ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ನಿರ್ಮೂಲನಾ ಮಾಸಾಚರಣೆ ಕಾರ್ಯಕ್ರಮ ಜರುಗಿತು. ಇದರ ಅಂಗವಾಗಿ ಕುಂದಾಪುರ ಸರಕಾರಿ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕ ಅಧಿಕಾರಿಗಳಾದ ಸದಾನಂದ ಹೆಬ್ಬಾರ್ ಇವರು ಮಲೇರಿಯಾ ರೋಗದ ಲಕ್ಷಣಗಳು, ಪರಿಣಾಮ ಮತ್ತು ಮಲೇರಿಯಾವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ನಾಗರೀಕ ಸಹಾಯವಾಣಿ ಕೇಂದ್ರದ ಅಧಿಕಾರಿಯಾದ ಕು. ಶಾರದಾ ಇವರು ಸಾರ್ವಜನಿಕರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದೊರೆಯವ ವಿವಿಧ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ತಿಳಿಸಿದರು. . ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ, ಉಪನ್ಯಾಸಕರಾದ ರವಿ ಉಪಾಧ್ಯಾಯ, ಕುಮಾರಿ ಕವಿತಾ ಆಚಾರ್ಯ ಹಾಗೂ ಸಿಬ್ಬಂದಿಗಳಾದ ಮಂಜುನಾಥ ಶೆಟ್ಟಿ ಮತ್ತು ನಾಗರಾಜ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ಜಯಶೀಲಾ ಪೈ ಕಾರ್ಯಕ್ರಮ ನಿರ್ವಹಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ದೇಶದ ಪ್ರತಿಷ್ಟಿತ ವಿದ್ಯಾಸಂಸ್ಥೆ ಐಐಟಿಗೆ ಪ್ರವೇಶ ಪಡೆಯಲು ನಡೆದ ಜೆಇಇ ಅಡ್ವಾನ್ಡ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಸಾಮಾನ್ಯ ವಿಭಾಗದಲ್ಲಿ ಶಶಾಂಕ್ ಡಿ.(4601), ಸಚಿನ್ ಕುಮಾರ್(9827), ಯಶಸ್ಸ್ ಎಸ್.ವಿ( 10,497), ಎಸ್‍ಸಿ ಎಸ್‍ಟಿ ಕೆಟಗರಿಯಲ್ಲಿ ಸುದರ್ಶನ್ ಜಿ.ಎಸ್(121), ಹರೀಶ್ ಡಿ.ಜಿ(363), ಶಶಾಂಕ್ ಡಿ.(617), ಸಚಿನ್ ಪಿ ಲಮಾಣಿ(621), ವಂಶಿತೇಜ್(786), ರಾಘವೇಂದ್ರ ಜೆ.ಪಿ(1357), ದರ್ಶನ್( 1363). ಗೌತಮಬುದ್ಧ(1430), ಸಚಿನ್ ಕುಮಾರ್ (1850), ಮನೋಜ್ (1974) ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘ ಮತ್ತು ವಕೀಲರ ಸಂಘ ಉಡುಪಿ ಮತ್ತು ಭಂಡಾರ್‌ಕಾರ‍್ಸ್ ಆರ್ಟ್ಸ್ & ಸೈನ್ಸ್ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ಟಿ. ಇವರು ಮಾತನಾಡಿ ಯಾವುದೇ ಉದ್ಯಮಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ, ಈ ಅಪರಾಧಕ್ಕಾಗಿ ರೂ.50,000 ಗಳ ವರೆಗಿನ ದಂಡ ಹಾಗೂ 2 ವರ್ಷದೊಳಗಿನ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದರು. ಬಡತನ, ಅನಕ್ಷರತೆ ಮತ್ತು ಷೋಷಕರ ಆರ್ಥಿಕ ದುಸ್ಥಿತಿಯಿಂದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ, ಪಟಾಕಿ, ತಯಾರಿಕೆ, ಸಿಮೆಂಟ್ ಉದ್ಯಮ, ರೈಲ್ವೆ ಕಾಮಗಾರಿ ಮುಂತಾದ ಅಪಾಯಕಾರಿ ಉದ್ದಿಮೆಗಳಲ್ಲ್ಲಿ ಬಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಒತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ದೇವಾಡಿಗರ ಒಕ್ಕೂಟ ಬೈಂದೂರು ಹಾಗೂ ದೇವಾಡಿಗ ನವೋದಯ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ಸಮುದಾಯದ ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಉದ್ಧೇಶಿಸಿ ಬೆಂಗಳೂರು ದೇವಾಡಿಗ ನವೋದಯ ಸಂಘದ ಪ್ರಧಾನ ಕಾರ್ಯದರ್ಶಿ ಚರಣ್ ಬೈಂದೂರು ಮಾತನಾಡಿ ದೇಶದ ಪ್ರಗತಿಗೆ ಹಳ್ಳಿಗಳು ಅಭಿವೃದ್ಧಿ ಹೊಂದಬೇಕು. ಗ್ರಾಮೀಣ ಪರಿಸರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೆಚ್ಚಿನ ಸಾಧನೆ ಮಾಡಲು ಅವಕಾಶ ನೀಡಬೇಕು. ಜತೆಗೆ ವಿದ್ಯಾರ್ಥಿಗಳು ಕೂಡಾ ಸಿಕ್ಕಿದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ದೊರೆತಾಗ ಸಂತೋಷ ಪಡುತ್ತಾರೆ. ಆ ಕಾರಣದಿಂದ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಹೆಚ್ಚು ಸಹಕಾರಿಯಾಗಿದ್ದು, ಅವರ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದೆಂಬ ನೆಲೆಯಲ್ಲಿ ಸಂಸ್ಥೆ ವತಿಯಿಂದ ಉಚಿತ ನೋಟ್‌ಬುಕ್‌ಗಳನ್ನು ನೀಡಲಾಗುತ್ತಿದೆ ಎಂದರು. ಒಕ್ಕೂಟದ ಅಧ್ಯಕ್ಷ ಹೊಸಾಡು ನಾರಾಯಣ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದೇವಾಡಿಗ ನವೋದಯ ಸಂಘ ಬೆಂಗಳೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ರಾಯಪ್ಪನ ಮಠ ಸಮೀಪವರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ಪೂಜೆಯು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ಕುಂದಾಪುರದ ಖಾರ್ವಿಕೇರಿ ಮಹಾಕಾಳಿ ದೇವಸ್ಥಾನದ ಅಧ್ಯಕ್ಷರಾದ ಜಯಾನಂದ ಖಾರ್ವಿಯವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ರಾಮ ದೇವಾಡಿಗ, ನಾಗರಾಜ, ಮಂಜುನಾಥ, ಚಂದ್ರ, ಸೂರ್ಯ, ಗಣೇಶ ರಾಯಪ್ಪನ ಮಠ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಗಂಗೊಳ್ಳಿ ಬಂದರು ಒಕ್ಕೂಟದ ಮಹಾಸಭೆ ಜರುಗಿತು. ಈ ಮಹಾಸಭೆಯನ್ನು ಉದ್ದೇಶಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ಯೋಜನಾಧಿಕಾರಿ ಶಶಿರೇಖಾ ಪಿ. ಮಾತನಾಡಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂಬ ಸದುದ್ದೇಶದಿಂದ ಪ್ರಾರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ವಿಸ್ತರಿಸಿದೆ. ಯೋಜನೆಯ ಮೂಲಕ ಸ್ವಸಹಾಯ ಸಂಘದ ಸದಸ್ಯರಿಗೆ ಅನೇಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸದಸ್ಯರ ಜೀವನದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದ ಜನಜಾಗೃತಿ ವೇದಿಕೆ ತ್ರಾಸಿ ವಲಯದ ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಅನೇಕ ಕುಟುಂಬಗಳು ಬೆಳಕನ್ನು ಕಾಣುವಂತಾಗಿದೆ. ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗಿದ್ದಾರೆ. ಸ್ವಸಹಾಯ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿಯಾದ ಸುಜಾತ ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಭಾಷಣ, ನಾಟಕ, ಸ್ಲೋಗನ್ಸ್‌ಗಳನ್ನು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳು ಕುಂಡಗಳಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರದ ಸಂರಕ್ಷಣೆಯಲ್ಲಿ ಗಿಡಗಳ ಮಹತ್ವವನ್ನು ಅರಿತುಕೊಂಡರು. ಶಾಲಾ ಎಸ್‌ಡಿಎಂಸಿ ಸದಸ್ಯರಾದ ರವಿಶಂಕರ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಮುರಳಿಧರ್ ನಾಯರಿ, ಶಾಲಾ ಶಿಕ್ಷಕರಾದ ಸುಮತಿ ಎಂ., ರಾಜೀವ್ ಶೆಟ್ಟಿ ಬಿ., ಉಮೇಶ್, ಸುಜಾತ, ಸರಿತಾ, ದೀಪಾ, ನಾಗರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಜ್ಞಾನ ಶಿಕ್ಷಕರುಗಳಾದ ಶಶಿಶಂಕರ್ ಎಚ್. ಎಂ. ಮತ್ತು ಮಂಜುಳಾ ಸಂಯೋಜಿಸಿದ್ದರು. ವಿದ್ಯಾರ್ಥಿಗಳಾದ ಸ್ವಾತಿ, ರುಚಿತಾ, ಲಕ್ಷ್ಮೀ, ನಿಶಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ 2018-19ನೇ ಸಾಲಿನ ಮೊದಲ ಶಿಕ್ಷಕ-ರಕ್ಷಕ ಸಭೆ ಜರುಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯಾ ಎಜ್ಯುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕರುಗಳಾದ ಕೆ.ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ.ಎಸ್.ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಭಾಕರ ಶೆಟ್ಟಿ, ಕನ್ನಡ ಅಧ್ಯಾಪಕರು ಪದವಿ ಪೂರ್ವ ಕಾಲೇಜು ಮುಂಡ್ಕೂರು ಕಾರ್ಕಳ ಇವರು ತಮ್ಮ ಆಕರ್ಷಕ ಮಾತುಗಳಿಗೆ ಕವಿವಾಣಿಗಳ ಸ್ಪರ್ಶವಿತ್ತು ಮಕ್ಕಳ ಪೋಷಣೆಯಲ್ಲಿ ಪಾಲಕರ ಪಾತ್ರವೇನು ಎಂಬುವುದರ ಕುರಿತು ತಿಳಿಸಿಕೊಟ್ಟರು. ಶಾಲೆಯ ಪ್ರಾಂಶುಪಾಲರಾದ ಅರವಿಂದ ವಿ. ಮರಳಿಯವರು ಪ್ರಾಸ್ತಾವಿಕವಾಗಿ ಮಾತನಾಡಿ 2018-19ನೇ ಶೈಕ್ಷಣಿಕ ವರ್ಷದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಮತ್ತು ಶಾಲಾನಿಯಮಾವಳಿಗಳ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು. ಅಧ್ಯಕ್ಷೀಯ ನುಡಿಗಳನ್ನಾಡಿದ ಬಾಂಡ್ಯಾ ಎಜ್ಯುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕಿಯಾದ ಅನುಪಮ.ಎಸ್.ಶೆಟ್ಟಿಯವರು ಸಂಸ್ಥೆಯ ಶೈಕ್ಷಣಿಕ ಸಾಧನೆಗಳ ಕುರಿತು ತಿಳಿಸುತ್ತಾ ಪ್ರಸ್ತುತ ವರ್ಷದಲ್ಲಿ ಮಕ್ಕಳ ಎಳಿಗೆಗೆ ಪೋಷಕರು ನಿರ್ವಹಿಸಬೇಕಾದ ಪಾತ್ರವೇನು ಎಂಬುವುದರ ಬಗ್ಗೆ ತಿಳಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ರಾಘವೇಂದ್ರ ಅಮುಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಅಧಿಕ ಮಾಸದ ಪ್ರಯುಕ್ತ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವಿಠೋಬ ಭಜನಾ ಮಂಡಳಿ ಕೊಚ್ಚಿನ್ ಇವರಿಂದ ಭಜನಾ ಸೇವೆ ನೆರವೇರಿತು. ಕೊಚ್ಚಿನ್‌ನಿಂದ ಆಗಮಿಸಿದ ಶ್ರೀ ವಿಠೋಬ ಭಜನಾ ಮಂಡಳಿ ಸದಸ್ಯರು ನರೇಶ ಪೈ ನೇತೃತ್ವದಲ್ಲಿ ಸುಮಾರು 2 ಗಂಟೆ ಕಾಲ ಭಜನೆ ಹಾಡಿ ಭಜನಾ ಸೇವೆಯನ್ನು ಶ್ರೀದೇವರಿಗೆ ಸಮರ್ಪಿಸಿದರು. ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಸ್ವಾಗತಿಸಿದರು. ದೇವಳದ ಆಡಳಿತ ಮಂಡಳಿ ಸದಸ್ಯ ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ನಿನಾದ ಸಂಸ್ಥೆಯ ಪದಾಧಿಕಾರಿಗಳು, ಜಿಎಸ್‌ಬಿ ಸಮಾಜಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಾಲ್ಕೈದು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ನರ್ಮ್ ಬಸ್ಸುಗಳ ಸಂಚಾರ ಹಠಾತ್ ನಿಲುಗಡೆಯಿಂದ ವಿದ್ಯಾರ್ಥಿಗಳು ಇಕ್ಕಟ್ಟಿಗೆ ಸಿಲುಕಿದ್ದು, ಬಸ್ಸುಗಳ ಆರಂಭದ ಕುರಿತು ಜೂ. 19 ರಂದು ನಿರ್ಧಾರವಾಗುವ ಸಂಭವವಿದೆ. ಲೋಕಾಯುಕ್ತ ಕೋರ್ಟ್‌ನಲ್ಲಿ ಅಂದು ಪ್ರಕರಣದ ವಿಚಾರಣೆ ನಡೆಯಲಿದ್ದು, ಜನರೂ ಅದರ ನಿರೀಕ್ಷೆಯಲ್ಲಿದ್ದಾರೆ. ಹಿಂದಿನ ಶಾಸಕರಾದ ಗೋಪಾಲ ಪೂಜಾರಿಯವರ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗ ಸೇರಿದಂತೆ ವಿವಿಧ ಊರುಗಳಿಗೆ ಸರಕಾರಿ ಬಸ್‌ಗಳ ಸಂಚಾರ ಆರಂಭಿಸಲಾಗಿತ್ತು. ಕೆ.ಎಸ್.ಆರ್.ಟಿ.ಸಿ. ನಿಗಮ ಹಾಗೂ ಉಸ್ತುವಾರಿ ಸಚಿವರ ಆದೇಶದ ಪ್ರಕಾರ ಬಸ್ ಸಂಚಾರ ಆರಂಭವಾಗಿತ್ತು. ಆದರೆ, ಕೆಎಸ್‌ಆರ್‌ಟಿಸಿಯವರು ಆರ್‌ಟಿಒದಿಂದ ಅಧಿಕೃತ ಪರವಾನಿಗೆ ಪಡೆದಿರಲಿಲ್ಲ. ಸರಾಸರಿ ೧ ರಿಂದ ೩ ನಿಮಿಷಗಳ ಅಂತರದಲ್ಲಿ ಖಾಸಗಿ ಬಸ್ಸುಗಳು ಇರುವಾಗ ಇದರ ಮಧ್ಯೆ ನಿಗದಿತ ವೇಳಾಪಟ್ಟಿ ಇಲ್ಲದೇ ಸರಕಾರಿ ಬಸ್ ಸಂಚಾರ ಪ್ರಾರಂಭಿಸಲಾಗಿದ್ದು ಸಮಸ್ಯೆಯಾಗಿದೆ. ಸಾರಿಗೆ ಇಲಾಖೆ, ಜಿಲ್ಲಾಧಿಕಾರಿಗಳು ಮತ್ತು ಪೋಲಿಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡುವ ಮೊದಲು ಖಾಸಗಿಯವರ ಅಭಿಪ್ರಾಯ ಕೇಳಿರಲಿಲ್ಲ ಎನ್ನಲಾಗಿತ್ತು. ಈ ಸಂದರ್ಭದಲ್ಲಿ…
