ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ 1.94ಕೋಟಿ ರೂ. ಅನುದಾನದಲ್ಲಿ ಶಿರೂರು ಪೇಟೆ, ದೊಂಬೆ ಅಡ್ಡರಸ್ತೆ ಕಾಮಗಾರಿ ಹಾಗೂ ಹಡವಿನಕೋಣೆ ರಸ್ತೆ ಅಭಿವೃದ್ಧಿಗೆ ಮಂಜೂರಾದ 70 ಲಕ್ಷ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ ರಾಘವೇಂದ್ರ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ನಡುವೆ ಸಂಸದ ಮತ್ತು ಶಾಸಕರ ವಿಶೇಷ ಮುತುವರ್ಜಿಯಿಂದ ಮಂಜೂರಾದ ಶಿರೂರು ಕೋಟೆಮನೆ ಬಳಿ ಸಂಕದಗುಂಡಿ ವೆಂಟೆಡ್ ಡ್ಯಾಂ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ರಾಜಪ್ಪ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ಶಂಕರ ಪೂಜಾರಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ತಾಲೂಕು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಡಿ, ತಾ.ಪಂ ಸದಸ್ಯ ಮೌಲಾನ ದಸ್ತಗೀರ್, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಉಮೇಶ್ ಶೆಟ್ಟಿ ಕಲ್ಗದ್ದೆ, ಮಹಿಳಾ ಮೋರ್ಚಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ, ಗಂಗೊಳ್ಳಿ ಉಪ ಅಂಚೆ ಕಛೇರಿ ಇವರ ಸಹಯೋಗದೊಂದಿಗೆ ಆಧಾರ್ ಕುರಿತಾದ ವಿವಿಧ ಸೇವಾ ಶಿಬಿರ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆಯಿತು. ಶಿಬಿರದಲ್ಲಿ ಮಾಹಿತಿ ನೀಡಿ ಮಾತನಾಡಿದ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕ ನವೀನಚಂದರ್, ಕೇಂದ್ರ ಸರಕಾರದ ಅನೇಕ ಯೋಜನೆಗಳು ಅಂಚೆ ಇಲಾಖೆ ಮೂಲಕ ಅನುಷ್ಠಾನಗೊಳ್ಳುತ್ತಿದ್ದು ಇದರ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕಿದೆ. ಸರಕಾರದ ಎಲ್ಲಾ ಯೋಜನೆಯ ಪ್ರಯೋಜನ ಪಡೆಯಲು ಆಧಾರ ಕಡ್ಡಾಯ ಮಾಡಿರುವುದರಿಂದ ಎಲ್ಲರೂ ಆಧಾರ್ ನೊಂದಣಿ ಮಾಡಿಸಿಕೊಳ್ಳಬೇಕು. ಆಧಾರ್ ಕಾರ್ಡ್ನಲ್ಲಿ ವಿಳಾಸ, ಹೆಸರು ಬದಲಾವಣೆ, ಬಯೋಮೆಟ್ರಿಕ್ ಪರಿಷ್ಕರಣೆ, ಮೊಬೈಲ್ ನಂಬರ್ ತಿದ್ದುಪಡಿ ಇದ್ದಲ್ಲಿ ಮಾಡಿಸಿಕೊಳ್ಳಬೇಕು. ಗಂಗೊಳ್ಳಿಯ ಉಪ ಅಂಚೆ ಕಛೇರಿಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಲು ಹಾಗೂ ವಾರದ ಎಲ್ಲಾ ದಿನಗಳಲ್ಲಿ ಆಧಾರ್ ತಿದ್ದುಪಡಿ ಸೇವೆ ನೀಡಲು ಕ್ರಮಕೈಗೊಳ್ಳಲಾಗವುದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್ ಮನೋಜ್ ನಾಯರ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುದೀಪ್ ಶೆಟ್ಟಿ ಆಜ್ರಿ ಆಗಮಿಸಿದ್ದರು. ಮಂಗಳೂರು ವಿ.ವಿ. ವ್ಯಾಪ್ತಿಯ 18 ಕಾಲೇಜುಗಳ ಕ್ರಿಕೆಟ್ ತಂಡಗಳು ಪಂದ್ಯಾಕೂಟದಲ್ಲಿ ಭಾಗವಹಿಸಿದ್ದು ಎಸ್.ಡಿ.ಎಮ್ ಕಾಲೇಜು, ಉಜಿರೆ ಚಾಂಪಿಯನ್ನಾಗಿ ಹಾಗೂ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜು ರನ್ನರ್ ಅಪ್ ಆಗಿ ಹೊರಹೊಮ್ಮಿತು. ಮಂಗಳೂರು ವಿ.ವಿ ಕ್ಯಾಂಪಸ್ನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ.ಸಂದೀಪ್ ಸರಣಿ ಶ್ರೇಷ್ಠ ಆಟಗಾರರಾಗಿ, ಎಸ್.ಡಿ.ಎಮ್ ಕಾಲೇಜಿನ ನವೀನ್ ಜೈನ್ ಉತ್ತಮ ದಾಂಡಿಗ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಉತ್ತಮ ನಿರೂಪಕಿಯಾಗಲು ಭಾಷ ಶುದ್ಧತೆ ಮುಖ್ಯ. ಒಬ್ಬ ಪತ್ರಕರ್ತನಿಗೆ ಸಮಯಪ್ರಜ್ಞೆ ಹಾಗೂ ಬದ್ಧತೆ ಇದ್ದಾಗ ವೃತ್ತಿಜೀವನದಲ್ಲಿ ಯಶಸ್ಸು ಸಿಗಲು ಸಾಧ್ಯ ಎಂದು ಟಿವಿ 9 ನಿರೂಪಕಿ, ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶುಭಶ್ರೀ ಜೈನ್ ಹೇಳಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ, ಸಮೂಹ ಸಂವಹನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ ’ಟ್ರೆಂಡ್ಸ್ ಪ್ರಾಕ್ಟೀಸಸ್ ಇನ್ ಟಿವಿ ಜರ್ನಲಿಸಂ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಮಾಧ್ಯಮ ಲೋಕದಲ್ಲಿ ಹೆಚ್ಚಿನ ಸ್ಪರ್ಧೆಯಿದೆ. ಎಲೆಕ್ಟ್ರಾನಿಕ್ ಮೀಡಿಯಾಕ್ಕೆ ಅಗತ್ಯವಿರುವ ಕೌಶಲಗಳನ್ನು ಕಾಲೇಜು ಮಟ್ಟದಲ್ಲಿಯೇ ಕಲಿತುಕೊಂಡರೆ ವೃತ್ತಿ ಜೀವನ ಸುಗಮವಾಗಿರುತ್ತದೆ. ನಿರೂಪಕನಿಗೆ ಧ್ವನಿ, ಮುಖಭಾವ, ಮೇಕಪ್, ವಸ್ತ್ರ ವಿನ್ಯಾಸಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಇರಬೇಕು. ಇದೆಲ್ಲದರ ಜೊತೆಗೆ ಒಬ್ಬ ನಿರೂಪಕನಿಗೆ ಯಾವುದೇ ವಿಷಯದ ಬಗ್ಗೆ ಆಳ ಜ್ಞಾನ, ಪ್ರಬುದ್ಧತೆ ತುಂಬಾ ಮುಖ್ಯ. ಇದು ಯಾವುದೇ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವ ಆತ್ಮ ವಿಶ್ವಾಸವನ್ನು ತುಂಬುತ್ತದೆ ಎಂದರು. ನಿರೂಪಣೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು. ಆಂಕರ್ಗಳಿಗಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮುದ್ರದಲ್ಲಿ ಯಾವುದೇ ರೀತಿಯ ಅನಧಿಕೃತ ಹಾಗೂ ನಿಷೇಧಿತ ಮೀನುಗಾರಿಕಾ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರವಹಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಂಭಾಂಗಣದಲ್ಲಿ, ಜಿಲ್ಲೆಯ ಪಶುಪಾಲನೆ ಮತ್ತು ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂದರುಗಳಲ್ಲಿ ಮೀನುಗಾರರು ತಪ್ಪದೇ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಹಾಗೂ ಕೈಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು. ಸಮುದ್ರದಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಿ ಚಿಕಿತ್ಸೆ ನೀಡಲು ಅನುಕೂಲವಾಗಲು ಸಿ-ಆಂಬುಲೆನ್ಸ್ ಬೋಟ್ ಅನ್ನು ಶೀಘ್ರದಲ್ಲಿಯೇ ನಿಯೋಜಿಸಲಾಗುವುದು ಎಂದರು. ಬಂದರುಗಳಲ್ಲಿ ಈಗಾಗಲೇ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ದಿನಪೂರ್ತಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಆಗಿಂದಾಗೆ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿ ಉತ್ತಮ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿದಿನ ಮಲ್ಪೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಿವೃತ್ತ ಅಧ್ಯಾಪಕ, ಹಿರಿಯ ಪುರೋಹಿತ ಗಂಗೊಳ್ಳಿ ನಿವಾಸಿ ಕೋಟ ರಾಮದಾಸ ಭಟ್ (99) ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಗಂಗೊಳ್ಳಿ ಪರಿಸರದಲ್ಲಿ ‘ಮಾಸ್ಟ್ರ ಮಾಮ್’ ಎಂದೇ ಪರಿಚಿರಾಗಿದ್ದ ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಸುಮಾರು 26 ವರ್ಷಗಳ ಕಾಲ ಸಂಸ್ಕೃತ ಮತ್ತು ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ತಾಂತ್ರಿಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು, ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಮತ್ತು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ಪ್ರೀತಿಗೆ ಪಾತ್ರರಾಗಿ ಅವರ ಅಚ್ಚುಮೆಚ್ಚಿನ ಶಿಷ್ಯರಾಗಿ ಗುರುತಿಸಿಕೊಂಡಿದ್ದರು. ಕಾರ್ಕಳದಲ್ಲಿ ವಾಸ್ತವ್ಯವಿದ್ದ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸಹಪಾಠಿಯಾಗಿ ಉಪನಿಷತ್ ಮತ್ತು ವೇದಾಂತಕ್ಕೆ ಸಂಬಂಧಪಟ್ಟ ವಿಷಯಗಳನ್ನು ಅಭ್ಯಸಿಸಿದಲ್ಲದೆ ಶ್ರೀ ಸುಧೀಂದ್ರ ತೀರ್ಥ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾನಿಲಯದ ನಡೆಸಿದ ಅಂತಿಮ ಪರೀಕ್ಷೆಗಳಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿದ್ಯಾರ್ಥಿನಿ ಜೊವಿಟಾ ನೊರೋನ್ಹಾ 5ನೇ ರ್ಯಾಂಕ್ ಗಳಿಸಿದ್ದಾರೆ. ಸಿಜಿಪಿ 8.62 ಅಂಕ ಗಳಿಸುವ ಮೂಲಕ ಜೊವಿಟಾ ಈ ಸಾಧನೆ ಮಾಡಿದ್ದಾರೆ. ಕ್ಯಾಂಪಸ್ ಸೆಲೆಕ್ಷನ್ ಮೂಲಕ ಬೆಂಗಳೂರಿನ ಗ್ರಾಂಟ್ಥಾರ್ನ್ಟನ್ ಕಂಪನಿಗೆ ಆಯ್ಕೆಯಾಗಿರುವ ಅವರು ಪ್ರಸ್ತುತ ಟ್ಯಾಕ್ಸ್ ಅನಾಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2019-20ರ ಈ ಶೈಕ್ಷಣಿಕ ಬ್ಯಾಚ್ನಲ್ಲಿ ಆಳ್ವಾಸ್ ಎಂಬಿಎ ವಿಭಾಗದ ೭೮ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಅವರು ಮಂಡಿಸಿದ ‘ಮರಾಟಿ ಸಮುದಾಯಗಳ ತೌಲನಿಕ ಅಧ್ಯಯನ’ ಎಂಬ ಸಮಾಜಶಾಸ್ತ್ರದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ (ಡಾಕ್ಟರೇಟ್) ನೀಡಿ ಗೌರವಿಸಿದೆ. ಇವರಿಗೆ ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ. ಗಂಗಾಧರ ದೈವಜ್ಞ ರು ಮಾರ್ಗದರ್ಶಕರಾಗಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಡಾ. ಪೂರ್ವಚಾರ್. ಎಂ. ಅವರು ಸಹ ಮಾರ್ಗದರ್ಶಕರಾಗಿದ್ದರು. ಇವರು ಮುಲ್ಕಿ ವಿಜಯಾ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸಾಧಕರಿಗೆ ಮಂಗಳವಾರ ಸನ್ಮಾನ ಕಾರ್ಯಕ್ರಮ ನಡೆಯಿತು. ಕಂಬಳ ಕ್ರೀಡೆಯಲ್ಲಿ ದಾಖಲೆ ಮಾಡಿದ ನಾಯ್ಕನಕಟ್ಟೆಯ ವಿಶ್ವನಾಥ ದೇವಾಡಿಗ ಮತ್ತು ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಬಹುಮಾನಗಳಿಸಿದ ನಿರೀಕ್ಷಾ ಅರೆಹೊಳೆ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮರವಂತೆ ಬಡಾಕೆರೆ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ್, ಜಗದೀಶ ಪೂಜಾರಿ, ಎಂ. ವಿನಾಯಕ ರಾವ್, ನರಸಿಂಹ ದೇವಾಡಿಗ, ರಾಮೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ, ಸರೋಜಾ ಗಾಣಿಗ, ಅಶೋಕಕುಮಾರ ಶೆಟ್ಟಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಶಿವರಾಮ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತ್ರಾಸಿ-ಮರವಂತೆ ಹಾಗೂ ಸೋಮೇಶ್ವರ ಬೀಚ್ ಅಭಿವೃದ್ಧಿ ಬಗ್ಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಸಂಸದ ಬಿ. ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಗುರುವಾರ ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ಪ್ರವಾಸೋದ್ಯಮ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಮರವಂತೆ ತ್ರಾಸಿ ಬೀಚ್ ಹಾಗೂ ಒತ್ತಿನಣೆಗೆ ಬೀಚ್ ಅಭಿವೃದ್ಧಿಗೆ ಒಟ್ಟು25 ಕೋಟಿ ರೂ ಯೋಜನೆ ಸಿದ್ಧವಾಗುತ್ತಿದೆ. ಮರವಂತೆ ಬೀಚ್ಗೆ ಈ ಮೊದಲೇ 5 ಕೋಟಿ ಯೋಜನೆ ಸಿದ್ಧಗೊಂಡಿದ್ದು ಬಜೆಟ್ನಲ್ಲಿ 10 ಕೋಟಿ ಹಾಗೂ ಸೋಮೇಶ್ವರ ಬೀಚ್ಗೆ10 ಕೋಟಿಗೆ ಅನುಮೋದನೆ ದೊರೆತಿದೆ. ಶೀಘ್ರವೇ ಎರಡೂ ಬೀಚ್ಗಳು ಮಾದರಿ ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದೆ ಎಂದರು. ಸಂಸದರಾದ ಬಿ. ವೈ. ರಾಘವೇಂದ್ರ ಅವರು ಮಾತನಾಡಿ ಪ್ರವಾಸೋದ್ಯಮಕ್ಕಾಗಿ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಮೂಲಕ ಪ್ರವಾಸಿ ತಾಣ ಅಭಿವೃದ್ಧಿ ಜೊತೆಗೆ ಯುವಶಕ್ತಿಗೆ ಉದ್ಯೋಗವು ದೊರೆಯಲಿದೆ. ಸೋಮೇಶ್ವರ ಬೀಚ್ ಹಾಗೂ…
