Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ಜರುಗಿತು. ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ರಾಖಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ, ಮುಖಂಡ ಎಸ್. ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಭಿಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಕಾಂಗ್ರೆಸ್ ಸದಸ್ಯರು ಬೈಂದೂರು ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ರಾಖಿ ಶುಭಹಾರೈಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2017-18ನೇ ಸಾಲಿನಲ್ಲಿ 44.66 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಹಿಂದಿನ ಆರ್ಥಿಕ ವರ್ಷಗಳಿಗಿಂತ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಭಾನುವಾರ ಬೈಂದೂರಿನ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2017-18ನೇ ಸಾಲಿನಲ್ಲಿ ರೂ. 11.59 ಕೋಟಿ ಠೇವಣಿ ಹೊಂದಿದ್ದು 11.25 ಕೋಟಿ ಸಾಲ ನೀಡಿ ಆರ್ಥಿಕ ವರ್ಷದಲ್ಲಿ ಸುಮಾರು 43 ಕೋಟಿಯಷ್ಟು ವಹಿವಾಟು ನಡೆಸಿದೆ. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಮುನ್ನಡೆಯುತ್ತಿದ್ದರೇ, ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತ್ತೀಚೆಗೆ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ಬಾಲಕರ ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ದೈಹಿಕ ಶಿಕ್ಷಕ ಪ್ರಣಯ್‌ಕುಮಾರ್ ಶೆಟ್ಟಿ ಮತ್ತು ಶಿಕ್ಷಕಿ ಜುನಿತಾ ಮಚಾದೋ ಅವರೊಂದಿಗೆ ವಿದ್ಯಾರ್ಥಿಗಳು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ನಡೆಯಿತು. ದೇವಸ್ಥಾನದ ಅರ್ಚಕ ಬಿ.ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಶಿವರಾಮ ಪೂಜಾರಿ ಹಾಗೂ ಸದಸ್ಯರು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಹಾಗೂ ಮಹಿಳಾ ಮಂಡಳಿ ಆಶ್ರಯದಲ್ಲಿ ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಶ್ರೀ ಶಾರದೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗಂಗೊಳ್ಳಿಯ ಶ್ರೀ ಚಕ್ರೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಭಕ್ತಿ ಶ್ರದ್ಧೆಯಿಂದ ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಗಂಗೊಳ್ಳಿಯ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ವತಿಯಿಂದ ೨೮ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತವು ಭಕ್ತಿ ಶ್ರದ್ಧೆಯಿಂದ ಶುಕ್ರವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. ಬೆಳಿಗ್ಗೆ ೮ ಗಂಟೆಗೆ ದೇವತಾ ಪ್ರಾರ್ಥನೆ, ಕಲಶ ಪ್ರತಿಷ್ಠಾಪನೆ, ಕಲ್ಪೋಕ್ತ ಪೂಜೆ, ಕಥಾಶ್ರವಣ, ೧೧ ಗಂಟೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಈಶಾನ್ಯ ಭಾಗದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಪಡೆದ ನಂತರ ತಮ್ಮ ರಾಜ್ಯಕ್ಕೆ ತೆರಳಿ, ಅಲ್ಲಿನ ಅಭಿವೃದ್ದಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ನಾಗಲ್ಯಾಂಡ್ ನ ರಾಜ್ಯಪಾಲ ಪಿ.ಬಿ ಆಚಾರ‍್ಯ ತಿಳಿಸಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಅಭ್ಯಸಿಸುತ್ತಿರುವ ಈಶಾನ್ಯ ರಾಜ್ಯದ ವಿದ್ಯಾರ್ಥಿಗಳ ಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಬೃಹತ್ ನೈಸಗಿಕ ಸಂಪನ್ಮೂಲವನ್ನು ಹೊಂದಿರುವ ಈಶಾನ್ಯ ರಾಜ್ಯಗಳು, ಅಭಿವೃದ್ದಿಯಲ್ಲಿ ನಮ್ಮ ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಿರೀಕ್ಷಿತ ಬೆಳವಣಿಗೆ ಹೊಂದಿಲ್ಲ. ಆ ಹಿನ್ನಲೆಯಲ್ಲಿ ಈಶಾನ್ಯ ರಾಜ್ಯದ ಯುವ ಜನತೆ ಕಾರ‍್ಯಪ್ರವೃತ್ತರಾಗಿ, ತಮ್ಮ ರಾಜ್ಯಗಳನ್ನು ಭಾರತ ದೇಶದ ಭೂಪಾಟದಲ್ಲಿ ವಿಶಿಷ್ಟ ಸ್ಥಾನ ಲಭಿಸುವಲ್ಲಿ ಶ್ರಮಿಸಬೇಕು ಎಂದರು. ತಾವು ಪಡೆದ ಜ್ಞಾನದಿಂದ ತಮ್ಮ ಕುಟುಂಬ, ಸಮುದಾಯ, ಸಮಾಜವನ್ನು ಉನ್ನತಿಗೇರಿಸುವಂತೆ ಆಗಬೇಕು. ಒಟ್ಟು ಭಾರತದ ೨೯ ರಾಜ್ಯಗಳನ್ನು ಒಂದು ಕಟ್ಟಡದ ಅಡಿಪಾಯದ ಕಂಬಿಗಳಿಗೆ ಹೊಲಿಸಿದ ಅವರು, ಆ ಕಂಬಿಗಳಲ್ಲಿ ಒಂದು ಕಂಬಿ ದುರ್ಬಲವಾದರೂ, ಕಟ್ಟಡದ ಬಾಳಿಕೆ ಕ್ಷೀಣಿಸುವಂತೆ, ಭಾರತದ ಏಕತೆಯ ದೃಷ್ಟಿಯಲ್ಲಿ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಮಾದಕ ವ್ಯಸನ ಜಾಗೃತಿ ಅಭಿಮಾನದ ಭಾಗವಾಗಿ, ಕುಂದಾಪುರ ಪೊಲೀಸ್ ಠಾಣೆ ನೇತೃತ್ವದಲ್ಲಿ ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಡೇರಹೋಬಳಿಯಲ್ಲಿ ಮಾದಕದೃವ್ಯ ವಿರುದ್ಧ ಜಾಗೃತಿ ಹಾಗೂ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಕೀಲರಾದ ರಾಘವೇಂದ್ರ ಚರಣ್ ನಾವುಡರವರು ಮಾತನಾಡುತ್ತಾ, ಭಾರತದ ಯುವಕರೇ ಬಹು ಸಂಖ್ಯಾತರಾಗಿರುವ ದೇಶ. ನಮ್ಮ ದೇಶದಲ್ಲಿ ಆಂತರಿಕ ದಾಳಿಗಿಂತಲೂ ಮಾದಕ ವ್ಯಸನದ ದಾಳಿಯನ್ನು ತಡೆಗಟ್ಟಬೇಕಾಗಿದೆ. ವಿದ್ಯಾರ್ಥಿಗಳು ಯಾವುದೇ ಚಟಗಳ ದಾಸರಾಗದೇ ಉತ್ತಮ ಪ್ರಜೆಯಾಗಿ ಬಾಳಬೆಕೇಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಂದೆ ನಿಮ್ಮ ಜೀವನದಲ್ಲಿ ಯಾವತ್ತು ಮಾದಕದೃವ್ಯ ವ್ಯಸನಗಳಿಗೆ ದಾಸರಾಗ ಬಾರದೆಂದು ಕರೆನೀಡಿದರು. ಅಪರಾಧಗಳನ್ನು ತಡೆಗಟ್ಟಲು ಮಾದಕ ದ್ರವ್ಯಗಳ ವಿರುದ್ಧ ಅರಿವು ಮೂಡಿಸುವ ಈ ಕಾರ್ಯಕ್ರಮ ಶ್ಲಾಘನೀಯ ಎಂದರು. ಯುವಜನತೆ ಉತ್ತಮ ಗುಣ ನಡತೆಯನ್ನು ಹೊಂದಬೇಕೆಂದು ಈ ಸಂದರ್ಭದಲ್ಲಿ ನುಡಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ಶಂಕರವರು ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ನೆನ್ನೆ ಚೆನೈನ ಎಸ್‍ಆರ್‍ಎಂ ವಿಶ್ವ ವಿದ್ಯಾನಿಲಯದಲ್ಲಿ ಮುಕ್ತಾಯಗೊಂಡ ಎಸ್‍ಆರ್‍ಎಂ ಸ್ಥಾಪಕ ಮಹೋತ್ಸವ ಅಖಿಲ ಭಾರತಅಂತರ್ ಕಾಲೇಜು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರದ 16 ಆಹ್ವಾನಿತ ತಂಡಗಳು ಭಾಗವಹಿಸಿದ್ದು, ಟೂರ್ನಿಯ ಕ್ವಾರ್ಟರ್ ಫೈನಲ್‍ನಲ್ಲಿ ಕ್ರೆಸೆಂಟ್ ವಿಶ್ವ ವಿದ್ಯಾನಿಲಯವನ್ನು ನೇರ ಸೆಟ್‍ಗಳಿಂದ ಸೋಲಿಸಿ ಲೀಗ್ ಹಂತಕ್ಕೆ ಪ್ರವೇಶಿಸಿತು. ಸೂಪರ್ ಲೀಗ್ ಪಂದ್ಯಗಳಲ್ಲಿ ಆಳ್ವಾಸ್ ತಂಡ ಕೊಯಂಬತೂರಿನ ನಿರ್ಮಲ ತಂಡ ಹಾಗೂ ಅತಿಥೇಯs ಎಸ್‍ಆರ್‍ಎಂ ವಿಶ್ವ ವಿದ್ಯಾನಿಲಯವನ್ನು ನೇರಸೆಟ್‍ಗಳಿಂದ ಸೋಲಿಸಿದ್ದಲ್ಲದೆ, ಅಂತಿಮ ನಿರ್ಣಾಯಕ ಪಂದ್ಯದಲ್ಲಿ ದಿಂಡಿಗಲ್‍ನ  ಓಂ ಇಸ್ಟಿಟ್ಯೂಟ್ ತಂಡವನ್ನು 35-27 ಹಾಗೂ 35-22 ನೇರ ಸೆಟ್‍ಗಳಿಂದ ಸೋಲಿಸಿ 6ನೇ ಭಾರಿ ಎಸ್‍ಆರ್‍ಎಂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

Read More

ನಿದ್ದೆ ಹೋದಾಗ ಸುರಿದ ಮೃತ್ಯು ಮಳೆಯ ರೌದ್ರನರ್ತನ ನರಕ ಸದೃಶ್ಯ ಜನರ ಬದುಕು ಭೀಕರ ಪ್ರವಾಹ ಒದ್ದೆಯಾದ ಮಂಜಿನ ನಗರಿಗೆ ಅಗ್ನಿಪರೀಕ್ಷೆ ಜೋಗುಳದ ದನಿಗೆ ನಿದ್ದೆ ಹೋದ ಕೂಸು ಮೋಡಗಳು ಬಾಯ್ಕಳೆದು ಸುರಿದ ಅಟ್ಟಹಾಸದ ದನಿಗೆ ಅಸುನೀಗಿದೆ ಹಸಿರು ಹೊಲಿದಿಟ್ಟ ಬುವಿಯ ಸುಲಿದಿದೆ ಭೋರ್ಗರೆದ ಮಳೆ. ಮಳೆಯ ತಂಪಾಟ ನೋಡಿದ್ದೇನೆ, ಈ ರೀತಿಯ ರಂಪಾಟ ನೋಡಿಲ್ಲ ದೇವರೆ…! ಯಾರು ಕಾರಣವಿದಕೆ..? ಪ್ರಶ್ನೆ ಕೇಳುತ ಅಕ್ಷರಗಳ ಗೀಚಿದೆ…! -ಶ್ರೀರಾಜ್ ಎಸ್. ಆಚಾರ್ಯ, ಯುವ ಲೇಖಕ, ಕವಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರಿನ ಮೂಕಾಂಬಿಕ ದೇವಾಲಯದ ಆಡಳಿತ ಮಂಡಳಿ ಕೊಡಗು ಮತ್ತು ಕೇರಳ ಪ್ರವಾಹದಲ್ಲಿ ಸಿಲುಕಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಅರ್ಪಿಸಿದೆ. ಕೇರಳಕ್ಕೆ 1 ಕೋಟಿ, ಕೊಡಗು ಜಿಲ್ಲೆಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಭೆ ನಡೆಯಿತು. ಕೇರಳ ಮತ್ತು ಕೊಡಗಿನ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಕಡಿಮೆ ಆಗಲಿ ಎಂದು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ನಿಧಿಯಿಂದ ಕೇರಳ ರಾಜ್ಯಕ್ಕೆ 1 ಕೋಟಿ, ಕೊಡಗು ಜಿಲ್ಲೆಗೆ 25 ಲಕ್ಷ ರೂ. ಬಿಡುಗಡೆಗೆ ಮಂಜೂರಾತಿ ಕೋರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಲ್ಲಿ ಮನವಿ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕೊಲ್ಲೂರಿನ ಮೂಕಾಂಬಿಕ ದೇವಾಲಯಕ್ಕೆ ಕರ್ನಾಟಕದ ಜೊತೆಗೆ ಕೇರಳದಲ್ಲೂ ಲಕ್ಷಾಂತರ ಭಕ್ತರಿದ್ದಾರೆ. ಕೇರಳದ ನೂರಾರು ಭಕ್ತರು ಪ್ರತಿದಿನ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ, ಕೇರಳಕ್ಕೂ ಪರಿಹಾರ ಘೋಷಣೆ ಮಾಡಲಾಗಿದೆ.

Read More