ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ಹಮ್ಮಿಕೊಂಡಿರುವ ಮಾಸಾವಧಿ ಅಖಂಡ ಭಜನಾ ಮಹೋತ್ಸವ ಮಂಗಳವಾರ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಮಧ್ಯಾಹ್ನ ಮಹಾಪೂಜೆ, ಸಮಾರಾಧಾನೆ, ಸಂಜೆ ಮಾಗಣೆ ಭಜನೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಸೋಮವಾರ ಸಂಜೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ದೀಪ ಪ್ರಜ್ವಲನೆಯೊಂದಿಗೆ ಮೇ.17ರಂದು ಚಾಲನೆ ನೀಡಿದ್ದರು. ಈ ಮಹೋತ್ಸವದಲ್ಲಿ ರಾಜ್ಯ ಮತ್ತು ಹೊರರಾಜ್ಯಗಳಿಂದ ವಿವಿಧ ಭಜನಾ ಮಂಡಳಿಗಳು ಹಾಗೂ ಕಲಾವಿದರು ಆಗಮಿಸಿ ಭಜನಾ ಸೇವೆ ಸಮರ್ಪಿಸಿದ್ದಾರೆ. ಅಖಂಡ ಭಜನಾ ಮಹೋತ್ಸವದ ಸಂದರ್ಭ ಅಷ್ಟೋತ್ತರದಿಂದ ಶ್ರೀದೇವರಿಗೆ 108 ಪ್ರದಕ್ಷಿಣಾ ಸೇವೆ, ಗಂಧಲೇಪನ ಸೇವೆ, ಸಾಮೂಹಿಕ ತುಳಸಿ ಅರ್ಚನೆ ಮತ್ತು ಸಾಮೂಹಿಕ ಕುಂಕುಮಾರ್ಚನೆ ಸೇವೆ, ಅಪೂಪ ದಾನ ದೀಪ ದಾನ ಸೇವೆ, ದ್ವಾದಶ ಸ್ತೋತ್ರ ಪೂಜೆ, ದೀಪಾರಾಧನೆ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಹೆದ್ದಾರಿ ಮನೆ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಮೂಕಾಂಬು (61) ಎಂದು ಗುರುತಿಸಲಾಗಿದೆ. ಅವರು ಜೂ.6ರಂದು ಮಧ್ಯಾಹ್ನ ಮನೆಯ ದನದ ಕುತ್ತಿಗಗೆ ಬಳ್ಳಿಯನ್ನು ಕಟ್ಟಿ ಮೇಯಲು ಕರೆದುಕೊಂಡು ಹೋಗುತಿದ್ದರು. ಆಗ ಎರಡು ದನವು ಗುದ್ದಾಡಿದಾಗ, ಕೈಯಲ್ಲಿದ್ದ ದನಕ್ಕೆ ಕಟ್ಟಿದ್ದ ಹಗ್ಗ ಮೂಕಾಂಬು ಅವರ ಕುತ್ತಿಗೆಗೆ ಸಿಲುಕಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಮಾಜಿಕ ಜಾಲತಾಣದ ಮೂಲಕ ವಿವಾಹಿತೆಯ ಗೆಳೆತನ ಬೆಳೆಸಿ, ಅಧಿಕ ಲಾಭ ನೀಡುವ ಆಮಿಷವೊಡ್ಡಿ 84.5 ಲಕ್ಷ ರೂ. ಪಡೆದು ವಂಚಿಸಿದ್ದಲ್ಲದೆ ಅತ್ಯಾಚಾರಗೈದು ಬ್ಲ್ಯಾಕ್ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಕೂರಾಡಿ ನಿವಾಸಿ ಸಂತೋಷ ಪೂಜಾರಿ (39) ಬಂಧಿತ ಆರೋಪಿ. ಕೋಟ ನಿವಾಸಿ ವಿವಾಹಿತೆಯನ್ನು ಪರಿಚಯ ಮಾಡಿಕೊಂಡು ನಕಲಿ ಖಾತೆಯಲ್ಲಿ ಮಾತುಕತೆ ಮುಂದುವರಿಸಿದ್ದ. ಷೇರು ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಬರುವುದಾಗಿ ನಂಬಿಸಿದ್ದ. ಮಹಿಳೆಯು 2024ರ ಸೆಪ್ಟೆಂಬರ್ನಲ್ಲಿ 2 ಸಾವಿರ ರೂ. ಗೂಗಲ್ಪೇ ಮಾಡಿದ್ದು, ಆಕೆಯ ನಂಬಿಕೆ ಗಳಿಸಲು ಸಂತೋಷ್ 1,91,700 ರೂ. ಕೊಟ್ಟಿದ್ದ. ಅದನ್ನು ನಂಬಿದ ಮಹಿಳೆ ಸಾಲ ಮಾಡಿ ಹಂತ ಹಂತವಾಗಿ 84, 53,500 ರೂ. ವರ್ಗಾಯಿಸಿದ್ದರು. ಹಣ ವಾಪಸ್ ಕೇಳಿದಾಗ ಆರೋಪಿ ಮರಳಿಸುವುದಾಗಿ ಹೇಳಿ ಹೊಟೇಲ್ ಕೊಠಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ವಿಡಿಯೋ ಮಾಡಿಕೊಂಡಿರುವುದಾಗಿ ಬ್ಲ್ಯಾಕ್ ಮೇಲ್ ಮಾಡಿ ಮತ್ತೆ ನಾಲೈದು ಬಾರಿ ಅತ್ಯಾಚಾರ ಎಸಗಿದ್ದಾನೆ. ಘಟನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ. ಇಂದು ಅವರಿಂದಾಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರವು ಮಹತ್ವವನ್ನು ಪಡೆದಿದೆ. ಜಿಲ್ಲೆಯು ರಾಜ್ಯದಲ್ಲೇ ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟು ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತಾನಾಡಿದರು. ಕುಂದಾಪುರ ರೆಡ್ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ತೀವ್ರ ಕೊರತೆಯಿದ್ದು ರಕ್ತದಾನದ ಬಗ್ಗೆ ಇನ್ನಷ್ಟು ಅರಿವು ಮೂಡಿಸುವ ಅಗತ್ಯವಿದೆ ಎಂದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನ ಸುವರ್ಣ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಲವು ಬಾರಿ ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಿದ ರಕ್ತದಾನಿಗಳಾದ ಸುಕನ್ಯಾ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳಿಂದ ವೆಬ್ಸೈಟ್ https://ssp.postmatric.karnataka.gov.in/ ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್ಸೈಟ್ https://ssp.postmatric.karnataka.gov.in/post_sa_12627/login ನಲ್ಲಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ವಿತರಿಸಲಾಯಿತು. ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ಕೃತಕ ಕಾಲು ವಿತರಿಸಿದರು. ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ಶಿವಾಜಿ, ಜೇನಿಸ್ ಮತ್ತು ಪ್ರದೀಪ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶಾಸಕರ ಪರಿಕಲ್ಪನೆಯ “ದುಡ್ಮಿ” (DUDMI – Dignity, Upliftment and Development of women through Micro Initiatives) ಯೋಜನೆಯ ಪರಿಕಲ್ಪನೆಯಡಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ (ಸಂಜೀವಿನಿ) ಇವರ ಸಹಯೋಗದೊಂದಿಗೆ ಮಲ್ಪೆಯ ಪ್ಯಾರಡೈಸ್ ಐಲ್ ಬೀಚ್ ರೆಸಾರ್ಟ್ ಹಮ್ಮಿಕೊಳ್ಳಲಾಗಿದ್ದ “ಸಮುದಾಯ ಪ್ರವಾಸೋದ್ಯಮ ತರಬೇತಿ ಕಾರ್ಯಕ್ರಮವು ಜರುಗಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೈಂದೂರು ಪ್ರವಾಸೋದ್ಯಮ ಚಟುವಟಿಕೆಗೆ ಅತ್ಯಂತ ಪೂರಕವಾದ ವಾತಾವರಣವನ್ನು ಹೊಂದಿದೆ. ಇದನ್ನು ಜಿಲ್ಲೆಯ ಪ್ರವಾಸೋದ್ಯಮದ ಕೇಂದ್ರ ಬಿಂದುವಾಗಿ ರೂಪಿಸಿ, ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಆಚಾರ-ವಿಚಾರಗಳನ್ನು ದೇಶ-ವಿದೇಶಗಳಿಗೆ ಪರಿಚಯಿಸುವ ಮಹತ್ತರ ಉದ್ದೇಶದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ, ಸ್ಥಳೀಯ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಮಹಿಳೆಯರಿಗೆ ಪ್ರವಾಸೋದ್ಯಮ ಕ್ಷೇತ್ರದ ಅಡಿಯಲ್ಲಿ ಶಾಶ್ವತ ಉದ್ಯೋಗಾವಕಾಶ ಹಾಗೂ ಆರ್ಥಿಕ ಸಬಲೀಕರಣ ಕಲ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಸೋಮವಾರ ನಡೆದ ಆಳ್ವಾಸ್ ಸ್ವಾಯತ್ತಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಇಂಡಕ್ಷನ್ ಕಾರ್ಯಕ್ರಮ ‘ಅಂಕುರ’ ಕೃಷಿಸಿರಿ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 1998ರಲ್ಲಿ ಕೇವಲ 25 ವಿದ್ಯಾರ್ಥಿಗಳು, ಎರಡು ವಿಭಾಗ ಹಾಗೂ 11 ಅಧ್ಯಾಪಕರೊಂದಿಗೆ ತನ್ನ ಶೈಕ್ಷಣಿಕ ಪಯಣವನ್ನು ಆರಂಭಿಸಿದ್ದ ಆಳ್ವಾಸ್ ಸಂಸ್ಥೆ, ಇಂದು 54 ಶೈಕ್ಷಣಿಕ ಕಾರ್ಯಕ್ರಮಗಳು, 122 ತರಗತಿ ಕೊಠಡಿಗಳು, 188 ಶಿಕ್ಷಕರು ಹಾಗೂ 3,191 ವಿದ್ಯಾರ್ಥಿಗಳನ್ನು ಒಳಗೊಂಡ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ. ಸಂಸ್ಥೆಯ ಈ ಸಾಧನೆಯ ಹಿಂದಿನ ನಿಜವಾದ ಶಕ್ತಿ ಮತ್ತು ಬ್ರ್ಯಾಂಡ್ ಇಲ್ಲಿನ ವಿದ್ಯಾರ್ಥಿಗಳು. ಮಕ್ಕಳು ತಮ್ಮ ಪಾಲಕರ ತ್ಯಾಗ ಮತ್ತು ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಶಿಕ್ಷಣದ ಅವಕಾಶಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಶ್ಲೋಕ ಪಠಣ, ಭಾಷಣ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ವೇದಿಕೆಯ ಭಯವನ್ನು ನಿವಾರಿಸಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಯಿತು. ವಿದ್ಯಾರ್ಥಿಗಳು ಉತ್ಸಾಹ ಹಾಗೂ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಹೇಮಮಾಲಿನಿ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ವಿದ್ಯಾರ್ಥಿಗಳಾದಅದ್ವೈತ್, ಸಾತ್ವಿಕ್ ಹಾಗೂ ಚಿನ್ಮಯಿ ಅವರು ಯಶಸ್ವಿಯಾಗಿ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಸಾಹೇಬರಕಟ್ಟೆ ಗರಿಕೆಮಠ ಮೂಲದ ಸಾಮರಾಜ್ (21) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಘಟನೆಯ ವಿವರ:ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸಾಮರಾಜ್, ಜೂನ್ 13ರ ಶನಿವಾರ ಸಂಜೆ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಅವರು ಮುಳುಗಿ ನಾಪತ್ತೆಯಾಗಿದ್ದರು. ಈಶ್ವರ್ ಮಲ್ಪೆ ತಂಡದಿಂದ ಸಾಹಸಿಕ ಶೋಧ ಕಾರ್ಯ:ವಿದ್ಯಾರ್ಥಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ತಕ್ಷಣವೇ ಶೋಧ ಕಾರ್ಯಾಚರಣೆಗೆ ಇಳಿಯಿತು. ಭಾನುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದ ತಂಡ, ಆಕ್ಸಿಜನ್ ಸಿಲಿಂಡರ್ ಬಳಸಿ ಹೊಳೆಯ ಆಳಕ್ಕೆ ಇಳಿದು ತೀವ್ರ ಹುಡುಕಾಟ ಮುಂದುವರಿಸಿದರು. ಕಾರ್ಯಾಚರಣೆಯ ಫಲವಾಗಿ ರವಿವಾರ ಮುಂಜಾನೆ ಹೊಳೆಯ ಮಧ್ಯಭಾಗದಲ್ಲಿ…
