ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿಯ ಲೈಟ್‌ಹೌಸ್‌ನ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ಮತ್ತು ತೌಹೀದ್ ಎಜ್ಯುಕೇಶನಲ್ ಟ್ರಸ್ಟ್ ಇವರ ಸಹಯೋಗದಲ್ಲಿ ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ 15ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಮಡಿ ನಾಗರಾಜ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ವೈ.ಶ್ರೀನಿವಾಸ ಖಾರ್ವಿ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ಶಾಲೆ ತೊರೆಯಬಾರದು ಎಂಬ ಉದ್ದೇಶದಿಂದ ಹಾಗೂ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಳೆದ 15 ವರ್ಷಗಳಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತಿತರ ಅಗತ್ಯ ಸಲಕರಣೆಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡು ಸತ್ಪ್ರಜೆಗಳಾಗಬೇಕು ಎಂದು ಹೇಳಿದರು. ಗಂಗೊಳ್ಳಿ ತೌಹೀದ್ ಎಜ್ಯುಕೇಶನಲ್ ಟ್ರಸ್ಟ್‌ನ ಜಕ್ರಿಯಾ ಚಂದಾವರ ಮತ್ತು ಲೈಟ್ ಹೌಸ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಿ.ನಾಗರಾಜ ಖಾರ್ವಿ ಕೊಲ್ಲೂರು ಶುಭ ಹಾರೈಸಿದರು. ಲೈಟ್‌ಹೌಸ್ ಶ್ರೀ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ದೇವರಾಜು ಅರಸು ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಮಾಣಿ ಗೋಪಾಲ್ ಮಾತನಾಡಿ ಉಳುವವನೇ ಹೊಲದೊಡೆಯ ಘೋಷಣೆಯ ಮೂಲಕ ಭೂಸುಧಾರಣೆ ಮಸೂದೆ ಜಾರಿ ಮಾಡಿ ಜನಸಾಮಾನ್ಯರ ಬಾಳು ಹಸನಾಗಿಸಿದ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ದೇವರಾಜು ಅರಸುರವರು ಈ ನಾಡಿ ಜನಜೀವನದ ಚಿತ್ರಣವನ್ನೇ ಬದಲಾಯಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಹೊಟ್ಟೆಗೆ ಹಿಟ್ಟಿಲ್ಲದ ಜನರಿಗೆ ಕೃಷಿ ಭೂಮಿಯನ್ನು ನೀಡುವ ಮೂಲಕ ಆ ವರ್ಗದ ಜನರ ಪೀಳಿಗೆಯನ್ನು ಸಮಾಜದಲ್ಲಿ ಉನ್ನತ ಮಟ್ಟಕ್ಕೇರಿಸಿದ್ದಾರೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ವಾಗ್ಮಿ, ಚಿಂತಕ, ಉಪನ್ಯಾಸಕ ಜಯಪ್ರಕಾಶ್ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಕಾಂಗ್ರೆಸ್ ಐಟಿಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಚಂದ್ರ ಅಮೀನ್, ಕೇಶವ ಭಟ್, ಮುಖಂಡರಾದ ಶಿವಾನಂದ ಕೆ., ಅಶ್ವತ್ ಕುಮಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿಯ ಮಡಿ ಲೈಟ್‌ಹೌಸ್ ಸಮೀಪದಲ್ಲಿನ ಶ್ರೀ ರಾಮನಾಥ ಸುಹಾಸಿನಿ ಮತ್ತು ಸಪರಿವಾರ ದೇವರ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಹಾಗೂ ನಂದಿಕೇಶ್ವರ, ಮಹಾಸತಿ, ಯಕ್ಷೀ ಸಪರಿವಾರ ದೇವರ ಸಹಿತ ಶ್ರೀ ರಾಮನಾಥ ಸುಹಾಸಿನಿ ದೇವರ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ಸಮಾರಂಭ ಜರುಗಿತು. ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಜ್ಞಾನ ವಿಜ್ಞಾನಕ್ಕೆ ಋಷಿ ಮುನಿಗಳ ಕೊಡುಗೆ ಅಪಾರವಾದುದು. ಆಧ್ಯಾತ್ಮಿಕ ಹಾಗೂ ಮಾನಸಿಕ ಶಾಂತಿಗೆ ಜ್ಞಾನಯಜ್ಞ ಅವಶ್ಯಕ. ದೇವಾಲಯಗಳು ಶ್ರದ್ಧೆ ಮತ್ತು ಭಕ್ತಿಯನ್ನು ಪ್ರಕಟಪಡಿಸುವ ಮಾಧ್ಯಮ. ಮಂದಿರಗಳ ಮಹತ್ವವನ್ನು ಸೂಕ್ಷ್ಮವಾಗಿ ತಿಳಿದುಕೊಳ್ಳಬೇಕು. ದೇವಾಲಯಗಳಿಗೆ ನಿತ್ಯ ನಿರಂತರ ಹೋಗುವುದರಿಂದ ಜೀವನದಲ್ಲಿ ಆಧ್ಯಾತ್ಮಿಕ ಚಿಂತೆಗಳು ಬೆಳೆದು ಜೀವನಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ದೇವಾಲಯಗಳಲ್ಲಿ ಭಜನೆ ಪ್ರತಿನಿತ್ಯ ನಡೆಯಬೇಕು. ದೇವರ ನಾಮಸ್ಮರಣೆಯಿಂದ ಜೀವನದಲ್ಲಿ ಸಿದ್ಧಿ ಪ್ರಾಪ್ತಿಯಾಗುತ್ತದೆ ಎಂದು ಹೇಳಿದರು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ಪ್ರೌಢಶಾಲೆಯಲ್ಲಿ `ಪ್ಲಾಸ್ಟಿಕ್ ಮುಕ್ತ ಪರಿಸರ’ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಪರಿಸರ ನಮ್ಮ ಬದುಕಿಗೆ ಬೇಕಾದ ಎಲ್ಲವನ್ನೂ ಕೊಟ್ಟಿದೆ. ಆದರೆ ಪರಿಸರದ ಕೊಡುಗೆಯನ್ನು ನಾವು ಹಾಳು ಮಾಡುತ್ತಿದ್ದೇವೆ. ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಪರಿಸರ ಜಾಗೃತಿ ಎಳವೆಯ ಹಂತದಲ್ಲಿ ಮನೆಯಲ್ಲಿಯೇ ಮೂಡಬೇಕು. ಮತ್ತು ಅದು ನಿತ್ಯದ ದಿನಚರಿಯಾಗಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ್ ಶೆಟ್ಟಿ ಮಾತನಾಡಿ ನಮ್ಮ ಆರ್ಥಿಕ ಸಮತೋಲನ ಕಾಯ್ದುಕೊಳ್ಳಲು ನಾವು ಪರಿಸರವನ್ನು ನಾಶಮಾಡುತಿದ್ದೇವೆ. ಪರಿಸರವನ್ನು ನಿರ್ಮಾಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಇರುವ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಪರಿಸರಕ್ಕೆ ಹಾನಿ ಮಾಡದಿರುವುದೇ ಪರಿಸರಕ್ಕೆ ನಾವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಶಾಂತ್, ಸಹನಾ ಹೆಗ್ಡೆ, ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜೇಸಿಐ ಕುಂದಾಪುರ ಇವರ ವತಿಯಿಂದ ಜೇಸಿ ಭವನದಲ್ಲಿ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೇಸಿಐ ಅಧ್ಯಕ್ಷರಾದ ಶ್ರೀನಾಥ್ ಗಾಣಿಗ , ಜೇಸಿಐ ಪೂರ್ವ ರಾರ್ಷ್ತ್ರೀಯ ಕಾನೂನು ಸಲಹೆಗಾರರಾದ ಶ್ರೀಧರ್ ಪಿ.ಎಸ್, ವಕೀಲರಾದ ವಸಂತ್ ರಾವ್, ಜೇಸಿಐ ಪೂರ್ವಧ್ಯಕ್ಷಾರದ ಪ್ರಕಾಶ್ ಮಂಡ್ಯ, ಉಪಾಧ್ಯಕ್ಷ ರಾದ ರಾಘು ವಿಠಲವಾಡಿ, ಕಾರ್ತಿಕ್ ಉಡುಪ, ಚೇತನ್ ದೇವಾಡಿಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಾಥಾ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ ಜರಗಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಂಗೊಳ್ಳಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಜಾಥಾ ನಡೆಸಿದರು. ಬಳಿಕ ಗಂಗೊಳ್ಳಿಯ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿಡಿಒ ಬಿ.ಮಾಧವ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ತ್ಯಾಜ್ಯಗಳನ್ನು ಬೇಕಾಬಿಟ್ಟಿ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಮತ್ತು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪ್ರಯೋಗಾಲಯ ಎಟೆಂಡರ್ ವಿಜಯಕುಮಾರ್, ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ಸಹಶಿಕ್ಷಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: 2018 ನೇ ಸಾಲಿನಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಕೋರ್ಸ್‌ನ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುಕುಲ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್‌ಗೆ ಅರ್ಹತೆ ಹೊಂದಿದ್ದಾರೆ . ಜೀವನ್ ಫರ್ನಾಂಡಿಸ್ , ವಿನಯಾ ಎಸ್ ನಾಯ್ಕ್ , ಜೋಯಲ್ ಡಿ’ಸೋಜಾ , ರಾಜೇಶ್ , ಹೃತ್ವಿಕ್ ಶೆಟ್ಟಿ , ಅಭಿಷೇಕ್ , ಮನೋಜ್ ಕುಮಾರ್ , ಮೊಹಮ್ಮದ್ ಅನಾಸ್ , ಶಮಾಯಿಲ್ ಅರ್ಹತೆ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. ಅವರು ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ನೀಟ್ ಪರೀಕ್ಷಾ ತರಬೇತಿ ಪಡೆದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೈದಾಂತಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ನೈಕಂಬ್ಳಿಯ ನಾಗರಾಜ ಶೆಟ್ಟಿ ಎಂಬುವವರ ವಿರುದ್ಧ ಸುಳ್ಳು ಅತ್ಯಾಚಾರದ ಆರೋಪ ಹೊರಿಸಿ ಎಡಿಟ್ ಮಾಡಲಾಗಿರುವ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಘಟನೆಯಿಂದ ನೊಂದಿರುವ ನಾಗರಾಜ ಶೆಟ್ಟಿ ನೈಕಂಬ್ಳಿ ಅವರು ಸೈಬರ್ ಕ್ರೈ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ವೃತ್ತಿಯಲ್ಲಿರುವ ನಾಗರಾಜ ಅವರು ಹವ್ಯಾಸಿ ಯಕ್ಷಗಾನ ಸಂಘಟಕರಾಗಿಯೂ ಗುರುತಿಸಿಕೊಂಡವರು. ಇತ್ತಿಚಿಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭ ಬಿಜೆಪಿ ಅಭ್ಯರ್ಥಿಯ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಿದ್ದರು. ಇದೇ ಇದೇ ಸಂದರ್ಭವನ್ನು ಗಮನದಲ್ಲಿರಿಸಿಕೊಂಡು ನಾಗರಾಜ ಅವರ ತೇಜೋವಧೆಗೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ರಾಜ್ಯದ ಸುದ್ದಿವಾಹಿನಿಯೊಂದರಲ್ಲಿ ಪ್ರಕಟವಾದ ಸುದ್ದಿ ಎಂಬಂತೆ ಬಿಂಬಿಸಿ ನಾಗರಾಜ ಶೆಟ್ಟಿ ಹಾಗೂ ಅಪರಿಚಿತ ಮಗುವೊಂದರ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಅವರ ವಿರುದ್ಧ ಕಾನೂನು ಸಮರ ಮುಂದುವರಿಸುವುದಾಗಿ ನಾಗರಾಜ ಶೆಟ್ಟಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ : 2018ರಲ್ಲಿ ನಡೆದ ರಾಷ್ಟ್ರೀಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಗೆ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 3,648 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 3,284 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆಯುವ ಮೂಲಕ ಶೇ.90.02 ದಾಖಲೆಯ ಫಲಿತಾಂಶವನ್ನು ದಾಖಲಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 26 ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ. ಇದಲ್ಲದೆ 224 ವಿದ್ಯಾರ್ಥಿಗಳು 400ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದಿರುತ್ತಾರೆ. ರಾಷ್ಟ್ರೀಯ ಮಟ್ಟದಲ್ಲಿ ಕೆಟಗೆರೆ ವಿಭಾಗದಲ್ಲಿ ಪದ್ಮಾವತಿ (33), ಯತೀಶ (140), ಗುಣಶೀಲ (195), ವಂಶಿತೇಜ(305), ವೆಂಕಟೇಶ ದೊರೆ (409), ಗೌತಮ ಬುದ್ಧ (457), ನಂದೀಶ್ (458) ಮತ್ತು ನೇತ್ರೇಶ್ (561) ರ‍್ಯಾಂಕ್‌ಗಳನ್ನು ಪಡೆದಿರುತ್ತಾರೆ. ಭಿನ್ನಚೇತನರ ಪಟ್ಟಿಯಲ್ಲಿ ಮಂಜುನಾಥ್ ದೊಂಬಾರ್ (286), ರಕ್ಷಿತಾ ಬಿ.ಪಿ (295), ಭಾಗ್ಯಶ್ರೀ (271), ಅಜಯ್ ಕುಮಾರ್ (519) ನೇಯ ರ‍್ಯಾಂಕ್ ರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ. 8ರಂದು ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ ನಡೆಸಿದರು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಯಾಚನೆ ನಡೆಸುವ ಸಂದರ್ಭ ಬಿಜೆಪಿ ಮುಖಂಡ ಕಿಶೋರ್‌ಕುಮಾರ್, ರಾಜೇಶ್ ಕಾವೇರಿ, ಗಿರೀಶ್ ಮೊದಲಾದವರು ಜೊತೆಗಿದ್ದರು.
