಯ (ಐ.ಸಿ.ಬಿ.ಎಫ್ – ಇಂಡಿಯನ್ ಕಮ್ಯುನಿಟಿ ಬೆನಿವೊಲೆಂಟ್ ಫೋರಂ) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಒಂದೇ ಭಾರತ್ ಮಿಷನ್ ಅಡಿಯಲ್ಲಿ ಕತಾರಿನಿಂದ ಭಾರತಕ್ಕೆ ವಿಶೇಷ ವಿಮಾನ ಸೇವೆ ಕಲ್ಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದರು. ಕತಾರ್ ನಲ್ಲಿ ಕರೋನಾ ಪರಿಣಾಮವಾಗಿ ಬಹಳ ಜನ ನಿರಾಶ್ರಿತರಾಗಿದ್ದ ಸಮಯದಲ್ಲ್ಲಿ ಅನ್ನಾಹಾರ, ಊಟದ ಅವಶ್ಯಕತೆಯನ್ನು ಪೂರ್ಣಗೊಳಿಸಿ ದಿನನಿತ್ಯ ಸುಮಾರು 100-200 ಜನರಿಗೆ ತರಕಾರಿ ಅಥವ ಅನ್ನ ನೀರುಗಳನ್ನು ಸ್ವತಃ ತಮ್ಮ ವಾಹನದಲ್ಲಿ ಸರಬರಾಜು ಮಾಡುವ ಮೂಲಕ ಕತಾರ್ ನಲ್ಲಿ ಕೋವಿಡ್ ನಿಂದ ಅಸುನೀಗಿದ ಪಾರ್ಥಿವ ಶರೀರಗಳನ್ನು ಭಾರತದಲ್ಲಿನ ಸ್ವಗೃಹಕ್ಕೆ ತಲುಪಿಸುವ ಕಾರ್ಯ ಮಾಡಿದರು. ಅವರ ಸೇವೆಯನ್ನು ಗುರುತಿಸಿ ಕತಾರ್ನ ಭಾರತೀಯ ರಾಯಭಾರಿ ಕಾರ್ಯಾಲಯದ ಪ್ರಥಮ ಕಾರ್ಯದರ್ಶಿ (ಕಾರ್ಮಿಕ ಹಾಗು ಸಮುದಾಯ ಕಲ್ಯಾಣ ವಿಭಾಗ) ಎಸ್. ಆರ್.ಎಚ್. ಫಾಹ್ಮಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಕಾರ್ಯಕ್ರಮ ಸಂಘಟಿತ ಭಾರತೀಯ ಸಮುದಾಯ ಕೇಂದ್ರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಯುವ ಜನತೆ ತಮ್ಮ ಪದವಿ ವಿದ್ಯಾಭ್ಯಾಸದ ನಂತರ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗುವ ಕುರಿತಂತೆ ಕಾಲೇಜುಗಳಲ್ಲಿ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ನೆಹರು ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಯುವ ಜನರು ಪದವಿ ನಂತರ ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲು ಅವಕಾಶ ನೀಡದಂತೆ, ಅವರು ಪದವಿ ಅಂತಿಮ ವರ್ಷದಲ್ಲಿ ಇರುವಾಗಲೇ, ಪದವಿ ನಂತರ ಅವರು ಕೈಗೊಳ್ಳಬಹುದಾದ ಸ್ವ ಉದ್ಯೋಗಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಎಲ್ಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಿ, ಈ ಕಾರ್ಯಕ್ರಮಗಳಿಗೆ ಲೀಡ್‌ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ವಿವಿಧ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ಗಳು ನೀಡುವ ವಿವಿಧ ಬಗೆಯ ಸಾಲಗಳು, ಸಬ್ಸಿಡಿ ಮೊತ್ತ ಮುಂತಾದವುಗಳ ಬಗ್ಗೆ ಸಮಗ್ರ ವಿವರಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಭಿನವ ಕಲಾತಂಡದ ಕರ್ಕಾಟಿ ಅಮಾಸಿ ಕಲಾತ್ಮಕ ಕಿರುಚಿತ್ರ ಬಿಡುಗಡೆ ಹಾಗೂ ಅಭಿನವ ಪ್ರಶ್ನಾವಳಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯನ್ನು ಇಲ್ಲಿನ ಶ್ರೀ ಕಾರ್ತಿಕೇಯ ಕೃಪಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ. ರಾಮಚಂದ್ರ ಉಡುಪ, ಕಲಾತಂಡದಿಂದ ಪ್ರದರ್ಶಿಸಲ್ಪಟ್ಟ ರತ್ನ ಶಾಮಿಯಾನ ನಾಟಕ ಅದೊಂದು ಯಶಸ್ವೀ ನಾಟಕ, ಕರೋಣ ಕಾರಣದಿಂದ ಪ್ರದರ್ಶನದಿಂದ ವಂಚಿತರಾದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಹಲವಾರು ಹಾಸ್ಯ ಚಿತ್ರಗಳು, ಕಿರುಚಿತ್ರ ಹಾಗೂ ತಮ್ಮ ತಂಡದ ಕಲಾವಿದರು ಮಾತ್ರವಲ್ಲದೆ ಬೇರೆ ತಂಡಗಳ ಕಲಾವಿದರನ್ನು ಕೂಡಿಕೊಂಡು ಕಲಾತ್ಮಕ ಕಿರುಚಿತ್ರಗಳನ್ನು ಮಾಡಿ ಜನ ಮನ್ನಣೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ನ ಪೂರ್ವಧ್ಯಕ್ಷರಾದ ಎ. ಎಸ್. ಏನ್. ಹೆಬ್ಬಾರ್ ಕಿರುಚಿತ್ರ ಬಿಡುಗಡೆಗೊಳಿಸಿ ಮಾತನಾಡಿ, ಇದೊಂದು ಅಭೂತ ಪೂರ್ವ ಕಿರುಚಿತ್ರ ಇದನ್ನು ನೋಡಿದಷ್ಟು ಇನ್ನೊಮ್ಮೆ ನೋಡಬೇಕಿನಿಸುವಷ್ಟು ಸಂದೇಶದ ಹಂದರವಿದೆ ಎಂದು ಹರ್ಷ ವ್ಯಕ್ತಪಡಿಸಿ, ಅಭಿನವ ಕಲಾ ತಂಡದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ನಿವಾಸಿ ನಿವೃತ್ತ ಪ್ರಾಂಶುಪಾಲ ಬಾಳ್‌ಕುದ್ರು ರಘುರಾಮ ಶೆಟ್ಟಿ (88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದ ಇವರು ಅನೇಕ ಸರ್ಕಾರಿ ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಕೊನೆಯಲ್ಲಿ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಂತರ ಇಲ್ಲಿಯೇ ನಿವೃತ್ತಿಯಾಗಿದ್ದರು. 1986-87ನೇ ಸಾಲಿನಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇವರು ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿ ಸದಸ್ಯರಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದ ಇವರು ಜೀವಿತದ ಕೊನೆಯ ತನಕ ಆಸಕ್ತ ಮಕ್ಕಳಿಗೆ ಪಾಠ, ಉಪನ್ಯಾಸ ನೀಡುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜ ಕಲ್ಯಾಣ ಇಲಾಖೆ ಅನಾವಶ್ಯಕ ಖರ್ಚಿಗೆ ಕಡಿವಾಣ ಹಾಕಿ ಮೂಲಭೂತ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಪರಿಶಿಷ್ಟ ಜಾತಿಯ ಕುಟುಂಬದ ಮನೆ ನಿರ್ಮಾಣಕ್ಕೆ ಇದ್ದ ಅನುದಾನವನ್ನು 5 ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಹಿಂದೆ ಇದ್ದ 1.70 ಲಕ್ಷ ಅನುದಾನದಲ್ಲಿ ಉತ್ತಮ ಮನೆ ನಿರ್ಮಾಣ ಸಾಧ್ಯವಿಲ್ಲ ಎನ್ನುವ ಕಾರಣದಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳವಾರ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಪರಿಶಿಷ್ಟ ಕುಟುಂಬಗಳಿದ್ದು, ಸರ್ವೇ ನಡೆಸಿ ಮನೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವರ್ಷ ಅನಗತ್ಯ ವೆಚ್ಚಕ್ಕೆ ಕಡಿವಾಣ, ಅನಿವಾರ್ಯ ಅಲ್ಲದ ಯೋಜನೆ ತಡೆ ಹಿಡಿಯಲಾಗುವುದು. ಪರಿಶಿಷ್ಟ ಸಮಾಜ ಮುಖ್ಯವಾಹಿನಿಗೆ ತರಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಸಾಮಾನ್ಯನಾಗಿದ್ದ ನನಗೆ ಸಮಾಜ ಕಲ್ಯಾಣ ಇಲಾಖೆಯ ದೊಡ್ಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 48 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾರ್ಗವ ಮಧ್ಯಸ್ಥ 617 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಾನ್ಯತಾ ವಿ.ಶೇಟ್ (608), ವೈಷ್ಣವಿ ಕೋಟೆಗಾರ್ (607), ಪ್ರಿಯಾಂಕ ಕೆ.ಬೈಂದೂರು (606), ಕೀರ್ತಿ ಭಟ್ (604), ಅಮೀಕ್ಷಾ ಡಿ.ನಾಯ್ಕ್ (603) ಮತ್ತು ಬಿ.ಸಾಹೀಲ್ (602) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಶ್ರೀಕಾಂತ ಪೈ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪೈ ಹಾಗೂ ಕೆ.ಗಣೇಶ ಪ್ರಭು ಅವರಿಗೆ ಶ್ರೀದೇವರ ಪ್ರಸಾದ ನೀಡಿ ಸನ್ಮಾನಿಸಿ ಗೌರವಿಸಿದರು. ಬಿ. ಗೋವಿಂದ್ರಾಯ ಪೈ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಎಸ್.ದಿನಕರ ಶೆಣೈ, ಎಸ್.ಗೋಪಾಲಕೃಷ್ಣ ಪೈ, ಎಸ್. ಗೋಪಾಲಕೃಷ್ಣ ಪೈ, ಎಂ.ವಿಶ್ವನಾಥ ಪೈ, ಎಸ್.ಪ್ರಭಾಕರ ಪೈ, ಎಂ.ಅನಂತ ಪೈ, ಬಿ.ಗಣೇಶ ಪೈ, ಯು.ಕಮಲಾಕ್ಷ ಪೈ, ಅರುಣ್ ಶೆಣೈ, ಪತ್ರಕರ್ತ ಬಿ. ರಾಘವೇಂದ್ರ ಪೈ, ಬಿ. ರಾಜೇಶ ಪೈ, ದೇವಸ್ಥಾನದ ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.

Read More