ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್.ಎಸ್ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಬಸ್ರೂರು ವೆಂಕಟೇಶ್ ಪುರಾಣಿಕ್ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದಿದ್ದು ಅವರನ್ನು ಕುಂದಾಪುರ ತಾಲೂಕು ಹವ್ಯಕ ಸಭಾವತಿಯಿಂದ ಅವರ ಮನೆಗೆ ತೆರಳಿ ಫಲ-ಪುಷ್ಪ, ಸ್ಮರಣಿಕೆ, ನಗದು ನೀಡಿ ಅಭಿನಂದಿಸಲಾಯಿತು. ತಾಲೂಕು ಹವ್ಯಕ ಸಭಾಧ್ಯಕ್ಷ ಎಮ್. ನಾಗರಾಜ ಭಟ್ ಮಕ್ಕಿ ದೇವಸ್ಥಾನ ಅಭಿನಂದಿಸಿ ಮಾತನಾಡಿ ವಿದ್ಯಾರ್ಥಿ ವೆಂಕಟೇಶ್ ಗ್ರಾಮೀಣ ಭಾಗದ ಮದ್ಯಮ ವರ್ಗದ ಕುಟುಂಬದಿಂದ ಬಂದಿರುವವನಾಗಿದ್ದು ಇವನು ಸ್ವಪ್ರಯತ್ನದಿಂದ ಸಾಧನೆ ಮಾಡಿದ್ದಾನೆ. ಇವನ ಸಾಧನೆ ತಾಲೂಕಿಗೆ ಹಾಗೂ ಸಮಾಜಕ್ಕೆ ಹೆಮ್ಮೆತಂದಿರುತ್ತದೆ. ಇವನ ಈ ಸಾಧನೆಗೆ ಹೆತ್ತವರು ಹಾಗೂ ಉಪನ್ಯಾಸಕ ವರ್ಗದವರ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಬಹಳ ಮುಖ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಹವ್ಯಕ ಸಮಾಜದ ಪ್ರಧಾನ ಕಾರ್ಯದರ್ಶಿ ಯು. ಸಂದೇಶ ಭಟ್, ಶ್ರೀ ರಾಮಚಂದ್ರಾಪುರ ಮಠದ ಬಸ್ರೂರು ಭಾಗದ ಗುರಿಕಾರ ರವಿಶಂಕರ ಮಧ್ಯಸ್ಥ, ವಿದ್ಯಾರ್ಥಿ ತಂದೆ ಸುಬ್ರಹ್ಮಣ್ಯ ಪುರಾಣಿಕ್, ತಾಯಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಮಾಜದ ಸಂಪನ್ನವರ್ಗ ತಮ್ಮ ಮಕ್ಕಳನ್ನು ನಾಟಕರಂಗದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಲು ಸಕಾರಾತ್ಮಕವಾಗಿ ಸ್ಪಂದಿಸದ ಸಮಯವೊಂದಿತ್ತು. ಆದರೆ ಈಗ ಬದುಕು ನಿಂತ ನೀರಾಗದೇ ಮನಸ್ಸಿಗೆ ಮುದಕೊಡುವ ಹವ್ಯಾಸಗಳು ಬೇಕೆಂಬ ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಬೇಸಿಗೆ ನಾಟಕ ತರಬೇತಿ ಶಿಬಿರಗಳಿಗೆ ಕಳುಹಿಸಲು ಮುಂದಾಗಿದ್ದಾರೆ ಎಂದು ರಂಗಾಯಣ ಹಾಗೂ ನೀನಾಸಂ ಪದವೀಧರ ವಾಸುದೇವ ಗಂಗೇರಾ ಹೇಳಿದರು. ಶ್ರೀ ಶಾರದಾ ವೇದಿಕೆಯಲ್ಲಿ ಬೈಂದೂರು ಲಾವಣ್ಯ ಆಶ್ರಯದಲ್ಲಿ ನಡೆದ 21 ನೇ ವರ್ಷದ ಮಕ್ಕಳ ಬೇಸಿಗೆ ನಾಟಕ ರಂಗತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಪಂಚದಲ್ಲಿ ವಿಭಿನ್ನ ಸ್ತರಗಳ ಬದುಕಿನ ಓಟದ ನಡುವೆ ಮಕ್ಕಳು ಬಾಂದವ್ಯ, ಕುಟುಂಬ, ಪರಿಸರ ಪ್ರಜ್ಞೆಯಿಲ್ಲದೇ ಕಳೆದುಹೋಗುತ್ತಿದ್ದಾರೆ. ಇದನ್ನು ತಡೆಗಟ್ಟುವ ಮೂಲಕ ಮಕ್ಕಳ ಬಾಲ್ಯವನ್ನು ಅವರು ಆನಂದಿಸಬೇಕೆಂಬ ಕಲ್ಪನೆಯಿಂದ ಹೆತ್ತವರು ಹೆಚ್ಚಿನ ಸಹಕಾರ ನೀಡಿ ಮಕ್ಕಳನ್ನು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಆರೋಗ್ಯಕರ ಮನಸ್ಸಿದ್ದರೆ ಶರೀರ ಸ್ವಾಸ್ಥ್ಯವಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಪುತ್ತೂರು ಶ್ರೀ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಇದರ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಅಂತರ್ ಕಾಲೇಜು ಮಂಗಳೂರು ವಲಯಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಆಗಿ ಮೂಡಿಬಂದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ತಮ್ಮ ಹಿರಿಯರು ಹಾಕಿಕೊಟ್ಟ ವಿಚಾರಧಾರೆ ಹಾಗೂ ಸ್ವ-ಪ್ರತಿಭೆಯಿಂದ ಸಪ್ತ ಕೊಂಕಣಿ ಸಮುದಾಯದ ಭವ್ಯ ಪರಂಪರೆ ನಡೆದುಬಂದಿದೆ. ಇದನ್ನು ಹೀಗೆಯೆ ಉಳಿಸಿ ಬೆಳೆಸಬೇಕು ಎಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿ ಹೇಳಿದರು. ಬೈಂದೂರು ಕುಮಟೆಕಾರ್ ನಾಯಕ್ ಕುಂಟುಂಬಿಕರ ಮೂಲ ನಿವಾಸಕ್ಕೆ ತಮ್ಮ ಪಟ್ಟ ಶಿಷ್ಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯೊಡನೆ ಚಿತ್ತೈಸಿ ಕುಟುಂಬಿಕರ ಗುರುಪಾದಪೂಜೆ ಸ್ವೀಕರಿಸಿ ಆಶೀರ್ವಚನ ನೀಡಿದರು. ಜಿಎಸ್‌ಬಿ ಸಮಾಜದ ಪರಂಪರೆಯ ಬಲವಾದ ರಕ್ಷಣೆಯಿಂದ ಪರಸ್ಪರ ಪ್ರೀತಿ-ವಿಶ್ವಾಸದಿಂದ ಕೂಡಿ ಕರ್ತವ್ಯವನ್ನು ಪೂಜೆ ಎಂಬ ಭಾವನೆಯಿಂದ, ದುಡಿಮೆಯ ಒಂದಂಶವನ್ನು ಧಾರ್ಮಿಕ ಕಾರ್ಯಗಳಿಗೆ ಬಳಸಿ ಅದರೊಂದಿಗೆ ಜೀವನದಲ್ಲಿ ಸುಖ-ಶಾಂತಿ-ನೆಮ್ಮದಿಯಿಂದ ಬಾಳುವಂತಾಗಿದೆ. ಸನಾತನ ಧರ್ಮದ ಮೂಲ ತತ್ವಗಳನ್ನಾಧರಿಸಿ ಸಾರಸ್ವತರು ತಾವು ನೆಲೆಸಿದ ಸ್ಥಳಗಳಲ್ಲಿ ಸಂಘಟಿತರಾಗಿ ಹಾಗೂ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅಲ್ಲದೇ ಇತರರ ಬೆಳವಣಿಗೆ ಜೊತೆಗೆ ತಾವೂ ಬೆಳೆಯಬೇಕೆನ್ನುವ ಧರ್ಮದ ತಳಹದಿಯಲ್ಲಿ ಬದುಕುತ್ತಿರುವುದರಿಂದ ಸಮಾಜದಲ್ಲಿ ಆದರ್ಶಪ್ರಾಯವಾದ ಜೀವನ ನಡೆಸುತ್ತಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗೋವಾ: ಪ್ರತಿವರ್ಷದಂತೆ ಈ ವರ್ಷವು ಸಹ ಇದೆ ಮೇ 27 ರಂದು ಗೋವಾದ ಬೀಚೋಲಿಯಂನ ರಾಧಾಬಾಯಿ ಸಭಾಂಗಣದಲ್ಲಿ ಜರುಗಲಿರುವ ದಶಮಾನೋತ್ಸವದ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಕೀಲರು, ಸಾಹಿತಿಗಳು ಮತ್ತು ಕನ್ನಡದ ನುಡಿ ಸೇವಕರಾದ ಶ್ರೀ ರವೀಂದ್ರ ತೋಟಿಗೇರರವರು ಆಯ್ಕೆಯಾಗಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಗೋವಾದಲ್ಲಿ ನೆಡೆಯುವ ದಶಮಾನೋತ್ಸವ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಅವರ ಅಧ್ಯಕ್ಷತೆಯಲ್ಲಿ ದಶಮಾನೋತ್ಸವದ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಜರುಗಲಿದ್ದು ಇದರಲ್ಲಿ ರಾಜ್ಯದ ಕವಿಗಳು ಭಾಗವಹಿಸಿ ತಮ್ಮ ಕವನವಾಚನ ಮಾಡಲಿದ್ದಾರೆ ಎಂದು ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಶಿವಬಾಲ ಸಾಮಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ ಬಾಬು ಸುರ್ವೆ ಬೆಳೆಗಾವಿಯ ವಕೀಲರು, ಸಾಹಿತಿ, ಕನ್ನಡದ ನುಡಿ ಸೇವಕ ರವೀಂದ್ರ ತೋಟಿಗೇರ ರವರು ಕಳೆದ ೨೫ ವರ್ಷಗಳಿಂದ ನಾಡಿನ ನುಡಿ ಸೇವಕರಾಗಿ ಗಡಿ ಹೋರಾಟಗಾರರಾಗಿ ಪತ್ರಕರ್ತರಾಗಿ ಸೇವೆಸಲ್ಲಿಸುತಿದ್ದಾರೆ. ಬರಹಗಾರರಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಜನಮಾನಸದಲ್ಲುಳಿದಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಸೇತುವೆ, ರಸ್ತೆ, ಬಂದರು, ಸಮುದ್ರ ತಡೆಗೋಡೆ, ಬ್ರೇಕ್ ವಾಟರ್ ಕಾಮಗಾರಿ, ಶಾಲಾ ಕಾಲೇಜು ಅಭಿವೃದ್ಧಿ, ನೀರಾವರಿ ಯೋಜನೆಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಸುಮಾರು ೨,೦೦೦ ಕೋಟಿ ರೂ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಬೈಂದೂರನ್ನು ತಾಲೂಕನ್ನಾಗಿಸಿದ್ದು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಅಭಿವೃದ್ಧಿಯ ದಾಖಲೆಯ ಜನರು ಅಭಿವೃದ್ಧಿ ಕಾರ್ಯವನ್ನು ಗುರುತಿಸಿ ಬೆಂಬಲಿಸಲಿದ್ದಾರೆ ಭರವಸೆಯಿದ್ದು, ಈ ಭಾರಿಯ ಚುನಾವಣೆಯಲ್ಲಿ ದಾಖಲೆಯ ಅಂತರದಿಂದ ಗೆಲುವ ಸಾಧಿಸುವ ವಿಶ್ವಾಸವಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೀನುಗಾರಿಕೆಗೆ ಅನುಕೂಲವಾಗುವಂತೆ ಗಂಗೊಳ್ಳಿ, ಶಿರೂರು ಕೊಡೇರಿ ಬ್ರೇಕ್‌ವಾಟರ್ ಕಾಮಗಾರಿ, ಸಮುದ್ರ ಕೊರೆತ ತಡೆಗಾಗಿ ಬಹುಪಾಲು ಕರಾವಳಿ ಭಾಗಗಳಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ತಡೆಗೋಡೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಶೇ. 96.6 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 147 ವಿದ್ಯಾರ್ಥಿಗಳ ಪೈಕಿ 142 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 26 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 85 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 22 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 9 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯು.ಚೈತ್ರಾ ಶ್ಯಾನುಭಾಗ್ (588) ಅಂಕ ಗಳಿಸುವ ಮೂಲಕ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸ್ನೇಹಾ (579), ಸುಜನ್ (577), ಮಲಿಕ್ ನಾಯಕ್ (575), ಪ್ರಕಾಶ ಪೈ (568), ಶರತ್ ಎಲ್.ಪಿ.(೫೬೮), ಸುಪ್ರೀತಾ ಜಿ. (567), ಟಿ.ಅಶ್ಮಿತಾ ಶೆಣೈ (566), ಮನಿಲಾ (561), ಹೃತಿಕ್ (559), ಎಚ್.ಮಹಮ್ಮದ್ ಶಾದಾಬ್ (556), ಸಂಜಯ್ ಖಾರ್ವಿ (553), ನಿಖಿಲ್ ಖಾರ್ವಿ (547), ಧನುಶ್ರೀ (546), ಪ್ರೀತಿ ಖಾರ್ವಿ (539), ಮನೋಜ್ ಖಾರ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 5825 ಮಂದಿ ಪರೀಕ್ಷೆ ಬರೆದಿದ್ದು 5764 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98.95 ಫಲಿತಾಂಶ ದಾಖಲಾಗಿದೆ. ಶುಭಾಂಕರ್ ಚೌಗಲೆ 594 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್‍ನ ಚೇತನ್ ಪೈ 593 ಅಂಕದೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಲಕ್ಷ್ಮೀ ನಾರಾಯಣ ರೆಡ್ಡಿ 592 ಅಂಕದೊಂದಿಗೆ ರಾಜ್ಯಕ್ಕೆ ಚತುರ್ಥ ಸ್ಥಾನ ಮತ್ತು ಭರತ್ ಗಜಾನನ ಹೆಗಡೆ ಹಾಗೂ ಪೃಥ್ವೀ ಗಣಪತಿ ಹೆಗಡೆ 591 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನವನ್ನು ಗಳಿಸಿಕೊಳ್ಳುವ ಜೊತೆಗೆ ಆಳ್ವಾಸ್ ರಾಜ್ಯದಲ್ಲಿಯೇ ವಾಣಿಜ್ಯ ವಿಭಾಗದಲ್ಲಿ ಒಟ್ಟು 5 ಸ್ಥಾನವನ್ನು ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಮಿಲಿಷಾ ರೋಡ್ರಿಗಸ್ 593 ಅಂಕದೊಂದಿಗೆ ರಾಜ್ಯಕ್ಕೆ ಚತುರ್ಥ ಸ್ಥಾನ ಹಾಗೂ ವರ್ಷಿನಿ ಕೆ.ಎಸ್, ಹರೀಶ್ ಡಿ.ಜಿ, ಶ್ವೇತಾ ಹೆಗಡೆ ತಲಾ 592 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಟಾಪ್ ಹತ್ತರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ತಾಲೂಕು ಕೋಟೇಶ್ವರದ ಬಾಂಡ್ಯಾ ಎಜ್ಯುಕೇಶನ್ ಟ್ರಸ್ಟ್‌ನ ಗುರುಕುಲ ಪದವಿ ಪೂರ್ವ ಕಾಲೇಜು 2017-18 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದಿದೆ. 11 ಮಂದಿ ಉನ್ನತ ಶ್ರೇಣಿಯಲ್ಲಿ, 19 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಗುರುಕುಲ ಪದವಿ ಪೂರ್ವ ಕಾಲೇಜು ಈ ಬಾರಿ ವಾಣಿಜ್ಯ ವಿಭಾಗ ಶೇ.100 ಫಲಿತಾಂಶವನ್ನು ಹೊಂದಿದ್ದು, ವಿಜ್ಞಾನ ವಿಭಾಗವು ಶೇ.92 ಫಲಿತಾಂಶ ದಾಖಲಿಸಿದ್ದಾರೆ. ಹಾಗೆಯೇ ಗುರುಕುಲ ಪದವಿ ಪೂರ್ವ ಕಾಲೇಜು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಿದ್ದು, ಈ ತರಬೇತಿ ಪಡೆದ ವಿದ್ಯಾರ್ಥಿಗಳಲ್ಲಿ 5 ಮಂದಿ ‘JEE MAIN’ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಉತ್ತಮ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರನ್ನು ಗ್ರಾಮದ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿಕೊಂಡದ್ದು ವಿಶೇಷವಾಗಿತ್ತು. ಗುಜ್ಜಾಡಿ ಭಾಗದಲ್ಲಿ ಪ್ರಚಾರ ಸಂದರ್ಭ ತಾಪಂ ಸದಸ್ಯ ರಾಜು ದೇವಾಡಿಗ, ರಾಜು ಪೂಜಾರಿ, ತಮ್ಮಯ್ಯ ದೇವಾಡಿಗ, ಯುತ್ ಕಾಂಗ್ರೆಸ್‌ನ ಸತೀಶ್ ದೇವಾಡಿಗ ಮೊದಲಾದವರು ಜೊತೆಗಿದ್ದರು.
