ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ : ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿರುವ ಕಾರಂತ ಸಿರಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸ್ಥಾಪಿಸಲಾಗಿರುವ ಪುಸ್ತಕ ಮಳಿಗೆಯಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಡಾ. ಶಿವರಾಮ ಕಾರಂತರು, ನಾಡೋಜ ಎಸ್.ಎಲ್ ಭೈರಪ್ಪ, ಪೂರ್ಣಚಂದ್ರ ತೇಜಸ್ವಿ , ಸೇರಿದಂತೆ ಇನ್ನಿತರ ಸಾಹಿತಿಗಳ ಕಾದಂಬರಿ , ಮಕ್ಕಳ ಕಥೆ ಪುಸ್ತಕ, ಧಾರ್ಮಿಕ ಸಂಬಂಧಿಸಿದ ಹಾಗೂ ವ್ಯಕ್ತಿತ್ವ ವಿಕಸನದ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿತವಾದ ಪುಸ್ತಕಗಳನ್ನು ವಿಶೇಷ ಸಂದರ್ಭಗಳಾದ ಗಣರಾಜ್ಯೋತ್ಸವ, ಸ್ವಾತಂತ್ರೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ನಡೆಯುವ ಜನವರಿ , ಆಗಸ್ಟ್ ಹಾಗೂ ನವೆಂಬರ್ ಮಾಹೆಗಳಲ್ಲಿ ಅಲ್ಲದೆ ರಾಜ್ಯದಲ್ಲಿ ವಿಶೇಷವಾಗಿ ನಡೆಯುವ ವಿಶ್ವ ಕನ್ನಡ ಸಮ್ಮೇಳನ, ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ 50 % ರಿಯಾಯಿತಿ ದರದಲ್ಲಿ ಉಳಿದ ದಿನಗಳಲ್ಲಿ 15% ರಿಯಾಯಿತಿ ದರದಲ್ಲಿ ಪುಸ್ತಕಗಳು ದೊರೆಯಲಿದೆ ಎಂದು ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮ , ಕಾರ್ಯದರ್ಶಿ ನರೇಂದ್ರ ಕುಮಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾ.ಪಂ. ಉಪಾಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ ಮಾತನಾಡಿ, ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಹೆಮ್ಮೆಯ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ. ಹೀಗಾಗಿ ಹುಟ್ಟೂರಿನಲ್ಲಿ ಅವರ ನೆನಪುಗಳು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಕೋಟ – ಸಾಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆಗೆ ಅವರ ಹೆಸರಿಡಬೇಕು ಎನ್ನುವ ಬೇಡಿಕೆಯನ್ನು ಬ್ರಹ್ಮಾವರ ಪತ್ರಕರ್ತರ ಸಂಘದವರು ಮುಂದಿರಿಸಿದ್ದು ಇದು ಅತ್ಯಂತ ಸಮಂಜಸವಾಗಿದೆ. ಈ ಕುರಿತು ತಾ.ಪಂ. ವತಿಯಿಂದ ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಜಿ. ಪಂ. ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿ, ವಡ್ಡರ್ಸೆಯವರ ಹೆಸರಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ ಜಟ್ಟಿಗ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮ ಇತ್ತೀಚೆಗೆ ನೆಡೆಯಿತು ಕಾರ್ಯಕ್ರಮದಲ್ಲಿ ಶಾಸಕ ಬಿ. ಎಂ . ಸುಕುಮಾರ ಶೆಟ್ಟಿ ಮಾತನಾಡಿ, ಮರವಂತೆ ಮೀನುಗಾರಿಕಾ ಹೊರಬಂದರು ದ್ವಿತೀಯ ಹಂತದ ಕಾಮಗಾರಿಗೆ ರೂ 85 ಕೋಟಿ ಮಂಜೂರಾಗಿದ್ದು ಶೀಘ್ರವೇ ಕಾಮಗಾರಿ ಆರಂಭವಾಗುವುದು ರೂ 80 ಲಕ್ಷ ವೆಚ್ಚದಲ್ಲಿ ನಡೆಯುವ ಮರವಂತೆ ಜಟ್ಟಿಗ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಡೆದ ಭೂಮಿಪೂಜೆ ಸಂದರ್ಭದಲ್ಲಿ ಹೇಳಿದರು. ಕ್ಷೇತ್ರದ ಕುಡಿಯುವ ನೀರು ಪೂರೈಕೆ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರೂ 550 ಕೋಟಿ ಬಿಡುಗಡೆಯಾಗಲಿದೆ. ಅದರಿಂದ ಎಲ್ಲ ಮನೆಗಳಿಗೆ ನೀರು ಪೂರೈಸಲಾಗುವುದು. ಗ್ರಾಮದ ಕೆಟ್ಟು ಹೋಗಿರುವ ಎಲ್ಲ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಜಗದೀಶ ದೇವಾಡಿಗ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಅನಿತಾ ಆರ್. ಕೆ, ಮಾಜಿ ಸದಸ್ಯರಾದ ಪ್ರಭಾಕರ ಖಾರ್ವಿ, ನಾಗರಾಜ ಖಾರ್ವಿ, ಲೋಕೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌತ್ ಕೆನಾರ ಪೋಟೋಗ್ರಾಫರ್ ಅಸೋಸಿಯೇಶನ್ ರಿ. ಕುಂದಾಪುರ ವಲಯ ಇದರ ವತಿಯಿಂದ ಕುಂದಾಪುರ ಮಹಾತ್ಮ ಗಾಂಧಿ ಪಾರ್ಕ್ನಲ್ಲಿರುವ ಗಾಂಧೀಜಿ ಪ್ರತಿಮೆ ಹಾಗೂ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜನ್ಮ ದಿನಾಚರಣೆ ಆಚರಿಸಲಾಯಿತು. ಸೌತ್ ಕೆನಾರ ಪೋಟೋಗ್ರಾಫರ್ ಅಸೋಸಿಯೇಶನ್ ದ, ಕ ಉಡುಪಿ ಇದರ ಉಪಾಧ್ಯಕ್ಷರಾದ ನಾಗರಾಜ ರಾಯಪ್ಪನ ಮಠ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಅಧ್ಯಕ್ಷರಾದ ರಾಜಾ ಮಠದ ಬೆಟ್ಟು, ಸಂಚಾಲಕರಾದ ಗಿರೀಶ್ ಜಿ, ಕೆ, ಪ್ರಧಾನ ಕಾರ್ಯದರ್ಶಿ ಅಮೃತ ಬೀಜಾಡಿ, ಉಪಾಧ್ಯಕ್ಷರಾದ ಪ್ರಕಾಶ ಕುಂದೇಶ್ವರ, ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಗೋಪಾಲ್ ಕಾಂಚನ್, ಮಾಜಿ ಅಧ್ಯಕ್ಷರಾದ ಸುರೇಶ್ ಸುರಭಿ, ದಿನೇಶ ಗೋಡೆ, ಪ್ರಮೋದ್ ಚಂದನ್, ಜೊತೆ ಕಾರ್ಯದರ್ಶಿ ಸುರೇಶ ಮೊಳಹಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಿಜಾರ್ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಿಂದ ಆಯೋಜಿಸಲ್ಪಟ್ಟ ಒಂದು ದಿನದ ಆನ್ಲೈನ್ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್- “ಹೇಗೆ ಬೋಧನಾ- ಕಲಿಕಾ ಪ್ರಕ್ರಿಯೆಯಲ್ಲಿ ಗುಣಮಟ್ಟದ ಬದಲಾವಣೆ ಸಾಧ್ಯ” ಎಂಬ ವಿಷಯದ ಕುರಿತು ಉದ್ಘಾಟನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಲಹಾಬಾದ ಐಐಐಟಿಯ ನಿರ್ದೇಶಕ ಪ್ರೋ ಪಿ. ನಾಗಭೂಷಣ್, ಪ್ರತಿಯೊಬ್ಬ ಶಿಕ್ಷಕನೂ ತನ್ನ ಮುಂದಿರುವ ಸವಾಲುಗಳನ್ನ ಮೀರಿ ಯೋಚಿಸಿ, ಕಾರ್ಯ ಪ್ರವೃತ್ತನಾದಾಗ ಶಿಕ್ಷಣದ ಮೂಲ ಧ್ಯೇಯ – ಸರ್ವಾಂಗೀಣ ಪ್ರಗತಿ ವಿದ್ಯಾರ್ಥಿಯಲ್ಲಿ ಮೂಡಲು ಸಾಧ್ಯ ನಮ್ಮ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾನಿಲಯಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಹಿನ್ನಲೆಯಲ್ಲಿ ಅನೇಕ ನಿರ್ಬಂಧಗಳು ತಮ್ಮನ್ನು ಸೀಮಿತಗೊಳಿಸಿದರೂ ಅದನ್ನು ಮೀರಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರೂ ದುಡಿಯುವ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿರುವ ಹೊಸ ಶಿಕ್ಷಣ ನೀತಿ ಶೈಕ್ಷಣಿಕ ಸ್ವಾಯತ್ತತೆಗೆ ಹೆಚ್ಚು ಒತ್ತು ನೀಡಲಿದ್ದು ಶಿಕ್ಷಕರು ಇನ್ನೂ ಹೆಚ್ಚಿನ ಜವಾಬ್ದಾರಿ ಹಾಗೂ ಕಾರ್ಯ ಕ್ಷಮತೆಯನ್ನು ಪ್ರದರ್ಶಿಸಬೇಕು ಎಂದರು. ಶಿಕ್ಷಕನು ತಾನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ರೆಡ್ ಕ್ರಾಸ್ ಸೊಸೈಟಿಯಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಲಯನ್ಸ್ನ ಪ್ರಮುಖರಾದ ರಾಜೀವ ಕೋಟ್ಯಾನ್, ನವೀನ್ ಶೆಟ್ಟಿ, ಗೋಪಾಲ ಕೃಷ್ಣ ಶೇಟ್, ಕಿರಣ್ ಕುಮಾರ್, ಸಾತ್ವಿಕ್ ಕಲ್ಪತರು ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ 16 ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ 23ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು/ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಎಸ್. ವಿ. ಜ್ಯೂನಿಯರ್ ಕಾಲೇಜು ರಸ್ತೆಯ ಪಂಚಾಯತ್ ಹಳೆ ಕಛೇರಿ ವಠಾರದಲ್ಲಿ ಸುಮಾರು 3.30ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಕಲಚೇತನರ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ದೇವಾಡಿಗ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೂತನ ಬೈಂದೂರು ತಾಲೂಕು ಪಂಚಾಯತಿಯ ಎರಡನೇ ಸಾಮಾನ್ಯ ಸಭೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹೇಂದ್ರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕುಂದಾಪುರದ ತಾ.ಪಂ ಸಭಾಂಗಣದಲ್ಲಿ ಗುರುವಾರ ಜರುಗಿತು. ಕುಂದಾಪುರ ತಾಲ್ಲೂಕು ಪಂಚಾಯಿತಿ ವಿಭಜನೆಯಿಂದ ಬೈಂದೂರು ತಾಲ್ಲೂಕು ಪಂಚಾಯಿತಿ ಅಸ್ತಿತ್ವಕ್ಕೆ ಬಂದಿರುವುದರಿಂದ ಸ್ಥಿರ ಚರ ಆಸ್ತಿಗಳು, ನಿಧಿಯ ಅರ್ಧಾಂಶವನ್ನು ತಕ್ಷಣ ವರ್ಗಾಯಿಸಬೇಕು. ಬೈಂದೂರಿನಲ್ಲಿ ಕಚೇರಿಗೆ ಸೂಕ್ತ ಸ್ಥಳಾವಕಾಶ ಹೊಂದಿಸಿಕೊಳ್ಳಬೇಕು, ನಿವೃತ್ತ ಯೋಧರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು. ವರ್ಷದಿಂದ ಸ್ಥಗಿತವಾಗಿರುವ ಪಿಂಚಣಿ ಅದಾಲತ್ ನಡೆಸಬೇಕು ಸೇರಿದಂತೆ ಹಲವು ವಿಷಯಗಳೂ ಸಭೆಯಲ್ಲಿ ಚರ್ಚೆಗೆ ಬಂದವು. ಬೈಂದೂರು ತಾಲ್ಲೂಕು ವ್ಯಾಪ್ತಿಯ ಕೆಲವು ಗ್ರಾಮ ಪಂಚಾಯತಿ ಪಿಡಿಒಗಳನ್ನು ಶಾಸಕರ, ಸಚಿವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಇವರ ಹುದ್ದೆ ಖಾಲಿ ಎಂದು ಪರಿಗಣಿಸುತ್ತಿಲ್ಲ. ಇದರಿಂದ ಬದಲಿ ನೇಮಕಕ್ಕೂ ಅವಕಾಶ ಇಲ್ಲ. ಇದರಿಂದ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಭಿವೃದ್ಧಿ ಕಾರ್ಯಗಳೂ ಕುಂಠಿತಗೊಂಡಿದೆ‘ ಎಂದು ಸದಸ್ಯ ಪ್ರವೀಣಕುಮಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ತಾಲೂಕು ಕಾರ್ಮಿಕ ಪ್ರಕೋಷ್ಟ ಸಂಚಾಲಕರಾಗಿ ರಾಜು ದೇವಾಡಿಗ ಕುಂದಾಪುರ ಇವರು ಆಯ್ಕೆಯಾಗಿರುತ್ತಾರೆ.
