ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಲೇಜಿನ ಇತರ ಘಟಕ ಮತ್ತು ಸಮಿತಿ, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ, ಬೈಂದೂರು, ಜೆಸಿಐ ಉಪ್ಪುಂದ, ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಕುಂದಾಪುರ ಭಾರತೀಯ ರೆಡ್ಕ್ರಾಸ್ನ ಅಧ್ಯಕ್ಷ ಜಯಕರ ಶೆಟ್ಟಿ ಮಾತನಾಡಿ, ಕೆಲವು ತುರ್ತು ಚಿಕಿತ್ಸೆಯ ಸಂದರ್ಭ ರಕ್ತದ ಕೊರತೆಯಿಂದ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಿದ ಪುಣ್ಯ ರಕ್ತದಾನಿಗೆ ಸಲ್ಲುತ್ತದೆ. ಹಾಗಾಗಿ ರಕ್ತದಾನವನ್ನು ಜೀವದಾನ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದರು. ವಿಜ್ಞಾನ ಎಷ್ಟೇ ಮುಂದುವರಿದರೂ ಕೃತಕ ರಕ್ತ ಉತ್ಪಾದನೆ ಸಾಧ್ಯವಿಲ್ಲ. ಅದು ನಮ್ಮಲ್ಲೆ ಉತ್ಪಾದನೆಯಾಗಿ ನಮ್ಮೊಳಗೆ ಹಂಚಿಕೆಯಾಗಬೇಕು. ಈ ನೆಲೆಯಲ್ಲಿ ಸುಮಾರು ೨.೫ ಕೋಟಿ ರೂ.ವೆಚ್ಚದಲ್ಲಿ ಕುಂದಾಪುರದಲ್ಲಿ ರಕ್ತನಿಧಿ ಕೇಂದ್ರ ಸ್ಥಾಪಿಸಲಾಗಿದೆ. ಇದು ವಾರದ ಏಳು ದಿನಗಳು ಸೇರಿ ವರ್ಷವಿಡೀ ಸಮಾಜಕ್ಕಾಗಿ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರಮ ಜೀವಿಗಳಾದ ಟೈಲರ್ಗಳನ್ನು ಸರ್ಕಾರ ಗುರುತಿಸಿದೆ. ಆದರೆ, ಸರ್ಕಾರದ ಸೌಲಭ್ಯಗಳು ಯಾವುದೂ ಟೈಲರ್ಗಳಿಗೆ ಸಿಗುತ್ತಿಲ್ಲ. ಇದಕ್ಕೆಲ್ಲಾ ಕಾರಣವೆಂದರೇ ನಮ್ಮ ಸಂಘಟನೆ ಸಶಕ್ತವಾಗಿಲ್ಲ. ಆದ್ದುದರಿಂದ ರಾಜ್ಯ ಟೈಲರ್ ಅಸೋಸಿಯೇಷನ್ ಸಂಘಟನಾತ್ಮಕವಾಗಿ ಬಲಗೊಳ್ಳುವುದು ಇಂದಿನ ದಿನದಲ್ಲಿ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ನ ಉಡುಪಿ ಜಿಲ್ಲಾಧ್ಯಕ್ಷ ಗುರುರಾಜ ಶೆಟ್ಟಿ ಹೇಳಿದರು. ಅವರು ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿದ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಕೋಟೇಶ್ವರ ವಲಯ ಸಮಿತಿಯ ೨೧ನೇ ವಾರ್ಷಿಕಾಧಿವೇಶನ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸಮಿತಿ ಕೋಶಾಧಿಕಾರಿ ಕೆ.ರಾಮಚಂದ್ರ ಮಾತನಾಡಿ, ಈ ಸಂಘಟನೆ ಟೈಲರ್ಗಳ ಅಭ್ಯುದಯಕ್ಕಾಗಿದೆ. ಆದ್ದರಿಂದ ಅಸೋಸಿಯೇಷನ್ಗೆ ಸೇರಲು ಯಾರ ಒತ್ತಾಯದ ಅವಶ್ಯಕತೆಯಿಲ್ಲ. ನಮ್ಮ ಸಂಘಟನೆ ಬಲಗೊಂಡರೆ ನಮ್ಮ ಭವಿಷ್ಯ ಉಜ್ವಲವಾಗುತ್ತದೆ. ಶೀಘ್ರ ರಾಜ್ಯ ಸಮಿತಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸುತ್ತದೆ. ಎಲ್ಲ ಕ್ಷೇತ್ರ, ವಲಯ ಸಮಿತಿಗಳು ಸಹಕರಿಸಿ ನಮ್ಮ ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ಕೋಟೇಶ್ವರ ವಲಯಾಅಧ್ಯಕ್ಷ ಸೀತಾರಾಮ ಆಚಾರ್ಯ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ರಂಗಕರ್ಮಿ ಬಹುಮುಖ ಪ್ರತಿಭೆ ದಿ. ಮಂಜುನಾಥ ಕೋಟ ಅವರ ಸ್ಮರಣಾರ್ಥ ಕೊಡಮಾಡುವ ತಿಂಗಳ ದತ್ತಿ ಪುರಸ್ಕಾರಕ್ಕೆ ರಂಗಕರ್ಮಿ ಬಿ.ಎಸ್ ರಾಮ್ ಶೆಟ್ಟಿ ಹಾರಾಡಿ ಅವರು ಆಯ್ಕೆಯಾಗಿದ್ದಾರೆ. ಬಿ. ಎಸ್. ರಾಮ್ ಶೆಟ್ಟಿ ಅವರು ವೃತ್ತಿಯಲ್ಲಿ ವಿದ್ಯಾ ಮಂದಿರ ಹಾರಾಡಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಭೂಮಿಕಾ(ರಿ) ಎನ್ನುವ ರಂಗ ತಂಡ ಕಟ್ಟಿಕೊಂಡು ಹಲವಾರು ಯುವ ಪ್ರತಿಭೆಗಳನ್ನು ರಂಗಕ್ಕೆ ಪರಿಚಯಿಸಿದ್ದಾರೆ. ಕಳೆದ ೨೮ ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಾಟಕ ನಿರ್ದೇಶಿಸಿದ್ದಾರೆ. ಕನ್ನಡದ ಖ್ಯಾತ ನಾಟಕಗಾರರ ನಾಟಕಗಳನ್ನು ರಂಗಕ್ಕೆ ತಂದಿದ್ದಾರೆ. ಸಂಗ್ಯಾ ಬಾಳ್ಯಾ, ಮೃಗತ್ರಷ್ಣ, ಅಗ್ನಿಲೋಕ, ನಮ್ಮ ನಿಮ್ಮೊಳಗೊಬ್ಬ, ಅರಗಿನ ಬೆಟ್ಟ, ಮಾರನಾಯಕ, ಹುಲಿಯ ನೆರಳು, ಕತ್ಯಾಯಿನಿ, ವ್ರತ್ತದ ವ್ರತ್ತಂತ, ಗಿಡ ಮರ ಬಳ್ಳಿ, ಸೂರ್ಯಸ್ತದಿಂದ ಸೂರ್ಯೋದಯದವರೆಗೆ, ಆರದಿರಲಿ ಬೆಳಕು, ಅಲಿಬಾಬಾ ಮತ್ತು ೪೦ ಕಳ್ಳರು, ಸೂರ್ಯ ಬಂದ, ಮಹಾಮಾಯಿ, ಶಿವಭೂತಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡದೋಣಿ ಮೀನುಗಾರರಿಗೆ ಡಿಸೆಂಬರ್ ಮತ್ತು ಜನವರಿ ತಿಂಗಳ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಹಾಗೂ ಸ್ಥಗಿತಗೊಂಡಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣ ಕಾರ್ಯವನ್ನು ಪುನರಾರಂಭಿಸುವಂತೆ ರಾಜ್ಯದ ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ನೇತೃತ್ವದ ನಿಯೋಗ ಸಮಸ್ಯೆ ಬಗ್ಗೆ ಚರ್ಚೆ ನಡೆಸಿ ಮನವಿ ಸಲ್ಲಿಸಿತು. ಮಂಗಳೂರು ಸರ್ಕ್ಯೂಟ್ ಹೌಸ್ನಲ್ಲಿ ಸಚಿವ ಅಂಗಾರ ಮತ್ತು ಕಾರ್ಕಳದಲ್ಲಿ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ನಿಯೋಗದ ಸದಸ್ಯರು ನಾಡದೋಣಿ ಮೀನುಗಾರರಿಗೆ ಡಿಸೆಂಬರ್ ಮತ್ತು ಜನವರಿ ತಿಂಗಳ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಹಾಗೂ ಸ್ಥಗಿತಗೊಂಡಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣ ಕಾರ್ಯವನ್ನು ಪುನರಾರಂಭಿಸುವಂತೆ ಮತ್ತು ಸಮುದ್ರ ಅಂಬುಲೆನ್ಸ್ನ್ನು ಅತೀ ಶೀಘ್ರದಲ್ಲಿ ಒದಗಿಸುವಂತೆ ಮನವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ೬ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ನಡೆಯಿತು. ಆರಾಧನಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಸ್ತೋತ್ರ ಪಠಣ, ಶ್ರೀದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಪುಷ್ಪಾರ್ಚನೆ, ಪ್ರಸಾದ ವಿತರಣೆ, ರಾತ್ರಿ ಭಜನೆ, ಶ್ರೀದೇವರಿಗೆ ಪ್ರಸನ್ನಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ. ಪ್ರದೀಪ ಭಟ್ ನೇತೃತ್ವದಲ್ಲಿ ನಡೆಯಿತು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಮತ್ತು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಜಿ.ನರಸಿಂಹ ನಾಯಕ್ ಮತ್ತು ಗೌರವಾಧ್ಯಕ್ಷ ಡಾ.ಕಾಶೀನಾಥ ಪೈ ಶ್ರೀಗಳ ಗುರುಗುಣಗಾನ ಮಾಡಿದರು. ಪುರೋಹಿತರಾದ ಜಿ.ನಾರಾಯಣ ಆಚಾರ್ಯ, ಜಿ.ಅನಂತಕೃಷ್ಣ ಭಟ್, ಜಿ.ವಸಂತ ಭಟ್, ಜಿ.ಅಜಿತ್ ಭಟ್, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎನ್ ಸಿಸಿ ನೌಕಾದಳದ ವತಿಯಿಂದ ಈಜು, ಸೆಮಫೋರ್, ರಿಗ್ಗಿಂಗ್, ರಸಪ್ರಶ್ನೆಗಳನ್ನೊಳಗೊಂಡ ಸೀಮೆನ್ಶಿಪ್ (seamanship) ಸ್ಪರ್ಧೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಸಂಯೋಜಕ ಹಾಗೂ ಎನ್ಸಿಸಿ ನೌಕಾದಳದ ಅಧಿಕಾರಿ ಸಬ್ ಲೆಫ್ಟಿನೆಂಟ್ ನಾಗರಾಜ್ ಎಂ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ನವೀನತೆ, ಕ್ರಿಯಾಶೀಲತೆ ಬೆಳೆಸುವುದು ಹಾಗೂ ದೇಶದ ನೌಕಾದಳದಲ್ಲಿ ಇರುವ ವಿಶೇಷತೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಲು ಈ ಸ್ಪರ್ಧೆಯು ಸಹಕಾರಿಯಾಗುವುದು ಎಂದು ತಿಳಿಸಿದರು . ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ವಿವೇಕ್ ಆಳ್ವರವರು ಮಾತನಾಡುತ್ತಾ ವಿದ್ಯಾರ್ಥಿಗಳು ಹೊಸತನವನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಪುಸ್ತಕದ ಆಚೆಗಿನ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿದ್ದಲ್ಲಿ ಪೂರ್ಣರೂಪದ ಕಲಿಕೆ ಸಾಧ್ಯ ಎಂದು ತಿಳಿಸಿದರು. ಕಾಲೇಜಿನ ಎಲ್ಲಾ ಫೋರಂನ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಅವರು ಮಾತನಾಡಿ, ಕಾಲೇಜಿನಲ್ಲಿ ಮೊದಲ ಬಾರಿ ಇಂತಹ ನವೀನ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳಿಗೆ ಮುಂದಿನ ದಿನದಲ್ಲಿ ತಮ್ಮ ಯೋಚನಾ ಲಹರಿ, ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿ ಆಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ವಿವೇಕಾನಂದರ ಜೀವನ ಸಂದೇಶವನ್ನು ಭೋದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ವೇದಮಂತ್ರಗಳ ಪಠಣ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಲೂರು ಬಳಿಯ ಓಣ್ಕಣ್ ಮೋರಿ ತಿರುವಿನಲ್ಲಿ ನಡೆದಿದೆ. ಕೋಲಾರದಿಂದ ಭಕ್ತರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಪಂಚ ಇರುವುದು ಹೇಡಿಗಳಿಗಲ್ಲ; ಜೀವನದಲ್ಲಿ ಎದುರಾಗುವ ಸಕಲ ಸೋಲು-ಗೆಲುವುಗಳಿಗೆ ಬಗ್ಗದಿರಿ, ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳದೆ ಸ್ವಾರ್ಥರಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಯುವಕರಿಗೆ ಕರೆಕೊಟ್ಟ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಇಂದಿಗೂ ಯುವಜನಾಂಗದ ಸ್ಫೂರ್ತಿಯ ಚಿಲುಮೆಯಾಗಿ ಉಳಿದಿದ್ದಾರೆ. ಹಿಂದು ಧರ್ಮದ ಪುನರುಜ್ಜೀವನಕ್ಕೆ ಕಾರಣೀಭೂತರಾದ ಅವರು ರಾಷ್ಟ್ರೀಯತೆಗೆ ನೀಡಿದ ಕೊಡುಗೆ ಬಹುದೊಡ್ಡದು. ಸನ್ಯಾಸ ಧರ್ಮದ ವ್ಯಾಪ್ತಿಯನ್ನು ವಿಶೇಷವಾಗಿ ವ್ಯಾಖ್ಯಾನಿಸಿದ ವಿವೇಕಾನಂದರು, ಧರ್ಮಪಾಲನೆ ಎಂದರೆ ಏಕಾಂತದಲ್ಲಿ ಕುಳಿತು ಮಾಡುವ ತಪಸ್ಸಲ್ಲ; ಜನರ ನಡುವೆ ಇದ್ದುಕೊಂಡು ಜನರಿಗಾಗಿ ಸಮಸ್ತ ಶಕ್ತಿಯನ್ನೂ ವಿನಿಯೋಗಿಸುವುದು ಎಂದು ಸಾರಿದರು. ಈ ಸಮಾಜಯಜ್ಞಕ್ಕೆ ಅವರು ವಿಶೇಷ ಆಹ್ವಾನ ನೀಡಿದ್ದು ಯುವಕರಿಗೆ. ಆದ್ದರಿಂದಲೇ ಅವರು ಇಂದಿಗೂ ಯುವಕರಿಗೆ ಆದರ್ಶ ವ್ಯಕ್ತಿ. ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಶ್ರೀಮಂತ ಕುಟುಂಬದಲ್ಲಿ ಜನಿಸಿದ ನರೇಂದ್ರನಾಥ ದತ್ತ ಚಿಕ್ಕವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡರು. ಅವರ ಜೀವನವೇ ಒಂದು ಹೋರಾಟವಾಗಿತ್ತು. ಒಮ್ಮೆ ಅವರು ಜೀವನದ ಉದ್ದೇಶವೇನು ಎಂಬ ಪ್ರಶ್ನೆ ಕೇಳಿಕೊಂಡರು. ಇದೇ ವೇಳೆ ಭಾರತದ ಬಡತನ ಕಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿದ್ದಾರೆ ತುಣುಕನ್ನು ಹರಿಯಬಿಟ್ಟಿರುವುದು, ಜನರಲ್ಲಿ ಗೊಂದಲ ಸೃಷ್ಟಿ ಮಾಡಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ಪಷ್ಟನೆ ನೀಡಿದ್ದು, ಜ.5ರಿಂದ ಜಾರಿಯಾದ ಆದೇಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಮುಂದುವರಿಯಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ. ಸರಕಾರದ ಆದೇಶದಂತೆ ದಿನಾಂಕ 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
