ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿಸುವಂತೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರ ಪರ ಟ್ವೀಟರನಲ್ಲಿ ಬಿಜೆಪಿ ಕಾರ್ಯಕರ್ತರು ಧ್ವನಿಯೆತ್ತಿದ್ದು, ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೇಟ್ ನೀಡಿ ಎಂಬ ಆಗ್ರಹವನ್ನು ಪ್ರಕಟಿಸಿದ್ದಾರೆ. ಇದು ಜ.5ರಂದು ಟ್ವಿಟರಿನಲ್ಲಿ ಟ್ರೆಂಡ್ ಆಗಿತ್ತು. ಜಯಪ್ರಕಾಶ್ ಹೆಗ್ಡೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಟಿಕೇಟ್ ನೀಡಬೇಕು ಎಂಬ ಬೇಡಿಕೆಯನ್ನು ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ನಾಯಕರಿಗೆ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ. ಜೆಪಿ ಹೆಗ್ಡೆಯವರಿಗೆ ಟಿಕೇಟು ನೀಡಬೇಕು ಮೋದಿಜಿ ಆಡಳಿತದಲ್ಲಿ ಜೆಪಿ ಹೆಗ್ಡೆಯವರಂತಹ ಸಮರ್ಥ ದಕ್ಷ ಆಡಳಿತ ಚತುರರು ಸಂಸದರಾಗಬೇಕು ಹಾಗಾದಾಗ ಮಾತ್ರ ಸಮಗ್ರ ಕ್ಷೇತ್ರದ ಅಭಿವೃದ್ದಿ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆಯವರು ಸಂಸದರಾಗಿ ಸಚಿವರಾಗಿ ಶಾಸಕರಾಗಿ ಹಿರಿಯ ರಾಜಕೀಯ ಅನುಭವಿಗಳು ಹಾಗೂ ಕ್ಷೇತ್ರದ ಬಗ್ಗೆ ಸಮಗ್ರ ಪರಿಚಯ ಹೊಂದಿರುತ್ತಾರೆ, ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿರುವ ಅವರ ಆಡಳಿತವನ್ನು ಹಿಂದೊಮ್ಮೆ ಜನತೆ ನೋಡಿದ್ದಾರೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರು ಉದ್ಯೋಗ ನಿಮಿತ್ತ ಎಲ್ಲಿಗೇ ಹೋದರೂ ಹುಟ್ಟೂರನ್ನು ಮರೆಯಬಾರದು. ಅದರೊಂದಿಗೆ ಅಲ್ಲಿನ ಕೊರತೆಗಳನ್ನು ನೀಗಲು ಸಾಧ್ಯವಾದಷ್ಟು ನೆರವಾಗುವ ಮೂಲಕ ಅದರ ಋಣ ತೀರಿಸಬೇಕು ಎಂದು ಉಪ್ಪುಂದದ ಕುಂದ ಅಧ್ಯಯನ ಕೇಂದ್ರದ ಅಧ್ಯಕ್ಷ ಯು. ಚಂದ್ರಶೇಖರ ಹೊಳ್ಳ ಹೇಳಿದರು. ಶುಕ್ರವಾರ ಆರಂಭವಾದ ಕಿರಿಮಂಜೇಶ್ವರ ಶುಭದಾ ಶಾಲೆಗಳ ವಾರ್ಷಿಕೋತ್ಸವ ಮತ್ತು ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ನಡೆಸುವುದು ಸವಾಲಿನ ಕೆಲಸ. ಮುಂಬೈಯಲ್ಲಿ ಉದ್ಯಮಿಯಾಗಿರುವ ಎನ್. ಕೆ. ಬಿಲ್ಲವ-ಶುಭದಾ ಬಿಲ್ಲವ ದಂಪತಿ ಹುಟ್ಟೂರಿನಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ೨೫ ವರ್ಷಗಳ ಹಿಂದೆ ಸ್ಥಾಪಿಸಿದ ಶಾಲೆ ಈಗ ಸುಸಜ್ಜಿತವಾಗಿ ಬೆಳೆದು ಅವರ ಆಶಯವನ್ನು ಈಡೇರಿಸುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಪಠ್ಯ ಮತ್ತು ಸಹಪಠ್ಯ ವಿಷಯಗಳಲ್ಲಿ ವಿಶೇಷ ಸಾಧನೆ ಮಾಡುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಆಗಿರುವ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಲಿ’ ಎಂದು ಅವರು ಹಾರೈಸಿದರು. ಶುಭದಾ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷೆ ಶುಭದಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿಲ್ಲಾಡಳಿತ ಉಡುಪಿ, ನಾಡದೋಣಿ ಮೀನುಗಾರರ ಸಂಘಅಳ್ವೆಗದ್ದೆ, ಅಲ್ಪಸಂಖ್ಯಾತರ ನಾಡದೋಣಿ ಮೀನುಗಾರರ ಸಂಘ ಕಳಿಹಿತ್ಲು, ಬೆಸುಗೆ ಫೌಂಡೇಶನ್ ಬೈಂದೂರು, ಜೆ.ಸಿ.ಐ ಶಿರೂರು ಇದರ ಆಶ್ರಯದಲ್ಲಿ ಸಾಂಪ್ರದಾಯಿಕ ದೋಣಿಗಳ ಸ್ವರ್ಧೆ, ಬೀಚ್ ಉತ್ಸವ, ಮರ್ಗಿ ಸ್ಪರ್ಧೆ ಕಳಿಹಿತ್ಲು ಕಡಲ ಕಿನಾರೆಯಲ್ಲಿ ನಡೆಯಿತು. ಉದ್ಯಮಿ ಮಣೆಗಾರ್ ಜಿಪ್ರಿ ಸಾಹೇಬ್ ಹಾಗೂ ಗ್ರಾ.ಪಂ ಉಪಾಧ್ಯಕ್ಷ ನಾಗೇಶ್ ಅಳ್ವೆಗದ್ದೆ ಮರಳು ಶಿಲ್ಪ ಮತ್ತು ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಕಳಿಹಿತ್ಲು ಕಡಲ ಕಿನಾರೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ. ಪ್ರವಾಸಿಗರನ್ನು ಆಕರ್ಷಿಸುವ ಕಾರ್ಯಕ್ರಮಗಳು ನಡೆದಾಗ ಊರಿನ ಅಭಿವ್ರದ್ದಿ ಸಾಧ್ಯ ಎಂದರು. ಬೀಚ್ ಉತ್ಸವಕ್ಕೆ ಹರಿದು ಬಂದ ಜನಸಾಗರ: ಈ ಬಾರಿಯ ಕಳಿಹಿತ್ಲು ಬೀಚ್ ಉತ್ಸವಕ್ಕೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಜನರು ಆಗಮಿಸಿದ್ದರು. ೧೪ಕ್ಕೂ ಅಧಿಕ ಹಗ್ಗ ಜಗ್ಗಾಟ ತಂಡ, ಮಹಿಳೆಯರ ಹಗ್ಗ ಜಗ್ಗಾಟ ತಂಡ, ೧೭ಕ್ಕೂ ಅಧಿಕ ಮರ್ಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹುಟ್ಟು, ಬದುಕು ಹಾಗೂ ಸಾವಿನ ನಡುವಿನ ಜೀವನ ಆಟದಲ್ಲಿ ಜತೆಯಾಗಿದ್ದಷ್ಟು ಕಾಲ ಪರಸ್ಪರ ಸಹಕಾರದ ಮೂಲಕ ಪ್ರೀತಿಯ ಬೀಜವನ್ನು ಭಿತ್ತಿ ಪ್ರತಿಯೊಬ್ಬರ ಮೊಗದಲ್ಲೂ ನಗುವನ್ನು ಕಾಣುವುದರಲ್ಲಿ ಬದುಕಿನ ಸಾರ್ಥಕತೆ ಅಡಗಿದೆ ಎಂದು ಫಾ. ಜೋಸೆಫ್ ರೋಡ್ರಿಗಸ್ ಹೇಳಿದರು. ಶನಿವಾರ ದುರ್ಮಿ ಗದ್ದೆಹಿತ್ಲು ವಠಾರದಲ್ಲಿ ಜರುಗಿದ ತಿರಂಗ ಫ್ರೆಂಡ್ಸ್ ದುರ್ಮಿ ಪಡುವರಿ ಇದರ 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಧೈರ್ಯ, ಶಾಂತಿ ಹಾಗೂ ಸಂಮೃದ್ಧತೆಯನ್ನು ಸಾರುವ ಭಾರತದ ಧ್ವಜದ ಬಣ್ಣಗಳಂತೆ ತಿರಂಗ ಫ್ರೆಂಡ್ಸ್‌ನ ಯುವ ಪಡೆ ಏಕತೆಯನ್ನು ಸಾರುತ್ತಾ ಬಂದಿದೆ. ಈ ಭಾಗದಲ್ಲಿ ಭಿನ್ನ ಸಮುದಾಯದವರು ನೆಲೆಸಿದ್ದರೂ ಪರಸ್ಪರ ಒಬ್ಬರನ್ನೊಬ್ಬರು ಅರಿತು ಬಾಳುವ, ಧರ್ಮ ಸಂಪ್ರದಾಯವನ್ನು ಗೌರವಿಸುವ ಗುಣ ಹೊಂದಿದ್ದು, ಸಾಮರಸ್ಯದ ಬದುಕು ಕಂಡುಕೊಂಡಿದ್ದಾರೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಪತ್ತೆಗೆ ಜಿಲ್ಲಾ ಪೊಲೀಸ್ ಇಲಾಖೆ, ಕೋಸ್ಟಲ್ ಗಾರ್ಡ್ ಸಿಬ್ಬಂದಿ ನಡೆಸಿರುವ ಕಾರ್ಯಾಚರಣೆ ಮಾಹಿತಿಯನ್ನು ಗೃಹ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಂದ ಪಡೆದುಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವರು, ಕಾರ್ಯಾಚರಣೆಯ ಪ್ರತಿಯೊಂದು ಹಂತದ ಮಾಹಿತಿ ಪಡೆದರು. ಬಳಿಕ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರು, ಮೀನುಗಾರಿಕಾ ಮುಖಂಡರ ಜತೆ ಕಾರ್ಯಾಚರಣೆಯ ವಿವರವನ್ನು ತಿಳಿಸಿದರು. ಬೋಟ್ ನಾಪತ್ತೆಯಾದ ಬಳಿಕ ಡಿ.23ರಿಂದ ಪ್ರತಿದಿನ ಹೆಲಿಕಾಪ್ಟರ್ ಹಾಗೂ ಹಡಗುಗಳನ್ನು ಬಳಸಿಕೊಂಡು ಶೋಧ ನಡೆಸಲಾಗಿದೆ. ಕೋಸ್ಟಲ್ ಗಾರ್ಡ್ ಸಿಬ್ಬಂದಿ ತಂತ್ರಜ್ಞಾನದ ನೆರವಿನಿಂದ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೀನುಗಾರರ ಜೀವದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಂಟಿಯಾಗಿ ಶೋಧ ನಡೆಸುತ್ತಿದೆ ಎಂದರು. ಈ ಸಂದರ್ಭ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಮೀನುಗಾರರು ಆತಂಕದಲ್ಲಿದ್ದು, ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳ ನಡುವಿನ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿ ಅಧಿಕಾರ ಹಿಡಿಯಲು ಯಶಸ್ವಿಯಾಗಿದೆ. ಒಟ್ಟು 33 ಸ್ಥಾನಗಳ ಪೈಕಿ ಬಿಜೆಪಿ 23, ಕಾಂಗ್ರೆಸ್ 6 ಹಾಗೂ ಎಸ್‌ಡಿಪಿಐ 4 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ 19 ಕಾಂಗ್ರೆಸ್ 14 ಸ್ಥಾನ ಪಡೆದಿತ್ತು. ಕುಂದಾಪುರ ಮಿನಿ ವಿಧಾನಸೌಧದಲ್ಲಿ ಕುಂದಾಪುರ ತಹಶೀಲ್ದಾರರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ಸಸೂತ್ರವಾಗಿ ನಡೆಯಿತು. ವಿಜಯೋತ್ಸವದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ► ಪಂಚಾಯತ್ ಚುನಾವಣೆ: ಯಡ್ತರೆ ಕಾಂಗ್ರೆಸ್‌ಗೆ, ಬೈಂದೂರು ಬಿಜೆಪಿ ತೆಕ್ಕೆಗೆ – https://kundapraa.com/?p=30722 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ನಡುವಿನ ಜಿದ್ದಾ ಜಿದ್ದಿನ ಕಣವಾಗಿದ್ದ ಯಡ್ತರೆ ಹಾಗೂ ಬೈಂದೂರು ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಯಡ್ತರೆ ಪಂಚಾಯತ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ದೊರೆತಿದ್ದು ನಿರಾಯಸವಾಗಿ ಅಧಿಕಾರ ಹಿಡಿದರೆ, ಬೈಂದೂರು ಪಂಚಾಯತ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದು ಅಧಿಕಾರ ಹಿಡಿಯಲಿದ್ದಾರೆ. ಯಡ್ತರೆ ಪಂಚಾಯತ್‌ನ ಯಡ್ತರೆ ಗ್ರಾ.ಪಂನ 8 ಕ್ಷೇತ್ರಗಳ ಒಟ್ಟು 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 19 ಸ್ಥಾನಗಳನ್ನು ಪಡೆದು ವಿಜಯದ ನಗೆ ಬೀರಿದ್ದರೆ, ಬಿಜೆಪಿ 5, ಹಾಗೂ ಓರ್ವ ಪಕ್ಷೇತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹಿಂದಿನ ಅವಧಿಯಲ್ಲಿಯೂ ಕಾಂಗ್ರೆಸ್ 19, ಬಿಜೆಪಿ 6 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ಪಂಚಾಯತ್‌ನಲ್ಲಿ 21 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 17 ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 4…
ಕುಂದಾಪ್ರ ಡಾಟ್ ಕಾಂ’ ಸುದ್ದಿ ರೋಟರಿ ಜಿಲ್ಲಾ ಕಾನ್ಪರೆನ್ಸ್ ಕಮಿಟಿ ಹಾಗೂ ರೋಟರಿ ಜಿಲ್ಲೆ 3182 ಸಾರಥ್ಯದಲ್ಲಿ ಅಭಿಯಾನ ರೋಟರಿ ಜಿಲ್ಲಾ ಸಮ್ಮೇಳನ ಜನವರಿ 4, 5, ಹಾಗೂ 6ರಂದು ಕೋಟೇಶ್ವರದ ಯುವ ಮೆರೀಡಿಯನ್ ಕನ್ವೆನ್‌ಕ್ಷನ್ ಸೆಂಟರ್‌ನಲ್ಲಿ ಜರುಗಲಿದೆ ಎಂದು ರೋಟರಿ 3182 ಜಿಲ್ಲಾ ಗವರ್ನರ್ ಅಭಿನಂದನ್ ಎ. ಶೆಟ್ಟಿ ತಿಳಿಸಿದ್ದಾರೆ. ಅವರು ಕುಂದಾಪುರದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರೋಟರಿ ಸಂಸ್ಥೆಯ ಅಂತರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ಸೇರಿದಂತೆ ಸಾಮಾಜಿಕ ಬದ್ಧತೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರಸ್ತುತ ವರ್ಷದಲ್ಲಿ 3182ರೋಟರಿ ಜಿಲ್ಲೆಯಲ್ಲಿ ಮೇಕ್ ರೋಡ್ ಸೇಫ್ ಅಭಿಯಾನವನ್ನು ಹಮ್ಮಿಕೊಂಡು ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಸಾಗರ ಹಾಗೂ ತೀರ್ಥಹಳ್ಳಿಯಲ್ಲಿ ರೋಟರಿ ಬ್ಲಡ್ ಬ್ಯಾಂಕ್ ಸ್ಥಾಪನೆ, ಹ್ಯಾಪಿ ಸ್ಕೂಲ್ ಯೋಜನೆಯಡಿಯಲ್ಲಿ 60 ಶಾಲೆಗಳನ್ನು ದತ್ತು ಪಡೆದು ಈ ಲರ್ನಿಂಗ್ ಕಿಟ್, ವಾಶಿಂಗ್ ಬೇಸಿನ್ ಒದಗಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮವನ್ನು ಸ್ವಹಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ನಾವುಂದ ಗ್ರಾಮದ ಕುದ್ರುಕೋಡು ಎಂಬಲ್ಲಿನ ಹೆದ್ದಾರಿ ವಿಸ್ತರಣೆ ಗುತ್ತಿಗೆದಾರ ಸಂಸ್ಥೆ ಐಆರ್‌ಬಿಯ ಚಾಲಕ ರಹಿತ ಲಾರಿ ಚಲಿಸಿದ ಪರಿಣಾಮ ಮನೆಯ ಆವರಣ ಧ್ವಂಸವಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಇಲ್ಲಿ ಸಂಸ್ಥೆಯ ಬೃಹತ್ ಜಲ್ಲಿ-ಟಾರು ಮಿಶ್ರಣ ಘಟಕ ಇದೆ. ಒಂದು ಲಾರಿಯ ಚಾಲಕ ಎಂದಿನಂತೆ ಮಿಶ್ರಣ ತುಂಬಿಸಿಕೊಂಡು ಬಂದು ಲಾರಿಯನ್ನು ವೇಬ್ರಿಜ್ ಮೇಲೆ ನಿಲ್ಲಿಸಿ ಇಳಿದುಹೋಗಿದ್ದ. ಲಾರಿ ತಂತಾನೆ ಚಲಿಸಿ, ಅಡ್ಡ ಇರುವ ರಸ್ತೆ ದಾಟಿ ಮೂಕಾಂಬಿಕಾ ದೇವಾಡಿಗ ಎಂಬವರ ನಿವೇಶನದ ಕಲ್ಲಿನ ಆವರಣಕ್ಕೆ ಬಡಿದಿದೆ. ಅದರಿಂದಾಗಿ ಆವರಣ ಕುಸಿದು ಬಿದ್ದಿದೆ. ಈ ಅಪಘಾತ ನಡೆದ ಸ್ಥಳದ ಪಕ್ಕದಲ್ಲಿ ಒಂದು ಅಂಗಡಿ ಇದೆ. ಲಾರಿ ಚಲಿಸಿದ ವೇಳೆ ಅದರಲ್ಲಿ ಹತ್ತಾರು ಜನರಿದ್ದರು. ಅದಕ್ಕಿಂತ ಸ್ವಲ್ಪ ಸಮಯದ ಮೊದಲು ಶಾಲಾ ವಾಹನವೊಂದು ಆ ದಾರಿಯಾಗಿ ಹೋಗಿತ್ತು. ಲಾರಿ ಆ ವೇಳೆ ಚಲಿಸಿದ್ದರೆ ಅಥವಾ ಆವರಣದ ಬದಲು ಅಂಗಡಿಗೆ ನುಗ್ಗಿದ್ದರೆ ಭೀಕರ ಅಪಘಾತ ಸಂಭವಿಸುತ್ತಿತ್ತು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೆಲವು ಸಂಘಟನೆಗಳು ಹಿಂದುಳಿದ ಸಮುದಾಯದ ಯುವಕರ ದಿಕ್ಕು ತಪ್ಪಿಸಿ ತಮ್ಮ ಹೋರಾಟಗಳಲ್ಲಿ ಬಳಸಿಕೊಳ್ಳುತ್ತಿವೆ. ಮುಂದಾಗುವುದರ ಕುರಿತು ವಿವೇಚಿಸದೆ ಮುನ್ನುಗ್ಗುವ ಆ ಯುವಕರು ಬಂಧನ, ಜೈಲುವಾಸ ಅನುಭವಿಸಬೇಕಾಗುತ್ತದೆ. ಸಮುದಾಯ ಸಂಘಟನೆಗಳು ತಮ್ಮ ಯುವಕರನ್ನು ಎಚ್ಚರಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಮರವಂತೆಯ ಸಾಧನಾ ಮಂಟಪದಲ್ಲಿ ಡಿ.28ರಂದು ನಡೆದ ಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘದ ವಾರ್ಷಿಕ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು. ’ಸಮುದಾಯದ ದುರ್ಬಲ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಸಂಘಟನೆ ಆದ್ಯತೆ ನೀಡಬೇಕು. ಅಂತವರಿಗೆ ಆರ್ಥಿಕ ನೆರವು ನೀಡಬೇಕು. ಬಿಲ್ಲವರ ಮಾತೃ ಸಂಘ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಅದರ ಮತ್ತು ಸ್ಥಳೀಯ ದಾನಿಗಳ ನೆರವು ಪಡೆಯಬೇಕು. ಯಾವುದೇ ಬಿಲ್ಲವ ಸಂಘ ತನ್ನ ಸ್ವಂತ ನೆಲೆ ನಿರ್ಮಿಸಿಕೊಳ್ಳಲು ಮುಂದಾದರೆ ಅದಕ್ಕೆ ಸರ್ಕಾರದ ನೆರವು ದೊರಕಿಸಿಕೊಡಲಾಗುವುದು’ ಎಂದು ಭರವಸೆಯಿತ್ತರು. ಸಂಘದ ಅಧ್ಯಕ್ಷ ಎಂ. ಅಣ್ಣಪ್ಪ ಬಿಲ್ಲವ ಸ್ವಾಗತಿಸಿ ೨೦ ವರ್ಷಗಳ…
