ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 03, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ 6000 ರೂ. ಗೌರವಧನದ ನೆಲೆಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತ (ಯು.ಆರ್.ಡಬ್ಲೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 6,000 ರೂ. ಗೌರವಧನದ ನೆಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲೂ) ನೇಮಕಾತಿಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು, ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಭೆ/ ಪಟ್ಟಣ ಪಂಚಾಯತ್/ ಗ್ರಾಮ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉದ್ಯೋಗ ಮತ್ತು ಇತರ ಕ್ಷೇತ್ರಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಕಿರುಕುಳಗಳ ಬಗ್ಗೆ ಜಾಗೃತರಾಗುತ್ತಾ ತಮ್ಮ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು, ಹದಿ-ಹರೆಯದ ಯುವ ಜನಾಂಗ ಲೈಂಗಿಕತೆ ಮತ್ತು ತಮ್ಮ ವೇಷ-ಭೂಷಣ, ಭಾಷೆಗಳ ಕುರಿತು ಜಾಗೃತರಾಗಬೇಕು. ಪದವಿ ವ್ಯಾಸಂಗದ ಸಂದರ್ಭದಲ್ಲೇ ಈ ಕುರಿತು ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ಉಡುಪಿ ಡಾ. ಎ. ವಿ. ಬಾಳಿಗಾ ಸಮೂಹ ಸಂಸ್ಥೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಹೇಳಿದರು. ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೈಂಗಿಕ ದೌರ್ಜನ್ಯ ವಿರೋಧಿ ಘಟಕದ ಆಶ್ರಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ವಿರೋಧಿ ಜಾಗೃತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಲೈಂಗಿಕ ದೌರ್ಜನ್ಯ ವಿರೋಧಿ ಘಟಕದ ಸಂಯೋಜಕಿ ಜ್ಯೋತಿ ಮೊಗವೀರ ಸ್ವಾಗತಿಸಿದರು. ರಸಾಯನ ಶಾಸ್ತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಪಿಜಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನದ ಅಂಗವಾಗಿ ನಡೆದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು. ಮುಖ್ಯ ಅತಿಥಿಯಾಗಿ ಖೋ ಖೋ ಆಟಗಾರ ಮಂಜುನಾಥ್ ಮಾತನಾಡಿ, ಸದಾ ಸಕಾರಾತ್ಮಕ ಚಿಂತನೆಯಿಂದ ಯುವಕರನ್ನು ಪ್ರೋತ್ಸಾಹಿಸಬೇಕು. ಹಾಗೆಯೇ, ಮಾನಸಿಕ ಹಾಗೂ ದೈಹಿಕ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶಿಕ್ಷಣದ ಮೂಲಕ ಮಾನವೀಯತೆ ವಿಕಸನವಾಗುವುದಲ್ಲದೆ, ಧರ್ಮ ಮತ್ತು ವಿಜ್ಞಾನವನ್ನು ಶಿಕ್ಷಣದಲ್ಲಿ ಅಳವಡಿಸಿದಾಗ ಲೌಕಿಕ ಸಂಪತ್ತು ವೃದ್ಧಿಗೊಳ್ಳುತ್ತದೆ. ವಿದ್ಯೆಯನ್ನು ಕಲಿತವರು ಬಡವರನ್ನು ನಿರ್ಲಕ್ಷ್ಯ ಮಾಡಿದರೆ ಅವರು ದೇಶ ದ್ರೋಹಿಗಳಿಗೆ ಸಮಾನ. ವ್ಯವಸಾಯವನ್ನು ಉದ್ಯೋಗವನ್ನಾಗಿಸಿ, ಕೃಷಿ ಕಾರ್ಮಿಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರು. ಕಾರ್ಯಾಗಾರದ ಮತ್ತೋರ್ವ ಅತಿಥಿಯಾಗಿ ಭಾಗವಹಿಸಿದ ಕ್ರಿಕೆಟ್‌ಪಟು ವಿಷ್ಣುಚೈತನ್ಯ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಜಾಗೃತಿ ಮೂಡಿಸಿ, ಯುವಜನತೆಯಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಚಾರಿತ್ರ್ಯ ನಿರ್ಮಾಣದ ಕಡೆಗೆ ಗಮನ ಹರಿಸುವಂತೆ ಮಾಡುವುದು ರಾಷ್ಟೀಯ ಯುವ ದಿನಾಚರಣೆಯ ಮುಖ್ಯ ಉದ್ದೇಶ. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಜನಪದ ಕ್ರೀಡೆ ಕಂಬಳದಲ್ಲಿ ಕೋಣಗಳನ್ನು ಕೇವಲ 9.15 ಸೆಂಕೆಡುಗಳಲ್ಲಿ 100 ಮೀಟರ್ ಓಡಿಸಿರುವ ಬೈಂದೂರು ತಾಲೂಕಿನ ನಾಯ್ಕನಕಟ್ಟೆಯ ಯುವಕ ದಾಖಲೆ ನಿರ್ಮಿಸಿದ್ದಾರೆ. ಐಕಳ ಕಾಂತಾಂಬಾರೆ-ಬೂದಾಬಾರೆಯಲ್ಲಿ ನಡೆದ ಕಂಬಳದಲ್ಲಿ ವಿಶ್ವನಾಥ ದೇವಾಡಿಗ ಈ ದಾಖಲೆ ಮಾಡಿದ್ದಾರೆ. ಈ ಹಿಂದೆ ಸುರೇಶ್ ಶೆಟ್ಟಿ 100 ಮೀಟರ್ ದೂರವನ್ನು 9.37 ಸೆಕೆಂಡ್, ಶ್ರೀನಿವಾಸ ಗೌಡ 9.55 ಸೆಕೆಂಡ್, ಆನಂದ 9.57 ಸೆಂಕೆಡುಗಳಲ್ಲಿ ಕ್ರಮಿಸಿ ದಾಖಲೆ ಮಾಡಿದ್ದರು. ಶನಿವಾರ ನಡೆದ ಕಂಬಳದಲ್ಲಿ ಈ ಹೊಸ ದಾಖಲೆ ನಿರ್ಮಾಣವಾಗಿದೆ. ಕಂಬಳದ ಚಾನ್ಸ್ ಓಟದಲ್ಲಿ ಬೋಳದಗುತ್ತು ಸತೀಶ್ ಶೆಟ್ಟಿ ಅವರ ಬೊಳ್ಳ ಮತ್ತು ದೋನಿ ಕೋಣಗಳನ್ನು ವಿಶ್ವನಾಥ್ ಅವರು ಓಡಿಸಿದ್ದು 125 ಮೀ. ದೂರವನ್ನು 11.44 ಸೆಕೆಂಡುಗಳಲ್ಲಿ ಓಡಿದ್ದಾರೆ. ಈ ಸಮಯವನ್ನು 100 ಮೀ.ಗೆ ಹೋಲಿಕೆ ಮಾಡಿದರೆ 9.15 ಸೆಕೆಂಡ್ ಆಗಲಿದೆ. ಈ ಸುತ್ತು ಆಟೋ ಸ್ಟಾರ್ಟ್ ಮತ್ತು ಸೆನ್ಸಾರ್ ಮೂಲಕವೇ ನಿರ್ಧರಿಸಲಾಗಿದ್ದು, ಇದರಿಂದ ಹೊಸ ದಾಖಲೆದೆ ಸೇರ್ಪಡೆಯಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಗಳಾದ ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲೆ, ವಿ.ಕೆ. ಆರ್ ಹೈಸ್ಕೂಲ್, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಮತ್ತು ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 25 ವರ್ಷಗಳ ಕಾಲ ಕಛೇರಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿ ಹೊಂದಿದ ಅಣ್ಣಪ್ಪ ಇವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಛೇರಿ ಮೇಲ್ವಿಚಾರಕರಾದ ಗಾಯತ್ರಿ ಶೇಟ್, ಸಿಬ್ಬಂದಿ ಸಂಘದ ಕಾರ್ಯದರ್ಶಿ ಸತೀಶ್ ಕಾಂಚನ್ ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕರುಗಳಾದ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕು. ಧನಶ್ರೀ ಮಾಧವ ಕಿಣಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದಿನ ದಿನದಲ್ಲಿ ಯುವಕರಿಂದ ಹಾದಿ ತಪ್ಪುವ ಕೆಲಸಗಳಾಗುತ್ತಿದೆ. ಇತಂಹ ಕಾಲಘಟ್ಟದಲ್ಲಿ ಸಾರ್ವಜನಿಕರ ಸೇವೆಗಾಗಿ ಕರಾವಳಿ ಫ್ರೆಂಡ್ಸ್ ಎಂಬ ಯುವ ಸಂಘಟನೆ ಸಮಾಜಕ್ಕೆ ಮಾದರಿ ಕೆಲಸಗಳನ್ನು ನೀಡುವ ಮೂಲಕ ಬೀಚ್ ಗಾರ್ಡನ್ ಕೊಡುಗೆ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಈ ಸಂಘಟನೆ ನಮ್ಮ ಭಾಗದ ದೊಡ್ಡ ಆಸ್ತಿ ಎಂದು ಬೀಜಾಡಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಅವರು ಬೀಜಾಡಿ ಕರಾವಳಿ ಫ್ರೆಂಡ್ಸ್ ಇವರ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಅಂಗವಾಗಿ ದಾನಿಗಳ ಸಹಕಾರದಿಂದ ಕೊಡುಗೆಯಾಗಿ ನೀಡಿದ ಬೀಚ್ ಗಾರ್ಡನ್ ಉದ್ಘಾಟಿಸಿ ಮಾತನಾಡಿದರು. ಉದ್ಯಮಿ ಸುರೇಶ್ ಬೆಟ್ಟಿನ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಲಯ ಅರಣ್ಯಧಿಕಾರಿ ಲೋಹಿತ್ ಸಸಿನೆಟ್ಟು ವನಪಾರ್ಕ್‌ಗೆ ಚಾಲನೆ ನೀಡಿದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಳದ ಆಡಳಿತ ಮಂಡಳಿ ಮಾಜಿ ಸದಸ್ಯ ಅಶೋಕ್ ಪೂಜಾರಿ ವಡ್ಡಿನಮನೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯ ಶೇಖರ ಚಾತ್ರಬೆಟ್ಟು, ಕುಂದಾಪುರ ಸನ್‌ರೈಸ್ ರೋಟರಿ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊಸ ದೆಹಲಿಯ ಭಾರತೀಯರ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣರಾಗಿದ್ದಾರೆ. ಕುಂದಾಪುರದ ಯಜ್ಞ ಪಿ. ಮಯ್ಯ ಅವರಲ್ಲಿ ಆರ್ಟಿಕಲ್ ಶಿಪ್ ತರಬೇತಿ ಪಡೆದಿರುವ ಇವರು ಕುಂದಾಪುರದ ರಮೇಶ್ ನಾವಡ ಮತ್ತು ಜಯಂತಿ ನಾವಡ ಇವರ ಪುತ್ರಿಯಾಗಿರುತ್ತಾರೆ .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೇಟೆಯ ಮುಖ್ಯ ರಸ್ತೆಗೆ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಮಿತಿ ವತಿಯಿಂದ ಕುಂದಾಪುರ ಪುರಸಭಾ ಅದ್ಯಕ್ಷರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ. ಕುಂದಾಪುರದ ಮಿನಿ ವಿಧಾನ ಸೌಧದ ಮುಂಬಾಗದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆನ್ನುವ ಬೇಡಿಕೆಯನ್ನು ಹಲವಾರು ಬಾರಿ ಈ ಹಿಂದೆ ಸಲ್ಲಿಸಲಾಗಿತ್ತು ಇದೀಗ ಕುಂದಾಪುರ ಪೇಟೆಯ ಮುಖ್ಯ ರಸ್ತೆಗೆ ಗಣ್ಯರ ಹೆಸರಿಡುವ ಪ್ರಸ್ತಾವನೆ ಪುರಸಭೆಯ ಮುಂದಿದ್ದು ತಾಲೂಕಿನಲ್ಲಿರುವ ಅಂಬೇಡ್ಕರ್ ಭವನವೊಂದು ಬಿಟ್ಟರೆ ಬೇರೆ ಯಾವುದೇ ಒಂದು ಸರಕಾರಿ ಸಂಸ್ಥೆಗಾಗಲಿ ರಸ್ತೆಗಾಗಲಿ ಈತನಕ ಅಂಬೇಡ್ಕರ್ ಹೆಸರಿಟ್ಟಿರುವ ಉದಾಹರಣೆಗಳೇ ಇಲ್ಲ ಆದ್ದರಿಂದ ಕುಂದಾಪುರ ಪೇಟೆಯ ಮುಖ್ಯ ರಸ್ತೆಗೆ ಸಂವಿಧಾನ ಶಿಲ್ಪಿ ಯ ಹೆಸರಿಡುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಆಗ್ರಹಿಸಲಾಗಿದೆ ಅಂಬೇಡ್ಕರ್ ಹೆಸರನ್ನು ಕಡೆಗಣಿಸಿ ಬೇರಾವುದೇ ಹೆಸರಿಡಲು ಮುಂದಾದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ– 66ರಲ್ಲಿನ ಚತುಷ್ಪಥ ಕಾಮಗಾರಿಯ ಸ್ಥಿತಿ- ಗತಿಯನ್ನು ನೋಡಿದರೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆ ಕಂಪನಿ ಸರ್ಕಾರಗಳಿಗಿಂತಲೂ ಬಲವಾಗಿ ಬೆಳೆದಿದೆಯೇ ಎನ್ನುವ ಭಾವನೆ ಬಲವಾಗುತ್ತಿದೆ. ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಹಾಗೂ ದೊಡ್ಡ ವೈಫಲ್ಯದಿಂದಾಗಿ ಇಲ್ಲಿನ ಜನ ನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರಿ ಸರ್ಕಲ್‍ನಿಂದ ವಿನಾಯಕವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಬಸ್ರೂರು ಮೂರುಕೈ ಹಾಗೂ ಟಿ.ಟಿ ರಸ್ತೆಯ ಸಮೀಪ ನಿರ್ಮಾಣವಾಗಿರುವ ಅಂಡರ್ಪಾಸ್ ತೆರವು ಹಾಗೂ ಕೆಇಬಿ ಸಮೀಪದ ಬೊಬ್ಬರ್ಯನ ಕಟ್ಟೆ ಬಳಿ ಪಾದಚಾರಿ ಸಂಚಾರಕ್ಕಾಗಿ ಜೀಬ್ರಾ ಕ್ರಾಸಿಂಗ್ ನಿರ್ಮಾಣಕ್ಕೆ ಒತ್ತಾಯಿಸಿ ತಾಲ್ಲೂಕು ಡಿವೈಎಫ್ಐ ನೇತೃತ್ವದಲ್ಲಿ, ತಾಲ್ಲೂಕು ಆಟೊ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು ) ಹಾಗೂ ವಿವಿಧ ಸಂಘಟನೆಳು ಜತೆಯಾಗಿ ನಡೆಸಿದ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹದಲ್ಲಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಮನೋವಿಜ್ಞಾನ ವಿಭಾಗದ ವತಿಯಿಂದ ‘ಪರ್ಸನಲ್ ಎಫೆಕ್ಟಿವ್‌ನೆಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೈನ್ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ. ಶೈಲಜಾ ಶಾಸ್ತ್ರೀ ಮಾತನಾಡಿ, ನಾವು ಇನ್ನೊಬ್ಬರ ಮಾತಿಗೆ ಅವಲಂಬಿತರಾಗದೆ, ಸ್ವ ಆಲೋಚನೆಯಿಂದ ಕೆಲಸ ಮಾಡಿದಾಗ ಮಾತ್ರ ಸ್ವಾವಲಂಬಿಯಾಗಿ ಬೆಳೆಯಲು ಸಾಧ್ಯ ಎಂದರು. ಸ್ಟಾಂಡಿಂಗ್ ಟವರ್, ಮಾಸ್ಕ್ ಮೇಕಿಂಗ್, ಫ್ರೇಮಿಂಗ್ ಸ್ಕ್ವಾರ್, ಲಾಫರ್ ತೆರಪಿ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ‘ಪರ್ಸನಲ್ ಎಫೆಕ್ಟಿವ್‌ನೆಸ್’ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ನಾವು ಒಂದು ವಿಷಯದ ಬಗ್ಗೆ ಆಳವಾದ ಯೋಚನೆ, ಭರವಸೆ, ವಿಶ್ವಾಸವನ್ನು ಹೊಂದಿರಬೇಕು. ಮಾತ್ರವಲ್ಲದೇ ಒಳ್ಳೆಯ ಆಲೋಚನೆಗಳನ್ನು ಬೆಳೆಸಿಕೊಂಡು ಆ ಆಲೋಚನೆಗಳನ್ನು ಇನ್ನೊಬ್ಬರಿಗೆ ಹಂಚಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಆಡ್ರಿ ಪಿಂಟೊ, ಉಪನ್ಯಾಸಕರಾದ ಮೇಘಾ ಮನೋಜ್,…
