ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಮೀನುಗಾರಿಕಾ ಇಲಾಖೆಯ ರಾಜ್ಯ ವಲಯದ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು ಉಡುಪಿ ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಮೀನುಗಾರಿಕಾ ಸಹಾಯಕ ನಿರ್ದೇಶಕರು, (ಶ್ರೇಣಿ ಉಡುಪಿ, ಕುಂದಾಪುರ, ಕಾರ್ಕಳ) ಕಚೇರಿಗೆ ಸಲ್ಲಿಸಬಹುದು ಎಂದು ಮೀನುಗಾರಿಕಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎ/ಬಿ.ಕಾಂ ಪೂರಕ ಮತ್ತು ಎಂ.ಬಿ.ಎ ಸೆಮಿಸ್ಟರ್ ಪರೀಕ್ಷೆಗಳನ್ನು ಫೆಬ್ರವರಿ/ಮಾರ್ಚ್ ಮಾಹೆಯಲ್ಲಿ ದಿನಾಂಕ 13.03.2020 ರವರೆಗೆ ನಡೆಸಲಾಗಿದ್ದು ಕೋವಿಡ್-19ರ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ನಿರ್ದೇಶನದಂತೆ ಉಳಿದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಮುಂದೂಡಲಾದ ಪರೀಕ್ಷೆಗಳನ್ನು ಯುಜಿಸಿಯ ಮಾರ್ಗ ಸೂಚನೆಯಂತೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಸೆಪ್ಟಂಬರ್ 1ರಿಂದ ಹಾಗೂ ಎಂ.ಬಿ.ಎ ಸೆಮಿಸ್ಟರ್ ಪರೀಕ್ಷೆಗಳನ್ನು ಸೆಪ್ಟಂಬರ್ 5 ರಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆಸಲಾಗುತ್ತದೆ. ವೇಳಾಪಟ್ಟಿಯನ್ನು ವಿಶ್ವ ವಿದ್ಯಾನಿಲಯದ ವೆಬ್ಸೈಟ್ http://www.ksoumysuru.ac.in/ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವಂತೆ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಡಾ.ಕೆ.ಪಿ.ಮಹಾಲಿಂಗಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಯುಕೆಜಿ ಕಲಿಕೆ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮರವಂತೆ ಶ್ರೀರಾಮ ಮಂದಿರದ ಅಧ್ಯಕ್ಷ ಮೋಹನ ಖಾರ್ವಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಮಾಣ ಪತ್ರ ವಿತರಿಸಿದ ಮಹಾಬಲ ರೈ ಈಗ ಕಲಿಕೆ ಪೂರೈಸಿದ ಯುಕೆಜಿ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣವನ್ನು ತಾವು ಕಲಿತ ಸರ್ಕಾರಿ ಶಾಲೆಯಲ್ಲಿಯೇ ನಡೆಸಬೇಕು ಎಂದು ಸಲಹೆಯಿತ್ತರು. ಶಿಕ್ಷಕಿ ಲೀಲಾ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶ್ರೀಕಾಂತ್ ವಂದಿಸಿದರು. ಶೋಭಾ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ ನಾವುಂದ, ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಗಾಣಿಗ, ಚಂದ್ರ ಖಾರ್ವಿ, ಸತ್ಯನಾರಾಯಣ, ಉದ್ಯಮಿ ಇಕ್ಬಾಲ್, ಖಾರ್ವಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮ ಖಾರ್ವಿ, ಶಿಕ್ಷಕಿಯರಾದ ಶಶಿಕಲಾ, ನಯನಾ ನಾಯಕ್, ಲಲಿತಾ, ಶಾರದಾ ಪುತ್ರನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.24ರ ಸೋಮವಾರ 103 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 19, ಉಡುಪಿ ತಾಲೂಕಿನ 50 ಹಾಗೂ ಕಾರ್ಕಳ ತಾಲೂಕಿನ 26 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 28 ಸಿಂಥಮೇಟಿವ್ ಹಾಗೂ 75 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 55ಪುರುಷರು, 48 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 52, ILI 23, ಸಾರಿ 2 ಪ್ರಕರಣವಿದ್ದು, 25 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 57 ಮಂದಿ ಆಸ್ಪತ್ರೆಯಿಂದ ಹಾಗೂ 99 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 85 ವರ್ಷದ ವೃದ್ಧೆ, ಉಡುಪಿ 75 ವರ್ಷದ ವೃದ್ಧ, ಕಾರ್ಕಳದ 85 ವರ್ಷದ ವೃದ್ಧೆ, ಕಾರ್ಕಳದ 49 ವರ್ಷದ ಮಹಿಳೆ ಹಾಗೂ ಉಡುಪಿಯ 55 ವರ್ಷದ ಪುರುಷ ಸೇರಿದಂತೆ ಒಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಆನ್ಲೈನ್ ಶಿಕ್ಷಣದ ಮುಖಾಂತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ನಡುವೆ ಸಂವಹನವನ್ನು ನಡೆಸುವುದು ಅತ್ಯಮೂಲ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ತರಗತಿಗಳನ್ನು ನಡೆಸುವ ಸಲುವಾಗಿ ಪ್ರಾಧ್ಯಾಪಕರಿಗೆ ಪುನಶ್ಚೇತನ ಕಾರ್ಯಾಗಾರವನ್ನು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು IQAC ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶೈಲೇಶ್ ಬಿ. ಸಿ. ಪ್ರಾಧ್ಯಾಪಕರಿಗೆ google classroom ಮತ್ತು edpuzzle ತಂತ್ರಜ್ಞಾನದ ಉಪಯೋಗ ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಧ್ಯಾಪಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನವನ್ನು ಪಡೆದುಕೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಚ್ಛಭಾರತದ ಕನಸು ನನಸಾಗಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಸಮರ್ಪಕ ತ್ಯಾಜ್ಯ ನಿರ್ವಹಣೆ ನಡೆಯಬೇಕು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ವೆಲ್ಲೂರು ಮಾದರಿಯ ಘನ-ದ್ರವ ಸಂಪನ್ಮೂಲ ನಿರ್ವಹಣೆ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲ್ಪಡಬೇಕು ಎಂದು ವಂಡ್ಸೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಹೇಳಿದರು. ಕುಂದಾಪುರ ಮಿಡ್ಟೌನ್ ಮತ್ತು ಬೈಂದೂರು ರೋಟರಿ ಕ್ಲಬ್, ಉಪ್ಪುಂದ-ಬೈಂದೂರು ಲಯನ್ಸ್ ಕ್ಲಬ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಹಯೋಗದಲ್ಲಿ ವಿಚಿತ್ರ ಕ್ರಿಯೇಶನ್ಸ್ ಹೊರತಂದಿರುವ ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಸಾಕ್ಷ್ಯಚಿತ್ರವನ್ನು ಅವರು ಶನಿವಾರ ನಾಗೂರಿನ ಕೆಎಎಸ್ ಆಡಿಟೋರಿಯಮ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ತಮ್ಮ ನೇತೃತ್ವದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಆರಂಭಿಸಿರುವ ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಯಶೋಗಾಥೆಯನ್ನು ವಿವರಿಸಿದ ಉದಯಕುಮಾರ ಶೆಟ್ಟಿ ಅದು ಮೂರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಲಾಭದಾಯಕವಾಗಿ ನಡೆಯುತ್ತಿದೆ. ರಾಜ್ಯದ ಮಾದರಿ ಘಟಕ ಎಂಬ ಹೆಗ್ಗಳಿಕೆ ಪಡೆದು, ದೇಶದ ಗಮನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನೇರಂಬಳ್ಳಿ ಗ್ರಾಮದ ವಯೋವೃದ್ಧರೋರ್ವರು ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಕರೊನಾದಿಂದ ಮೃತಪಟ್ಟಿದ್ದು ಅವರ ಅಂತಿಮ ಸಂಸ್ಕಾರಕ್ಕಾಗಿ ಕುಂದಾಪುರ ಹಳೆಕೋಟೆ ಸ್ಮಶಾನಕ್ಕೆ ಮೃತದೇಹವನ್ನು ತಂದಾಗ ಕುಟುಂಬಿಕರಿಗೊಂದು ಶಾಕ್ ಕಾದಿತ್ತು. ಅಂತಿಮ ಸಂಸ್ಕಾರಕ್ಕೂ ಮುನ್ನ ಅನುಮಾನಗೊಂಡು ಮೃತದೇಹದ ಪ್ಯಾಕ್ ಬಿಡಿಸಿದಾಗ ಅದರಲ್ಲಿ ಬೇರೊಬ್ಬ ವ್ಯಕ್ತಿಯ ಶವ ಕಂಡು ಕುಟುಂಬಸ್ಥರು ಕಂಗಾಲಾಗಿದ್ದಾರೆ. ನೇರಂಬಳ್ಳಿ ಮೂಲಕ 65 ವರ್ಷದ ವೃದ್ಧರು ಕರೊನಾ ಸೋಂಕಿನಿಂದಾಗಿ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಶವವನ್ನು ಅಂಬುಲೆನ್ಸ್ನಲ್ಲಿ ಕುಂದಾಪುರಕ್ಕೆ ತರಲಾಗಿತ್ತು. ಮೃತದೇಹ ಸಂಪೂರ್ಣ ಪ್ಯಾಕ್ ಮಾಡಿದ್ದರಿಂದ ಒಳಗಿರುವ ಶವ ಯಾರದ್ದೆಂದು ಮೊದಲಿಗೆ ಸಂಬಂಧಿಕರಿಗೆ ತಿಳಿಯಲಿಲ್ಲ. ಹಳೆಕೋಟೆ ಸ್ಮಶಾನಕ್ಕೆ ಅಂತ್ಯ ಸಂಸ್ಕಾರಕ್ಕೆ ತಂದಾಗ ಅನುಮಾನಗೊಂಡು, ಓಪನ್ ಮಾಡಬಾರದು ಎಂಬ ಒತ್ತಡದ ನಡುವೆಯೂ ಶವ ಪರೀಕ್ಷಿಸುವಾಗ ಅದರಲ್ಲಿ ವೃದ್ಧರ ಬದಲಿಗೆ ಬೇರೊಬ್ಬ ಯುವಕನ ಶವವಿತ್ತು. ಇದು ನಮ್ಮ ಮೃತದೇಹ ಅಲ್ಲವೆನ್ನುತ್ತಿದ್ದಂತೆ ಅಂಬುಲೆನ್ಸ್ ಸಿಬ್ಬಂದಿಗಳು ಶವ ಕೊಂಡುಹೋಗಲು ಯತ್ನಿಸಿದ್ದರು. ತಕ್ಷಣ ಸ್ಮಶಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019ರ ಜನವರಿ 1 ರಿಂದ 2019ರ ಡಿಸೆಂಬರ್ 31ರ ವರೆಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು. ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತ ಪ್ರತಿ-30 ವರ್ಷ ಒಳಗಿರುವ ಯುವಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತ ಪ್ರತಿಯನ್ನು ಕಳಿಸಿಕೊಡಬೇಕು. ಕಾದಂಬರಿ, ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1 ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿ, ಅನುವಾದ-2 ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಾಫ್ಟ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಇನ್ಸ್ಪೆಕ್ಟರ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಎ.ಪಿ.ಎಫ್) ಹುದ್ದೆಗಳಿಗೆ ಕಂಪ್ಯೂಟರ್ ಆನ್ ಲೈನ್ ಸ್ಪರ್ಧಾತ್ಮಕ ಪರೀಕ್ಷಾ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ hಣಣಠಿ://ssಛಿ.ಟಿiಛಿ.iಟಿ ಅಥವಾ ದೂರವಾಣಿ ಸಂಖ್ಯೆ 08202574869/9480259790 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಪ್ರಕಟನೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಎಮ್.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯ ಧನ ಸಹಾಯದಿಂದ ಅಲಿಮ್ಕೋ ಎಸಿಸಿ, ಬೆಂಗಳೂರು ಇವರ ಮೂಲಕ ಉಡುಪಿ ಜಿಲ್ಲಾಡಳಿತ. ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂಗವಿಕಲರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಶಿಬಿರವನ್ನು ಆಯೋಜಿಸಲಾಗಿದೆ. ಉಡುಪಿ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 24 ರಂದು ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಅಜ್ಜರಕಾಡು ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 25 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ ಬೈಂದೂರು ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 26 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಕುಂದಾಪುರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 27 ರಂದು ತಾಲೂಕು ಪಂಚಾಯತ್ ಸಭಾಂಗಣ ಕುಂದಾಪುರ ಕಾರ್ಕಳ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 28 ರಂದು…
