ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಪಡುವರಿ ನಿವಾಸಿ ಜಗದೀಶ ಪಟವಾಲ್ (62) ಯಡ್ತರೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಬೈಕಿನಲ್ಲಿ ಪತ್ನಿ ಆಶಾ ಅವರೊಂದಿಗೆ ಬಿಜೂರು ಕಡೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯಡ್ತರೆ ಜಂಕ್ಷನ್ ಬಳಿ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದ ಪರಿಣಾಮ ಜಗದೀಶ ಪಟವಾಲ್ ಹಾಗೂ ಅವರ ಪತ್ನಿ ರೋಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಈರ್ವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಜಗದೀಶ ಪಟವಾಲ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಸವಾರನ ಕಾಲಿಗೆ ಗಾಯಗಳಾಗಿದೆ. ಜಗದೀಶ ಪಟವಾಲ್ ಅವರು ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷರಾಗಿ, ಶ್ರೀ ಮೂಕಾಂಬಿಕಾ ರೈಲ್ವೆ ಹೋರಾಟ ಸಲಹಾ ಸಮಿತಿ ಸ್ಥಾಪಕ ಸದಸ್ಯ ಹಾಗೂ ಕಾರ್ಯದರ್ಶಿಯಾಗಿ ಮೂಕಾಂಬಿಕಾ ರೈಲ್ವೆ ನಿಲ್ದಾಣ ಅಭಿವೃದ್ದಿಪಡಿಸಲು ಸಮಿತಿಯೊಂದಿಗೆ ಶ್ರಮವಹಿಸಿದ್ದರು. ಬೈಂದೂರು ನಾಗರಿಕ ವೇದಿಕೆ ಮೂಲಕ ತಾಲೂಕು ರಚನಾ ಸಮಿತಿಯೊಂದಿಗೆ ಹೋರಾಟಕ್ಕೆ ಕೈ ಜೋಡಿಸಿದ್ದರು. ಜಗದೀಶ ಪಟವಾಲ್ ಅವರು ಪತ್ನಿ, ಓರ್ವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.21: ವರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಮಾನಿ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಮಾನಿ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಆಗಿದ್ದು, ದಿನಾಂಕ: 18.09.2022 ರಂದು ಬೆಳಗ್ಗೆ 6:30 ರ ಸಮಯಕ್ಕೆ ಜಲಾಶಯದ ಮಟ್ಟವು 590.10 ಮೀಟರ್ ತಲುಪಿದ್ದು, ಒಳಹರಿವು 1565 ಕ್ಯೂಸೆಕ್ಸ್ಗಳಷ್ಟು ಇರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಈ ಮೂಲಕ ಎಚ್ಚರಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಸೆ.21: ಜಾಗದ ತಕರಾರಿಗೆ ಸಂಬಂಧಿಸಿ ತನ್ನ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನಿಸಿರುವುದಾಗಿ ಸಿದ್ದಾಪುರ ಗ್ರಾಮದ ಸುದರ್ಶನ್ ಶೆಟ್ಟಿ ಎಂಬವರು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂದಾಪುರದ ಸಿದ್ದಾಪುರ ಗ್ರಾಮದ ಬಾಳೆಬೇರು ನಿವಾಸಿ ಸುದರ್ಶನ್ ಶೆಟ್ಟಿ ಅವರಿಗೆ ಪ್ರಕರಣದ ಆರೋಪಿಗಳಾದ ರಾಜರಾಮ ಶೆಟ್ಟಿ, ರಘುರಾಮ ಶೆಟ್ಟಿ, ಶ್ರೀಧರ ಶೆಟ್ಟಿ ಮಂಗನಸಾಲು, ಬಿ. ಪ್ರಕಾಶ್ಚಂದ್ರ ಶೆಟ್ಟಿ ಇವರೊಂದಿಗೆ ಸಿದ್ದಾಪುರ ಗ್ರಾಮದಲ್ಲಿ ಜಾಗದ ವಿಚಾರದಲ್ಲಿ ತಕರಾರು ಇದ್ದು, ಈ ಜಾಗದ ತಕರಾರು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುತ್ತದೆ, ಅಲ್ಲದೆ ನ್ಯಾಯಾಲಯವು ಕುಂದಾಪುರ ತಾಲೂಕು ತಹಶೀಲ್ದಾರರಿಗೆ ತಕರಾರು ಇರುವ ಜಾಗವನ್ನು ಸೆ.21 ರಂದು ಸರ್ವೇ ಮಾಡಿ ವರದಿ ನೀಡುವಂತೆ ಆದೇಶ ಮಾಡಿದೆ. ಈ ಜಾಗದ ತಕರಾರಿನ ಬಗ್ಗೆ ಸುಧರ್ಶನ್ ಶೆಟ್ಟಿ ರವರು ಹೆಚ್ಚಾಗಿ ಓಡಾಡುತ್ತಿದ್ದರು. ಇದರಿಂದ ತಮ್ಮಗೆ ತೊಂದರೆ ಆಗಬಹುದು ಎಂದು ಆರೋಪಿಗಳು, ಸೆ.18 ರಂದು ಸುದರ್ಶನ್ ಶೆಟ್ಟಿ ಅವರು ತಮ್ಮ ಸ್ಕೂಟಿಯಲ್ಲಿ ಬಾಳೆಬೇರು ಎಂಬಲ್ಲಿ ಮನೆಯ ಸಮೀಪ ನಿಲ್ಲಿಸಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಬೈಂದೂರು ಸೇನೇಶ್ವರ ದೇವಾಲಯದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಮಂಗಳವಾರ ಸುಮಾರು 10 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದರು. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬೈಂದೂರು ಅರಣ್ಯ ಸಿಬ್ಬಂದಿಗಳು ಹಾವನ್ನು ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಡಲು ಕೊಂಡೊಯ್ದಿದ್ದಾರೆ. ಸ್ಥಳೀಯರು ಹಾವನ್ನು ಸೆರೆಹಿಡಿಯುವಲ್ಲಿ ಸಹಕರಿಸಿದ್ದಾರೆ.
ಇಡೀ ರಾತ್ರಿ ಆರಾಮವಾಗಿ ಮಲಗಿ ನಿದ್ರೆ ಮಾಡಿ ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಸರ್ವೆಸಾಮಾನ್ಯ ಆದರೆ ನಿದ್ರೆಯ ಸಮಯದಲ್ಲಿ ಇದು ಅರಿವಿಗೆ ಬಂದಿರುವುದಿಲ್ಲ. ನಿದ್ರೆಯಲ್ಲಿ ನಮಗೆ ಬೇಕಾದ ಹಾಗೆ ಸರಿಯಾಗಿ ದಿಂಬಿನ ಮೇಲೆ ತಲೆ ಇಟ್ಟುಕೊಳ್ಳದೆ ಹೇಗೆಂದರೆ ಹಾಗೆ ಮಲಗಿರುತ್ತೇವೆ. ಇದರಿಂದ ಬೆಳಗ್ಗೆ ಎದ್ದ ಯಾಕೋ ಕುತ್ತಿಗೆ ಹಿಡಿದುಕೊಂಡಿದೆ ಅಥವಾ ಕುತ್ತಿಗೆ ನೋವು ಬಂದಿದೆ ಎನಿಸುತ್ತದೆ. ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ನೋವು ಎನಿಸಿದರೆ ಆ ಸಮಯದಲ್ಲಿ ಮಾತ್ರೆ ಅಥವಾ ಔಷಧಿ ತೆಗೆದುಕೊಂಡು ಇದನ್ನು ಕಡಿಮೆ. ಮಾಡಿಕೊಳ್ಳಬಹುದು. ಆದರೆ ಇದರಿಂದ ಸೈಡ್ ಎಫೆಕ್ಟ್ ಸಹ ಹೆಚ್ಚಾಗುತ್ತದೆ. ಅದರ ಬದಲಾಗಿ ಮನೆಯಲ್ಲಿ ಸುಲಭವಾಗಿ ಬಳಸುವ ಮನೆ ಮದ್ದುಗಳ ಬಗ್ಗೆ ತಿಳಿಯೋಣ ಕುತ್ತಿಗೆ ನೋವಿಗೆ ಆರೈಕೆ ಬಹಳ ಮುಖ್ಯ:ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ಹಿಡಿದುಕೊಂಡಿದ್ದರೆ, ಯಾವುದೇ ಕಾರಣಕ್ಕೂ ವೇಗವಾಗಿ ಕುತ್ತಿಗೆಯನ್ನು ಅತ್ತಿತ್ತ ಆಡಿಸಲು ಹೋಗಬೇಡಿ. ಕುತ್ತಿಗೆಯನ್ನು ಹೇಗೆ ಇಟ್ಟುಕೊಂಡರೆ ನೋವು ಕಡಿಮೆ ಕಾಣುತ್ತದೆ ಅದೇ ರೀತಿ ಇಟ್ಟುಕೊಂಡಿರಿ. ಎದ್ದ ತಕ್ಷಣ ಕುತ್ತಿಗೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳು ಮನೆಯ ಸಂಪತ್ತು. ಮಗುವಿನ ಆಗು ಹೋಗುಗಳನ್ನು ಪೋಷಕರು ಅರಿತುಕೊಳ್ಳಬೇಕು. ಪರಸ್ಪರ ಪ್ರೀತಿ ವಿಶ್ವಾಸ ಅವರಲ್ಲಿ ಬೆಳೆಸಬೇಕು ಎಂದು ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶಕ ಹಾಗೂ ಆಪ್ತ ಸಮಾಲೋಚರಾದ ಲೆಸ್ಲಿ ಆರೋಜಾರವರು ಹೇಳಿದರು. ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ರಕ್ಷಕ-ಶಿಕ್ಷಕ ಸಭೆಯಲ್ಲಿ ಅವರು ವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ದೊಡ್ಡದು. ಯೌವನ ಕಾಲಿಡುತ್ತಿರುವಾಗ ಮಕ್ಕಳ ಕಡೆ ತಮ್ಮ ಗಮನ ಅವಶ್ಯ. ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಗಳ ಸಂಚಾಲಕರು, ಸ್ಥಳೀಯ ಚರ್ಚಿನ ಧರ್ಮಗುರುಗಳಾದ ಅ| ವಂ| ಫಾದರ್ ಸ್ಟ್ಯಾನಿ ತಾವರೋ ಅವರು ಮಾತನಾಡಿ ಪೋಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಅವರ ಆಹಾರಕ್ರಮದ ಕಡೆ ತಮ್ಮ ಗಮನವಿರಲಿ. ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚು ತಯಾರಿ ಅಗತ್ಯ. ನಮ್ಮ ವಿದ್ಯಾ ಸಂಸ್ಥೆಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದ ಅನ್ವಯ ಆಗುವಂತೆ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಿ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆದೇಶಿಸಿದೆ. ಈ ಪರಿಷ್ಕೃತ ದರದಂತೆ 1.5ಕಿ.ಮೀ.ವರೆಗೆ ಕನಿಷ್ಠ ದರವನ್ನು 40 ರೂ.ಗೆ ಏರಿಸಲಾಗಿದೆ. ನಂತರದ ಪ್ರತಿ ಕಿ.ಮೀ.ಗೆ 20ರೂ. ದರ ನಿಗದಿ ಪಡಿಸಲಾಗಿದ್ದು ಅಟೋರಿಕ್ಷಾ ಚಾಲಕ, ಮಾಲಕರಿಗೂ ಪ್ರಮುಖ ಸೂಚನೆಯನ್ನು ನೀಡಲಾಗಿದೆ. ಜಿಲ್ಲೆಯ ಎಲ್ಲಾ ಅಟೋರಿಕ್ಷಾ ಚಾಲಕ, ಮಾಲಕರು ತಮ್ಮ ಅಟೋರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫ್ಲಾಗ್ ಮೀಟರ್ ಕಡ್ಡಾಯವಾಗಿ ಅಳವಡಿಸಿಕೊಂಡು ಪರಿಷ್ಕೃತ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸೆ.31ರೊಳಗೆ ಕಡ್ಡಾಯವಾಗಿ ರಿಕ್ಯಾಲೀಬರೇಷನ್ ಹಾಗೂ ಸೀಲ್ ಮಾಡಿಸಿಕೊಳ್ಳುವಂತೆ, ತಪ್ಪಿದರೆ ಕಾನೂನು ಕ್ರಮ ಎದುರಿಸುವಂತೆ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ರವಿಶಂಕರ್ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನಾಗೂರಿನಲ್ಲಿ ಯಕ್ಷಗಾನ ತಾಳಮದ್ದಲೆ ಸಪ್ತಾಹ ಉದ್ಘಾಟಿಸಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಕ್ಷಗಾನ, ತಾಳಮದ್ದಲೆಯಂತಹ ಹತ್ತಾರು ಕಲಾ ಪ್ರಾಕಾರಗಳು ಸಾಂಸ್ಕೃತಿಕ ತಳಹದಿಯಲ್ಲಿ ಬೆಳೆದು ಬಂದಿದೆ. ಕಾಲದ ಆಘಾತಗಳನ್ನು ತಡೆದು ನಿಲ್ಲುವ ಶಕ್ತಿ ಸತ್ವಭರಿತ ಕಲೆಯಾದ ಯಕ್ಷಗಾನಕ್ಕಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಪ್ರಸ್ತುತಿಯಲ್ಲಿ ಕಿರಿಮಂಜೇಶ್ವರ-ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯ್ಕರ ಸ್ಮರಣ ವೇದಿಕೆಯಲ್ಲಿ ನಡೆದ ೮ನೇ ವರ್ಷದ ಯಕ್ಷಗಾನ ತಾಳಮದ್ದಲೆ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಹಿಂದಿನ ಪರಂಪರೆಯ ಪ್ರದರ್ಶನಗಳಿಗೆ ಹೋಲಿಸಿದಾಗ ಈಗಿನವು ಅಂತ:ಸತ್ವ ಕಳೆದುಕೊಂಡಿವೆ ಎಂಬ ಟೀಕೆ ಇದೆ. ಯಕ್ಷಗಾನ ತಾಳಮದ್ದಲೆ ಪುರಾಣಗಳನ್ನು ಪ್ರತಿಪಾದಿಸುವ ತತ್ವಾದರ್ಶಗಳನ್ನು ತೆರೆದಿಡುತ್ತದೆ. ಪುರಾಣಗಳ ಮರು ಅವಲೋಕನ ಮತ್ತು ಮರುಸೃಷ್ಟಿಯ ಮೂಲಕ ಅವುಗಳಲ್ಲಿ ಸಮಕಾಲೀನ ಸನ್ನಿವೇಶಗಳಿಗೆ ಮತ್ತು ಬದುಕಿಗೆ ಅನ್ವಯವಾಗುವ ವಿಚಾರಗಳನ್ನು ಹೊರಗೆಡವಲಾಗುತ್ತದೆ. ಆದುದರಿಂದ ಅದು ನಿಜ ಅರ್ಥದಲ್ಲಿ ಒಂದು ಜ್ಞಾನಯಜ್ಞವಾಗಿದೆ ಎಂದರು. ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಿದೆ. ಸಂಘದ ಅಧ್ಯಕ್ಷರಾದ ಜಾನ್ಸನ್ ಡಿ’ಅಲ್ಮೇಡಾ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 2022ರ ಆಗಸ್ಟ್ ಅಂತ್ಯಕ್ಕೆ ಒಟ್ಟು ರೂ.130 ಕೋಟಿ ಠೇವಣಿ ಹಾಗೂ ರೂ.106 ಕೋಟಿ ಸಾಲ ಹೊಂದಿದೆ. ಒಟ್ಟು ರೂಪಾಯಿ 500 ಕೋಟಿ ವ್ಯವಹಾರ ಮಾಡಲಾಗಿದ್ದು, ರೂ. 2.11 ಕೋಟಿ ನಿವ್ವಳ ಲಾಭವನ್ನು ಗಳಿಸಿದೆ. ಸಂಘದ ಸದಸ್ಯರಿಗೆ ಶೇ. 20% ಡಿವಿಡೆಂಡ್ ಘೋಷಿಸಲಾಗುತ್ತಿದೆ ಎಂದರು. ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊಸೈಟಿಯನ್ನು ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಿಗೆ ವಿಸ್ತರಿಸಲು ಹಾಗೂ ಬಾಕಿ ಇರುವ ಶಾಖೆಗಳಿಗೆ ಸ್ವಂತ ಕಟ್ಟಡ, ಗ್ರಾಹಕರ ಅನುಕೂಲಕ್ಕಾಗಿ ಹೊಸ ಶಾಖೆ, ಸಂಘದ ಮುಂದಿನ ಭವಿಷ್ಯಕ್ಕಾಗಿ ಕುಂದಾಪುರದ ಆಸುಪಾಸಿನಲ್ಲಿ ಒಂದು ಸ್ವಂತ ಜಾಗ ಖರೀದಿ, ಸಂಘದ ಪ್ರಧಾನ ಕಛೇರಿಯ ಮೂರನೇ ಅಂತಸ್ತಿನಲ್ಲಿ ಸಭಾಂಗಣ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶಾಲೆಬಾಗಿಲು ಮಾತ್ರಶ್ರೀ ಸಭಾಭವನದಲ್ಲಿ 18ನೇ ಜೇಸಿ ಸಪ್ತಾಹ ‘ಸಮ್ಮಿಲನ-2022’ ಭಾನುವಾರ ಉದ್ಘಾಟನೆಗೊಂಡಿತು. ಶಾಸಕರಾದ ಬಿ.ಎಮ್.ಸುಕುಮಾರ್ ಶೆಟ್ಟಿ ಅವರು ಸಪ್ತಾಹವನ್ನು ಉದ್ಘಾಟಿಸಿ ಶುಭಹಾರೈಸಿದರು. ಜೆಸಿಐ ಉಪ್ಪುಂದದ ಅಧ್ಯಕ್ಷರಾದ ನಾಗರಾಜ್ ಪೂಜಾರಿ ಉಬ್ಜೇರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭದಲ್ಲಿ ಬೈಂದೂರು ಬಂಟರ ಸಂಘದ ಅಧ್ಯಕ್ಷರಾದ ನಾಕಟ್ಟೆ ಜಗನ್ನಾಥ ಶೆಟ್ಟಿ, ನಿವೃತ್ತ ಶಿಕ್ಷಕರಾದ ಶ್ರೀನಿವಾಸ ಪೂಜಾರಿ ಉಬ್ಜೇರಿ, ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ, ಜಿಲ್ಲಾ ರೋಟರಿ ಝೋನಲ್ ಲೆಫ್ಟಿನೆಂಟ್ ಡಾ. ಪ್ರವೀಣ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಜಗನ್ನಾಥ. ಎಂ., ಬೈಂದೂರು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿಯಾದ ಅರುಣ್ ಕುಮಾರ್ ಶಿರೂರು, ವಲಯ 15ರ ಸೀನಿಯರ್ ಮೆಂಬರ್ ಅಷೋಶಿಯೇಷನ್ ಉಪಾಧ್ಯಕ್ಷ ಯು. ಪ್ರಕಾಶ್ ಭಟ್, ಸಪ್ತಾಹ ಸಭಾಪತಿ ಜೆಸಿ ಪುರಂದರ್ ಖಾರ್ವಿ, ನಿಕಟ ಪೂರ್ವಾಧ್ಯಕ್ಷರಾದ ಜೆಸಿ ಪುರುಷೋತ್ತಮದಾಸ್, ಮಂಗೇಶ ಶ್ಯಾನುಭಾಗ್, ಸಪ್ತಾಹ ಖಜಾಂಜಿ ಪ್ತದೀಪ್ ಕುಮಾರ್ ಶೆಟ್ಟಿ, ಜೇಸಿರೇಟ್ ಅಧ್ಯಕ್ಷೆ ಸುಪರ್ಣ ಯೋಜನಾಧಿಕಾರಿಗಳಾದ ಗಣೇಶ್ ಗಾಣಿಗ,…
