ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ ವರೆಗೆ ಸಹಾಯಧನ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://www.kviconline.gov.in/pmegpeportal/jsp/pmegponline.jsp ಅಥವಾ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ), 2ನೇ ಮಹಡಿ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574855 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀದರ್ನ ಖ್ಯಾತ ಸಾಹಿತಿ ಡಾ. ಎಂ. ಜಿ. ದೇಶಪಾಂಡೆ ಅವರ ‘ದೇಶಪಾಂಡೆ ಸಾಹಿತ್ಯಿಕ ಸಾಂಸ್ಕೃತಿಕ ಪ್ರತಿಷ್ಠಾನ’ವು ಉಪ್ಪುಂದದ ಕುಂದ ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಅಧ್ಯಾತ್ಮಿಕ ಚಿಂತಕ ಮತ್ತು ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳರಿಗೆ ಕೊಡಮಾಡಿದ ರಾಜ್ಯಮಟ್ಟದ ‘ಸಾಂಸ್ಕೃತಿಕ ರಾಯಭಾರಿ ಪ್ರಶಸ್ತಿ’ ಹಾಗೂ ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ, ರುಡ್ಸೆಟ್ ತರಬೇತಿ ಸಂಸ್ಥೆಯ ಮಾಜಿ ನಿರ್ದೇಶಕ, ಉಪ್ಪುಂದ ರಮೇಶ ವೈದ್ಯರಿಗೆ ಕೊಡಮಾಡಿದ ರಾಜ್ಯಮಟ್ಟದ ’ಸಾಹಿತ್ಯ ಭೂಷಣ ಪ್ರಶಸ್ತಿ’ಯನ್ನು ಪ್ರತಿಷ್ಠಾನದ ಪರವಾಗಿ ಕವಿ ಕೆ. ಪುಂಡಲೀಕ ನಾಯಕ್ ಶನಿವಾರ ಹೊಳ್ಳರ ಮನೆ ‘ಬೆಳ್ಳಿರಥ’ದಲ್ಲಿ ಪ್ರದಾನ ಮಾಡಿದರು. ಈ ಸಂದರ್ಭ ಗಣೇಶ ಪ್ರಸನ್ನ ಮಯ್ಯ, ಜಗದೀಶ ಉಪ್ಪುಂದ, ಹೊಳ್ಳರ ಹಾಗೂ ವೈದ್ಯರ ಕುಟುಂಬದ ಸದಸ್ಯರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದಲ್ಲಿ ಹುಟ್ಟಿ ಬೆಳೆದು ಕೋಟೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು ನಂತರ ಬೆಂಗಳೂರಲ್ಲಿ ವೈದ್ಯಕೀಯ ಶಿಕ್ಷಣ ಪಡೆದು ನೇತ್ರ ತಜ್ಞರಾಗಿ ಹಲವು ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೈದ ಆದಿ ಚುಂಚನಗಿರಿ ವಿವಿಯ ವೈಸ್ ಚಾನ್ಸಲರ್, ಡಾ. ಎಸ್. ಚಂದ್ರಶೇಖರ ಶೆಟ್ಟಿ ಅವರಿಗೆ ಆಲ್ಇಂಡಿಯಾ ಒಪ್ತಲ್ಮೊಲಾಜಿಕಲ್ ಸೊಸೈಟಿ ‘ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್’ ಪ್ರದಾನ ಮಾಡಿ ಗೌರವಿಸಿದೆ. ನೇತ್ರ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ರಾಜ್ಯ ಘಟಕಗಳ ಶಿಫಾರಸುಗಳನ್ನು ಪರಿಶೀಲಿಸಿ ಆಯ್ಕೆ ಮಾಡಲಾಗುತ್ತಿದೆ. ಡಾ. ಎಸ್. ಚಂದ್ರಶೇಖರ ಶೆಟ್ಟಿ ಅವರು ಹಲವು ದಶಕಗಳ ಜೀವನದಲ್ಲಿ ವೈದ್ಯಕೀಯ ತಜ್ಞರಾಗಿ, ಸ್ವಯಂ ಸೇವಕರಾಗಿ , ಶಿಕ್ಷಕರಾಗಿ, ಆಡಳಿತಾಧಿಕಾರಿಯಾಗಿ, ಅಂತರಾಷ್ಟ್ರೀಯ ಸಂಘಟನೆಗಳ ಸದಸ್ಯರಾಗಿ, ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗಿ ಅಪಾರ ಸಾಧನೆ ಮಾಡಿದವರು. ಕರ್ನಾಟಕ ಮೆಡಿಕಲ್ ಕಾಲೇಜು, ಮೈಸೂರು ಮೆಡಿಕಲ್ ಕಾಲೇಜು, ಬೆಂಗಳೂರು ಮೆಡಿಕಲ್ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ರಾಜೀವ್ ಗಾಂಧಿ ಆರೋಗ್ಯ ವಿವಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತುಮಕೂರಿನ ತಾವರೆಕೆರೆ ಹೆದ್ದಾರಿಯಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳಿದಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅಶೋಕ್ ಶೆಟ್ಟಿಯವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಭಾಗಕ್ಕೆ ಬಲವಾದ ಪೆಟ್ಟು ತಗುಲಿದ್ದರಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಪುತ್ರ ಪನ್ನಗ ಶೆಟ್ಟಿಯವರನ್ನು ಸೋಮವಾರವೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ, ಚಿಕಿತ್ಸೆ ನೀಡಲಾಗುತ್ತಿದೆ. ಅಶೋಕ್ ಕುಮಾರ್ ಶೆಟ್ಟಿಯವರು ಕುಂದಾಪುರ ತಾಲೂಕು ಛಾಯಾಗ್ರಾಹಕ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಜಿಲ್ಲಾ ಛಾಯಾಗ್ರಾಹಕ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಿಂದಿನ ಅವಧಿಯಲ್ಲಿ ಹೆರೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಒಂದು ಅವಧಿಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಪ್ರಸಿದ್ಧ ಪಂಚಗಂಗಾವಳಿ ನದಿಗಳ ಮಹತ್ವ ದೇಶಕ್ಕೆ ತಿಳಿಯುವಂತೆ ಬೆಂಗಳೂರು -ಕಾರವಾರ ಎಕ್ಸ್ಪ್ರೆಸ್ ರೈಲನ್ನು ‘ಪಂಚಗಂಗಾ ಎಕ್ಸ್ಪ್ರೆಸ್’ ಎಂದು ನಾಮಕರಣ ಮಾಡಿರುವುದಕ್ಕೆ ಪಂಚಗಂಗಾವಳಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಹಾಗೂ ಸಂಚಾಲಕ ಯು.ಎಸ್.ಶೆಣೈ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಯತ್ನ ನಡೆಸಿದ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಕುಂದಾಪುರ ಅವರಿಗೆ ಪಂಚಗಂಗಾವಳಿ ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಪೌರಾಣಿಕ ಹಿನ್ನಲೆಯಿರುವ ಕುಂದಾಪುರದ ಪಂಚಗಂಗಾವಳಿ ನದಿಗಳಾದ ಸೌಪರ್ಣಿಕಾ, ಖೇಟ, ಚಕ್ರ, ಕುಬ್ಜ, ವಾರಾಹಿ ನದಿಗಳು ಮಲೆನಾಡಿನಿಂದ ಕುಂದಾಪುರ-ಬೈಂದೂರು ತಾಲ್ಲೂಕಿನ ಪ್ರದೇಶಗಳಲ್ಲಿ ಹರಿದು ಕುಂದಾಪುರ -ಗಂಗೊಳ್ಳಿ ನಡುವೆ ಪಂಚಗಂಗಾವಳಿಯಾಗಿ ಸಮುದ್ರ ಸೇರುತ್ತವೆ. ಪೂರ್ವದಿಂದ ಹರಿದು ಉತ್ತರ ದಿಕ್ಕಿಗೆ ಸಾಗಿ, ದಕ್ಷಿಣಕ್ಕೆ ಮರಳಿ ಪಶ್ಚಿಮದಲ್ಲಿ ಐದು ನದಿಗಳು ಒಂದಾಗಿ ಅರಭಿಸಮುದ್ರ ಸೇರುವ ಈ ನಡೆ ಪ್ರಪಂಚದ ನೈಲ್ನದಿ ಬಿಟ್ಟರೆ ಬೇರೆ ಎಲ್ಲೂ ಇಲ್ಲ. ಸುಮಾರು ಎರಡು ಸಾವಿರ ಗಿಡಮೂಲಿಕೆಗಳ ನಡುವೆ ಹರಿದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಛಾಯಾಗ್ರಾಹಕ ಹಾಗೂ ಅವರ ಪುತ್ರ ಗಂಭೀರ ಗಾಯಗೊಂಡು, ಹಿಂಬದಿ ಕುಳಿತಿದ್ದ ಇನ್ನೊಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲಾ ಶಿರಾ ತಾಲೂಕಿನ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಂಭೀರಗೊಂಡವರನ್ನು ಕುಂದಾಪುರದ ಹಿರಿಯ ಛಾಯಾಗ್ರಾಹಕ ಹೇರೂರು ಅಶೋಕ ಕುಮಾರ್ ಶೆಟ್ಟಿ (58) ಹಾಗೂ ಅವರ ಪುತ್ರ ಪನ್ನಗ (24) ಎಂದು ಗುರುತಿಸಲಾಗಿದೆ. ನಾವುಂದ ಮಾನಸ ಸ್ಟುಡಿಯೋ ಮಾಲಕರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಅವರು ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಮಗ ಪನ್ನಗ ಹಾಗೂ ಕುಮಾರ್ ಎಂಬುವರ ಜೊತೆ ತೆರಳಿದ್ದು, ಕಾರ್ಯಕ್ರಮ ಮುಗಿಸಿ ತಮ್ಮ ಕಿಯಾ ಸೊನೆಟ್ ಕಾರಿನಲ್ಲಿ ಭಾನುವಾರ ರಾತ್ರಿ ವಾಪಾಸ್ಸಾಗುತ್ತಿದ್ದರು. ಅಶೋಕ್ ಕುಮಾರ್ ಶೆಟ್ಟಿ ಪುತ್ರ ಪನ್ನಗ ಕಾರು ಚಲಾಯಿಸುತ್ತಿದ್ದರು. ಮುಂಜಾನೆ 3 ಗಂಟೆ ಸುಮಾರಿಗೆ ದಾವಣಗೆರೆಯಲ್ಲಿ ಎದುರಿಗೆ ತೆರಳುತ್ತಿದ್ದ ಕಂಟೈನರ್ ಲಾರಿಗೆ ಕಾರು ಢಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಬೈಂದೂರು ವಲಯ ಅರಣ್ಯ ಇಲಾಖೆ ಹಾಗೂ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ರೈತರಿಗೆ ಗಿಡ ವಿತರಣಾ ಕಾರ್ಯಕ್ರಮ ಸಂಘದ ಹೆರೂರು ಶಾಖಾ ಆವರಣದಲ್ಲಿ ಸೋಮವಾರ ಜರುಗಿತು. ಈ ಸಂದರ್ಭ ಬೈಂದೂರು ವಲಯ ಅರಣ್ಯಧಿಕಾರಿ ಟಿ. ಕಿರಣ್ ಬಾಬು ಮಾತನಾಡಿ ವಲಯ ವ್ಯಾಪ್ತಿಯಲ್ಲಿ ಈ ಭಾರಿ ಹೆಚ್ಚಿನ ಗಿಡಗಳನ್ನು ನೆಡಲು ಉದ್ದೇಶಸಲಾಗಿದೆ. ಕೃಷಿ ಅರಣ್ಯ ಪ್ರೋತ್ಸಾಹಕ ಯೋಜನೆಯಡಿ ಕೃಷಿಕರ ಬೇಡಿಕೆಗನುಗುಣವಾಗಿ ಇಲಾಖೆಯಿಂದ ಗಿಡಗಳನ್ನು ವಿತರಿಸಲಾಗುತ್ತದೆ ಎಂದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್ ರಾಜು ಪೂಜಾರಿ ಕೃಷಿಕರಿಗೆ ಗೀಡಗಳನ್ನು ವಿತರಿಸಿದರು. ಈ ಸಂದರ್ಭ ಹೇರೂರು ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮತ್ತು ಸುಶೀಲ ಆಚಾರ್ತಿ, ಉಪ ವಲಯ ಅರಣ್ಯಧಿಕಾರಿ ಸದಾಶಿವ, ಅರಣ್ಯ ರಕ್ಷಕ ಜನಾರ್ಧನ, ಅರಣ್ಯ ವೀಕ್ಷಕರು ಸುರೇಶ, ಗುರುರಾಜ್ ಪಡುವರಿ, ಸಂಸ್ಥೆಯ ನಿರ್ದೇಶಕರಾದ ಭೋಜ ನಾಯ್ಕ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ವಿನಾಯಕ ರಾವ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ವತಿಯಿಂದ ಹನ್ನೊಂದು ಜನ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಹಿರಿಯ ಸದಸ್ಯರುಗಳಾದ ಡಾ. ಮಲ್ಲಿ, ಡಾ. ರಾಜೀವ ಶೆಟ್ಟಿ ,ಡಾ. ಕಮಲ್ ಅವರನ್ನು ಅಧ್ಯಕ್ಷರಾದ ರೋಟೇರಿಯನ್ ಶಶಿಧರ ಹೆಗ್ಡೆ ಕಾರ್ಯದರ್ಶಿಗಳಾದ ಕುಮಾರ ಎಸ್. ಕಾಂಚನ್ ಹಾಗೂ ರೋಟರಿ ಮಾಜಿ ಸಹಾಯಕ ರಾಜ್ಯಪಾಲರಾದ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಹಿರಿಯ ವಕೀಲರಾದ ರೋಟೇರಿಯನ್ ಕೆ.ಸಿ ಶೆಟ್ಟಿ ಇವರುಗಳ ಸಮ್ಮುಖದಲ್ಲಿ ಅವರ ಮನೆಯಲ್ಲಿಯೇ ಸನ್ಮಾನಿಸಲಾಯಿತು ಹಾಗೂ ಅದೇ ದಿನ ನಡೆದ ಕ್ಲಬ್ಬಿನ ಸಭೆಯಲ್ಲಿ ರೋಟರಿ ಕುಂದಾಪುರದ ಸದಸ್ಯರಾದ ಪ್ರೋ ಡಾಕ್ಟರ್ ರಾಜರಾಮ್ ಶೆಟ್ಟಿ , ಡಾ. ಹರಿಪ್ರಸಾದ್ ಶೆಟ್ಟಿ, ಪ್ರೋ ಡಾಕ್ಟರ್ ಎಮ್.ಎನ್ ಅಡಿಗ, ಡಾ. ರಾಜೇಂದ್ರ ಶೆಟ್ಟಿ ಹಾಗೂ ಕೋವಿಡ್ ವಾರಿಯರ್ಸ್ ಆಗಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಅತ್ಯುತ್ತಮ ಸೇವೆಸಲ್ಲಿಸಿದ ಯುವ ವೈದ್ಯರುಗಳಾದ ಡಾ. ನಮಿತ, ಡಾ. ನಿವೇದಿತಾ, ಡಾಕ್ಟರ್ ರಜತ್, ಡಾ. ಆಶಿಥ್, ಡಾ. ವಿಪುಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅವರು ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಗ್ರಂಥಾಲಯ, ಕಾರಂತ ಸಿರಿ ಪುಸ್ತಕ ಮಾರಾಟ ಮಳಿಗೆ ವೀಕ್ಷಿಸಿದರು. ಥೀಮ್ ಪಾರ್ಕ್ ವ್ಯವಸ್ಥೆ ಬಗ್ಗೆ ಮೆಚ್ಚುಗೆ ಕಾರಂತರು ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯವಾಗಿದ್ದು, ಈ ನಿಟ್ಟಿನಲ್ಲಿ ಕಾರಂತರ ಹೆಸರು ಅeರಾಮರವಾಗಿರಲು ಥೀಮ್ ಪಾರ್ಕ್ ಸಹಕಾರಿ. ಇಲ್ಲಿನ ಸ್ವಚ್ಚತೆ, ದಿನ ನಿತ್ಯ ನಡೆಯುವ ಕಾರ್ಯಕ್ರಮಗಳು, ಮಕ್ಕಳಿಗಾಗಿ ನಡೆಯುವ ತರಗತಿಗಳು ವ್ಯವಸ್ಥಿತವಾಗಿ ನಡೆಯುತ್ತಿರುವ ಸಂತಸದ ವಿಷಯ. ಗ್ರಾಮ ಪಂಚಾಯತ್ ಗ್ರಂಥಾಲಯವಾದರೂ ತುಂಬಾನೇ ಸುಂದರವಾಗಿ ಕಾರ್ಯನಿರ್ವಹಿಸುತ್ತಿದ್ದು ಇದರ ಪ್ರಯೋಜನ ಹೆಚ್ಚಿನ ಜನ ಪಡೆಯುವಂತಾಗಬೇಕು, ಗ್ರಂಥಾಲಯದಲ್ಲಿರುವ ಕಾರಂತರ ಪೈಟಿಂಗ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಜೊತೆ ಶಾಲಾ ಪಠ್ಯ ಪುಸ್ತಕದ ಗ್ರಂಥಾಲಯಕ್ಕೆ ನೀಡುವಂತೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆಯಲ್ಲಿ ಆಸಕ್ತಿ, ಅನುಭವ ಇರುವ ಅರ್ಹ ಫಲಾನುಭವಿಗಳು ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳು (ವಿಶೇಷ ಘಟಕ ಯೋಜನೆ), ಮೀನು ಮಾರಾಟಕ್ಕೆ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನಗಳನ್ನು ಮತ್ತು ಇತರ ಕಾರ್ಯಕ್ರಮಗಳ ಲಾಭ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
