ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸ್ಥಳಾಂತರಗೊಂಡ ಕುಂದಾಪುರ ಶಾಖೆಯು ಮುಖ್ಯರಸ್ತೆಯ ಅಥರ್ವ ಕಾಂಪೆಕ್ಸ್ ಮೊದಲ ಮಹಡಿಯಲ್ಲಿ ಸುಸಜ್ಜಿತ ಹವಾನಿಯಂತ್ರಿತ ಕೊಠಡಿ ಉದ್ಘಾಟನೆಗೊಂಡಿತು. ಶಾಖೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಸ್.ದಿನಕರ ಶೆಟ್ಟಿ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘ ಅಧ್ಯಕ್ಷ ಹೆಚ್. ಹರಿಪ್ರಸಾದ್ ಶೆಟ್ಟಿ, ಸಹಕಾರಿ ಸಂಘಗಳ ಉಪ ನಿಬಂಧಕಿ ಚಂದ್ರಪ್ರತಿಮಾ ಎಂ. ಜಿ, ಕುಂದಾಪುರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಕೃಷ್ಣಮೂರ್ತಿ, ಎಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ ಶೆಟ್ಟಿ, ಬಿ.ರಘುರಾಮ ಶೆಟ್ಟಿ, ಶಶಿಕುಮಾರ್ ರೈ, ಪ್ರಭಾರ ಮುಖ್ಯಕಾರ‍್ಯನಿರ್ವಹಣಾಧಿಕಾರಿ ಬಿ. ರವೀಂದ್ರ ಇದ್ದರು. ಕಟ್ಟಡ ಮಾಲೀಕ ಗಶೇಶ್ ನಾಯಕ್ ಹಾಗೂ ಶಾಖಾ ವ್ಯವಸ್ಥಾಪಕ ಮೋಹನ್ ದಾಸ್ ಹೆಬ್ಬಾರ್ ಅವರ ಡಾ.ರಾಜೇಂದ್ರ ಕುಮಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷರಾಗಿ ಭರತ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ ಬಿಲ್ಲವ ಶಿರೂರು, ಕಾರ್ಯದರ್ಶಿಯಾಗಿ ಆನಂದ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ 125 ವರ್ಷ ಹಾಗೂ ಸೋದರಿ ನಿವೇದಿತಾರಿಗೆ 150 ಸಂದಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಹಮ್ಮಿಕೊಂಡಿರುವ ರಥಯಾತ್ರೆ ಸೆ.೩೦ರಂದು ಬೈಂದೂರಿಗೆ ಆಗಮಿಸಲಿದ್ದು, ವಿಶಿಷ್ಟವಾಗಿ ಸ್ವಾಗತಿಸಿಕೊಳ್ಳಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು ಹೇಳಿದರು. ಅವರು ಯುವ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆಯ ಪೂರ್ವಭಾವಿಯಾಗಿ ಭಾನುವಾರ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಸಿದ್ಧತಾ ಸಭೆಯಲ್ಲಿ ಮಾತನಾಡಿ ಮಾಹಿತಿ ನೀಡಿದರು. ಸೆ.30ರ ಮಧ್ಯಾಹ್ನ 3 ಗಂಟೆಗೆ ತಲ್ಲೂರಿನಲ್ಲಿ ರಥಯಾತ್ರೆಯನ್ನು ಸ್ವಾಗತಿಸಿಕೊಳ್ಳಲಾಗುತ್ತದೆ. ಅಲ್ಲಿಂದ ನೂರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು ಯಡ್ತರೆಯ ತನಕ ಸಾಗಿಬರಲಿದ್ದಾರೆ. ಯಡ್ತರೆಯಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಚಂಡೆ ವಾದ್ಯದೊಂದಿಗೆ ಸಾಗಿಬಂದ ತರುವಾಯ ಬೈಂದೂರು ಶಾರದಾ ವೇದಿಕೆಯಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು. ಪೂರ್ವಭಾರಿ ಸಭೆಯಲ್ಲಿ ಯುವ ಬ್ರಿಗೇಡ್‌ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾಳವಾರದಲ್ಲಿ ಬೈಕ್ ಸವಾರನ ಮೇಲೆ ಕಾರು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾಲಾಡಿ ನಿವಾಸಿ ರುದ್ರ ಆಚಾರ್ ಅವರ ಮಗ ಗಂಗಾಧರ ಆಚಾರ್ (೩೪) ಮೃತ ದುರ್ದೈವಿ. ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಕಾಳವಾರ ಸಮೀಪ ಹಾವು ಬಂತೆಂದು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರ ಕಾರಿಗೆ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದರು. ಇದೇ ವೇಳೆ ಬೈಕ್ ಹಿಂದಿನಿಂದ ಬಂದ ಮತ್ತೊಂದು ಕಾರು ಬೈಕ್ ಸವಾರನ ಗಂಗಾಧರ ಅವರ ಮೇಲೆ ಹರಿದಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಮಹಜರು ನಡೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಶನಿವಾರ ಸಂಜೆ ಬೈಂದೂರು ಸರಕಾರಿ ಪರಿಶಿಷ್ಟ ವರ್ಗದ ಆಶ್ರಮ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಹಳ್ಳಿಹೊಳೆ ಗ್ರಾಮದ ಬಾಚಗುಳಿ ಕೊರಗ ಕಾಲೋನಿಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ವಸತಿ, ಕುಡಿಯುವ ನೀರು ಸೇರಿದಂತೆ ಪ್ರಮುಖ ವಿಚಾರಗಳ ಕುರಿತಾಗಿ ಚರ್ಚಿಸಿದರು. ಬಳಿಕ ಆಶ್ರಮ ಶಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವನ್ನು ವೀಕ್ಷಿಸಿ ಆಶ್ರಮದ ಕೊಠಡಿ, ಶೌಚಾಲಯ, ಅಡುಗೆಮನೆಯನ್ನು ಪರಿಶೀಲಿಸಿ, ಸ್ವಚ್ಛತೆಯ ಬಗ್ಗೆ ಗಮನ ಹರಿಸುವಂತೆ ಆದೇಶಿಸಿದರು. ಮಕ್ಕಳೊಂದಿಗೆ ಊಟ: ರಾಜ್ಯ ಸರಕಾರದ ಆದೇಶದಂತೆ ವಸತಿ ಶಾಲೆ ವೀಕ್ಷಣೆಗೆ ಬಂದಿದ್ದ ಡಿಸಿ ಅವರು ಕೊನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಊಟವನ್ನು ಸವಿದರು. ಕೊಚ್ಚಿಗೆ ಅಕ್ಕಿ ಅನ್ನ, ತರಕಾರಿ ಸಾರಿನೊಂದಿಗೆ ಬಂಗಡೆ ಮೀನಿನ ಪ್ರೈ ಸಿದ್ಧಪಡಿಸಲಾಗಿತ್ತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಿರಣ್ ಫಡ್ನೇಕರ್, ಬೈಂದೂರು ತಹಶೀಲ್ದಾರ್ ಕಿರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಗಾಂಧಿನಗರದಲ್ಲಿ ಹೋಟೆಲ್ ನಡೆಸುತ್ತಿದ್ದ ಕುಂದಾಪುರ ಮೂಲದ ಉದ್ಯಮಿ ನೆಹರು ನಗರದ ನಿವಾಸಿ ಸಂತೋಷ್ ಶೆಟ್ಟಿ (54) ಎಂಬುವವರನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಬರ್ಬರವಾಗಿ ಹತ್ಯೆಗೈದ ಘಟನೆ ಶೇಷಾದ್ರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆತನ ಪತ್ನಿ ಅನ್ನಪೂರ್ಣ ಹಾಗೂ ಪ್ರಕಾಶ್ ಎಂಬಾತನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅನೈತಿಕ ಸಂಬಂಧವೇ ಮುಳುವಾಯಿತು: ಮೃತ ಸಂತೋಷ ಶೆಟ್ಟಿ ಎಂಬುವವರ ಪತ್ನಿ ಅನ್ನಪೂರ್ಣ, ವಕೀಲ ಕುಂದಾಪುರದ ಪ್ರಕಾಶ್ ಎಂಬಾತನ ಜತೆ ಅನೈತಿಕ ಸಂಬಂಧ ಹೊಂದಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಆಸ್ತಿ ಹಂಚಿಕೆ ವಿಚಾರ ಹಾಗೂ ಅನೈತಿಕ ಸಂಬಂಧಕ್ಕೆ ಸಂತೋಷ್ ಅಡ್ಡಿಯಾಗಿದ್ದ ವಿಚಾರಕ್ಕೆ ಇಬ್ಬರೂ ಪೂರ್ವ ನಿರ್ಧಾರದಂತೆ ಯೋಜನೆ ರೂಪಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ನೆಹರೂ ನಗರದಲ್ಲಿರುವ ಆತನ ಮನೆಯಲ್ಲಿಯೇ ಪತ್ನಿ ಹಾಗೂ ಪ್ರಕಾಶ್ ಸೇರಿ ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆಗೈದಿದ್ದಾರೆ ಎಂಬುದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಪಿಸಿಸಿ ಕಾರ್ಮಿಕರ ಘಟಕದ ಉಡುಪಿ ಜಿಲ್ಲಾಧ್ಯಕ್ಷರನ್ನಾಗಿ ಬೈಂದೂರು ತಗ್ಗರ್ಸೆಯ ಮಂಜುನಾಥ ಪೂಜಾರಿ ಅವರನ್ನು ಆಯ್ಕೆಯಾಗಿದ್ದಾರೆ. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕರ ಘಟಕ ರಾಜ್ಯಾಧ್ಯಕ್ಷ ಡಾ. ಎಸ್. ಎಸ್. ಪ್ರಕಾಶಂ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ 14.25ಕೋಟಿ ರೂ. ಠೇವಣಿ ಸಂಗ್ರಹಿಸಿ, 11.23 ಕೋಟಿ ರೂ. ಸಾಲ ನೀಡಿ ಒಟ್ಟು 53ರೂ. ಕೋಟಿಯಷ್ಟು ವ್ಯವಹಾರ ನಡೆಸಿದ್ದು ವಾರ್ಷಿಕ 26.84 ಲಕ್ಷ ರೂ. ಲಾಭಗಳಿಸಿದೆ. ಸಂಘದ ಸದಸ್ಯರಿಗೆ ಶೇ.15ರ ಡಿವಿಡೆಂಟ್ ವಿತರಿಸಲಾಗುತ್ತಿದೆ. ಆಡಿಟ್ ವರ್ಗೀಕರಣದಲ್ಲಿ ‘ಎ’ ದರ್ಜೆಯನ್ನು ಪಡೆದುಕೊಂಡಿದೆ ಎಂದು ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು. ಅವರು ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ಶುಕ್ರವಾರ ಜರುಗಿದ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇದರ 2017-18ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಶ್ರೇಯೋಭಿವೃದ್ಧಿ ಹಾಗೂ ವಿಸ್ತರಿಸುವ ಜವಾಬ್ದಾರಿ ಅದರ ಪ್ರತಿ ಸದಸ್ಯರದ್ದೂ ಆಗಿದ್ದು, ಒಗ್ಗಟ್ಟಾಗಿ ಮುನ್ನಡೆದಾಗ ಮಾತ್ರ ಅದು ಸಾಧ್ಯವಾಗಲಿದೆ. ಸಮುದಾಯದ ಜನರಿಗೆ ಉತ್ತಮ ಸೇವೆ ಒದಗಿಸುವುದರ ಮೂಲಕ ಸಂಸ್ಥೆಯು ಸಮಾಜದ ಸ್ವತ್ತಾಗಲು ಶ್ರಮವಹಿಸಬೇಕಿದೆ. ಮುಂದಿನ ಆರ್ಥಿಕ ವರ್ಷಗಳಲ್ಲಿ ಸಂಘದ ಪ್ರಧಾನ ಕಛೇರಿಗೆ ನೂತನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 15ನೇ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಮಲ್ಲಿಕಾ ಎಸ್‌ಘಂಟಿ ಅವರನ್ನು ಮತ್ತು ಉದ್ಘಾಟಕರಾಗಿ ಡಾ.ಷ.ಶೆಟ್ಟರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಾರಿ ‘ಕರ್ನಾಟಕ ದರ್ಶನ – ಬಹುರೂಪಿ ಆಯಾಮಗಳು’ ಎಂಬ ಪ್ರಧಾನ ಪರಿಕಲ್ಪನೆಯೊಂದಿಗೆ ಆಳ್ವಾಸ್ ನುಡಿಸಿರಿ-2018 ಸಮ್ಮೇಳನವು ನವೆಂಬರ್ 16, 17 ಮತ್ತು 18ರಂದು ಮೂಡುಬಿದಿರೆಯ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಕವಿ ರತ್ನಾಕರವರ್ಣಿ ವೇದಿಕೆ, ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಜರುಗಲಿ ನಾಡು ನುಡಿಯ ಸಮ್ಮೇಳನಕ್ಕೊಂದು ಆಹ್ವಾನ: ಆಳ್ವಾಸ್ ನುಡಿಸಿರಿ 2018ರ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಪ್ರತಿನಿಧಿ ಶುಲ್ಕವಿಲ್ಲದೆ ಸಂಪೂರ್ಣಉಚಿತವಾಗಿ ಭಾಗವಹಿಸಬಹುದು.ಭಾಗವಹಿಸುವ ವಿದ್ಯಾರ್ಥಿಗಳು ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರದೃಢೀಕರಣಪತ್ರವನ್ನು ಹೊಂದಿರಬೇಕು.ಇತರರಿಗೆ ಮೂರು ದಿನಗಳ ಊಟ, ವಸತಿಗಳು ಉಚಿತವಾಗಿದ್ದು ರೂ.೧೦೦ ಪ್ರತಿನಿಧಿ ಶುಲ್ಕದೊಂದಿಗೆ ಸಮ್ಮೇಳನವನ್ನು ಕಣ್ತುಂಬಿಸಿಕೊಳ್ಳಬಹುದು.ಖ್ಯಾತ ಸಾಹಿತಿಗಳು, ವಿಮರ್ಶಕರು, ಸಂಶೋಧಕರು,…
ಕೋಣಿ ರಮಾನಂದ ಕಾರಂತ್ | ಕುಂದಾಪ್ರ ಡಾಟ್ ಕಾಂ ಲೇಖನ. ಇಂದಿಗೆ ಹದಿಮೂರು ವರುಷಗಳ ಹಿಂದಿನ ನೆನಪು. ಅಂದು ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿ ಬಹುದೊಡ್ಡ ಕಾರ್ಯಕ್ರಮ. ನಾಗಮಂಡಲ, ಬ್ರಹ್ಮಕಲಶ, ಸ್ವಾಗತ ಗೋಪುರದ ಉದ್ಘಾಟನೆ ಇತ್ಯಾದಿ. ಅಂದಿನ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಆಗಮಿಸುವ ಕಾರ್ಯಕ್ರಮ ಆದರೆ ಅಂದೇ ಕೊಅಲ್ಲೇ ನಮ್ಮೊಡನಿದ್ದ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರ ಮಗನಿಗೆ ಬೆಂಗಳೂರಿನಿಂದ ದೂರವಾಣಿ ಸಂದೇಶಗಳು ಬಂದು ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಬರುವುದು ಬಹುತೇಕ ಸಂಶಯ ಎಂಬ ಆಲೋಚನೆ ಬಂದಾಗತತ್ ಕ್ಷಣ ಅಲ್ಲಿದ್ದ ಇತರರನ್ನು ಒಗ್ಗೂಡಿಸಿಕೊಂಡು ರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿದ್ದ ಬಹುದೊಡ್ಡ ಕಾರ್ಯಕ್ರಮಕ್ಕೆ ಆಗಮಿಸಲಿರುವ ಉಪ ಮುಖ್ಯಮಂತ್ರಿಗಳ ಭೇಟಿಗಾಗಿ ದೌಡಾಯಿಸಿದರು. ಅಂದಿನ ಆಹ್ವಾನ ಪತ್ರಿಕೆಯಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ನವರ ಹೆಸರೇ ಇರಲಿಲ್ಲ. ಆದರೂ ಈತನಿಗೆ ಅದೇನೋ ಆತ್ಮವಿಶ್ವಾಸ ಕಾರಿನಿಂದ ಇಳಿದವನೇ ನೇರ ಉಪ ಮುಖ್ಯಮಂತ್ರಿಗಳ ಬಳಿ ತೆರಳಿ ತಮ್ಮ ಕಾರ್ಯಕ್ರಮದ ಬಗ್ಗೆ ವಿಜ್ಞಾಪಿಸಿದರು. ಆ ಕ್ಷಣ ಉಪ ಮುಖ್ಯಮಂತ್ರಿಗಳು ಒಪ್ಪಿ ಕೆಲವೇ ಕ್ಷಣಗಳಲ್ಲಿ ಕಾರನ್ನು ಹತ್ತಿತಮ್ಮೊಡನೆ ಈತನನ್ನು ಕೂರಿಸಿಕೊಂಡು…
