Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ಆತ್ಮ ಜಾಗೃತಿ ಹೆಚ್ಚಾಗಿರುತ್ತದೆ ಎಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ ಕೋಟ್ಯಾನ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮ ಜಾಗೃತಿ ಬೆಳೆಯುತ್ತದೆ. ಪ್ರಸ್ತುತ ಜಾಗತಿಕವಾಗಿ ಗುರುತಿಸಿಕೊಳ್ಳಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕ್ಲೌಡ್ ಕಂಪ್ಯೂಟಿಂಗ್, ಡೇಟಾ ಸೈನ್ಸ್ ಮುಂತಾದ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಕಲಿಯುವುದು ಅಗತ್ಯ. ಜೀವನದಲ್ಲಿ ಸಾಧಿಸುವ ಛಲ ಹಾಗೂ ಅವಕಾಶಗಳನ್ನು ಬಳಸಿಕೊಂಡು ಆಸಕ್ತಿಯಿಂದ ತೊಡಗಿಸಿಕೊಂಡಾಗ ಮಾತ್ರ ಯಶಸ್ಸಿನ ಹಾದಿ ಸುಗಮವಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕೇಳುವ ವಿಷಯಗಳಿಕ್ಕಿಂತ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳ ಪ್ರತಿಯೊಂದು ನಡೆಯೂ ಸಂಸ್ಕೃತಿಯನ್ನು ಬಿಂಬಿಸುವಂತಿರಬೇಕು. ನಮ್ಮಲ್ಲಿರುವ ವಿಭಿನ್ನತೆಯಂತೆ ಮಾತ್ರ ಅಸ್ತಿತ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀಗುರು ನಿತ್ಯಾನಂದ ಸೌಹಾರ್ದ ಸಹಕಾರಿಯ ನೂತನ ಶಾಖೆಯು ಹೇರೂರು ಗ್ರಾಮದ ಯರುಕೋಣೆಯಲ್ಲಿ ಆರಂಭಗೊಂಡಿತು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಕೋರಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿರುವ ರಾಜು ಪೂಜಾರಿಯವರು ಕಛೇರಿ ಉದ್ಘಾಟನೆ ಮಾಡಿ, ಸಾಮಾನ್ಯವಾಗಿ ಶಾಖೆಗಳನ್ನು ಆರಂಭಿಸುವಾಗ ಲಾಭಗಳಿಸುವ ಲೆಕ್ಕಾಚಾರ ಮಾಡಿ ಸುಗಮ ವ್ಯವಹಾರಕ್ಕೆ ಪೂರಕ ವಾತಾವರಣ ಹೊಂದಿದ ಸ್ಥಳ ಆಯ್ಕೆ ಮಾಡುತ್ತಾರೆ, ಆದರೆ ಸಹಕಾರಿಯ ಅಧ್ಯಕ್ಷರಾದ ಡಾ.ಎನ್ ಕೆ ಬಿಲ್ಲವರು ಹಾಗೆ ಯೋಚಿಸದೆ ತೀರಾ ಹಿಂದುಳಿದ ಪ್ರದೇಶದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಸ್ವಾವಲಂಬನೆ ಕಲ್ಪಿಸುವ ದೃಷ್ಠಿಯಿಂದ ಯರುಕೋಣೆಯಲ್ಲಿ ಶಾಖೆ ಆರಂಭಿಸಿದ್ದಾರೆ. ಶಾಖೆಯು ಲಾಭದಾಯಕವಾಗಿ ಅಭಿವೃದ್ದಿ ಹೊಂದಲಿ ಎಂದು ಶುಭಕೋರಿದರು, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಬಿ. ಎಮ್ ಸುಕುಮಾರ ಶೆಟ್ಟಿಯವರು ಭದ್ರತಾ ಕೊಠಡಿ ಉದ್ಘಾಟಿಸಿ ನೂತನ ಶಾಖೆಯು ಸಹಕಾರಿ ತತ್ವದಂತೆ ಗ್ರಾಮೀಣ ಜನತೆಯ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿ ಸಂಸ್ಥೆಯು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಇಂಟರ್ ಇನ್ಸಿಟ್ಯೂಶನಲ್ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಅಗ್ರಿ ಮಂಥನ 2022’ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ ಆಳ್ವ ‘’ಡಿಜಿಟಲ್ ಪ್ರಪಂಚದಲ್ಲಿ ಕೃಷಿಯ ಮಹತ್ವದ ಕುರಿತು ಮಾತನಾಡಿದ ಅವರು, ಕೃಷಿ ನಮ್ಮ ದೇಶದ ಬೆನ್ನೆಲುಬಾಗಿದ್ದು, 50% ದೇಶದ ದುಡಿಯುವ ವರ್ಗ ಈ ಕ್ಷೇತ್ರದ ಮೇಲೆ ಅವಲಂಬಿತವಾಗಿದೆ ಹಾಗೂ ದೇಶದ ಜಿಡಿಪಿಗೆ 20%ನ್ನು ಕೊಡುಗೆ ನೀಡುತ್ತಿದೆ ಎಂದರು. ಕೃಷಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಮತ್ತು ಆವಿಷ್ಕಾರದಿಂದಾಗಿ ಕೃಷಿ ಉದ್ಯಮ ಪ್ರಾಮುಖ್ಯತೆ ಹೆಚ್ಚಿಸಿಕೊಂಡಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಕಾಣಲಿದೆ ಎಂದರು. ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ ಆಳ್ವ, ಕೃಷಿ ಕಡೆ ಯುವಜನತೆಯನ್ನು ಸೆಳೆಯುದರತ್ತ ಒತ್ತು ನೀಡಬೇಕು ಎಂದರು. ಕೃಷಿಯನ್ನು ಸಂಸ್ಕೃತಿಯ ಭಾಗವಾಗಿ ಕಾಣುವ ಕಾಲ ಒಂದಿತ್ತು. ಆದರೆ ಈಗ ಅದು ಉದ್ಯಮವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.12: ಭೌಗೋಳಿಕ ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆಯನ್ನು ಇಡೀ ದೇಶದಲ್ಲಿ ಪೈಲಟ್ ಯೋಜನೆಯಾಗಿ ಕರ್ನಾಟಕದಲ್ಲಿ ಸಿದ್ದಪಡಿಸುತ್ತಿದ್ದು, ಈ ಯೋಜನೆಯಡಿ ರಾಜ್ಯದ 5 ಪೈಲಟ್ ಜಿಲ್ಲೆಗಳಲ್ಲಿ ಒಂದಾಗಿರುವ ಉಡುಪಿ ಜಿಲ್ಲೆಯ ಸಂಪೂರ್ಣ ಮಾಹಿತಿ ಅಳವಡಿಸುವ ಕಾರ್ಯಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಭೌಗೋಳಿಕ ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆಗೆ ಮಾಹಿತಿ ಅಳವಡಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಪತ್ತು ಸಂಭವಿಸಿದ ಸಮಯದಲ್ಲಿ ಅತ್ಯಂತ ತ್ವರಿತವಾಗಿ ಸ್ಪಂದಿಸಿ ಹಾಗೂ ಯೋಜನಾ ಬದ್ದವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೀವ ಹಾನಿ ಹಾಗೀ ಆಸ್ತಿ ಹಾನಿಯಾಗುವುದನ್ನು ತಡೆಯಲು ಸಾಧ್ಯವಿದೆ. ಇದಕ್ಕಾಗಿ ಭೌಗೋಳಿಕ ತಂತ್ರಜ್ಞಾನ ಆಧಾರಿತ ವಿಪತ್ತು ನಿರ್ವಹಣಾ ಯೋಜನೆ ನೆರವು ಅತ್ಯಂತ ಅಗತ್ಯವಾಗಿದ್ದು, ಈ ಯೋಜನೆಯಿಂದ ಕುಳಿತಲ್ಲಿಂದಲೇ ,ಅತ್ಯಂತ ಶೀಘ್ರದಲ್ಲಿ ವಿಪತ್ತು ನಿರ್ವಹಣೆಗೆ ತ್ವರಿತವಾಗಿ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.10: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2021 ನೇ ಸಾಲಿನ ಜನವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ. 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146 ಅನ್ನು ಸಂಪರ್ಕಿಸುವAತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಯೋಗಿನಾಯ್ಕ ಇವರು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ತೃತೀಯ, ಕಬಡ್ಡಿಯಲ್ಲಿ ದ್ವಿತೀಯ ಒಟ್ಟು ಮೂರು ಪದಕಗಳನ್ನು ಪಡೆದಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು. ಇದರಿಂದ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳ ಬಗ್ಗೆ ಅರಿವು ಉಂಟು ಮಾಡುವಲ್ಲಿ ಸಹಕಾರಿಯಾಗುತ್ತದೆ ಎಂದು ಬೆಳ್ವೆ ಸತೀಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್‌ನ ಸತೀಶ್ ಕಿಣಿ ಬೆಳ್ವೆ ಹೇಳಿದರು. ಅವರು ಕೋಟೇಶ್ವರ ಶ್ರೀ ಮಹಾದೇವಿ ಮಾರಿಯಮ್ಮ ದೇವಸ್ಥಾನ ೧೮ನೇ ವರ್ಷದ ಪ್ರತಿಷ್ಠಾವರ್ಧಂತ್ಸುತ್ಸವ ಮತ್ತು ಸಾಂಸ್ಕೃತಿಕ ಸಂಘದ ೩೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಕೋಟೇಶ್ವರ ಎನ್.ಆರ್.ಆಚಾರ್ಯ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಎನ್.ಭಾಸ್ಕರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕೋಟಿಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ಶ್ರೀ ಮಹಾದೇವಿ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ರಮೇಶ್ ಜಿ ಪೈ, ಶ್ರೀ ಮಾರಿಯಮ್ಮ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸುಕೇಶ್ ಶೇಟ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವೇದಮೂರ್ತಿ ಪ್ರಸನ್ನಕುಮಾರ ಐತಾಳ್ ಇವರ ನೇತೃತ್ವದ ಪೌರೋಹಿತ್ಯದಲ್ಲಿ ಬ್ರಹ್ಮಕಲಶ ಸಹಿತ ಅಷ್ಟೋತ್ತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮಂಡಲದ ಶಿರೂರು, ಬೈಂದೂರು, ಕಿರಿಮಂಜೇಶ್ವರ,ಕೊಲ್ಲೂರು,ಗಂಗೊಳ್ಳಿ, ಕಾವ್ರಾಡಿ, ಸಿದ್ದಾಪುರ ಹಾಗೂ ಕರ್ಕುಂಜೆ ಮಹಾಶಕ್ತಿ ಕೇಂದ್ರಗಳಲ್ಲಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಸ್ಮರಣಾರ್ಥ ಸಮರ್ಪಣಾ ದಿನ ನೆರವೇರಿತು. ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ನಿಧಿ ಸಮರ್ಪಣೆ ಮಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಡಿಸೆಂಬರ್ 2021ರಲ್ಲಿ ನಡೆದ ಸಿ.ಎ.-ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಅಭೂತಪೂರ್ವ ಫಲಿತಾಂಶವನ್ನು ಪಡೆದು ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವಿದ್ಯಾರ್ಥಿಗಳಾದ ದೀಪಕ್ ಹೆಗ್ಡೆ-325(81.25%), ಎಂ. ಅಭಿಷೇಕ್ ರಾವ್-302 (75.5%), ದೀಕ್ಷಾ-301 (75.25%), ನೇಹ ನಾಯಕ್- 299(74.75%), ನಿತೀಶ್ ಕಾಮತ್ -297(74.25%), ದಶಮಿ ಎನ್ -295(73.75%), ಐಶ್ವರ್ಯ ಎಂ- 285(71.25%), ನಂದನ-281 (70.25%), ನಾಗರಾಜ್ ಎಂ 280 (70%), ಭುವನ ಶೆಣೈ -278 (69.5%) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಕಾಲೇಜಿನಿಂದ ಒಟ್ಟು 155 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೇಶಿಯ ಫಲಿತಾಂಶ 30.28% ಆಗಿದ್ದು, ಆಳ್ವಾಸ್ ಕಾಲೇಜು 66.45% ಫಲಿತಾಂಶ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದೆ. ವಿದ್ಯಾರ್ಥಿಗಳಾದ ದೀಕ್ಷಿತ ಆರ್, ಆಶ್ರಿತಾ ಎಂ. ಎಸ್, ಮಂಜೂಷ, ತನುಷ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಸಾಮಾನ್ಯ ಸಭೆಯ ನಡೆಯಿತು. ಲೋಕಾಯುಕ್ತದಲ್ಲಿ ದೂರು ಇರುವುದರಿಂದ ಯುಜಿಡಿ ಕಾಮಗಾರಿ ಮುಂದುವರಿಸಲು ತೊಡಕಾಗುತ್ತದೆ ಎಂಬ ವಿಷಯದಲ್ಲಿ ಸದಸ್ಯ ಶ್ರೀಧರ ಶೇರೆಗಾರ್ ಹಾಗೂ ಕೆ. ನಿತ್ಯಾನಂದ ಅವರು ಚರ್ಚೆ ಆರಂಭಿಸಿದರು. ಲೋಕಾಯುಕ್ತಕ್ಕೆ ದೂರು ನೀಡಲು ಪುರಸಭೆ ೨೩ ಸದಸ್ಯರು ಬೆಂಬಲ ನೀಡಿದ್ದಾರೆ. ದೂರು ನೀಡಿದ ಆಡಳಿತ ಸದಸ್ಯ ಗಿರೀಶ್ ಜಿ. ಎಸ್., ಭೂಮಿ ವಿಕ್ರಯದಲ್ಲಿ ಹೆಚ್ಚಿಗೆ ಹಣ ಹೋಗಿದೆ ಎನ್ನುವ ಆರೋಪ ಮಾಡಿದ್ದು ಅದರಂತೆ ತನಿಖೆ ಮಾಡಲು ದೂರು ನೀಡಿದ್ದು, ಕಾಮಗಾರಿ ನಿಲ್ಲಸದೇ ಕಾನೂನು ಸಲಹೆಗಾರರ ಮಾಹಿತಿ ಪಡೆದು ಮುಂದುವರಿಯಬಹುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸದಸ್ಯ ಗಿರೀಶ್ ಜಿ. ಎಸ್., ಕಾಮಗಾರಿಯಲ್ಲಿನ ಅಕ್ರಮ ಪ್ರಶ್ನಿಸಿ ದೂರು ನೀಡಿದ್ದೇನೆ. ಹಣ ಹೆಚ್ಚಿಗೆ ಹೋದ ಬಗ್ಗೆ ಅದಕ್ಕೆ ಸಂಬಂಧಪಟ್ಟವರು ಹೊಣೆಯಾಗಲಿದ್ದು, ಹೆಚ್ಚುವರಿ ಹಣ ಯಾರು ಕಾರಣರೋ ಅವರಿಂದ ವಸೂಲು ಮಾಡಲಾಗುತ್ತದೆ. ಇದಕ್ಕೂ ಕಾಮಗಾರಿ ಮುಂದುವರಿಸುವುದಕ್ಕೂ ಸಂಬಂಧಿವಿಲ್ಲ. ಆದ ಅನ್ಯಾಯದ ವಿರುದ್ಧ ದೂರು…

Read More