Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುತ್ತಿರುವ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಈ ಭಾರಿ ನಟ, ನಿರ್ದೇಶಕ ಡಾ. ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಸಾಲಿನಲ್ಲಿ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ. ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ, ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯನ್ನು ಈ ತನಕ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ. ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಯಕ್ಕೆ ಸರಿಯಾಗಿ ಉತ್ತಮ ಹಾಗೂ ಹಿತಮಿತವಾದ ಆಹಾರ ಸೇವನೆ, ಸರಿಯಾದ ಪ್ರಮಾಣದ ನಿದ್ರೆ, ಜ್ಞಾನವನ್ನು ವೃದ್ಧಿಸುವ ಬ್ರಹ್ಮಚರ್ಯೆ ಇವುಗಳು ಆರೋಗ್ಯದ ಆಧಾರಸ್ಥಂಭಗಳು. ಪ್ರತಿಯೊಬ್ಬರೂ ಮೊದಲು ತಮ್ಮ ಕುಟುಂಬ, ಸಮಾಜದ ಸಂಬಂಧಗಳು ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರಥಮ ಆದ್ಯತೆ ಕೊಟ್ಟಾಗ ಮಾತ್ರ ಪರಿಪೂರ್ಣ ಆರೋಗ್ಯವಂತನಾಗಲು ಸಾಧ್ಯವಾಗುತ್ತದೆ ಎಂದು ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ಅಧೀಕ್ಷಕ ಡಾ. ನಾಗರಾಜ್ ಹೇಳಿದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ನಾವುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂದಿರದಲ್ಲಿ ಗುರುವಾರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ತಜ್ಞ ವೈದ್ಯರಿಂದ ನಡೆದ ಉಚಿತ ಆಯುರ್ವೇದ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಆಧ್ಯಾತ್ಮಿಕ ವ್ಯಾದಿ, ಆದಿಭೌತಿಕ ವ್ಯಾಧಿ ಹಾಗೂ ಆದಿದೈವಿಕ ವ್ಯಾದಿಗಳೇ ತಾಪತ್ರಯಗಳು. ನಮಗೆ ನಮ್ಮ ಜೀವನದ ಕಲ್ಪನೆಯೊಂದಿಗೆ ದೈವಬಲವೂ ಬೇಕು. ಪ್ರಕೃತಿಯನ್ನು ಗೌರವಿಸುವುದು ಜಲವನ್ನು ರಕ್ಷಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.21: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜರಗಿದ ಉಡುಪಿ ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂದರ್ಭ ತಂಡದ ವ್ಯವಸ್ಥಾಪಕ ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ, ಪೂರ್ಣಿಮಾ ನಾಯಕ್, ಕಿರಣ್ ವಕ್ವಾಡಿ, ಅರುಣ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಶಂಕರ್ ನಾಯ್ಕ್, ಸುಕೇಶ್ ಮತ್ತು ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಪಡುವರಿ ನಿವಾಸಿ ಜಗದೀಶ ಪಟವಾಲ್ (62) ಯಡ್ತರೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಬೈಕಿನಲ್ಲಿ ಪತ್ನಿ ಆಶಾ ಅವರೊಂದಿಗೆ ಬಿಜೂರು ಕಡೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯಡ್ತರೆ ಜಂಕ್ಷನ್ ಬಳಿ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದ ಪರಿಣಾಮ ಜಗದೀಶ ಪಟವಾಲ್ ಹಾಗೂ ಅವರ ಪತ್ನಿ ರೋಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಈರ್ವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.‌ ಜಗದೀಶ ಪಟವಾಲ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಸವಾರನ ಕಾಲಿಗೆ ಗಾಯಗಳಾಗಿದೆ. ಜಗದೀಶ ಪಟವಾಲ್ ಅವರು ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷರಾಗಿ, ಶ್ರೀ ಮೂಕಾಂಬಿಕಾ ರೈಲ್ವೆ ಹೋರಾಟ ಸಲಹಾ ಸಮಿತಿ ಸ್ಥಾಪಕ ಸದಸ್ಯ ಹಾಗೂ ಕಾರ್ಯದರ್ಶಿಯಾಗಿ ಮೂಕಾಂಬಿಕಾ ರೈಲ್ವೆ ನಿಲ್ದಾಣ ಅಭಿವೃದ್ದಿಪಡಿಸಲು ಸಮಿತಿಯೊಂದಿಗೆ ಶ್ರಮವಹಿಸಿದ್ದರು. ಬೈಂದೂರು ನಾಗರಿಕ ವೇದಿಕೆ ಮೂಲಕ ತಾಲೂಕು ರಚನಾ ಸಮಿತಿಯೊಂದಿಗೆ ಹೋರಾಟಕ್ಕೆ ಕೈ ಜೋಡಿಸಿದ್ದರು. ಜಗದೀಶ ಪಟವಾಲ್ ಅವರು ಪತ್ನಿ, ಓರ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.21: ವರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಮಾನಿ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಮಾನಿ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಆಗಿದ್ದು, ದಿನಾಂಕ: 18.09.2022 ರಂದು ಬೆಳಗ್ಗೆ 6:30 ರ ಸಮಯಕ್ಕೆ ಜಲಾಶಯದ ಮಟ್ಟವು 590.10 ಮೀಟರ್ ತಲುಪಿದ್ದು, ಒಳಹರಿವು 1565 ಕ್ಯೂಸೆಕ್ಸ್ಗಳಷ್ಟು ಇರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಈ ಮೂಲಕ ಎಚ್ಚರಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಸೆ.21: ಜಾಗದ ತಕರಾರಿಗೆ ಸಂಬಂಧಿಸಿ ತನ್ನ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನಿಸಿರುವುದಾಗಿ ಸಿದ್ದಾಪುರ ಗ್ರಾಮದ ಸುದರ್ಶನ್ ಶೆಟ್ಟಿ ಎಂಬವರು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂದಾಪುರದ ಸಿದ್ದಾಪುರ ಗ್ರಾಮದ ಬಾಳೆಬೇರು ನಿವಾಸಿ ಸುದರ್ಶನ್ ಶೆಟ್ಟಿ ಅವರಿಗೆ ಪ್ರಕರಣದ ಆರೋಪಿಗಳಾದ ರಾಜರಾಮ ಶೆಟ್ಟಿ, ರಘುರಾಮ ಶೆಟ್ಟಿ, ಶ್ರೀಧರ ಶೆಟ್ಟಿ ಮಂಗನಸಾಲು, ಬಿ. ಪ್ರಕಾಶ್ಚಂದ್ರ ಶೆಟ್ಟಿ ಇವರೊಂದಿಗೆ ಸಿದ್ದಾಪುರ ಗ್ರಾಮದಲ್ಲಿ ಜಾಗದ ವಿಚಾರದಲ್ಲಿ ತಕರಾರು ಇದ್ದು, ಈ ಜಾಗದ ತಕರಾರು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುತ್ತದೆ, ಅಲ್ಲದೆ ನ್ಯಾಯಾಲಯವು ಕುಂದಾಪುರ ತಾಲೂಕು ತಹಶೀಲ್ದಾರರಿಗೆ ತಕರಾರು ಇರುವ ಜಾಗವನ್ನು ಸೆ.21 ರಂದು ಸರ್ವೇ ಮಾಡಿ ವರದಿ ನೀಡುವಂತೆ ಆದೇಶ ಮಾಡಿದೆ. ಈ ಜಾಗದ ತಕರಾರಿನ ಬಗ್ಗೆ ಸುಧರ್ಶನ್ ಶೆಟ್ಟಿ ರವರು ಹೆಚ್ಚಾಗಿ ಓಡಾಡುತ್ತಿದ್ದರು. ಇದರಿಂದ ತಮ್ಮಗೆ ತೊಂದರೆ ಆಗಬಹುದು ಎಂದು ಆರೋಪಿಗಳು, ಸೆ.18 ರಂದು ಸುದರ್ಶನ್ ಶೆಟ್ಟಿ ಅವರು ತಮ್ಮ ಸ್ಕೂಟಿಯಲ್ಲಿ ಬಾಳೆಬೇರು ಎಂಬಲ್ಲಿ ಮನೆಯ ಸಮೀಪ ನಿಲ್ಲಿಸಿಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಬೈಂದೂರು ಸೇನೇಶ್ವರ ದೇವಾಲಯದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಮಂಗಳವಾರ ಸುಮಾರು 10 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದರು. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬೈಂದೂರು ಅರಣ್ಯ ಸಿಬ್ಬಂದಿಗಳು ಹಾವನ್ನು ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಡಲು ಕೊಂಡೊಯ್ದಿದ್ದಾರೆ. ಸ್ಥಳೀಯರು ಹಾವನ್ನು ಸೆರೆಹಿಡಿಯುವಲ್ಲಿ ಸಹಕರಿಸಿದ್ದಾರೆ.

Read More

ಇಡೀ ರಾತ್ರಿ ಆರಾಮವಾಗಿ ಮಲಗಿ ನಿದ್ರೆ ಮಾಡಿ ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಸರ್ವೆಸಾಮಾನ್ಯ ಆದರೆ ನಿದ್ರೆಯ ಸಮಯದಲ್ಲಿ ಇದು ಅರಿವಿಗೆ ಬಂದಿರುವುದಿಲ್ಲ. ನಿದ್ರೆಯಲ್ಲಿ ನಮಗೆ ಬೇಕಾದ ಹಾಗೆ ಸರಿಯಾಗಿ ದಿಂಬಿನ ಮೇಲೆ ತಲೆ ಇಟ್ಟುಕೊಳ್ಳದೆ ಹೇಗೆಂದರೆ ಹಾಗೆ ಮಲಗಿರುತ್ತೇವೆ. ಇದರಿಂದ ಬೆಳಗ್ಗೆ ಎದ್ದ ಯಾಕೋ ಕುತ್ತಿಗೆ ಹಿಡಿದುಕೊಂಡಿದೆ ಅಥವಾ ಕುತ್ತಿಗೆ ನೋವು ಬಂದಿದೆ ಎನಿಸುತ್ತದೆ. ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ನೋವು ಎನಿಸಿದರೆ ಆ ಸಮಯದಲ್ಲಿ ಮಾತ್ರೆ ಅಥವಾ ಔಷಧಿ ತೆಗೆದುಕೊಂಡು ಇದನ್ನು ಕಡಿಮೆ. ಮಾಡಿಕೊಳ್ಳಬಹುದು. ಆದರೆ ಇದರಿಂದ ಸೈಡ್ ಎಫೆಕ್ಟ್ ಸಹ ಹೆಚ್ಚಾಗುತ್ತದೆ. ಅದರ ಬದಲಾಗಿ ಮನೆಯಲ್ಲಿ ಸುಲಭವಾಗಿ ಬಳಸುವ ಮನೆ ಮದ್ದುಗಳ ಬಗ್ಗೆ ತಿಳಿಯೋಣ ಕುತ್ತಿಗೆ ನೋವಿಗೆ ಆರೈಕೆ ಬಹಳ ಮುಖ್ಯ:ಬೆಳಗ್ಗೆ ಎದ್ದ ತಕ್ಷಣ ಕುತ್ತಿಗೆ ಹಿಡಿದುಕೊಂಡಿದ್ದರೆ, ಯಾವುದೇ ಕಾರಣಕ್ಕೂ ವೇಗವಾಗಿ ಕುತ್ತಿಗೆಯನ್ನು ಅತ್ತಿತ್ತ ಆಡಿಸಲು ಹೋಗಬೇಡಿ. ಕುತ್ತಿಗೆಯನ್ನು ಹೇಗೆ ಇಟ್ಟುಕೊಂಡರೆ ನೋವು ಕಡಿಮೆ ಕಾಣುತ್ತದೆ ಅದೇ ರೀತಿ ಇಟ್ಟುಕೊಂಡಿರಿ. ಎದ್ದ ತಕ್ಷಣ ಕುತ್ತಿಗೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳು ಮನೆಯ ಸಂಪತ್ತು. ಮಗುವಿನ ಆಗು ಹೋಗುಗಳನ್ನು ಪೋಷಕರು ಅರಿತುಕೊಳ್ಳಬೇಕು. ಪರಸ್ಪರ ಪ್ರೀತಿ ವಿಶ್ವಾಸ ಅವರಲ್ಲಿ ಬೆಳೆಸಬೇಕು ಎಂದು ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶಕ ಹಾಗೂ ಆಪ್ತ ಸಮಾಲೋಚರಾದ ಲೆಸ್ಲಿ ಆರೋಜಾರವರು ಹೇಳಿದರು. ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ರಕ್ಷಕ-ಶಿಕ್ಷಕ ಸಭೆಯಲ್ಲಿ ಅವರು ವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ದೊಡ್ಡದು. ಯೌವನ ಕಾಲಿಡುತ್ತಿರುವಾಗ ಮಕ್ಕಳ ಕಡೆ ತಮ್ಮ ಗಮನ ಅವಶ್ಯ. ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಗಳ ಸಂಚಾಲಕರು, ಸ್ಥಳೀಯ ಚರ್ಚಿನ ಧರ್ಮಗುರುಗಳಾದ ಅ| ವಂ| ಫಾದರ್ ಸ್ಟ್ಯಾನಿ ತಾವರೋ ಅವರು ಮಾತನಾಡಿ ಪೋಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಅವರ ಆಹಾರಕ್ರಮದ ಕಡೆ ತಮ್ಮ ಗಮನವಿರಲಿ. ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚು ತಯಾರಿ ಅಗತ್ಯ. ನಮ್ಮ ವಿದ್ಯಾ ಸಂಸ್ಥೆಯು…

Read More