Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಳಾವಾರ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಕ್ವಾಡಿ ಆಶಾಲತಾ ಶೆಟ್ಟಿ, ಉಪಾಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಅಭ್ಯರ್ಥಿ ರಾಮಚಂದ್ರ ನಾವಡ ಅವಿರೋಧವಾಗಿ ಆಯ್ಕೆಯಾದರು . ಒಟ್ಟು 17 ಸದಸ್ಯ ಬಲ ಹೊಂದಿರುವ ಕಾಳಾವರ ಗ್ರಾಮ ಪಂಚಾಯತಿಯಲ್ಲಿ 7 ಕಾಂಗ್ರೆಸ್ ಬೆಂಬಲಿತರು, 5 ಬಿಜೆಪಿ ಬೆಂಬಲಿತರು, 4 ಸಿಪಿಎಂ ಬೆಂಬಲಿತರು, 1 ಪಕ್ಷೇತರರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ , ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ರೇಖಾ ಮೊಗವೀರ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 13 ಸದಸ್ಯ ಬಲ ಹೊಂದಿರುವ ಹಾರ್ದಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೇಸ್8 , ಬಿಜೆಪಿ 5 ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ವರದಿ. ಶತಮಾನಗಳ ಹಿಂದೆ ಮೋರ್ಚುಗೀಸರ ಪ್ರಾಬಲ್ಯ ಮುರಿದ ಮತ್ತು ಡಚ್ಚರನ್ನು ಹಿಮ್ಮೆಟ್ಟಿಸಿ ಬಸ್ರೂರು ಪಟ್ಟಣವನ್ನು ಬಂಧಮುಕ್ತಗೊಳಿಸಿದ ಕೀರ್ತಿಯು ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜನಿಗೆ ಸಲ್ಲುತ್ತದೆ. ತನ್ನ ಸಾಮ್ರಾಜ್ಯ ಸ್ಥಾಪನೆಗೂ ಮೊದಲೇ ಪರಕೀಯರ ವಿರುದ್ಧ ಸೆಣಸಾಡಿ ಅಸಮಾನ್ಯ ಸಾಧನೆಗೈದು ನೌಕಾಬಲದ ಶಕ್ತಿ ಪ್ರದರ್ಶಿಸಿದ ಹೆಗ್ಗಳಿಕೆಯೂ ಶಿವಾಜಿ ಮಹಾರಾಜನದ್ದಾಗಿದೆ. ಕುಂದಾಪುರ ತಾಲೂಕಿನ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ವ್ಯಾಪಾರ ಪಟ್ಟಣವಾಗಿದೆ. ಅಂದು ಬಸ್ರೂರು ಕೆಳದಿ ರಾಜರ ಅಧೀನದಲ್ಲಿತ್ತು. ಆಗ ಕೇರಳದಿಂದ ಮಹಾ ರಾಷ್ಟ್ರದವರೆಗಿನ ಕಡಲತೀರದಲ್ಲಿ ನಂಬರ್ 1 ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ವಿದೇಶೀಯರ ವ್ಯಾಪಾರವೂ ಭರದಿಂದ ಸಾಗುತ್ತಿತ್ತು. ಗೋವೆಯಲ್ಲಿ ನೆಲೆಸಿದ್ದ ಫೋರ್ಚುಗೀಸರು ಮತ್ತು ವೆನಗೊರಲಾದಲ್ಲಿ ನೆಲೆಸಿದ್ದ ಡಚ್ಚರು ವ್ಯಾಪಾರವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಪೈಪೋಟಿ ನಡೆಸಿದರು. ಇವರಿಬ್ಬರೂ ಭೂಪ್ರದೇಶಕ್ಕಿಂತ ಹೆಚ್ಚು ಸಮುದ್ರ ವ್ಯಾಪ್ತಿಯಲ್ಲಿ ಮೇಲ್ಗೆ  ಸಾಧಿಸಿದ್ದರು. ಕೆಳದಿ ಅರಸ ಸೋಮಶೇಖರನು ಫೋರ್ಚುಗೀಸರಿಗೆ ವ್ಯಾಪಾರ ಮಾಡಲು ಅವಕಾಶ ಕೊಟ್ಟಿದ್ದ. ಇದರಿಂದ ಕುಪಿತರಾದ ಡಚ್ಚರು ಕೆಳದಿ ಅರಸರಿಗೆ ಆಗಾಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡ ಮಾಧ್ಯಮ ಶಾಲೆಯನ್ನು ನಡೆಸುವುದು ಮತ್ತು ಸುವರ್ಣ ಸಂಭ್ರಮ ಆಚರಿಸಿ ಐವತ್ತು ವರ್ಷಗಳ ಇತಿಹಾಸದಲ್ಲಿ ದಾಖಲಿಸುವುದು ಸುಲಭದ ಮಾತಲ್ಲ. ಸ್ಮರಣ ಸಂಚಿಕೆ ಸದಾ ನೆನಪಿನಲ್ಲಿ ಉಳಿಯುವಂತೆ ಮಾಡಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಗುರುವಾರ ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ಸುವರ್ಣ ಸೌರಭ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ಸ್ವಕಲಿಕೆ, ವೇಗದ ಕಲಿಕೆ, ಸಾಮರ್ಥ್ಯ ಆಧಾರದ ಕಲಿಕೆ ಮೂಲಕ ಪರಿಣಾಮಕಾರಿ ಶಿಕ್ಷಣ ಹಾಗೂ ಮಕ್ಕಳು ಸಂಪೂರ್ಣ ತೊಡಗಿಸಿಕೊಳ್ಳುವಿಕೆ ಸಾಧ್ಯವಿದೆ ಎಂದ ಅವರು ಕರಾವಳಿಯ ಜಿಲ್ಲೆಗಳ ಶಾಲೆಯ ಶಿಕ್ಷಕರ ಬದ್ಧತೆ ದೊಡ್ಡದಿರುವುದರಿಂದಲೇ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ , ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೇ ಉತ್ತಮ ಫಲಿತಾಂಶ ನೀಡುವಲ್ಲಿ ರತ್ತೂಬಾಯಿ ಜನತಾ ಪ್ರೌಢಶಾಲೆ ಸಫಲವಾಗಿದೆ ಎಂದ ಅವರು ಸುವರ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಾನಕಿ ಮೊಗವೀರ, ಉಪಾಧ್ಯಕ್ಷರಾಗಿ ನಿರ್ಮಲಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಒಟ್ಟು 15 ಸ್ಥಾನಗಳ ಪೈಕಿ 12 ಕಾಂಗ್ರೆಸ್, 3 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆಗೆ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಲಿತಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ವಿಜೇಂದ್ರ ಆಚಾರ್ಯ ಆಯ್ಕೆಗೊಂಡಿದ್ದಾರೆ. ಒಟ್ಟು 13 ಸದಸ್ಯ ಬಲ ಹೊಂದಿರುವ ಕಾಲ್ತೋಡು ಗ್ರಾಮ ಪಂಚಾಯಿತಿ 10 ಕಾಂಗ್ರೆಸ್, 3 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆರಾಡಿ ಗ್ರಾ.ಪಂ.ನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಮಾಬಲ ಕಂಡುಕೊಂಡ ಹಿನ್ನೆಲೆಯಲ್ಲಿ ಅದೃಷ್ಟದಾಟದಲ್ಲಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಬಿ. ಆರ್. ಆಯ್ಕೆಗೊಂಡಿದ್ದಾರೆ. 14 ಸದಸ್ಯ ಬಲದ ಕೆರಾಡಿ ಗ್ರಾ.ಪಂ.ನಲ್ಲಿ 8 ಬಿಜೆಪಿ ಬೆಂಬಲಿತ ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಗಿರಿಜಾ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತರಾಗಿ ಜ್ಯೋತಿ ವಿ. ಶೆಟ್ಟಿ ಸ್ಪಧಿಸಿದ್ದರು. ಮತದಾನ ನಡೆದಾಗ ಇಬ್ಬರಿಗೂ ತಲಾ7 ಮತ ಪಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಅವರಿಗೆ ಅದೃಷ್ಟ ಒಲಿದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಬಿ.ಆರ್. ಸುದರ್ಶನ್ ಶೆಟ್ಟಿ ಅವರು 8 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಮಂಜು ಕೊಠಾರಿ ಅವರು 6 ಮತ ಪಡೆದರು. ಕುಂದಾಪುರ ತಾ.ಪಂ. ಕಾರ‍್ಯನಿರ್ವಹಣಾಧಿಕಾರಿ ಕೇಶವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು 74 ಉಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ ಶೆಟ್ಟಿ ಕಟ್ಟಿನಬೈಲು, ಉಪಾಧ್ಯಕ್ಷರಾಗಿ ರತ್ನ ಶೇಖರ ನಾಯ್ಕ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ 74ಉಳ್ಳೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಿದ್ಧಾಪುರ ನೀರಾವರಿ ಇಲಾಖಾ ಇಂಜಿನಿಯರ್ ಭಾನು ನಾಯಕ್ ಭಾಗವಹಿಸಿದ್ದರು. 74 ಉಳ್ಳೂರು ಗ್ರಾಮ ಪಂಚಾಯತಿ ಒಟ್ಟು 9 ಸದಸ್ಯ ಸ್ಥಾನವನ್ನು ಹೊಂದಿದೆ. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆಗೆ ಮೀಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಸಂಜೀವ ದೇವಾಡಿಗ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ತೆಕ್ಕಟ್ಟೆ ಗ್ರಾಮ ಪಂಚಾಯತಿಯಲ್ಲಿ ನಡೆಯಿತು. ತೆಕ್ಕಟ್ಟೆ ಗ್ರಾ.ಪಂ.ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಂದಾವರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಾಬಿ, ಉಪಾಧ್ಯಕ್ಷರಾಗಿ ಶೋಭಾ ದೇವಾಡಿಗ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಂದಾವರ ಗ್ರಾಮ ಪಂಚಾಯತಿಯಲ್ಲಿ ನಡೆಯಿತು.

Read More