ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ವತಿಯಿಂದ ‘ವೇದ ಗಣಿತ – ಈಜಿ ಟ್ರಿಕ್ಸ್’ ಕಾರ್ಯಾಗಾರ ಗುರುವಾರ ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹೈದರಾಬಾದಿನ ಸಿಗ್ಮಾ ಐಎಎಸ್ ಅಕಾಡೆಮಿಯ ನಿರ್ದೇಶಕ ಬಿ. ರಾಮ್‌ಪಾಲ್ ರೆಡ್ಡಿ ಮಾತನಾಡಿ, ಗಣಿತದಲ್ಲಿ ಎ? ಪರಿಣತಿಯನ್ನು ಹೊಂದಿದ್ದರೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತ ಜ್ಞಾನಕ್ಕಿಂತ ನಿಗದಿತ ಸಮಯದಲ್ಲಿ ಉತ್ತರವನ್ನು ಕಂಡುಹಿಡಿಯುವ ಕೌಶಲ್ಯ ಮುಖ್ಯವಾಗುತ್ತದೆ ಎಂದರು. ಸ್ನಾತಕೋತ್ತರ ಗಣಿತ ವಿಭಾಗದ ಮುಖ್ಯಸ್ಥ ದೀಪಕ್ ಕೆ. ಎಸ್ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ, ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಗಣೇಶ್ ಎಚ್. ಎನ್., ಸಿಡ್ನಾ ರೀಮಾ ಸೆರೆವೋ, ಧನ್ಯಶ್ರೀ ಅಧಿಕಾರಿ, ಪದವಿ ಗಣಿತ ಉಪನ್ಯಾಸಕರಾದ ಕಿಶೋರ್, ವೀರ ಕ್ರಾಸ್ತ, ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಯುಪಿಎಸ್ಸಿ ತರಬೇತಿ ಕೇಂದ್ರದ ಸಂಯೋಜಕ ಡಾ ಅಶೋಕ್ ಡಿಸೋಜಾ, ಸ್ನಾತಕೋತ್ತರ ಗಣಿತ ಹಾಗೂ ಪದವಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ವೇದಮೂರ್ತಿ ಎಚ್. ಎಂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಕಲಾವಿದರು ಸಂಘಟಿತ ಹೊಸ ಟ್ರಸ್ ಹುಟ್ಟುಹಾಕಿದ್ದು, ಟ್ರಸ್ಟ್ ಯಕ್ಷಗಾನ ಕಲಾವಿದರು ಮಾತ್ರ ಒಳಗೊಳ್ಳದೆ ಕಾರ್ಮಿಕರು ಸೇರಿಸಿಕೊಂಡಿರುವುದು ಧನಾತ್ಮಕ ಬೆಳವಣಿಗೆ. ಯಾವುದೇ ಸಂಘಟನೆ ಅಥವಾ ಟ್ರಸ್ಟ್ ಹುಟ್ಟು ಸಂಘರ್ಷಕ್ಕಲ್ಲಾ ಬದಲಾಗಿ ಸಮಾಜದೊಟ್ಟಿಗೆ ಸೇರಿ ಸೌಹಾರ್ಧತೆಗೆ ದಾರಿಯಾಗಬೇಕು. ಟ್ರಸ್ಟ್ ಮೂಲಕ ಕಲಾವಿದರಿಗೆ, ಕಾರ್ಮಿಕರಿಗೆ ನ್ಯಾಯ, ಅವರ ಕಷ್ಟಸುಖದಲ್ಲಿ ಭಾಗಯಾಗಬೇಕು ಎಂದು ಹೋಟೆಲ್ ಉದ್ಯಮಿ ಕೃಷ್ಣಮೂರ್ತಿ ಮಂಜ ಹೇಳಿದರು. ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಬ್ರಹ್ಮಲಿಂಗೇಶ್ವರ ಕಲಾವಿದರ ಕಾರ್ಮಿಕರ ಹಿತರಕ್ಷಣಾ ಯಕ್ಷಕಲಾ ಟ್ರಸ್ಟ್ ಉದ್ಘಾಟಿಸಿ ಮಾತನಾಡಿ, ಟ್ರಸ್ಟ್ ಕಲಾವಿದರ ಶ್ರೇಯಸ್ಸಿನ ಜೊತೆ ಯಕ್ಷಗಾನ ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಮುಂದುವರಿಸುವ ಹೊಣೆ ಕೂಡಾ ಹೊರಬೇಕು ಎಂದು ಸಲಹೆ ಮಾಡಿದರು. ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಅನುವಂಶೀಯ ಮೊಕ್ತೇಸರ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಮಾಜಿ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನೇಷನ್ ಲವರ್ಸ್ ಬೈಂದೂರು ಸಂಸ್ಥೆಯ ಗೌರವಧ್ಯಕ್ಷರಾಗಿ ಗೋವಿಂದ ಬಾಬು ಪೂಜಾರಿ ಹಾಗೂ ಗೌರವ ಸಲಹೆಗಾರರಾಗಿ ಪ್ರಸಾದ್ ಬೈಂದೂರು ಅವರನ್ನು ಆಯ್ಕೆ ಮಾಡಲಾಗಿದೆ. ಯುವ ಸೈನಿಕ ಪ್ರಶಾಂತ್ ದೇವಾಡಿಗ ನೇತೃತ್ವದ ಆರಂಭಿಸಲಾಗಿರುವ ನೇಷನ್ ಲವರ್ಸ್ ಬೈಂದೂರು ಸಂಘಟನೆಯು ಯುವ ಮನಸ್ಸುಗಳಲ್ಲಿ ದೇಶಪ್ರೇಮದ ಭಾವನೆ ಹೆಚ್ಚಿಸಿ ಭಾರತೀಯ ಸೈನ್ಯ ಸೇರಲು ಅಗತ್ಯವಿರುವ ತರಬೇತಿಗಳನ್ನು ಉಚಿತವಾಗಿ ನೀಡುವ ಉದ್ದೇಶ ಹೊಂದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಎಪಿಡಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿಯವರ ಮಾತನಾಡಿ, ವಿಶೇಷ ಚೇತನರಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ, ನಮ್ಮ ಸಂಸ್ಥೆಯೂ 1959 ರಲ್ಲಿ ಸ್ಥಾಪನೆಯಾಗಿ, ಸುಮಾರು 62 ವರ್ಷಗಳಿಂದ ಅತ್ಯಂತ ಹಿಂದುಳಿದ ಗ್ರಾಮೀಣ ಮಟ್ಟದಲ್ಲಿ ಯುವ ವಿಶೇಷ ಚೇತನರನ್ನ ಗುರುತಿಸಿ ಅವರ ಸ್ವಾವಲಂಬಿ ಜೀವನಕ್ಕೆ ಎಪಿಡಿ ಸಂಸ್ಥೆ ಸಹಕಾರಿಯಾಗಿದೆ ಎಂದು ಪ್ರೋತ್ಸಾಹಿಸಿದರು ಹಾಗೇ ಕೋರನಾ ಸಂದರ್ಭದಲ್ಲಿ ವಿಶೇಷ ಚೇತನರಾಗಿ ಗ್ರಾಮೀಣ ಮಟ್ಟದಲ್ಲಿ ಲಸಿಕೆ, ವೈದ್ಯಕೀಯ ಸೌಲಭ್ಯ, ಸಾಂತ್ವನ ಧೈರ್ಯ ತುಂಬಿದ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 65ನೇ ವಿಮಾ ಸಪ್ತಾಹದ ಸಮಾರೋಪ ಸಮಾರಂಭ ಇಲ್ಲಿನ ಎಲ್.ಐ.ಸಿ ಶಾಖೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕುಂದಾಪುರ ನಗರ ಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮಾತನಾಡಿ, ಮನೆ ಮನೆ ಯಲ್ಲಿ ಎಲ್.ಐ.ಸಿ ಜ್ಯೋತಿ ಪಾಲಿಸಿಗಳ ಮೂಲಕ ಬೆಳಗಲಿ ಎಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆ ಮುಖ್ಯ ಪ್ರಬಂಧಕ ನಾರಾಯಣ ಗೌಡ ವಹಿಸಿದ್ದರು. ಆಡಳಿತ ಅಧಿಕಾರಿ ಕಿರಣ್ ಕಾಮತ್, ಉಪ ಶಾಖಾಧಿಕಾರಿ ಶ್ರೀನಿವಾಸ್ ವಿಮಾ ಸಪ್ತಾಹ ದ ವರದಿ ನೀಡಿದರು. ವಿಮಾ ಸಪ್ತಾಹದ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಾದ ಎಚ್ ಎಸ್ ಹತ್ವಾರ, ಶೇಷಯ್ಯ, ರಾಧಾಕ್ರಷ್ಣ, ಮತ್ತು ಸುಧಾಕರ ಅವರನ್ನು ಗೌರವಿಸಿಲಾಯಿತು. ಗೀತಾ ಸ್ವಾಗತಿಸಿದರು, ಅಭಿವೃದ್ಧಿ ಅಧಿಕಾರಿ ಗಿರಿಧರ್ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ಮಮತೇಶ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪುಗೊಳ್ಳುತ್ತಿದ್ದು, ಅನೇಕ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಪಿಸಲಾಗುವುದು. 94ಸಿ, 94ಸಿಸಿ, 53 ಮತ್ತು 57ರ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ತಹಶೀಲ್ದಾರ್‌ರಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 9 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಎಂದು ಗುರುತಿಸಲಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ 6 ಲಕ್ಷ ಹೆಕ್ಟೇರ್ ಭೂಮಿಯನ್ನು ತೆರವುಗೊಳಿಸಲು ಸರಕಾರ ಮುಂದಾಗಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಗುಜ್ಜಾಡಿ ಗ್ರಾಮ ಪಂಚಾಯತ್ ಸಮೀಪ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಾಬು ಜಗಜೀವನರಾಮ್ ಸಭಾಭವನಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಎಲ್ಲಾ ಮನೆಗಳಿಗೆ ಶುದ್ಧ ಕುಡಿಯುವ ನೀರು ನೀಡುವ ಸುಮಾರು 500 ಕೋಟಿ ರೂ. ವೆಚ್ಚದ ಯೋಜನೆ ಸದ್ಯದಲ್ಲೇ ಅನುಷ್ಠಾನಗೊಳ್ಳಲಿದೆ. ವಿದ್ಯುತ್ ಸಂಪರ್ಕಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರಾಹಿ ನೀರಾವರಿ ಯೋಜನೆಯ ಮೂಲ ಉದ್ದೇಶದಂತೆ ಪ್ರತಿಯೊಬ್ಬ ರೈತರಿಗೆ ವಾರಾಹಿ ನೀರು ಸಿಗುವ ತನಕ ಹೋರಾಟ ಮಾಡುತ್ತೇನೆ. ತನ್ನ ಹೋರಾಟ ಹತ್ತಿಕ್ಕಲೂ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಈ ಹೋರಾಟದಲ್ಲಿ ತನ್ನ ಬಲಿದಾನವಾದರೂ ಚಿಂತೆ ಇಲ್ಲ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ರೈತ ಸಂಘದ ನೇತ್ರತ್ವದಲ್ಲಿ ಅಂಪಾರು ಶ್ರೀ ರಾಮ ಸಭಾಭವನದಲ್ಲಿ ನಡೆದ ವಾರಾಹಿ ಬಲದಂಡೆ ನೀರಾವರಿ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾರಾಹಿ ನೀರಾವರಿ ಯೋಜನೆ ಆರಂಭವಾಗಿ 41 ವರ್ಷ ಕಳೆದರೂ ಕೂಡಾ ಅದು ಚುರುಕು ಪಡೆದುಕೊಂಡಿದ್ದು 2000ನೇ ಇಸವಿಯ ಅನಂತರ. ಕೇವಲ ರೈತರಿಗೆ ನೀರು ಕೊಡುವ ಉದ್ದೇಶದಿಂದ ಈ ಯೋಜನೆ ಇಂದು ಬೇರೆ ಉದ್ದೇಶಕ್ಕೆ ಬಳಕೆಯಾಗುತ್ತಿರುದು ವಿಪರ್ಯಾಸವಾಗಿದೆ. ಮೂಲ ಯೋಜನೆಯಲ್ಲಿರುವ ಬಲ ದಂಡೆ ಕಾಮಗಾರಿ ಆರಂಭವಾಗಿಲ್ಲ. ಆದರೆ ಸೌಕೂರು ಏತನೀರಾವರಿ ಕಾಮಗಾರಿ ಆರಂಭಗೊಂಡಿದೆ. ಬಲದಂಡೆ ಕಾಮಗಾರಿ ಕೂಡಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ.ಎ/ ಸಿ.ಎಸ್ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವೈಕ್ತಿಯಾಗಿ ಆಗಮಿಸಿದ ಸಿ.ಎ.ನಾಗೇಂದ್ರ ಭಕ್ತ ಹೆಬ್ರಿ ಹಾಗೂ ಸಿ.ಎಸ್.ಸಂತೋಷ ಪ್ರಭು ಉಡುಪಿ ಅವರು ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಬೋಧಕ, ಬೋಧಕೇತರ ವ್ರಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲರು ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಸ್ಯಾಂಡ್ ಥೀಂ’ ತಂಡದ ಕಲಾವಿದರಾದ ಹರೀಶ್ ಸಾಗಾ ಹಾಗೂ ರಾಘವೇಂದ್ರ ಪ್ರಸಾದ್ ಆರ್. ಅವರಿಂದ ಕೋಟೇಶ್ವರ ಹಳೆಅಳಿವೆ ಕಡಲ ತೀರದಲ್ಲಿ ಪ್ರಕೃತಿಯೇ ದೇವರು ಎಂಬ ಸಂಕಲ್ಪದೊಂದಿಗೆ ರಚಿಸಿದ ಮರಳುಶಿಲ್ಪ – ಅರಶಿಣ ಗಣಪ ಗಮನ ಸೆಳೆಯಿತು. ಪೃಕೃತಿ ರಕ್ಷಣೆಯ ಭರವಸೆಯನ್ನು ನೀಡುವ ಪ್ರಕೃತಿಯೇ ದೇವರು ಎನ್ನುವ ಚಿಂತನೆಯಲ್ಲ್ಲಿ ಮೂ ಆನೆಯ ಮುಖ ಸ್ವರೂಪವುಳ್ಳ ಗಣಪನಿಗೆ ಪ್ರಕೃತಿಯ ದ್ಯೋತಕವಾಗಿ ಹಳ್ಳಿ ಹಾಳೆಯ ಕಿರೀಟ, ರೋಗನಿರೋಧಕ ಶಕ್ತಿಯ ಬಿಂಬವಾಗಿ ಅರಶಿನ ಬಣ್ಣ ಹಾಗೂ ಸಂಸ್ಕೃತಿಯ ದ್ಯೋತಕವಾಗಿ ಸಿಂಧೂರ ತಿಲಕವಿರಿಸಲಾಗಿದ್ದು, ಕಡಲತಡಿಯಲ್ಲಿ ನಿರ್ಮಿಸಲಾದ ಈ ಮರಳುಶಿಲ್ಪ ಸುಂದರವಾಗಿ ಮೂಡಿಬಂದಿದೆ. ಸರಕಾರದ ‘ ಅರಿಶಿನ ಗಣಪತಿ ಅಭಿಯಾನ’ದಂತೆ ಮಾಲಿನ್ಯ ರಹಿತವಾದ ವಿಗ್ರಹ ಮತ್ತು ಕೋವಿಡ್‌ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೋಗನಿರೋಧಕ ಅರಿಶಿನ ಗಣಪನ ಆರಾಧನೆಯ ಸಂಕಲ್ಪ ನಮ್ಮದ್ದಾಗಲಿ ಎಂಬ ಜನಜಾಗೃತಿಯನ್ನು ಸಾರುವ ಮರಳು ಶಿಲ್ಪಾಕೃತಿ ಇದಾಗಿದೆ – ಹರೀಶ್ ಸಾಗ, ಕಲಾವಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ಮೊಂತಿ ಫೆಸ್ತ್ (ತೆನೆ ಹಬ್ಬ) ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಚರ್ಚುಗಳಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು. ರೈತರು ಬೆಳೆದ ಭತ್ತದ ತೆನೆಯನ್ನು ಆಯಾ ಚರ್ಚ್‌ನಲ್ಲಿ ಪ್ರಮುಖರು ಸಂಗ್ರಹಿಸಿ, ಈ ಹಬ್ಬದ ದಿನದಂದು ಅವನ್ನು ಧರ್ಮಗುರುಗಳು ಪವಿತ್ರೀಕರಿಸಿ ಭಕ್ತರಿಗೆ ಹಂಚುವುದು ಸಂಪ್ರದಾಯವಾಗಿದ್ದು, ಈ ನಿಟ್ಟಿನಲ್ಲಿ ಪವಿತ್ರೀಕರಿಸಿದ ಭತ್ತದ ತೆನೆಗಳನ್ನು ಆಯಾ ಚರ್ಚ್ಗಳಲ್ಲಿ ಭಕ್ತರಿಗೆ ದಿವ್ಯಬಲಿಪೂಜೆಯ ಬಳಿಕ ಹಂಚಲಾಯಿತು. ಹೊಸ ತೆನೆಯನ್ನು ಮನೆಗೆ ತಂದು ಪ್ರಾಥನೆ ಮಾಡುವುದರ ಮೂಲಕ ಹಾಲು ಅಥವಾ ಪಾಯಸದೊಂದಿಗೆ ಹೊಸ ಅಕ್ಕಿಯ ಊಟವನ್ನು ಮಾಡಲಾಗುತ್ತದೆ. ಈ ಹಬ್ಬವು ಸಸ್ಯಹಾರಿ ಭೋಜನಕ್ಕೆ ಹೆಸರಾಗಿದ್ದು, ವಿವಿಧ ಬಗೆಯ ತರಕಾರಿ ಖಾದ್ಯಗಳು ಹಬ್ಬದ ಊಟದಲ್ಲಿ ಇರುತ್ತದೆ. ಬೆಸ ಸಂಖ್ಯೆಯನ್ನು ಹೊಂದಿಕೊಂಡು ತರಕಾರಿ ಖಾದ್ಯಗಳನ್ನು ತಯಾರಿಸಲಗುತ್ತದೆ. ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಮೊಂತಿ ಹಬ್ಬದ ಆಚರಣೆಯನ್ನು ಪವಿತ್ರ ಬಲಿದಾನದ ಮೂಲಕ ಅರ್ಪಿಸಿ ಆಚರಿಸಲಾಯಿತು. ಅತಿಥಿ ಗುರುಗಳಾದ ತ್ರಾಸಿ ಡೋನ್…
