Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಖ್ಯಾತ ಯುವ ಪತ್ರಕರ್ತ ಹಾಗೂ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಅವರು ಕರಾವಳಿ-ಇ-ಧ್ವನಿ ಡಿಜಿಟಲ್ ಮಾಧ್ಯಮ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ.ಆರ್.ಸಿ.ಐ.) ಉಡುಪಿ – ಮಣಿಪಾಲ ಘಟಕ ಆಶ್ರಯದಲ್ಲಿ ವಿಶ್ವ ಸಂವಹನಕಾರರ ದಿನಾಚರಣೆ ಅಂಗವಾಗಿ ಕರಾವಳಿ ಇ – ಧ್ವನಿ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹುಟ್ಟುರಾದ ಕಂಜೂರಿನ ದಿ. ಲಕ್ಷ್ಮೀನಾರಾಯಣ ಹಾಗು ಸತ್ಯಭಾಮಾ ದಂಪತಿಗಳ ಪುತ್ರ ಜನಾರ್ದನ್ ಕೊಡವೂರು ಅವರು, ವಿಜಯವಾಣಿ ಪತ್ರಿಕೆಯ ಪ್ರಮುಖ ವರದಿಗಾರರಾಗಿಯೂ ಹಲವು ವರ್ಷದಿಂದ ವೃತ್ತಿಯಲ್ಲಿ ಸೇವೆ ಸಲ್ಲಿದ್ದಾರೆ. 2013ರಲ್ಲಿ ದೊರೆತ ಜಿಲ್ಲಾ ಕನ್ನಡ ರಾಜೋತ್ಸವ ಪ್ರಶಸ್ತಿ, ಉಪಾಧ್ಯಾಯ ಸಮ್ಮಾನ್ ಎಂಬ ರಾಜ್ಯ ಮಟ್ಟದ ಪ್ರಶಸ್ತಿ ಜೊತೆಗೆ ಯಶೋ ಮಾಧ್ಯಮ ಅವಾರ್ಡ್, ಪಲಿಮಾರು ಶ್ರೀಗಳು ಅನುಗ್ರಹಿಸಿ ನೀಡಿದ ಮಾಧ್ಯಮ ರತ್ನ ಪ್ರಶಸ್ತಿಗಳು ಹೀಗೆ ಹತ್ತು ಹಲವು ಅಭಿನಂದನಾ ಪತ್ರಗಳು ಅವರನ್ನು ಅರಸಿಕೊಂಡು ಬಂದಿದೆ. ‘ಕಾಲದೊಂದಿಗೆ ಓಟ’ ಕಂಬಳದ ಯಶಸ್ವಿ ಛಾಯಾಚಿತ್ರ ಪ್ರದರ್ಶನ, ನವರಾತ್ರಿ ನವರಸೋತ್ಸವದ ‘ಆಡಿಸಿದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು. ಮಾತನಾಡುವ ಕಲೆ ನಾಯಕತ್ವದ ಗುಣ, ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡಾಗ ಮಾತ್ರ ನಾವು ಯಶಸ್ವಿ ಜೀವನ ನಡೆಸಲು ಸಾಧ್ಯ. ಎಳವೆಯಲ್ಲೇ ಬದುಕನ್ನು ಎದುರಿಸುವ ಗುಣವನ್ನು ಬೆಳೆಸಿಕೊಳ್ಳಬೇಕೆಂದು ಜೇಸಿಐ ತರಬೇತುದಾರರಾದ ಅಕ್ಷತಾ ಗಿರೀಶ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಂಯುಕ್ತ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾದ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ನ ರಾಜೇಶ್ ಎಂ ಜಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರ್ಯಾಕ್ಟ್ ಅಧ್ಯಕ್ಷರಾದ ಅಮೀಕ್ಷಾ ಡಿ ನಾಯ್ಕ್ ಹಾಗೂ ಕಾರ್ಯದರ್ಶಿ ರಾಮಕೃಷ್ಣ ಶೆಣೈ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಯೋಜನಾಧಿಕಾರಿ ಸುಗುಣ ಆರ್ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅ.27ರ ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳ ವ್ಯಾಪ್ತಿಯ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4:30ರ ತನಕ ಕೋವಿಡ್ ಪ್ರಥಮ ಹಾಗೂ ಎರಡನೇ ಡೋಸ್ ಲಸಿಕಾಕರಣ ಜರುಗಲಿದೆ. 18 ವರ್ಷ ಮೇಲ್ಪಟ್ಟ ಇದುವರೆಗೂ ಕೋವಿಡ್ ಲಸಿಕೆ ಪಡೆಯದವರು ಲಸಿಕಾ ಕೇಂದ್ರಕ್ಕೆ ಬಂದು ಪ್ರಥಮ ಡೋಸ್ ಲಸಿಕೆ ಪಡೆಯಬಹುದು. ಕೋವಿಶಿಲ್ಡ್ ಮೊದಲ ಡೋಸ್ ಪಡೆದು 84 ದಿನ ಹಾಗೂ ಕೋವಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಮೀರಿದವರು 2ನೇ ಡೋಸ್ ಲಸಿಕೆ ಪಡೆದುಕೊಳ್ಳಬಹುದು. ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಸ್ವ್ಯಾಬ್ ಟೆಸ್ಟ್ ಇರುವುದಿಲ್ಲ. ಪ್ರಥಮ ಡೋಸ್ ಲಸಿಕೆ ಪಡೆದ ದಿನಾಂಕ ನೆನಪಿಲ್ಲದಿರುವವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಕಾರ್ಡಿನೊಂದಿಗೆ ಬಂದು ಪರಿಶೀಲಿಸಿ ಎರಡನೇ ಡೋಸ್ ಪಡೆಯಲು ಅರ್ಹರಿದ್ದರೆ ಪಡೆದುಕೊಳ್ಳಬಹುದು. 2ನೇ ಡೋಸ್ ಪಡೆಯುವ ನಿಗದಿತ ದಿನಾಂಕದಿಂದ ತುಂಬಾ ತಡವಾದಲ್ಲಿ ಕೋವಿಡ್ನಿಂದ ಆಗುವ ತೊಂದರೆ ಹೆಚ್ಚಿರುವುದರಿಂದ ಕೂಡಲೇ ಲಸಿಕೆ ಪಡೆಯುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಲ್ಪಿಂಗ್ ಹ್ಯಾಂಡ್ಸ್ ಟ್ರೋಫಿ – 2021 ಆಟಗಾರರ ಹರಾಜು ಪ್ರಕ್ರಿಯೆ ಕೋಟೆಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಗೌರವಾಧ್ಯಕ್ಷರಾದ ಸತೀಶ್ ಸಾಲಿಯಾನ್ ಮಣಿಪಾಲ ವಹಿಸಿದ್ದರು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಮಾತನಾಡಿ, ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಸಮಾಜಪರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಲಾಕ್‌ಡೌನ್ ಸಮಯದಲ್ಲಿ ಸಂಸ್ಥೆ ಮಾಡಿದ ಕಾರ್ಯಗಳ ಬಗ್ಗೆ ಎಲ್ಲರಿಗೂ ತಿಳಿಸಿ , ಹೆಲ್ಪಿಂಗ್ ಹ್ಯಾಂಡ್ಸ್ ಟ್ರೋಪಿ ಆಯೋಜನೆ ಹಿಂದಿನ ಸಮಾಜಪರ ಕಾರ್ಯದ ಬಗ್ಗೆ ತಿಳಿಸಿದರು. ಹಾಗೂ ವೇದಿಕೆ ಮೇಲಿದ್ದ ಸಂಸ್ಥೆಯ ಪದಾಧಿಕಾರಿಗಳು ಹೆಲ್ಪಿಂಗ್ ಹ್ಯಾಂಡ್ಸ್ ನ ಎಲ್ಲಾ ಸಮಾಜಪರ ಕಾರ್ಯದ ಬಗ್ಗೆ ಮನವರಿಕೆ ಮಾಡಿ ನಮ್ಮ ತಂಡದೊಂದಿಗೆ ಕೈ ಜೋಡಿಸುವಂತೆ ವಿನಂತಿಸಿದರು. ಮುಖ್ಯ ಅತಿಥಿಗಳಾಗಿ ಮೊಗವೀರ ಯುವ ಸಂಘಟನೆ ಕೋಟೆಶ್ವರ ಘಟಕದ ಅಧ್ಯಕ್ಷರಾದ ಸುನೀಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಇವರ ಸಂಯೋಜನೆಯಲ್ಲಿ ನಡೆಯುತ್ತಿರುವ ಯಕ್ಷ ಅಷ್ಟಾಹ ಕಾರ್ಯಕ್ರಮದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಬೇಲ್ತೂರು ರಮೇಶ್ ಅವರಿಗೆ ಪ್ರಥಮ ವರ್ಷದ ತಲ್ಲೂರ್ -ಫ್ಯಾಮಿಲಿ ಪ್ರಶಸ್ತಿ 2021ನ್ನು ಪ್ರದಾನ ಮಾಡಲಾಯಿತು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ, ಕಲಾವಿದ ಎಂದರೆ ಕಲೆಯನ್ನು ರಕ್ಷಿಸಿ, ಬೆಳೆಸುವವ. ಮುಂದಿನ ಪೀಳಿಗೆ ಅದನ್ನು ಬೆಳೆಸಬೇಕು ಎಂಬ ಹಂಬಲದಿಂದ ಪ್ರಶಸ್ತಿ ಪ್ರದಾನದಂತಹ ಪ್ರೋತ್ಸಾಹಗಳಿರುತ್ತವೆ. ಕಲೆಗಾಗಿ ದಶಕಗಳ ತಮ್ಮನ್ನು ಅರ್ಪಿಸಿಕೊಂಡು ಬರುವುದು ಸುಲಭದ ಮಾತಲ್ಲ. ಕಾಲನ ಹೊಡೆತಕ್ಕೆ ಕಲೆ ಸಿಲುಕದಂತೆ ಉಳಿಸಿಕೊಳ್ಳಬೇಕು ಎಂದರು. ತಲ್ಲೂರು -ಮಿಲಿ ಟ್ರಸ್ಟ್ನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಹಳೆ ತಲೆಮಾರಿನ ಕಲಾವಿದರು ಜೀವನದಲ್ಲಿ ಸಂಕಷ್ಟದಲ್ಲಿದ್ದರೂ ಅದೇ ಕಲೆಯಲ್ಲಿ ತೊಡಗಿಸಿಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಸಂಸ್ಥೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂಕಾಂ, ಎಂ.ಬಿ.ಎ, ಎಂ.ಲಿಎಸ್ಸಿ ಮತ್ತು ಎಲ್ಲಾ ಎಂಎಸ್ಸಿ ಪದವಿಗಳು ಹಾಗು ಡಿಪ್ಲೊಮ, ಪಿಜಿ ಡಿಪ್ಲೊಮ, ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 11 ಮತ್ತು 200 ಮತ್ತು 400 ರೂ ಗಳ ದಂಡ ಸಹಿತ ಅರ್ಜಿ ಸಲ್ಲಿಸಲು ನವೆಂಬರ್ 30 ಮತ್ತು ಡಿಸೆಂಬರ್ 15 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ https://www.ksoumysuru.ac.in/ ನ್ನು ಸಂಪರ್ಕಿಸಬಹುದೆಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2021-22 ನೇ ಸಾಲಿನ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರಕಾರ್ಮಿಕರ 9, 10 ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಆನ್‌ಲೈನ್ ಪಾಠ ಕೇಳಲು & ಅವರ ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್‌ಗಳ ವಿತರಣೆ ಹಾಗೂ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ನೊಂದಾಯಿತ ಸಂಘ-ಸಂಸ್ಥೆಗಳಿಗೆ ಶೇ.75 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಮದ ವೆಬ್‌ಸೈಟ್ https://www.ksskdc.kar.nic.in/ ನಲ್ಲಿ ಆನ್‌ಲೈನ್ ಮೂಲಕ ಅಥವಾ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ನವಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದ ದೂ ಸಂ: 0820-2574884 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅತ್ಯಂತ ವೈಶಿಷ್ಠ ಪೂರ್ಣವಾಗಿ ಆಚರಿಸುವ ಕುರಿತಂತೆ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಹಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಅವರು ವರ್ಚುವಲ್ ಸಭೆಯ ಮೂಲಕ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಶ್ರೀ ಕೃಷ್ಣ ಮಠ, ಮಲ್ಪೆ ಬೀಚ್, ಸೀ ವಾಕ್, ಕಾರ್ಕಳದ ಜೈನ ಬಸದಿ, ಗೊಮ್ಮಟ ಬೆಟ್ಟ, ವರಂಗ, ಮುಂತಾದ ಪ್ರದೇಶಗಳಲ್ಲಿ ಸಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಪಡುಬಿದ್ರೆಯ ಬ್ಲೂ ಫ್ಲಾಗ್ ಬೀಚ್, ಕಾಪು ಲೈಟ್ ಹೌಸ್ ಬಳಿಯಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಮೀನುಗಾರಿಕೆ ಇಲಾಖೆವತಿಯಿಂದ ಬೋಟ್ ಗಳಲ್ಲಿ ಮೀನುಗಾರರಿಂದ, ಮೆಸ್ಕಾಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಪೊಲೀಸ್ ಇಲಾಖೆ ಕುಂದಾಪುರ ಉಪ ವಿಭಾಗ ಅಧೀನದಲ್ಲಿರುವ ಎಲ್ಲಾ ಠಾಣೆ ಮತ್ತು ಸಂಚಾರಿ ಠಾಣೆಗಳಲ್ಲಿ ಠಾಣಾಧಿಕಾರಿ ನೇತೃತ್ವದಲ್ಲಿ ಹಾಗೂ ಸ್ಥಳೀಯ ಸಂಘ ಸಂಸ್ಥೆಯ ಸಹಕಾರದೊಂದಿಗೆ ಸಂಜೆ ಠಾಣೆಗಳಲ್ಲಿ ಸ್ವಚ್ಚತಾ ಕಾಯ೯ ನಡೆಯಿತು. ಸ್ವಚ್ಚತಾ ಕಾರ್ಯದಲ್ಲಿ ಠಾಣಾಧಿಕಾರಿ, ಸಿಬ್ಬಂಧಿ ವರ್ಗ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿಯ ಸಹಕಾರದೊಂದಿಗೆ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ಶಿಬಿರ ನಡೆಯಿತು. ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಉಡುಪಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕರಾದ ಡಾ. ತೇಜಸ್ವಿನಿ ಎ. ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಹೇಳಿದರು. ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿ ಎನ್.ಎಸ್.ಪಿ ವಿಧ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ನಝೀರ್ ಸಾಹೇಬ್ ನೇಜಾರ್ ಅಧ್ಯಕ್ಷತೆ ವಹಿಸಿದ್ದರು, ಆದಿಉಡುಪಿ ಮಸ್ಜಿದ್ ಎ ನೂರುಲ್ ಇಸ್ಲಾಮ್ ಖತೀಬರಾದ ಮುಫ್ತಿ ಮೊಹಮ್ಮದ್ ಸುಹೇಲ್ ಕಿರಾತ್,…

Read More