ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹತ್ತೊಂಬತ್ತನೇ ವರ್ಷದ ಸಂಭ್ರಮದಲ್ಲಿರುವ ಬೈಂದೂರಿನ ಸಾಂಸ್ಕೃತಿಕ ಸೇವಾ ಪ್ರತಿಷ್ಠಾನ ‘ಸುರಭಿ ರಿ. ಬೈಂದೂರು’ ಸಂಸ್ಥೆಯ ಆಶ್ರಯದಲ್ಲಿ ದಿ. 23, 24 ಹಾಗೂ 25 ಜನವರಿ 2019ರಂದು ಮೂರು ದಿನಗಳ ಕಾಲ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಪ್ರತಿದಿನ ಸಂಜೆ 6ಕ್ಕೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ ಎಂದು ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ತಿಳಿಸಿದರು. ಬೈಂದೂರಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರತಿವರ್ಷ ಕೊಡಮಾಡುತ್ತಿರುವ ಬಿಂದಶ್ರೀ ಪ್ರಶಸ್ತಿಗೆ ಈ ಭಾರಿ ಪ್ರಸಿದ್ಧ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ರಮೇಶ್ ಭಟ್ ಆಯ್ಕೆಯಾಗಿದ್ದು ಜ.24ರಂದು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಜನವರಿ 23ರ ಸಂಜೆ 6ಕ್ಕೆ ಚಾಲನೆಗೊಳ್ಳಲಿರುವ ಸುರಭಿ ಜೈಸಿರಿಯನ್ನು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಪರಸ್ತ್ರೀಯೊಂದಿಗಿನ ಪ್ರೇಮ ಪ್ರಸಂಗದಿಂದ ತನ್ನದೇ ಮಕ್ಕಳಿಬ್ಬರಿಗೆ ವಿಷವುಣಿಸಿ ಕೊಂದ ತಂದೆ, ಬೈಂದೂರು ಗಂಗನಾಡುಗೋಳಿ ಕಕ್ಕಾರಿನ ಶಂಕರನಾರಾಯಣ ಹೆಬ್ಟಾರ್ (48)ಗೆ ಗಲ್ಲು ಶಿಕ್ಷೆ ವಿಧಿಸಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ| ಪ್ರಕಾಶ್ ಖಂಡೇರಿ ಶನಿವಾರ ಮಹತ್ವದ ತೀರ್ಪು ನೀಡಿದ್ದಾರೆ. ಜ. 3ರಂದು ಆರೋಪ ಸಾಬೀತಾಗಿದ್ದು, ಜ. 7ಕ್ಕೆ ತೀರ್ಪನ್ನು ಮುಂದೂಡಿದ್ದರು. ಬಳಿಕ ಮತ್ತೆ ನ್ಯಾಯಾಧೀಶರು ಅದನ್ನು ಜ. 19ಕ್ಕೆ ಮುಂದೂಡಿದ್ದರು. ಹಿರಿಯಡಕದ ಜಿಲ್ಲಾ ಕಾರಾಗೃಹದಲ್ಲಿದ್ದ ಅಪರಾಧಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಇದು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸುತ್ತಿರುವ 3ನೇ ಮರಣದಂಡನೆ ತೀರ್ಪಾಗಿದೆ. ಪ್ರಕರಣದ ಹಿನ್ನೆಲೆ 2016ರ ಅ. 16ರಂದು ಪರಸ್ತ್ರೀ ವ್ಯಾಮೋಹದಿಂದ ಶಂಕರನಾರಾಯಣನು ತನ್ನಿಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷ ನೀಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಪರಿಣಾಮ ಮಕ್ಕಳಾದ ಅಶ್ವಿನ್ ಕುಮಾರ್ ಹೆಬ್ಟಾರ್ (15) ಹಾಗೂ ಐಶ್ವರ್ಯಾ ಲಕ್ಷ್ಮೀ ಹೆಬ್ಟಾರ್ (13) ಸಾವಿಗೀಡಾಗಿದ್ದು, ಪತ್ನಿ ಮಹಾ ಲಕ್ಷಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಾಲಾ ಕಾಲೇಜುಗಳಲ್ಲಿ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿ ಮಕ್ಕಳನ್ನು ಕ್ರೀಡಾ ಕ್ಷೇತ್ರದಲ್ಲಿ ಬೆಳೆಸಬೇಕು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಪಡುವರಿ ಗ್ರಾಮದ ಸೋಮೇಶ್ವರ ಕಡಲ ತೀರದಲ್ಲಿ ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ಬೆಸುಗೆ ಫೌಂಡೇಶನ್ ಬಂದೂರು, ಗ್ರಾಪಂ ಪಡುವರಿ, ಜಿಲ್ಲಾಡಳಿತ ಉಡುಪಿ ಮತ್ತು ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯುವ ೬ನೇ ಕರ್ನಾಟಕ ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್ಶಿಪ್-೨೦೧೯ ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯ ಹಾಗೂ ಸುಪ್ತ ಪ್ರತಿಭೆಯನ್ನು ಸ್ಪರ್ಧೆಯ ಮೂಲಕ ಹೊರಹೊಮ್ಮಿಸುವುದರ ಜತೆಗೆ ಅವರ ಅಭಿವೃದ್ಧಿಗಾಗಿ ಮತ್ತು ಗುಣಾತ್ಮಕ ಕಲಿಕೆಯನ್ನು ಪ್ರೋತ್ಸಾಹಿಸುವ ನೆಲೆಯಲ್ಲಿ ಇಂತಹ ಕಾರ್ಯಕ್ರಮಗಳು ಸಹಕರಿಯಾಗಬಲ್ಲದು. ಮುಂದಿನ ದಿನಗಳಲ್ಲಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ರೀಡೆಗಳ ಮೂಲಕ ಯುವ ಸಮುದಾಯವನ್ನು ಸಂಘಟಿಸಲು ಸಾಧ್ಯವಾಗುತ್ತದೆ. ಕ್ರೀಡಾಳುಗಳಿಗೆ ಅವಶ್ಯಕತೆಯಾಗಿರುವಂತ ಕ್ರೀಡಾಂಗಣದ ಪ್ರಗತಿ ಅತ್ಯವಶ್ಯಕವಾಗಿದ್ದು, ಮುಂದಿನ ದಿನದಲ್ಲಿ ಬೈಂದೂರು ಗಾಂಧಿ ಮೈದಾನದ ಪ್ರಗತಿ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಆದ್ಯತೆ ನೀಡುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಬಂದೂರು ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ಕಾಲ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಹೊನಲು ಬೆಳಕಿನ ೪೦ ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ, ಕ್ರೀಡಾ ರಂಗದಲ್ಲಿ ಸಾಧನೆಗೈದವರನ್ನು ಸಮ್ಮಾನಿಸಿ ಮಾತನಾಡಿದರು. ದೇಶ ಮತ್ತು ಸಮಾಜವನ್ನು ಕಟ್ಟಬೇಕಾದರೆ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿರುತ್ತದೆ. ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳನ್ನು ಆಮಂತ್ರಿಸಿ ಸಂಘರ್ಷಕ್ಕೆ ಅವಕಾಶ ಕೊಡದೇ ಸೌಹಾರ್ದತೆಯಿಂದ ಪಂದ್ಯದ ಮೂಲಕ ತಂಡಗಳನ್ನು ಮುಖಾಮುಖಿಯಾಗಿಸಿ ಬಾಂಧವ್ಯ ಬೆಸೆಯುವ ಮೂಲಕ ಒಗ್ಗಟ್ಟನ್ನು ಸಾರುವ ಬೈಂದೂರು ಸ್ಪೋಟ್ಸ್ ಕ್ಲಬ್ನ ಪ್ರಯತ್ನ ಶ್ಲಾಘನೀಯ ಎಂದ ಅವರು ಕ್ರೀಡಾ ಸ್ಪೂರ್ತಿ, ಬದ್ದತೆ ಹಾಗೂ ಆತ್ಮವಿಶ್ವಾಸವಿದ್ದರೆ ಯಾವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಕ್ರಮವಾಗಿ ಚಿರತೆ ಚರ್ಮವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಚರ್ಮ ಸಹಿತ ಹತ್ತು ಜನ ಆರೋಪಿಗಳು ಸಿಕ್ಕಿ ಬಿದ್ದ ಘಟನೆ ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಸಿಐಡಿ ಅರಣ್ಯ ಘಟಕ ಬೆಂಗಳೂರು ಇವರ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ವಾರದೊಳಗೆ ನಡೆದ ಮೂರನೇ ಪ್ರಕರಣ ಇದಾಗಿದೆ. ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳನ್ನು ಕಾರವಾರ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿಂದೂರ್ ಈಸ್ಟ್ ನಿವಾಸಿ ಶಾಮ್ಯುಯೆಲ್ ಎಂಬಾತನ ಪುತ್ರ ಸೂರಜ್(೩೪), ಭಟ್ಕಳ ಸಾಗರ ರಸ್ತೆಯ ಕಡುವಿನಕಟ್ಟೆ ನಿವಾಸಿ ರಘು, ಕುಂದಾಪುರ ತಾಲೂಕಿನ ಬೈಂದೂರು ಗ್ರಾಮದ ಮಯ್ಯಾಡಿ ಶ್ರೀಧರ ಎಂಬಾತನ ಪುತ್ರ ನಾಗರಾಜ್, ಭಟ್ಕಳದ ಅಡವಳ್ಳಿ ನಿವಾಸಿ ವೆಂಕಟೇಶ್ ನಾಯಕ್ ಎಂಬಾತನ ಪುತ್ರ ನಾಗರಾಜ್, ಬೇಂಗ್ರೆ ಚಿಂಗಾರಮಕ್ಕಿ ನಿವಾಸಿ ದಿ. ರಾಮ ಎಂಬಾತನ ಪುತ್ರ ಪ್ರವೀಣ್ ರಾಮ್ ದೇವಾಡಿಗ, ವೆಂಕಟಪುರ ಗ್ರಾಮದ ರಂಗಿನಕಟ್ಟೆ ಗಣಪತಿ ಎಂಬಾಥನ ಪುತ್ರ ಮೋಹನ ಜಿ. ನಾಯ್ಕ(24), ಬೈಂದೂರು ತೆಗ್ಗರ್ಸೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೈಲ್ವೆ ಯಾತ್ರಿಕರಿಗೆ ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಸಂಜಯ ಗುಪ್ತಾ ಅವರೊಂದಿಗೆ ಮಾತುಕತೆ ನಡೆಸಿದರು. ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಅವರನ್ನು ಭೇಟಿಯಾದ ಸಂಸದರು ರೈಲ್ವೆ ನಿಲ್ದಾಣ ಮೇಲ್ದರ್ಜೆ, ಮಂಗಳ ಎಕ್ಸ್ಪ್ರೆಸ್ ರೈಲು ನಿಲುಗಡೆ, ಟ್ಯಾಕ್ಸಿ ರಿಕ್ಷಾ ಸ್ಟ್ಯಾಂಡ್ ಅಭಿವೃದ್ಧಿ, ಎ.ಟಿಎಂ ಸೌಲಭ್ಯ, ರೈಲ್ವೆ ಗೇಟ್ ಎಲ್.ಸಿ-೭೩ಗೆ ಅಂಡರ್ ಬ್ರಿಡ್ಜ್ ಹಾಗೂ ರೈಲ್ವೆ ಟ್ರ್ಯಾಕ್ ಡಬ್ಲಿಂಗ್ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಎಂಡಿ ಸಂಜಯ ಗುಪ್ತಾ ಪ್ರತಿಕ್ರಿಯಿಸಿ ತೌಕೂರಿನಿಂದ ಬೈಂದೂರು ತನಕ ಸುಮಾರು ೧೪೧ಕಿ.ಮೀ ರೈಲ್ವೆ ಟ್ರ್ಯಾಕ್ ಪ್ಯಾಚ್ ಡಬ್ಲಿಂಗ್ಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದು ಕ್ಯಾಬಿನೆಟ್ನಲ್ಲಿದೆ. ಎಟಿಎಂ ಸೌಲಭ್ಯವನ್ನು ಒದಗಿಸಿಕೊಡುವ ವ್ಯವಸ್ಥೆ ಮಾಡಲಾಗುವುದು. ರೈಲ್ವೆ ನಿಲ್ದಾಣದ ಬಳಿಯ ಟ್ಯಾಕ್ಸಿ, ರಿಕ್ಷಾ ಸ್ಟ್ಯಾಂಡ್ ಅಭಿವೃದ್ಧಿಗೂ ಅಗತ್ಯ ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಕುಂದಾಪುರದ ಪ್ರಾಪ್ತಿ ಹೆಗ್ಡೆ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ನೃತ್ಯ ಗುರುಗಳಾದ ವಿದುಷಿ ಪ್ರವಿತಾ ಅಶೋಕ್ ಇವರಲ್ಲಿ ತನ್ನ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ಕುಂದಾಪುರದ ವಕೀಲರು ಮತ್ತು ನೋಟರಿಯವರಾದ ಬಿ. ಪ್ರಕಾಶ್ಚಂದ್ರ ಹೆಗ್ಡೆ ಮತ್ತು ವೀಣಾ ಕಾಂತಿ ಹೆಗ್ಡೆ ದಂಪತಿಗಳ ಪುತ್ರಿ. ಪ್ರಸ್ತುತ ಇವರು ಕುಂದಾಪುರದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕಿನ ಗಂಗಾನಾಡು ಸುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಲಘು ಭೂಕಂಪದ ಅನುಭವವಾಗಿದ್ದು, ಕ್ಷಣಕಾಲ ಜನರು ಬೆಚ್ಚಿಬಿದ್ದ ಘಟನೆ ನಡೆದಿದೆ. ಬೈಂದೂರಿನ ಗಂಗಾನಾಡು, ಅತ್ಯಾಡಿ, ಸಾರಂಕಿ, ಕುಳ್ಳಂಕಿ, ಗೋಳಿಬೇರು, ಮದ್ದೋಡಿ, ಕ್ಯಾರ್ತೂರು ಆಸುಪಾಸಿನಲ್ಲಿ ಸುಮಾರು ಮಧ್ಯಾಹ್ನ 2:30ರ ವೇಳೆಗೆ 10 ಸೆಕೆಂಡುಗಳ ಕಾಲ ಸಣ್ಣಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಲಘು ಕಂಪನವಾದರೂ ಮನೆಗಳಲ್ಲಿ ಜೋಡಿಸಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿದ್ದವು. ಗೋಳಿಬೇರಿನ ಮನೆಯೊಂದು ಬಿರುಕು ಬಿಟ್ಟಿತ್ತು ಎನ್ನಲಾಗಿದೆ. ಪಾತ್ರೆಗಳು ಅಲುಗಾಡಿ ನೆಲಕ್ಕೆ ಬಿದ್ದ ತಕ್ಷಣ ಗಾಬರಿಯಿಂದ ಮನೆಯಲ್ಲಿದ್ದವರು ಓಡಿ ಹೊರಕ್ಕೆ ಬಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಪಂಚಾಯಿತ್ ನೂತನ ಅಧ್ಯಕ್ಷರಾಗಿ ಶ್ಯಾಮಲ ಎಸ್ ಕುಂದರ್, ಉಪಾಧ್ಯಕ್ಷರಾಗಿ ರಾಮಕಿಶನ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯತ್ನಲ್ಲಿ ಜ.11ರಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ಯಾಮಲ ಕುಂದರ್ ಹಾಗೂ ಮಾಲಿಕೆ ಕೆ ನಾಮಪತ್ರ ಸಲ್ಲಿಸಿದ್ದು, ಕೊನೆಯಲ್ಲಿ ನಾಮಪತ್ರ ಮಾಲಿನಿ ಕೆ ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ಶ್ಯಾಮಲ ಕುಂದರ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ರಾಮಕಿಶನ್ ಹೆಗ್ಡೆ ಏಕಮಾತ್ರ ನಾಮ ಪತ್ರ ಸಲ್ಲಿಸಿದ್ದರಿಂದ ಅವರು ಅವಿತರೋಧವಾಗಿ ಆಯ್ಕೆಯಾಗಿದರು. ಈ ಹಿಂದೆ ಅಧ್ಯಕ್ಷರಾಗಿದ್ದ ಜಯಶ್ರೀ ಮೊಗವೀರ ಹಾಗೂ ಉಪಾಧ್ಯಕ್ಷರಾಗಿದ್ದ ಪ್ರವೀಣ ಶೆಟ್ಟಿ ಅವರ ರಾಜೀನಾಮೆಯಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಖಾಲಿಯಾಗಿತ್ತು. ಪ್ರಾರಂಭದ ಒಪ್ಪಂದದಂತೆ ಮೊದಲ ಎರಡುವರೆ ವರ್ಷ ಕುಂದಾಪುರ ಕ್ಷೇತ್ರಕ್ಕೂ ನಂತರದ ಎರಡುವರೆ ವರ್ಷ ಬೈಂದೂರು ಕ್ಷೇತ್ರಕ್ಕೆ ಎನ್ನುವಂತೆ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿತ್ತು. ಅಧ್ಯಕ್ಷರಾಗಿ ಆಯ್ಕೆಯಾಗಿರುವಗ ಶ್ಯಾಮಲ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ನಿರಂತರ ಸಂಪರ್ಕ ಇಲ್ಲದೆ ಇದ್ದರೂ, ಕರ್ತವ್ಯ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಗುರುತಿಸಿಕೊಂಡಿದ್ದ ಡಾ.ಕೆ.ಮಧುಕರ ಶೆಟ್ಟಿ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದವರು. ಶಬ್ದಗಳಿಂದ ಅವರಿಗೆ ಶ್ರದ್ದಾಂಜಲಿ ಅರ್ಪಿಸಲು ಸಾಧ್ಯವಿಲ್ಲ. ದೇಶದ ಪೊಲೀಸ್ ವ್ಯವಸ್ಥೆಯ ಹೊಳೆಯುವ ನಕ್ಷತ್ರ ಅವರಾಗಿದ್ದರು ಎಂದು ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಅಜಯ್ಕುಮಾರ್ ಸಿಂಗ್ ಹೇಳಿದರು. ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರ್ನಲ್ಲಿ ಶುಕ್ರವಾರ ನಡೆದ ಡಾ.ಕೆ.ಮಧುಕರ ಶೆಟ್ಟಿ ಪ್ರಾರ್ಥನಾ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ಮಟ್ಟು ಅವರು ಆದರ್ಶವಾದಿಗಳ ಮಕ್ಕಳು ಯಾವತ್ತು ಅವರ ವಿರುದ್ದವಾಗಿರುತ್ತಾರೆ ಹಾಗೂ ಆದರ್ಶಗಳಿಗೆ ಮೊದಲ ಬಲಿಯಾಗುವುದು ಅವರ ಕುಟುಂಬ ಎನ್ನುವುದನ್ನು ಇತಿಹಾಸದಲ್ಲಿ ಕಂಡಿದ್ದೇವೆ. ಆದರೆ ಇಲ್ಲಿ ಹಾಗಾಗಲಿಲ್ಲ. ತಂದೆಯ ವ್ಯಕ್ತಿತ್ವವನ್ನು ಮೀರಿದ ಕಡು ಆದರ್ಶವಾದಿ ಅವರಾಗಿದ್ದರು. ಗಾಂಧೀಜಿ, ಅಂಬೇಡ್ಕರ್, ಬುದ್ಧ ಮುಂತಾದ ಆದರ್ಶ ಪುರುಷರ ಆದರ್ಶಗಳು ನಮ್ಮ ಮನೆಯ ಮಕ್ಕಳಿಗೆ ಬೇಡ ಅದು ಪಕ್ಕದ ಮನೆಯ ಮಕ್ಕಳಿಗೆ ಇರಲಿ…
