Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿನ ಸ್ವಾತಂತ್ರ್ಯ ಅಮೃತಮಹೋತ್ಸವ ವನದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧೀಯ ಸಸ್ಯಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ, ಬೈಂದೂರು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಭಾನುಮತಿ ಬಿ. ಕೆ., ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್, ಇನ್ನರ್ ವೀಲ್ ಕ್ಲಬ್ ಬೈಂದೂರಿನ ಪದಾಧಿಕಾರಿಗಳಾದ ಸುಜಾತಾ ರವಿರಾಜ್, ಶಾರದಾ ನಾರಾಯಣ, ರಾಜೀವಿ ಗೋವಿಂದ ಮತ್ತು ಗುಲಾಬಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ಣಾಟಕ ಬ್ಯಾಂಕ್ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು ಎಲ್ಲರ ಜೀವನಕ್ಕೆ ಸ್ಪೂರ್ತಿಯಾಗಿರುವ ಉತ್ತಮ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರವಾಗಿ ಸಹಕಾರ ನೀಡುತ್ತಾ ಬಂದಿದೆ. ಅದರಲ್ಲೂ ಯುವ ಜನಾಂಗ ಶಿಕ್ಷಣ, ವೃತ್ತಿಯ ಒತ್ತಡದಲ್ಲೂ ಸಾಹಿತ್ಯ ಸಂಗೀತದಂತಹ ಉತ್ತಮ ಚಟುವಟಿಕೆಯ ಬಗ್ಗೆ ಆಸಕ್ತಿ ತೋರುವಾಗ ಸಂತೋಷವಾಗುತ್ತದೆ ಎಂದು ಕರ್ಣಾಟಕ ಬ್ಯಾಂಕಿನ ಸಿಒಒ ವೈ. ವಿ. ಬಾಲಚಂದ್ರ ಅವರು ಹೇಳಿದರು. ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಕುಂಭಾಸಿ ರಾಧಾಬಾಯಿ ವೆಂಕಟರಮಣ ಪ್ರಭು ರಂಗ ಮಂದಿರ, ರಂಗ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ ಹಿಂದುಸ್ತಾನಿ ಯುವ ಸಂಗೀತೋತ್ಸವ ‘ಅಮೃತ ಭಾರತಿಗೆ ಸಂಗೀತದಾರತಿ’ ಸಮಾರಂಭದಲ್ಲಿ ಯುವ ಸಂಗೀತ ಕಲಾವಿದರನ್ನು ಗೌರವಿಸುತ್ತಾ ಅವರು ಮಾತನಾಡಿ ಕುಂದಾಪುರದಲ್ಲಿ ಸಂಗೀತ ಭಾರತಿ ಟ್ರಸ್ಟ್ ರಿ., ಚಿರಂತನ ಚಾರಿಟೆಬಲ್ ಟ್ರಸ್ಟ್ ರಿ. ಸುರತ್ಕಲ್ ಸಂಯುಕ್ತ ಆಶ್ರಯದಲ್ಲಿ ಹದಿಮೂರು ಮಂದಿ ಯುವ ಕಲಾವಿದರು ತಮ್ಮ ಸಂಗೀತ ಹಾಗೂ ಸಂಗೀತ ವಾದನಗಳ ಪ್ರತಿಭೆ ತೋರಿಸಲು ಅವಕಾಶ ನೀಡಿರುವುದು ಬಹಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.09: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.09: ಹೆರಿಕುದ್ರು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ (17) ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದ ಪೆಟ್ರೋಲ್ ಬಂಕ್ ಹಿಂಭಾಗ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ವಿದ್ಯಾರ್ಥಿ, ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಗುರುವಾರ ಮಧ್ಯಾಹ್ನ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸಂಜೆಯ ತನಕವೂ ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರೂ ನೀರಿನ ಹರಿವು ಹೆಚ್ಚಿದ್ದರಿಂದ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇಂದು ಸುಮಾರು 22 ಕಿ.ಮೀ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಸಮುದ್ರ ತೀರದಲ್ಲಿದ್ದ ಮೃತದೇಹವನ್ನು ಸ್ಥಳೀಯ ಯುವಕರು ತಕ್ಷಣ ಪತ್ತೆಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಇದನ್ನೂ ಓದಿ:► ನೀಟ್‌ನಲ್ಲಿ ಕಡಿಮೆ ಅಂಕ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – https://kundapraa.com/?p=61968 . ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 2021-22ನೇ ಸಾಲಿನಲ್ಲಿ ಮಧ್ಯಮ ವರ್ಗದ ಉತ್ತಮ ಹಾಲು ಉತ್ಪಾದನೆಯ ಸಾಧನೆ ಮಾಡಿ, ಮಧ್ಯಮ ವರ್ಗದ ಹೈನುಗಾರಿಕೆ ಪ್ರಸಸ್ತಿ ಪುರಸ್ಕೃತೆ ಹಕ್ಲಾಡಿ ಗ್ರಾಮ ಸಂತೆಗದ್ದೆ ನಿವಾಸಿ ಸುಜಾತಾ ಸಂತೋಷ ಪೂಜಾರಿ ಅವರನ್ನು ಇತ್ತಿಚಿಗೆ ನಡೆದ ಮಹಾಸಭೆಯಲ್ಲಿ ಒಕ್ಕೂಟ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ಸನ್ಮಾನಿಸಿದರು. ಉಪಾಧ್ಯಕ್ಷ ಜಯರಾಮ ರೈ, ಒಕ್ಕೂಟ ಎಂಡಿ ಡಿ.ಅಶೋಕ್, ನಿಕಟಪೂರ್ವ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಬೋಳಾ ಸದಾಶಿವ ಶೆಟ್ಟಿ, ನರಸಿಂಹ ನಾಯಕ್, ಸುಧಾಕರ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಸ್ಮಿತಾ ಆರ್.ಶೆಟ್ಟಿ, ಸುಭದ್ರಾ ರಾವ್ ಇದ್ದರು. ಸುಜಾತಾ ಎಸ್. ಪೂಜಾರಿ ಹಕ್ಲಾಡಿ ಹಾಲು ಉತ್ಪಾದಕರ ಸೊಸೈಟಿ ಸದಸ್ಯೆ ಆಗಿದ್ದು, ಕಳೆದ ನಾಲ್ಕು ವರ್ಷದಿಂದ ಪ್ರತಿದಿನ ೪೦ ಲೀಟರ್ ಹಾಲು ಡೇರಿಗೆ ಹಾಕುತ್ತಿದ್ದಾರೆ. ಹಕ್ಲಾಡಿ ಡೇರಿ ವಾರ್ಷಿಕ ಮಹಾಸಭೆಯಲ್ಲಿ ಸಂಘ ಅಧ್ಯಕ್ಷ ಬಾಳೆಮನೆ ಸಂತೋಷ ಕುಮಾರ್ ಶೆಟ್ಟಿ ಹಕ್ಲಾಡಿ ಸನ್ಮಾನಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.08: ಜಿಲ್ಲೆಯಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಠದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಅವರು ತಿಳಿಸಿದರು. ಅವರು ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕೆ ಆಗಮಿಸಿ, ಉಡುಪಿ ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಡಳಿತದಿಂದ ನಷ್ಠದ ಅಂಕಿ ಅಂಶಗಳ ವಿವರಗಳನ್ನು ಪಡೆದು ಮಾತನಾಡಿದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು ಶೇ.98 ರಷ್ಟು ತುಂಬುತ್ತಿದ್ದು, ಬಾಕಿ ಉಳಿದ ಶೇ. 2 ರಷ್ಟು ಹಣವನ್ನು ರೈತರು ಪಾವತಿಸಿದ್ದಲ್ಲಿ ರೈತರು ತಮಗಾದ ಬೆಳೆ ನಷ್ಠ ಪರಿಹಾರವನ್ನು ಪಡೆಯಬಹುದು. ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸುವಂತೆ ಸೂಚಿಸಿದರು. ಮೀನುಗಾರಿಕೆಗೆ ತೆರಳುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯಲ್ಲಿ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಸಾಯೀಶ್ ಶೆಟ್ಟಿ ಶಿವಮೊಗ್ಗದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ನಿರೀಕ್ಷೆ ಹೊಂದಿದ್ದ. ಆದರೆ ಫಲಿತಾಂಶದಲ್ಲಿ ತೀರಾ ಕಡಿಮೆ ಅಂಕ ಬಂದಿರುವುದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಮಧ್ಯಾಹ್ನದ ವೇಳೆಗೆ ಸೈಕಲ್ಲಿನಲ್ಲಿ ಸೇತುವೆ ಬಳಿ ಬಂದ ಸಾಯೀಶ್, ಸೈಕಲ್ ಹಾಗೂ ಮೊಬೈಲನ್ನು ಸೇತುವೆ ಬದಿಯಲ್ಲಿ ಇಡುತ್ತಿದ್ದಾಗ ಸ್ಥಳೀಯರು ಕೆಲವರು ನೋಡಿದ್ದಾರೆ. ನೋಡ ನೋಡುತ್ತಿದ್ದಂತೆ ನದಿಗೆ ಹಾರಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ತಿಳಿದು ಕುಂದಾಪುರ ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಮೃತದೇಹಕ್ಕಾಗಿ ಹುಡುಕಾಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೈಸ್ತ ಭಾಂದವರು ತಮ್ಮ ಚರ್ಚುಗಳಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ಹೊಸ್ತು ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಕುಂದಾಪುರ, ಬಸ್ರೂರು, ತಲ್ಲೂರು, ನಾಡ, ತ್ರಾಸಿ, ಬೈಂದೂರು ಸೇರಿದಂತೆ 11 ಚರ್ಚ್ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ನೆರವೇರಿದವು. ಕುಂದಾಪುರದಲ್ಲಿ ರೋಜಾರಿ ಅಮ್ಮನವರ ಇಗರ್ಜಿಯಲ್ಲಿ ಮಾತೆ ಮೇರಿಯ ಮೊಂತಿ ಫೆಸ್ತ್ ಹುಟ್ಟು ಹಬ್ಬವನ್ನು ಬಹಳ ಶ್ರದ್ದಾಭಕ್ತಿ ಗೌರವ ಹಾಗೂ ವಿಜ್ರಂಭಣೆಯಿಂದ ಆಚರಿಸಲಾಯಿತು. ಚಿಕ್ಕ ಮಕ್ಕಳು ಬಾಲಾ ಮೇರಿ ಮಾತೆಗೆ ಪುಷ್ಪಗಳನ್ನು ಅರ್ಪಿಸುವ ಮೂಲಕ ಹಬ್ಬಕ್ಕೆ ಚಾಲನೆಯನ್ನು ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಹಬ್ಬದ ಶುಭಾಶಯಗಳನ್ನು ಕೋರಿದರು. ನಂತರ ಹೊಸ ತೆನೆಯನ್ನು ಸಹಾಯಕ ಧರ್ಮಗುರು ವಂ| ಆಶಿರ್ವದಿಸಿ ಪವಿತ್ರ ಬಲಿದಾನವನ್ನು ಅರ್ಪಿಸಿ ಸಂದೇಶ ನೀಡಿದರು.ಬ್ಯಾಂಡು ವಾದ್ಯಗಳ ಜೊತೆ ಗುರಿಕಾರರು ಹೊಸ ತೆನೆಗಳನ್ನು ಹಿಡಿದುಕೊಂಡು, ಭಕ್ತಾಧಿಗಳೊಂದಿಗೆ, ಬ್ಯಾಂಡು ಗಾಯನದೊಂದಿಗೆ ಬಾಲ ಮೇರಿ ಮಾತೆಯ ಮೂರ್ತಿಯನ್ನು ಭಕ್ತಿ ಶ್ರದ್ದಾಪೂರ್ವಕವಾಗಿ ಇಗರ್ಜಿಯಿಂದ ಮೆರವಣಿಗೆ ಹೊರಟು ಪುನ:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪುಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 49ನೇ ವರ್ಷದ ಗಣೇಶೋತ್ಸವದ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೀಥಹಳ್ಳಿ ಗೋಪಾಲ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಆಚಾರ್ಯ ಅವರು ಶುದ್ಧ ಕನ್ನಡದ ಬಳಕೆ ಯಕ್ಷಗಾನದಲ್ಲಿ ಮಾತ್ರ ಸಾಧ್ಯ ಕನ್ನಡ ಉಳಿಸಿ ಬೆಳೆಸುವಲ್ಲಿ ಯಕ್ಷಗಾನದ ಪಾತ್ರ ಮಹತ್ವವಾಗಿದ್ದು ಇಂಗ್ಲಿಷ್ ವ್ಯಾಮೋಹದ ಬರಾಟೆಯಲ್ಲಿಯೂ ಪೋಷಕರು ಯಕ್ಷಗಾನ ಕಲಿಯುವಿಕೆಯಲ್ಲಿ ಮಕ್ಕಳಿಗೆ ಆಸಕ್ತಿ ಬರುವಂತೆ ಮಾಡುವ ದೊಡ್ಡ ಜವಬ್ದಾರಿ ಇದ್ದು ಹೆತ್ತರವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಉದ್ಯಮಿ ಜಿ. ಗೋಕುಲ ಶೆಟ್ಟಿ, ಗಣೇಶೋತ್ಸವದ ಅಧ್ಯಕ್ಷ ಯು. ಸಂದೇಶ ಭಟ್, ಉದ್ಯಮಿ ಕುಶಲ ಶೆಟ್ಟಿ ಕಾರ್ಯದರ್ಶಿ ಜನಾರ್ಧನ ಖಾರ್ವಿ ಸಮಿತಿಯ ಸದಸ್ಯರಾದ ಮಂಜುನಾಥ ದೇವಾಡಿಗ, ಅನಿಲ್ ಡಿ ಉಪ್ಪುಂದ, ಆನಂದ ದೇವಾಡಿಗ ಉಪಸ್ಥಿತರಿದ್ದರು. ವೇದಮೂರ್ತಿ ಶಂಕರನಾರಾಯಣ ಭಟ್ ಸ್ವಾಗತಿಸಿದರು, ಕಾರ್ಯದರ್ಶಿ ಜನಾರ್ಧನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ನಿರ್ಮಿಸಲಾಗಿರುವ ‘ಕರುನಾಡ ಶಾಲೆ’ ಸಿನೆಮಾದ ಧ್ವನಿಸುರುಳಿಯನ್ನು ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು. ಬಾಲ್ಯದ ನೆನಪುಗಳನ್ನು ನೆನಪಿಸುವಂಥ ದೃಶ್ಯಗಳನ್ನು ಸಂಯೋಜಿಸಲಾಗಿರುವ ಗೀತೆಯೊಂದನ್ನು ಚಿತ್ರತಂಡ ಬಿಡುಗಡೆಗೊಳಿಸಿತು. ನಾಯಕನ ತಂದೆ ಪಾತ್ರದಲ್ಲಿ ಹಿರಿಯ ನಟ ರಮೇಶ್ ಭಟ್ ಅಭಿನಯಿಸಿದ್ದು, ಆಯುರ್ ಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ರಿಯಾ ದೇವಾಡಿಗ, ರಾಜೀವ್ ಕೊಠಾರಿ, ರಘು ಪಾಂಡೇಶ್ವರ, ಸ್ಪೂರ್ತಿ ದೊಡ್ಮನೆ, ಸ್ಮಿತಾ, ಉಲ್ಲಾಸ್, ಮನೀಶ್, ನಾಗರಾಜ್ ಅಭಿನಯಿಸಿದ್ದಾರೆ.’ ಜಿ.ಆರ್. ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರಕ್ಕೆ ಮುತ್ತಾರೀಫ್ ತೆಕ್ಕಟ್ಟೆಯವರ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಮಾಡಿದ್ದಾರೆ. ದಿಲ್ ಶಾದ್ ಬಂಡವಾಳ ಹೂಡಿದ್ದಾರೆ. ಗಿರೀಶ್, ಯೋಗೇಂದ್ರ ಕನ್ನುಕೆರೆ, ಸಚಿನ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತುಕೊಂಡರೆ, ಆಕಾಶ್ ಪರ್ವರ ಸಂಗೀತ, ಆಯುರ್ ಸ್ವಾಮಿ ಸಾಹಿತ್ಯ – ಸಂಕಲನ, ರಾಜೇಶ್ ಕೃಷ್ಣನ್ ಹಿನ್ನೆಲೆ ಗಾಯನ, ಜಯರಾಮ್ ಆಲೂರು ಛಾಯಾಗ್ರಹಣ, ರಾಘವರ ನೃತ್ಯ ನಿರ್ದೇಶನವಿದೆ. ಸರ್ಕಾರಿ ಶಾಲೆಗಳ ಪ್ರಗತಿಗಾಗಿ ನಾಯಕ ಪಡುವ ಸಾಹಸವೆ ಚಿತ್ರದ ಪ್ರಮುಖ ಕಥಾವಸ್ತುವಾಗಿದೆ.

Read More