ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗುರುಕುಲ ಪಬ್ಲಿಕ್ ಶಾಲೆ ಸತತ 8ನೇ ಬಾರಿ ಸಿ.ಬಿ.ಎಸ್.ಸಿ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾದ 79 ವಿದ್ಯಾರ್ಥಿಗಳಲ್ಲಿ 02 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ( 92% ಕ್ಕಿಂತ ಅಧಿಕ ಅಂಕ) 10 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ( 85% ಕ್ಕಿಂತ ಅಧಿಕ ಅಂಕ) ಅಲ್ಲದೇ ೦5 ವಿದ್ಯಾರ್ಥಿಗಳು 80% ಕ್ಕಿಂತ ಹೆಚ್ಚು ಅಂಕ ಪಡೆದು ಪಾಲಕರ ಮತ್ತು ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ಗುರುಕುಲ ಪಬ್ಲಿಕ್ ಶಾಲೆಯ ಜಂಟಿ ಆಡಳಿತ ನಿರ್ದೇಶಕರುಗಳಾದ ಬಾಂಡ್ಯ ಸುಬಾಶ್ಚಂದ್ರ ಶೆಟ್ಟಿ ಹಾಗೂ ಅನುಪಮ ಎಸ್. ಶೆಟ್ಟಿ, ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಂಗಳವಾರ ರಾತ್ರಿ ಹೇರೂರು ಗ್ರಾಮದಲ್ಲಿ ಸಿಡಿಲಿನಿಂದ ಎರಡು ಮನೆಗಳಿಗೆ ಹಾನಿ ಸಂಭವಿಸಿದೆ. ಅಲ್ಲಿನ ಚಿಕ್ತಾಡಿಯ ಉಳ್ಳೋಳಿಮನೆ ನಾಗಿ ಅವರ ಮನೆಗೆ ನಡುರಾತ್ರಿ ವೇಳೆ ಬಡಿದ ಸಿಡಿಲಿನಿಂದ ಮನೆ ಜಖಂಗೊಮಡುದಲ್ಲದೆ, ಒಂದು ಭಾಗಕ್ಕೆ ಬೆಂಕಿ ತಗಲಿತು. ಎಚ್ಚತ್ತ ನೆರೆಮನೆಯ ಮಹೇಶ ಮತ್ತಿತರರು ತಮ್ಮ ಮನೆಯ ಪಂಪ್ನಿಂದ ನೀರು ಹಾಯಿಸಿ ಬೆಂಕಿ ನಂದಿಸಿದರು. ನಾಗಿ ಇದರ ಅರಿವು ಇಲ್ಲದೆ ನಿದ್ರಿಸಿದ್ದರು. ನೆರೆಹೊರೆಯವರ ಪ್ರಯತ್ನವಿಲ್ಲದೆ ಹೋಗಿದ್ದರೆ ಮನೆ ಪೂರ್ಣ ಸುಟ್ಟುಹೋಗುವುದರೊಂದಿಗೆ ಜೀವ ಹಾನಿ ಸಂಭವಿಸುತ್ತಿತ್ತು. ಮನೆ ಜಖಂಗೊಂಡಿರುವುದರಿಂದ ಅದರಲ್ಲಿ ವಾಸಿಸುವುದು ಅಸಾಧ್ಯ ಎನ್ನಲಾಗಿದೆ. ಸನಿಹದ ಸಾಟಿಮನೆ ಸಾಕು ಪೂಜಾರಿ ಅವರ ಮನೆಗೂ ಸಿಡಿಲು ಬಡಿದಿದ್ದು, ಮನೆಯ ವಿದ್ಯುತ್ ಜೋಡಣೆ, ಮೋಟರ್ ಸೇರಿದಂತೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟುಹೋಗಿವೆ. ಅವರಿಗೆ ಇದರಿಂದ ರೂ ೧ ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಎರಡೂ ಮನೆಗಳಿಗೆ ಕಂದಾಯ ನಿರೀಕ್ಷಕ ಅಣ್ಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮಹೇಂದ್ರ ಕುಮಾರ, ಗ್ರಾಮ ಪಂಚಾಯಿತಿ ಸದಸ್ಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಪ್ಪುಂದ ಸಮೃದ್ಧ ಸಭಾಭವನದಲ್ಲಿ ಉಪ್ಪುಂದ ಗಾಣಿಗ ಸೇವಾ ಸಂಘದ ಐದನೇ ವರ್ಷದ ವಾರ್ಷಿಕೋತ್ಸವ ಜರುಗಿತು. ಸಮಾಜದವರ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಉಜಿರೆಯ ಕಾಲೇಜಿನ ಪ್ರಾಂಶುಪಾಲ ಡಾ. ಕೆ. ನಿತ್ಯಾನಂದರವರು ಮಾತನಾಡಿ ಮಾನವೀಯ ಹಾಗೂ ಭಾವನಾತ್ಮಕ ಸಂಬಂಧಗಳ ಕೊರತೆಯ ನಡುವೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಕೌಟುಂಬಿಕ ವ್ಯವಸ್ಥೆಗಳ ಅರಿವು ಮೂಡಿಸುವ ಜತೆಗೆ ಸಂಘಟನೆಯನ್ನು ಬಲಪಡಿಸುವ ಅನಿವಾರ್ಯತೆಯಿದೆ. ಕ್ರೀಯಾತ್ಮಕ ಚಟುವಟಿಕೆಗಳಿಂದ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ರಮೇಶ ಗಾಣಿಗ ಕಾರ್ಯಕ್ರಮ ಉದ್ಘಾಟಿಸಿದರು. ಉಪ್ಪುಂದ ಸಂಘದ ಅಧ್ಯಕ್ಷ ರಾಘವೇಂದ್ರ ಬವಳಾಡಿ ಅಧ್ಯಕ್ಷತೆವಹಿಸಿದ್ದರು. ಕುಂದಾಪುರ ಗಾಣಿಗ ಸಂಘದ ಅಧ್ಯಕ್ಷ ಕೊಗ್ಗ ಗಾಣಿಗ, ಬೈಂದೂರು ಗಾಣಿಗ ಯುವ ಸಂಘಟನೆಯ ಅಧ್ಯಕ್ಷ ಗಣೇಶ, ಉಪಸ್ಥಿತರಿದ್ದರು. ಎಸ್ಎಸ್ಎಲ್ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ದೇವಾಡಿಗರ ಒಕ್ಕೂಟದ ವಾರ್ಷಿಕ ಮಹಾಸಭೆ ಒತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದಲ್ಲಿ ನಡೆಯಿತು. ಸಮಾರಂಭವನ್ನು ಉದ್ದೇಶಿಸಿ ಅರಣ್ಯ ಇಲಾಖಾ ನೌಕರರ ಮಹಾಮಂಡಲದ ರಾಜ್ಯಾಧ್ಯಕ್ಷ ರಘುರಾಮ ದೇವಾಡಿಗ ಮಾತನಾಡಿ ಸಮುದಾಯದ ಸಂಘಟನೆಯಿಂದ ನನಗೇನು ಸಿಕ್ಕಿದೆ ಅಥವಾ ಯಾವ ಪ್ರಯೋಜನ ದೊರಕಿದೆ ಎಂಬ ಸ್ವಾರ್ಥಕ್ಕಿಂತ ಸಮಾಜಕ್ಕಾಗಿ ನಾನೇನು ಮಾಡಿದ್ದೇನೆ, ನನ್ನ ಕರ್ತವ್ಯವೇನು ಎಂದು ಪ್ರತಿಯೊಬ್ಬರೂ ಚಿಂತಿಸಿದಾಗ ಮಾತ್ರ ಸಮಾಜದಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟನೆ ಅತೀ ಮುಖ್ಯವಾಗಿದ್ದು, ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಆಚರಣೆ, ಅನುಭವ, ಸಮೂಹ ಜೀವನ ಹಾಗೂ ಸಂಸ್ಕಾರ ನಮ್ಮ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಿದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ವಾತಾವರಣ ನಿರ್ಮಾಣವಾಗಬೇಕು ಎಂಬ ನೆಲೆಯಲ್ಲಿ ಪ್ರತಿಯೊಂದು ಸಮುದಾಯದವರ ಸಂಘಟನೆಗಳು ಪ್ರಯತ್ನಿಸಬೇಕು. ಸಾಧಕರನ್ನು ಗುರುತಿಸಿ ಗೌರವಿಸುದರೊಂದಿಗೆ ಶೈಕ್ಷಣಿಕವಾಗಿ ಹಿಂದುಳಿದ ಬಡ ಮಕ್ಕಳಿಗೂ ಸಂಘಟನೆ ನೆರವಾಗಬೇಕು. ಉತ್ತಮ ಸಂಸ್ಕಾರ ನೀಡಿ ಮಕ್ಕಳನ್ನು ಬೆಳೆಸುವ ಮೂಲಕ ಭವಿಷ್ಯದಲ್ಲಿ ಹುಟ್ಟೂರಿಗೂ, ಸಮುದಾಯಕ್ಕೂ, ಹೆತ್ತವರಿಗೂ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಳವಾಡಿಯ ‘ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನ’ದ ನೂತನ ಶಿಲಾಮಯ ಗರ್ಭಗುಡಿಯ ಕೆಲಸ ಪ್ರಗತಿಯಲ್ಲಿದ್ದು ದೇವಸ್ಥಾನದ ‘ನಾಗಬನ’ ನಿರ್ಮಾಣಕ್ಕೆ ತಗಲುವ ರೂ. 1,00,000 ವೆಚ್ಚವನ್ನು ಕಳವಾಡಿಯ ಶ್ರೀ ಮಾರಿಕಾಂಬಾ ಯುತ್ ಕ್ಲಬ್’ನ ಸದಸ್ಯರು ದೇವಸ್ಥಾನದ ಜೀರ್ಣೋದ್ದಾರ ಸಮಿತಿಗೆ ಹಸ್ತಾಂತರ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಮಾರಿಕಾಂಬಾ ಯುತ್ ಕ್ಲಬ್ ಕಳವಾಡಿ ಇದರ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಕಳವಾಡಿ, ಪೂರ್ವಾಧ್ಯಕ್ಷ ಪ್ರದೀಪ ಕುಮಾರ್ ಕಾರಿಕಟ್ಟೆ, ಕಾರ್ಯದರ್ಶಿ ಸುಬ್ರಹ್ಮಣ್ಯ ಪೂಜಾರಿ, ಪ್ರವೀಣ ಕಳವಾಡಿ, ಕೃಷ್ಣ ಕಳವಾಡಿ, ಗಣಪತಿ ಪೂಜಾರಿ ಸಂಸ್ಥೆಯ ಸರ್ವ ಸದಸ್ಯರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಯಡ್ತರೆ ಜೆ.ಎನ್.ಆರ್. ಕಲಾಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೈಂದೂರು ನೂತನ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರು ಮಾತನಾಡಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಗಲಿರುಳೆನ್ನದೇ ದುಡಿದ ಪರಿಶ್ರಮದ ಫಲವಾಗಿ ಈ ಭಾರಿ ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ೨೪ ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯದ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜೀವನದಲ್ಲಿ ಎಂದೂ ಸೋಲನ್ನು ಕಾಣದ ನನಗೆ ಕಳೆದ ಚುನಾವಣೆಯ ಸೋಲು ಸ್ವಲ್ಪಮಟ್ಟಿನ ಆಘಾತವಾದರೂ ಕೂಡಾ ಧೃತಿಗೆಡದೇ ಐದು ವರ್ಷಗಳಕಾಲ ಕ್ಷೇತ್ರದ ಜನರ ಸಂಪರ್ಕ ಇಟ್ಟುಕೊಂಡು ಅವರೆಲ್ಲರ ವಿಶ್ವಾಸಗಳಿದ್ದೇನೆ. ಆ ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಅತ್ಯಧಿಕ ಮತಗಳಿಂದ ನನಗೆ ಆಶೀರ್ವದಿಸಿದ್ದಾರೆ. ನನ್ನ ಜೀವನ, ನಾನು ಮಾಡುವ ವ್ಯವಹಾರಗಳು ತೆರೆದಿಟ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ದೇವಳದ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ನಿಫಾ ವೈರಸ್ ಸೋಂಕು ಕುರಿತು ಮುಂಜಾಗ್ರತಾ ಸಭೆ ನಡೆಸಲಾಯಿತು. ಈ ತರ್ತುಸಭೆಯಲ್ಲಿ ಕೊಲ್ಲೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರೆನಿಟಾ ಫೆರ್ನಾಂಡೀಸ್ ಅವರು ನೆರೆಯ ಕೇರಳದಲ್ಲಿ ಕಾಣಿಸಿಕೊಂಡಿರುವ ಮಾರಣಾಂತಿಕ ನಿಫಾ ವೈರಸ್ ಸೋಂಕು ಪ್ರಕರಣ ಕೊಲ್ಲೂರು ಭಾಗಗಳಲ್ಲಿ ಈವರೆಗೆ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಬಗ್ಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಹಾಗೂ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಕ್ಷೇತ್ರಕ್ಕಾಗಮಿಸುವ ಭಕ್ತರ ಮತ್ತು ವಸತಿಗೃಹಗಳಲ್ಲಿ ಉಳಿದುಕೊಳ್ಳುವವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ದೇವಳದ ಆಡಳಿತ ಮಂಡಳಿ, ವ್ಯವಸ್ಥಾಪನಾ ಸಮಿತಿ ಮತ್ತು ಗ್ರಾಮ ಪಂಚಾಯತ್ ಜತೆಗೂಡಿ ಮುನ್ನೆಚ್ಚಿರಿಕಾ ಕ್ರಮಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ಅಂತವರ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಪ್ರಥಮ ತುರ್ತು ಚಿಕಿತ್ಸಾ ವಿಭಾಗ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಿಬ್ಬಂದಿಗಳ ಕೊರತೆಯಿದ್ದರೂ ಇರುವ ಸಿಬ್ಬಂದಿಗಳು ಪ್ರತಿ ಮನೆಮನೆಗೂ ತೆರಳಿ ರೋಗದ ಲಕ್ಷಣಗಳು, ಬರದಂತೆ ತಡೆಯುವ ಕುರಿತು ಮತ್ತು ಮುನ್ನೆಚ್ಚರಿಕಾ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜೇಸಿಐ ಮಂಗಳೂರು ಸಾಮ್ರಾಟ್ ಇವರು ವಿಶೇಷ ಆಕರ್ಷಣಾ ಕಾರ್ಯಕ್ರಮವಾದ ”ಅಶ್ವಮೇಧ” “PEACE IS POSSIBLE”* ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡ ಯಾತ್ರೆ 26/5/2018 ರಂದು ಮಂಗಳೂರಿಂದ ಪ್ರಾರಂಭಿಸಿದರು. ಈ ಅಶ್ವಮೇಧ ಯಾತ್ರೆಯು 31/5/2018 ಕ್ಕೆ ಮಂಗಳೂರಿನಲ್ಲಿ ಕೊನೆಗೊಳ್ಳಲಿದೆ. ಈ ಅಶ್ವಮೇಧ ಯಾತ್ರೆಗೆ ಕುಂದಾಪುರ ,ಜೇಸಿಐ ಕುಂದಾಪುರ ಹಾಗೂ ಜೆಸಿಐ ಸಾಸ್ತಾನ ವೈಬ್ರಂಟ್ ನವರು ಸ್ವಾಗತಿಸಿ, ಶುಭ ಹಾರೈಸಿದರು. ಹಾಗೆಯೇ ಜೇಸಿಐ ಭವನದ ಮಹಮ್ಮದ್ ಅನ್ವರ್ ವೇದಿಕೆಯಲ್ಲಿ ,ಯಾತ್ರೆ ಯ ನೇತೃತ್ವ ವಹಿಸಿದ ಜೇಸಿಐ ಸಾಮ್ರಾಟನ ಅಧ್ಯಕ್ಷ ರಾಘವೇಂದ್ರ ಹೊಳ್ಳರನ್ನು ಗೌರವಿಸಿ ಸನ್ಮಾನಿಸಲಾಯಿತು. ಕುಂದಾಪುರ ಜೇಸಿಐ ಅಧ್ಯಕ್ಷ ಜೇಸಿ ಶ್ರೀನಾಥ್ ಗಾಣಿಗ ಅಧ್ಯಕ್ಷ ತೆ ವಹಿಸಿದ್ದರು. ವೇದಿಕೆಯಲ್ಲಿ ಜಿ&ಡಿ ನಿರ್ದೇಶಕರಾದ ಕಾರ್ತಿಕೇಯ ಮಧ್ಯಸ್ಥರವರು,ಜೇಸಿ ಸುರತ್ಕಲ್ ಅಧ್ಯಕ್ಷ ರಾದ ಪ್ರವೀಣ್ ಶೆಟ್ಟಿ, ಜೇಸಿ ಸಾಸ್ತಾನ ವೈಬ್ರೆಂಟ್ ನ ಅಧ್ಯಕ್ಷ ರಾದ ಕೇಶವ್ ಆಚಾರ್, ಕಾರ್ಯದರ್ಶಿ ಜೇಸಿ ಚೇತನ್, ಜೇಸಿಐ ನ ಕುಂದಾಪುರ ರ ಸದಸ್ಯರಾದ ನಿತಿನ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೆಂಗಳೂರು: ದುಬೈನ ಉದ್ಯಮಿ, ಬೈಂದೂರು ತಾಲೂಕಿನ ನಾಗೂರಿನ ದಿನೇಶ್ ಚಂದ್ರಶೇಖರ ದೇವಾಡಿಗ ಅವರು ಇತ್ತಿಚಿಗೆ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನಲ್ಲಿ ಜರುಗಿದ 43 ನೇ ಆರ್ಯಭಟ ಅಂತರಾಷ್ಟ್ರೀಯ ಸಮಾರಂಭದಲ್ಲಿ ಪ್ರಧಾನಿಸಲಾಯಿತು. ಪ್ರಸ್ತುತ ದಬೈನಲ್ಲಿ ನೆಲೆಸಿರುವ ಇವರು ಎಲಿಗೆಂಟ್ ಗ್ರೂಫ್ ಆಫ್ ಕಂಪನಿ ಶಾರ್ಜಾ, ದುಬೈ, ಅಬುದಾಬಿಯ ಮ್ಯಾನೇಜಿಂಗ್ ಡೈರೆಕ್ಟರ್ರಾಗಿ ಕಾರ್ಯನಿರ್ವಹಿಸಿರುತ್ತಾರೆ. ಹಾಗೂ ಕುಂದಾಪುರ ದೇವಾಡಿಗ ಮಿತ್ರ ದುಬೈ ಇದರ ಅಧ್ಯಕ್ಷರಾಗಿ , ಏಕನಾಥೇಶ್ವರೀ ದೇವಸ್ಥಾನ ಟ್ರಸ್ಟ್ ರಿ. ಬಾರ್ಕೂರು ಇದರ ವಿಶ್ವಸ್ಥರಾಗಿಯೂ ಮತ್ತು ನಮ್ಮ ಕುಂದಾಪುರ ಕನ್ನಡ ಬಳಗ ದುಬೈ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿರುವ ಇವರು ಸಾಮಾಜಿಕ, ಸಾಂಸ್ಕ್ರತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯು ಪ್ರತಿ ವರ್ಷದಂತೆ ಈ ಬಾರಿ ಕೂಡ ಶಿಕ್ಷಕಿಯರಿಗಾಗಿ ವಿಶೇಷ ಕಾರ್ಯಾಗಾರವೊಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಶೆರಿನ್.ಪಿ ಆಂತೋನಿ, ಮೇಲ್ವಿಚಾರಕಿ/ನಿರ್ದೇಶಕಿ ಹಾಗೂ ಮಕ್ಕಳ ಮನೋತಜ್ಞೆ ಬೆಂಗಳೂರು ಮತ್ತು ಕು. ರಕ್ಷಿತಾ ಜೊತೆಗಿದ್ದರು. ವಿಶೇಷ ಚಟುವಟಿಕೆಯನ್ನು ಶಿಕ್ಷಕಿಯರಿಗೆ ನೀಡಲಾಯಿತು ಹಾಗೂ ವಿವಿಧ ವಸ್ತುಗಳನ್ನು ನೆಲದ ಮೇಲೆ ಕ್ರಮವಾಗಿ ಜೋಡಿಸಲಾಗಿತ್ತು. ಶಿಕ್ಷಕಿಯರು ಒಂದು ವಸ್ತುವನ್ನು ಆಯ್ಕೆ ಮಾಡಿ ಆ ವಸ್ತುವಿನ ಗುಣ ವಿಶೇಷದ ಜೊತೆ ನಮ್ಮ ಯಾವ ಗುಣವನ್ನು ಹೊಂದಾಣಿಕೆ ಮಾಡಬಹುದು ಎಂಬುದನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ತೋರಿಸಿದರು. ಈ ರೀತಿಯ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ಶಿಕ್ಷಕಿಯರಿಗೆ ತಿಳಿಸಿದರು. ತರಗತಿ ಕೋಣೆಯಲ್ಲಿ ಮಕ್ಕಳನ್ನು ಪ್ರಾಯೋಗಿಕವಾಗಿ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ಹೇಗೆ ತೋಡಗಿಸಿಕೊಳ್ಳಬಹುದು ಹಾಗೂ ಮಕ್ಕಳು ಸ್ವ ಇಚ್ಛೆಯಿಂದ ತಮ್ಮ ಅಭಿಪ್ರಾಯ ಆಲೋಚನೆಗಳನ್ನು ಹೇಗೆ ಕ್ರಿಯಾಶೀಲವಾಗಿ ಹೊರಹಾಕಲು ಬೇಕಾದ ವಾತಾವರಣವನ್ನು ಹೇಗೆ ಸೃಷ್ಟಿಸಬಹುದು ಎಂಬುದನ್ನು ತಿಳಿಸಿದರು. ಮಕ್ಕಳ ಜೊತೆಗಿನ ಶಿಕ್ಷಕರ…
