ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಪುರುಷರಷ್ಟೆ ಸಮಾನರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ, ಅದರಲ್ಲಿಯೂ ಆರ್ಥಿಕ ವ್ಯವಹಾರದಲ್ಲಿ ಅತ್ಯಂತ ಶಿಸ್ತನ್ನು ಪ್ರದರ್ಶಿಸುವ ಅವರ ಕೈಯಲ್ಲಿ ಸಹಕಾರಿ ಸಂಸ್ಥೆಗಳ ಜವಾಬ್ದಾರಿ ನೀಡಿದರೆ ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಮಾಜಿ ಶಾಸಕ ಹಾಗೂ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೋಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಬಸ್ರೂರು ಮಾರ್ಗೋಳಿಯಲ್ಲಿ ಶ್ರೀ ಶನೇಶ್ವರ ಮಹಿಳಾ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಉಳಿತಾಯದ ವಿಷಯದಲ್ಲಿ ಸಮರ್ಥರಾಗಿದ್ದು, ಇಂದು ತಮ್ಮ ಉಳಿತಾಯದ ಹಣವನ್ನು ಸಹಕಾರಿ ಸಂಘಗಳಲ್ಲಿ ಠೇವಣೆಯಿಟ್ಟು ಆರ್ಥಿಕ ವಹಿವಾಟು ನಡೆಸಿ ಸ್ವಾವಲಂಬಿ ಜೀವನ ನಡೆಸುತ್ತಿರುವುದು ಉತ್ತಮ ಬೆಳವಣೆಯಾಗಿದೆ ಎಂದರು. ಉಡುಪಿ ಜಿಲ್ಲಾ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಭಾಸ್ಕರ ಕಾಮತ್ ಷೇರುಪತ್ರ ಬಿಡುಗಡೆ ಮಾಡಿ ಮಾತನಾಡಿ, ರಾಜ್ಯದಲ್ಲಿ ೫ಸಾವಿರಕ್ಕೂ ಅಧಿಕ ಸೌಹಾರ್ದ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಸಂಘಗಳು ಲಾಭದಲ್ಲಿದೆ. ನಮ್ಮ ಸಂಘಗಳು ಸದಸ್ಯರಿಗೆ ತ್ವರಿತ ಸೇವೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.25: ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಜೂನ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://www.rangayana.org/ ಅಥವಾ ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ಮೈಸೂರು ದೂ.ಸಂಖ್ಯೆ: 0821-2512639, ಮೊ. ನಂ: 9448938661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.25: ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಕಲೆ ಮತ್ತು ಸಾಹಿತ್ಯಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ಭಾಷೆ, ಉಚ್ಚಾರವನ್ನು ತಿದ್ದುವ, ಮಾತನಾಡುವ ಅವಕಾಶ ಇರುವುದು ರಂಗಭೂಮಿಯಲ್ಲಿ. ಹಾಗಾಗಿ ನಮ್ಮ ಕುಂದಾಪುರ ಕನ್ನಡ ಭಾಷೆಯಲ್ಲಿಯೂ ರಂಗಭೂಮಿ ನಿರ್ಮಾಣಗೊಳ್ಳೂವ ಅಗತ್ಯತೆ ಇದೆ ಎಂದು ಭಗವದ್ಗೀತಾ ಅಭಿಯಾನದ ಜಿಲ್ಲಾ ಸಂಚಾಲಕ, ಶಿಬಿರದ ಪ್ರಾಯೋಜಕ ಬಿಜೂರು ರಾಮಕೃಷ್ಣ ಶೇರುಗಾರ್ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಶನಿವಾರ ಲಾವಣ್ಯ ವತಿಯಿಂದ ನಡೆದ 20ನೇ ವರ್ಷದ ಮಕ್ಕಳ ಬೇಸಿಗೆ ಶಿಬಿರದಲ್ಲಿ ತರಬೇತುಗೊಂಡ ಮಕ್ಕಳ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಮಕ್ಕಳಲ್ಲಿ ಸಂಸ್ಕಾರ ಹಾಗೂ ಸ್ವಾಭಿಮಾನವನ್ನು ಬೆಳೆಸುತ್ತದೆ. ಶಿಕ್ಷಣದ ಜೊತೆಗೆ ಕಲಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರು ಬಾಲ್ಯದಿಂದಲೇ ಮತ್ತಷ್ಟು ಕ್ರೀಯಾಶೀಲರಾಗುತ್ತಾರೆ. ಹೊಸ ಪ್ರತಿಭೆಗಳಿಗೂ ಪ್ರೋತ್ಸಾಹಿಸುವುದು ಬಹುಮುಖ್ಯ. ಈ ನಿಟ್ಟಿನಲ್ಲಿ ಹಿರಿಯ ಕಲಾವಿದರು ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಪ್ರತಿಭೆ ಇರುವ ಮಕ್ಕಳನ್ನು ಗುರುತಿಸಿ ಅವರ ಬೆನ್ನು ತಟ್ಟುವ ಕೆಲಸ ಮಾಡಿದರೆ ಅವರೂ ಬೆಳೆಯುತ್ತಾರೆ ಎಂದರು. ಲಾವಣ್ಯದ ಸನ್ಮಾನ ಸ್ವೀಕರಿಸಿ…
ಮಹಿಳೆಯೋರ್ವಳಿಗೆ ಗರ್ಭಾವಸ್ಥೆಯಲ್ಲಿ ಆರೈಕೆ ಮಾಡಿದಂತೆಯೇ ಮಗುವಿನ ಹೆರಿಯಾದ ಬಳಿಕವೂ ನಿಯಮಿತವಾಗಿ ಆರೈಕೆ ಮಾಡುವುದು ಅತಿಮುಖ್ಯ. ಬಾಣಂತಿ ಮೈ ಹಸಿ ಮೈ ಎಂಬುದಾಗಿ ಕೂಡ ಹೇಳುವುದರಿಂದ ಈ ಸಮಯದಲ್ಲಿ ಆಕೆ ಶಕ್ತಿಯನ್ನು ಕಳೆದುಕೊಂಡಿರುತ್ತಾರೆ. ಹೆಚ್ಚುವರಿ ಪ್ರೋಟೀನ್ ವಿಟಮಿನ್ಗಳು ಆಕೆಗೆ ಬೇಕಾಗುತ್ತದೆ. ಹೆರಿಗೆಯ ಬಳಿಕ ಯಾವ ಪಾನೀಯ, ಪೇಯಗಳ ಸೇವನೆಯಿಂದ ಬಾಣಂತಿಯ ಆರೋಗ್ಯ ಸುಧಾರಿಸಲಿದೆ ಎಂಬುದರ ಮಾಹಿತಿ ಈ ಲೇಖನದಲ್ಲಿದೆ. ಓಟ್ಸ್:ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟಲು ಓಟ್ಸ್ ಸಹಾಯ ಮಾಡಲಿದೆ. ಇದು ಕಾರ್ಬೋಹೈಡ್ರೇಟ್ಗಳ ಹೆಚ್ಚುವರಿ ಅಂಶವನ್ನು ಒಳಗೊಂಡಿದ್ದು, ಫೈಬರ್, ಐರನ್ ಮತ್ತು ಪ್ರೋಟೀನ್ಗಳನ್ನು ಒಳಗೊಂಡಿದೆ. ಪೋರಿಡ್ಜ್, ಕಿಚಡಿ ಅಥವಾ ಉಪ್ಮಾದಂತೆ ಮಾಡಿಕೊಂಡು ಓಟ್ಸ್ ಅನ್ನು ಸೇವಿಸಬಹುದಾಗಿದೆ. ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ನೀವು ಓಟ್ಸ್ನೊಂದಿಗೆ ಸೇರಿಸಿಕೊಳ್ಳಬಹುದು. ಅರಿಶಿನ:ಅರಶಿನವನ್ನು ಅನಾದಿ ಕಾಲದಿಂದಲೂ ಔಷಧವಾಗಿ ಬಳಸಲಾಗುತ್ತಿದೆ. ಇದು ಗಾಯವನ್ನು ಒಣಗಿಸಲು ನೆರವಾಗುತ್ತದೆ ಮತ್ತು ಉರಿಯೂತ ಅಲರ್ಜಿಯನ್ನು ನಿವಾರಣೆ ಮಾಡಲಿದೆ. ಬಿಸಿ ಹಾಲಿಗೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ನಿಮಗೆ ಹೆಚ್ಚು ಪ್ರಯೋಜನ ಉಂಟಾಗಲಿದೆ. ಬೇಕಿದ್ದರೆ ಸಕ್ಕರೆ ಇಲ್ಲವೇ ಜೇನನ್ನು ನಿಮಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.23: ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬAಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಮೇ.29 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ. ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು 19 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ವಿತರಿಸಲಾದ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧದಿಸಿದಂತೆ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಅಗಷ್ಟ್ 22ರವರೆಗೆ ಇರುವುದಾಗ್ಯೂ ಪ್ರಸ್ತುತ ಮಾನ್ಯ ಹಸಿರು ಪೀಠ ನ್ಯಾಯಾಲಯ, ದಕ್ಷಿಣ ವಲಯ ಚೆನೈ ನ ಆದೇಶದನುಸಾರ ಉಡುಪಿ ಜಿಲ್ಲಾ 07 ಸದಸ್ಯರ ಸಮಿತಿಯು ಜಿಲ್ಲಾ ವ್ಯಾಪ್ತಿಯಲ್ಲಿ ಮಾನ್ಯ ನ್ಯಾಯಾಲಯದ ಆದೇಶದನ್ವಯ ಕ್ರಮ ಕೈಗೊಂಡಿದ್ದು, ಕರಾವಳಿ ನಿಯಂತ್ರಣ…
ಪ್ರಕೃತಿ ವಿಕೋಪ ಸಂತೃಸ್ತರ ನೆರವಿಗೆ ನಿಂತಿದ್ದ ಬಾಲಕಿ ಈಗ ಅಸಹಾಯಕಿ ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ತಾಲೂಕು ಹಕ್ಲಾಡಿ ಗ್ರಾಮದ ಬಗ್ವಾಡಿಯ ಈ ಯುವತಿ ಅನಾರೋಗ್ಯದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸಿ ಇದೀಗ ಪ್ರಥಮ ಶೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ಜುಲೈಯಿಂದ ಮೂರು ತಿಂಗಳು ಹಾಗೂ ಆಕ್ಟೋಬರ್ನಿಂದ ಮೂರು ತಿಂಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಗ್ವಾಡಿಯ ರಾಜು ಪೂಜಾರಿ ಮತ್ತು ಸುಜಾತಾ ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಆರ್. (15), ಶಾಲೆಗೆ ತೆರಳದೇ ನೋಟ್ಸ್ ಜೆರಾಕ್ಸ್ ಪ್ರತಿಯನ್ನು ಮಲಗಿಕೊಂಡೇ ಓದಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.92.64 ಅಂಕಗಳಿಸಿ ಸಾಧನೆಗೈದಿದ್ದಾಳೆ. ಶ್ರಾವ್ಯ ತಂದೆ ತಾಯಿ ಹೆಮ್ಮಾಡಿಯಲ್ಲಿ ಚಿಕ್ಕ ಫಾಸ್ಟ್ ಫುಟ್ ಅಂಗಡಿ ನಡೆಸುತ್ತಿದ್ದಾರೆ. ಅತ್ರಾಡಿ ಮಕ್ಕಳ ಕೂಟ ಶಾಲೆಗೆ ದಾಖಲಾಗಿ ಎಸ್ಎಸ್ಎಲ್ಸಿ ಪೂರೈಸಿದ್ದಾಳೆ. ಎಲ್ಲರಂತೆ ಚೂಟಿಯಾಗಿದ್ದ ಶ್ರಾವ್ಯ ಕರಳು ಸಂಬಂಧಿ ಅನಾರೋಗ್ಯದಿಂದ (ಐಬಿಡಿ ಕ್ರೋಮ್ಸ್) ದೇಹದ ತೂಕ ಕಳೆದುಕೊಂಡಿದ್ದಾಳೆ. ಅತ್ರಾಡಿ ಮಕ್ಕಳ ಕೂಟ ಶಾಲಾ ಸಂಚಾಲಕ ಸುಭಾಸ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು, ಮುದೂರು, ಜಡ್ಕಲ್ ಪ್ರದೇಶಗಳ ಸಾರ್ವಜನಿಕರಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಕರಣಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ವೈದ್ಯರು, ಶುಶ್ರೂಷಕಿಯರು,ಆಶಾ ಕಾರ್ಯಕರ್ತೆಯರು ಸೇರಿದಂತೆ ಅರೋಗ್ಯ ಇಲಾಖೆಯ ಅವಿರತವಾಗಿ ಶ್ರಮಿಸುತ್ತಿದ್ದಾರೆ. 2022ರ ಮಾರ್ಚ್ ನಿಂದ ಈ ಭಾಗದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಅಧಿಕವಾಗುತಿದ್ದು, ಜನವರಿಯಿಂದ ಇದುವರೆಗೂ ಜಿಲ್ಲೆಯಲ್ಲಿ 160 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 120ಕ್ಕೂ ಹೆಚ್ಚು ಈ ವ್ಯಾಪ್ತಿಯಲ್ಲಿಯೇ ಇದೆ. ಈಗಾಗಲೇ ಡೆಂಗ್ಯೂ ಪೀಡಿತರಿಗಾಗಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ 60 ಹಾಸಿಗೆಗಳ ವಿಸೇಷ ವಾರ್ಡ್ ಸಿದ್ದಪಡಿಸಿದ್ದು, ಇವುಗಳಲ್ಲಿ 25 ಪುರುಷ,25 ಮಹಿಳೆ ಮತ್ತು 10 ಬೆಡ್ ಗಳನ್ನು ಮಕ್ಕಳಿಗೆ ಮೀಸಲಿಟ್ಟಿದೆ. ಹೆಚ್ಚಿನ ಪ್ರಕರಣಗಳು ವರಿಯಾಗುತ್ತಿರುವ ಮುದೂರು ಮತ್ತು ಜಡ್ಕಲ್ ನಲ್ಲಿ ನಿರಂತರ ನಿಗಾವಹಿಸಲು ಆರೋಗ್ಯಾಧಿಕಾರಿಗಳನ್ನು ಒಳಗೊಂಡ 13 ತಂಡಗಳನ್ನು ರಚಿಸಿದ್ದು, ಈ ತಂಡದ ಸದಸ್ಯರು ಪ್ರತಿದಿನ ಮನೆಮನೆಗೆ ತೆರಳಿ ಡೆಂಗ್ಯೂ ಕುರಿತು ಅರಿವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯ ಭಕ್ತಿಗೆ ಪ್ರಾಧಾನ್ಯತೆ ನೀಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಎಲ್ಲ ಕಡೆಯೂ ದೇವರ ದೃಷ್ಟಿ ಸಿಸಿ ಕ್ಯಾಮಾರದಂತೆ ಇರುತ್ತದೆ. ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉದ್ಯಮಿ ಯು. ಬಿ. ಶೆಟ್ಟಿ ಅವರು ನಿರ್ಮಿಸಿಕೊಟ್ಟಿರುವ ನೂತನ ರಾಜಗೋಪುರವನ್ನು ಉದ್ಘಾಟಿಸಿ, ಆಶಿರ್ವಚನ ನೀಡಿ, ದೇವಸ್ಥಾನದಲ್ಲಿ ಸಾನಿಧ್ಯ ಮುಖ್ಯ. ನಿತ್ಯ ಪೂಜೆ, ಅನುಷ್ಟಾನದಿಂದ ಶಕ್ತಿ ಸಂಚಯನವಾಗುತ್ತದೆ. ಆ ಮೂಲಕ ಅನುಗ್ರಹಕಾರಕ ಶಕ್ತಿ ಉಂಟಾಗುತ್ತದೆ. ದೇವಸ್ಥಾನಗಳು ದೋಷ ನಿವಾರಣ ಕೇಂದ್ರಗಳು. ದೋಷವನ್ನು ಸ್ವೀಕರಿಸುವ ಶಕ್ತಿ ದೇವಸ್ಥಾನಗಳಿಗೆ ಇದ್ದಾಗ ಅನುಗ್ರಹವಾಗುತ್ತದೆ ಎಂದರು. ಭಕ್ತರು ಶ್ರೀಮಂತರಾದಾಗ ದೇವಸ್ಥಾನಗಳು ಅಭಿವೃದ್ದಿ ಹೊಂದುತ್ತದೆ. ಅದಕ್ಕೆ ಸಾಕ್ಷಿಯಾಗಿ ಯು.ಬಿ ಶೆಟ್ಟರು ಭಕ್ತಿಯಿಂದ ದುರ್ಗಾಪರಮೇಶ್ವರಿಗೆ ರಾಜಗೋಪುರವನ್ನು ಸಮರ್ಪಿಸಿದ್ದಾರೆ ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಹಿಸಿ, ಯು.ಬಿ ಶೆಟ್ಟರ ಈ ಕೊಡುಗೆ ಶಾಶ್ವತವಾಗಿ ಉಳಿಯುತ್ತದೆ. ಈ ದೇವಸ್ಥಾನದ ಅಭಿವೃದ್ದಿಗೆ ಇನ್ನೂ ದಾನಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.22: ಹಣ್ಣುಗಳ ರಾಜನೆಂದೇ ಪ್ರಖ್ಯಾತವಾದ, ಹಿರಿಯರಿಂದ ಕಿರಿಯರಿಂದ ಹಿಡಿದು ಹಿರಿಯರವರೆಗೂ ಬಾಯಯಲ್ಲಿ ನಿರೂರಿಸುವ ವಿವಿಧ ಬಗೆಯ ಮಾವಿನ ಹಣ್ಣಿನ ಮೇಳವನ್ನು ಉಡುಪಿ ದೊಡ್ಡಣಗುಡ್ಡೆ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಗ್ರಾಹಕರಿಗೆ ನೇರವಾಗಿ ರೈತರಿಂದಲೇ ನೈಸರ್ಗಿಕ ತಾಜಾ ಹಾಗೂ ಸ್ವಾದಿಷ್ಟ ಮಾವಿನ ಹಣ್ಣು ಒದಗಿಸುವುದು, ಸಾರ್ವಜನಿಕರಿಗೆ ವಿವಿಧ ಮಾವಿನ ತಳಿಗಳನ್ನು ಪರಿಚಯಿಸುವುದು, ಹವಾಮಾನ ವೈಪರೀತ್ಯದಿಂದಾಗಿ ಮಾವು ಇಳುವರಿ ನಷ್ಟದಲ್ಲಿರುವ ಬೆಳೆಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿ. ಪಂ ಹಾಗೂ ತೋಟಗಾರಿಕೆ ಇಲಾಖೆಯಿಂದ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ಆಶ್ರಯದಲ್ಲಿ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ 21ರಿಂದ 23ರವರೆಗೆ ಆಯೋಜಿಸಿದೆ. ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್ ಸಹಿತ ನಾನ ತಳಿಯ ಒಟ್ಟು…
