ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಧುನಿಕತೆಗೆ ತೆರೆದುಕೊಳ್ಳದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಕ್ಷರ ಪ್ರಪಂಚಕ್ಕೆ ಪರಿಚಯಿಸುತಾ, ಆರೋಗ್ಯಕರ ಸಮಾಜ ಕಟ್ಟುವಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಶ್ರಮಿಸುತ್ತಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ-ಶಿಕ್ಷಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇವಲ ಪುಸ್ತಕದ ಓದಿಗೆ ವಿದ್ಯಾರ್ಥಿಗಳನ್ನು ಸೀಮಿತವಾಗಿರಿಸದೆ, ಭವಿಷ್ಯದ ಬದುಕಿಗೆ ಪೂರಕವಾಗುವಂತೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳ ಪರಿಣಿತರನ್ನಾಗಿಸುತ್ತಿದೆ ಎಂದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಗಣಪತಿ ಎಮ್.ಎಮ್. ಮಾತನಾಡಿ, ವಿದ್ಯಾರ್ಥಿಗಳನ್ನು ಸಮರ್ಥ ಪ್ರಜೆಯನ್ನಾಗಿ ರೂಪುಗೊಳಿಸುವಲ್ಲಿ ಹೆತ್ತವರ-ಶಿಕ್ಷಕರ ಸಹಭಾಗಿತ್ವ ಅಗತ್ಯ ಎಂದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ವಿ.ಕೆ.ಆರ್. ಆಚಾರ್ಯ ಮತ್ತು ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲೆ ಚಿಂತನಾ ರಾಜೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕೃತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕೃತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು ಪಿಇಎಸ್ ಯುನಿವರ್ಸಿಟಿಯ ಪ್ರಾಧ್ಯಪಕ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಹೇಳಿದರು. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವಿಂದು ಬಳಸುವ ಇಂಗ್ಲೀಷ್, ಕನ್ನಡ, ಹಿಂದಿ ಇನ್ನಿತರ ಭಾಷೆಗಳ ಮೂ ಅರ್ಥವನ್ನು ತಿಳಿಯುವ ಪ್ರಯತ್ನವನ್ನು ನಾವು ಮಾಡುತ್ತಿಲ್ಲ. ಸಂಸ್ಕೃತ ಭಾಷೆಯೊಂದೆ ಈ ಎಲ್ಲಾ ಭಾಷೆಗಳ ಮೂಲವಾಗಿದೆ ಎಂದರು. ನಮ್ಮತನವನ್ನು ನಮ್ಮ ಸಂಸ್ಕೃತಿಯನ್ನು ನಾವು ಎಲ್ಲಿ ಮರೆತಿದ್ದೇವೆ ಎಂಬುದನ್ನು ಕಂಡುಕೊಳ್ಳುವ ಕಾರ್ಯವಾಗಬೇಕಿದೆ. ನಮ್ಮ ಮೂಲ ಭಾಷೆ ಸಂಸ್ಕೃತವನ್ನು ಮರೆತು ಅನ್ಯ ಭಾಷೆಯನ್ನು ಕಲಿಯಲು ಪ್ರಯತ್ನಿಸುತ್ತಿರುವುದನ್ನು ನೋಡಿದರೆ ಕಸಿವಿಸಿಯಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ನಾವಿಂದು ಆರ್ಯುವೇದ, ರಾಜ್ಯಶಾಸ್ತ್ರ, ವಿಜ್ಞಾನ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ ಆದರೆ ನಮಗೆ ಇದರ ಮೂಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳೆಯರಿಗೆ ಅವಕಾಶ ದೊರೆತರೆ, ಎಲ್ಲರಿಂದ ಉತ್ತಮ ಸಹಕಾರ ದೊರೆತರೆ ಕೈಹಿಡಿದ ಕಾರ್ಯ ಯಶಸ್ವಿಯಾಗುತ್ತದೆ. ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯ ನಡೆಯಬೇಕು. ಉತ್ತಮ ಗುಣಗಳನ್ನು ಬೆಳೆಸಬೇಕು. ಸಂಜೆ ಮನೆ ಮನೆಗಳಲ್ಲಿ ಭಜನೆ, ಪ್ರಾರ್ಥನೆ ನಡೆದರೆ ಯುವಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಬೆಳೆಯುತ್ತದೆ. ಮನುಷ್ಯನಲ್ಲಿ ಉತ್ತಮ ಗುಣವಿದ್ದರೆ ಆದ ಕಲಿತ ವಿದ್ಯೆಗೆ ಬೆಲೆ ಬರುತ್ತದೆ. ಸ್ವಸಹಾಯ ಸಂಘದ ಸದಸ್ಯರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ತಮ್ಮ ಜೀವನದ ಯಶಸ್ಸಿಗಾಗಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ಶ್ರೀ ಪಂಜುರ್ಲಿ ದೈವಸ್ಥಾನದ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗಂಗೊಳ್ಳಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರಾಸಿ ವಲಯ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ಜರಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿನಿ ಮಾಧ್ಯಮ ಸಮಾಜದಲ್ಲಿ ಪ್ರಭಾವ ಬೀರುವಂತದ್ದು. ಸಿನಿಮಾ ಅನ್ನುವುದು ಓಳ್ಳೆಯದು ಮತ್ತು ಕೆಟ್ಟದ್ದೂ ಇದೆ ಎನ್ನುವುದನ್ನು ಹೇಳುತ್ತಾರೆ. ಭಾರತದ ಸಿನಿಮಾ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಪ್ರತಿಭೆಗಳನ್ನು ಹೊಂದಿರುವ ಕುಂದಾಪುರಕ್ಕೆ ಹೆಮ್ಮೆಯ ವಿಷಯ. ಕುಂದಾಪುರ ಭಾಗದ ಏಳಿಗ್ಗೆಗಾಗಿ ಸಿನಿ ದೃಶ್ಯಗಳನ್ನು ರಚಿಸುವಂತೆ ಆಗಲಿ ಎಂದು ಕುಂದಾಪುರ ಡಿವೈಎಸ್‌ಪಿ ಬಿ.ಪಿ. ದಿನೇಶ್‌ಕುಮಾರ್ ಹೇಳಿದರು. ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಭವನದಲ್ಲಿ ಐಶ್ವರ್ಯ ಮೀಡಿಯಾ ಆಯೋಜನೆಯ ಕುಂದಾಪುರ ಪರಿಸರದಲ್ಲಿ ಪ್ರಥಮ ಕಿರುಚಿತ್ರ ಸ್ಪರ್ಧೆ ಸಿನಿ ಕುಂದಾಪ್ರ 2019 ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅತಿಥಿ ಪ್ರತಕರ್ತ ಜಾನ್ ಡಿಸೋಜಾ ಶುಭಶಂಸನೆ ಮಾಡುತ್ತ ಚಿತ್ರ ದೃಶ್ಯಕರಿಸುವುದು ಪರಿಶ್ರಮ, ಕ್ರೀಯಾತ್ಮಕ ಚಿಂತನೆ ಆಗಿರುವ ಕೆಲಸಗಳು. ನಾವು ಮಾಡಬೇಕಾದ ಕೆಲಸಗಳ ಪ್ರಯತ್ನಗಳಿಗೆ ಅಭಿಲಾಷೆ, ಇಚ್ಚೆ, ಶ್ರಧ್ಧೆ ಇದ್ದಾಗ ಓಳ್ಳೆಯ ಫಲಿತಾಂಶಗಳನ್ನು ಕೊಡಬಹುದು. ಮುಂಬಯಿ ಮತ್ತು ಬೆಂಗಳೂರಿನಲ್ಲಿ ನಡೆಯುವಂತಹ ಸಿನಿಮಾ ಕಾರ್ಯಕ್ರಮಗಳ ಮಾದರಿಯಲ್ಲಿ ಇಂದು ಕೋಟೇಶ್ವರದಲ್ಲಿ ಐಶ್ವರ್ಯ ಮೀಡಿಯಾ ಸಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತಿದ ಬಳಿಕ ಪಲ್ವಮಾ ಬಾಂಬ್ ದಾಳಿ ಘಟನೆಯನ್ನು ಖಂಡಿಸಿ ಮತ್ತು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಕುಂದಾಪುರದ ವಿವಿಧ ಸಂಘಟನೆಗಳು ಸೈದ್ಧಾಂತಿಕ ಭೇದವನ್ನು ಮೀರಿ ಒಂದಾಗಿ ಮೊಂಬತ್ತಿ ಬೆಳಗಿ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟದಲ್ಲಿ ನಡೆದ ಅವಳಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್‌ನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಕೋಟ ಕ್ಷೇತ್ರದಿಂದ ಆಯ್ಕೆಯಾಗಿದ್ದ ರಾಘವೇಂದ್ರ ಕಾಂಚನ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ. ಕೋಟದ ಮಣೂರು ಚಿಕ್ಕನಕೆರೆ ಎಂಬಲ್ಲಿ ಜ.೨೬ರಂದು ಯತೀಶ್ ಹಾಗೂ ಭರತ್ ಎಂಬ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚಂದ್ರಶೇಖರ ರೆಡ್ಡಿಯನ್ನು ಫೆ.೧೪ರಂಡು ಪೊಲೀಸರು ಬಂಧಿಸಿದ್ದರು. ಅಲ್ಲದೆ ಪ್ರಕರಣದಲ್ಲಿ ಆರೋಪಿಗಳಿಗೆ ನೆರವಾದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನೂ ಬಂಧಿಸಲಾಗಿದ್ದು, ಇದುವರೆಗೆ ೧೬ ಮಂದಿಯನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇದನ್ನೂ ಓದಿ: ► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 .…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟ ಅವಳಿ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಎಲ್ಲಾ ಹದಿನಾರು ಆಪಾದಿತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ಜನರಿಗೆ ಮಾ.೧ರ ತನಕ ನ್ಯಾಯಾಂಗ ಬಂಧನ ಹಾಗೂ ಇಬ್ಬರಿಗೆ ಫೆ.20ರ ತನಕ ಪೊಲೀಸ್ ಕಸ್ಟಿಡಿಗೆ ಒಪ್ಪಿಸಲಾಗಿದೆ. ಕೋಟ ಪೊಲೀಸ್ ಠಾಣೆ ಸರಿಹದ್ದಿನ ಮಣೂರು ಚಿಕ್ಕಿನಕರೆ ಸಮೀಪ ಸ್ನೇಹಿತರಾದ ಭರತ್ ಶ್ರೀಯಾನ್ ಹಾಗೂ ಯತೀಶ್ ಕರ್ಕೇರ ಎಂಬವರ ತಲವಾರಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ ನಡೆದ ನಂತರ ಆಪಾದಿತರು ತಲೆ ಮರೆಸಿಕೊಂಡಿದ್ದು, ವಿವಿಧ ಸ್ಥಳದಲ್ಲಿ ಕೊಲೆಗೆ ಸಂಬಂಧಿಸಿದ ವ್ಯಕ್ತಿಗಳ ಪೊಲೀಸರು ಬಂಧಿಸಿದ್ದರು. ಕೊಲೆಯಲ್ಲಿ ಭಾಗಿ ಹಾಗೂ ಸಾಕ್ಷಿನಾಶ ಮತ್ತು ಕೊಲೆಗಾರರಿಗೆ ಸಹಕಾರ ಮಾಡಿದ ಆರೋಪದಡಿ ಒಟ್ಟು ೧೬ಜನರ ಬಂಧಿಸಿದ್ದು, ಎಲ್ಲರನ್ನು ಕುಂದಾಪುರ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶ ಶ್ರೀಕಾಂತ್ ಮುಂದೆ ಹಾಜರು ಪಡಿಸಲಾಗಿತ್ತು. ಅಭಿಷೇಕ್ ಪಾಲನ್, ರೊಟ್ಟಿ ನಾಗರಾಜ್, ಸಂತೋಷ್ ಕುಂದರ್, ಪ್ರಣವ್ ರಾವ್, ಪವನ್ ಅಮೀನ್, ವಿರೇಂದ್ರ ಆಚಾರ್ಯ, ರಿತೀಶ್ ಕರ್ಕೇರಾ, ಶಂಕರ ಮೊಗವೀರ, ರಾಜಶೇಖರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದ ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಯಾಗಿದ್ದ ಎಚ್.ರಾಮಚಂದ್ರ ಭಟ್ (72) ಅಲ್ಪ ಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಡಿನ ಹಲವು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಯ ಪದಾಧಿಕಾರಿಯಾಗಿ ದುಡಿದಿದ್ದ ಅವರ ಅಧಿಕಾರವಧಿಯಲ್ಲಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕಂಡಿತ್ತು. ತಂದೆ ಗಣಪಯ್ಯ ಭಟ್ಟರ ಕಾಲಾನಂತರ ದೇವಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಅವರು ದೇಶಾದ್ಯಾಂತ ಭಕ್ತರನ್ನು ಕ್ಷೇತ್ರಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದ್ದರು. ಶ್ರೀ ಸಿದ್ಧಿವಿನಾಯಕ ಶೈಕ್ಷಣಿಕ ಪ್ರತಿಷ್ಠಾನದ ಅಡಿಯಲ್ಲಿ ಐಸಿಎಸ್‌ಇ ಮಾನ್ಯತೆ ಹೊಂದಿರುವ ಆಂಗ್ಲ ಮಾಧ್ಯಮ ವಸತಿ ಶಾಲೆ. ಪ್ರಾಥಮಿಕ ಶಾಲೆ ಹಾಗೂ ಗೋ ಶಾಲೆಯನ್ನು ನಡೆಸುತ್ತಿದ್ದಾರೆ. ಅಪರೂಪದ ಗಿಡಮೂಲಿಕೆಗಳ ರಕ್ಷಣೆಗಾಗಿ ಮೂಲಿಕಾ ವನವನ್ನು ಸ್ಥಾಪಿಸಿದ್ದರು. ಗ್ರಾಮೀಣ ಭಾಗದ ಜನರಿಗಾಗಿ ಸುಸಜ್ಜಿತ ಆಯುರ್ವೇದ ಆಸ್ಪತ್ರೆ ಹಾಗೂ ವೃತ್ತಿ ಪರ ತರಬೇತಿ ಕೋರ್ಸ್‌ಗಳನ್ನು ಆರಂಭಿಸಬೇಕು ಎನ್ನುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ನವೆಂಬರ್ ೨೦೧೮ ರಲ್ಲಿ ನಡೆಸಿರುವ ಸಿಎ ಪರೀಕ್ಷೆಯಲ್ಲಿ ಮರವಂತೆ ಉಷಾ ಪೂಜಾರಿ ತೇರ್ಗಡೆಯಾಗಿದ್ದಾರೆ. ಅವರು ಮರವಂತೆಯ ನಾಗಮ್ಮ ಮತ್ತು ನರಸಿಂಹ ಪೂಜಾರಿ ಅವರ ಪುತ್ರಿಯಾಗಿದ್ದು, ಪದವಿಯ ಬಳಿಕ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಇದನ್ನೂ ಓದಿ: ► ಸಿಎ ಪರೀಕ್ಷೆ ತೇರ್ಗಡೆಯಾದ ಉಷಾ ಪೂಜಾರಿಗೆ ಸನ್ಮಾನ – https://kundapraa.com/?p=31254 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೆಯ ತರಗತಿಯ ವಿದ್ಯಾರ್ಥಿನಿ ಫಾತಿಮಥುಲ್ ಶಹನಃ ರಾಜ್ಯಮಟ್ಟದ ನವೋದಯ ಕನ್ನಡ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು. ಗಂಗೊಳ್ಳಿಯ ಅಬ್ದುಲ್ ಸಲಾಂ ಮತ್ತು ಸುನೀರಾ ದಂಪತಿಯ ಪುತ್ರಿ.
