ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ. ಕೆಳಗೆ ಬಿದ್ದಿರುವ ರೋಗಪಿಡಿತ ಕಾಯಿಗಳನ್ನು ಹಾಗೂ ಒಣಗಿದ ಹಿಂಗಾರಗಳನ್ನು ತೆಗೆದು ಸುಡಬೇಕು ಅಥವಾ ತೋಟದಿಂದ ಹೊರಗೆ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ತೋಟಗಳಲ್ಲಿ ಆದಷ್ಟು ಸ್ವಚ್ಛತೆಯನ್ನು ಕಾಪಾಡಬೇಕು. ತೋಟಗಳಲ್ಲಿ ನೀರು ನಿಲ್ಲದಂತೆ ಬಸಿಲುಗಾಲುವೆಗಳನ್ನು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ತೋಟದಲ್ಲಿ ಅಲ್ಲಲ್ಲಿ ಅಡಿಕೆ ಸಿಪ್ಪೆ, ಭತ್ತದ ಹೊಟ್ಟು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಬಳಸಿ ಹೊಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 11 ವರ್ಷ ಮೇಲ್ಪಟ್ಟ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷಚೇತನರಿಗೆ ಎಪಿಡಿ ಸಂಸ್ಥೆಯ ಜೀವನೋಪಾಯ ಕಾರ್ಯಕ್ರಮದ ದಿನಸಿ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮ ಇಲ್ಲಿನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಿಟ್ ವಿತರಿಸಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿ ಹರೀಶ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ ಸುಮಾರು 62 ವರ್ಷದಿಂದ ವಿಶೇಷ ಚೇತನರಿಗೆ ಶಿಕ್ಷಣ, ತರಬೇತಿ, ವೈದ್ಯಕೀಯ ಪುನಶ್ಚೇತನ ಹಾಗೂ ಉದ್ಯೋಗ ಸೌಲಭ್ಯವನ್ನು ನೀಡಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತರು ಮತ್ತು ತಾಲೂಕಿನ ಎಮ್.ಆರ್.ಡಬ್ಲೂ ಮಂಜುನಾಥ ಹೆಬ್ಬಾರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಕುಲಾಲ್, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ, ವಿ.ಆರ್.ಡಬ್ಲೂ ಕಾವೇರಿ ಪ್ರಸಾದ್ ಮತ್ತು ವಿಶೇಷ ಚೇತನರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿ.ಆರ್.ಡಬ್ಲೂ ಆಕಾಶ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒತ್ತಿನಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಜರಿದಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಸಂಚಾರಕ್ಕೆ ಯಾವುದೆ ಅಡೆತಡೆ ಉಂಟಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆದ ಬಳಿಕ ಒತ್ತಿನಣೆಯಲ್ಲಿ 3 ಭಾರಿ ಗುಡ್ಡ ಕುಸಿದು ಸಂಚಾರಕ್ಕೆ ಅಡಚಣೆಯಾಗಿತ್ತು. ಒಂದು ಪಾರ್ಶ್ವದಲ್ಲಿ ಸೈಡ್ ವಾಲ್ ನಿರ್ಮಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಸರ್ಕಾರ ವಿಧಿಸಿದ ಹಲವು ನಿರ್ಭಂದಗಳಿ0ದ, ದೈನಂದಿನ ಸಂಪಾದನೆಯನ್ನು ನಂಬಿಕೊ0ಡಿದ್ದ ಅಸಂಖ್ಯಾತ ಕೂಲಿ ಕಾರ್ಮಿಕರಿಗೆ , ಜೀವನ ನಿರ್ವಹಣೆಗೆ ತೊಂದರೆಗಳಾದವು, ಆದರೆ ಈ ಸಮಯದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ , ಜಿಲ್ಲೆಯ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯ ಗಣನೀಯ ಪ್ರಮಾಣದಲ್ಲಿ ಉದ್ಯೋಗ ಒದಗಿಸುವ ಮೂಲಕ ಅವರ ಮೊಗದಲ್ಲಿ ಸಂತಸ ಮೂಡಿಸಿದೆ. ಜಿಲ್ಲೆಯಲ್ಲಿ ಕೊರೊನಾ ಕಾರಣದಿ0ದ ಸಾಕಷ್ಟು ಕಾರ್ಮಿಕರು, ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತ0ಕದಲ್ಲಿದ್ದು, ಹೆಚ್ಚಿನ ಯುವಕರು ಮನೆಯಲ್ಲಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಗ್ರಾಮೀಣ ಭಾಗದ ಜನರನ್ನು ಹಾಗೂ ಊರು ಸೇರಿರುವ ನಗರವಾಸಿಗಳಿಗೆ ಮಹಾತ್ಮಗಾ0ಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಉದ್ಯೋಗ ಭಾಗ್ಯ ಕರುಣಿಸಿದೆ. ಕೊರೊನಾ ಲಾಕ್ ಡೌನ್ ಸ0ದರ್ಭದಲ್ಲಿ ತೊ0ದರೆಗೊಳಗಾದ , ಜಿಲ್ಲೆಯ ಕೂಲಿ ಕಾರ್ಮಿಕರಿಗೆ , ಒಟ್ಟು 10,632 ಕುಟು0ಬಗಳ 18,503 ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವನ್ನು ಒದಗಿಸಲಾಗಿದ್ದು, 3046 ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ,…
ಗೋಡೆಯ ಮೇಲೆ ಹಲ್ಲಿ ಕಂಡರೆ ಹಾವು ಕಂಡಷ್ಟೇ ಭಯವಾಗುತ್ತದೆ. ಗೋಡೆಯಲ್ಲಿ ತುಂಬಿಕೊಂಡಿರುವ ಹಲ್ಲಿಗಳ ಕಾಟವನ್ನು ತಡೆಯುವುದಾದರೂ ಹೇಗೆ? ನಾವು ಮನೆಯಲ್ಲೇ ಲಭ್ಯವಿರುವ ಪದಾರ್ಥಗಳನ್ನು ಬಳಸಿಕೊಂಡು ಹಲ್ಲಿಗಳನ್ನು ಬಹಳ ಸುಲಭವಾಗಿ ಓಡಿಸಬಹುದು. ಮುಖ್ಯವಾದ ವಿಚಾರವೆಂದರೆ ಆಹಾರವನ್ನು ತೆರೆದಿಟ್ಟರೆ ಅದು ಹಲ್ಲಿಗಳಿಗೆ ಅಚ್ಚುಮೆಚ್ಚು. ಇದರಿಂದ ಮನೆಯಲ್ಲಿ ಹಲ್ಲಿಗಳು. ಸಂತಾನೋತ್ಪತ್ತಿ ಮಾಡಲು ಸಹಾಯವಾಗುತ್ತದೆ. ಆದ್ದರಿಂದ ಉಳಿದಿರುವ ಆಹಾರವನ್ನು ಎಂದಿಗೂ ಮನೆಯಲ್ಲಿ ತೆರೆದಿಡಬೇಡಿ. ಇದು. ನೊಣಗಳು ಮತ್ತು ಇರುವೆಗಳನ್ನು ಆಕರ್ಷಿಸುತ್ತದೆ. ಹಾಗೆಯೇ ಹಲ್ಲಿಗಳನ್ನು ಪರೋಕ್ಷವಾಗಿ ಆಕರ್ಷಿಸುತ್ತದೆ. ಹಲ್ಲಿಗಳು ಹಾವುಗಳಷ್ಟು ಅಪಾಯಕಾರಿಯಲ್ಲ, ಆದರೆ ಅವುಗಳು ನಾವು ತಿನ್ನುವ ಆಹಾರದಲ್ಲಿ ಬಿದ್ದರೆ ಮಾತ್ರ ನಮಗೆ ಅಪಾಯ. ಹಲ್ಲಿಗಳು ನಮ್ಮ ಮನೆಯ ಹತ್ತಿರ ಸುಳಿಯದಂತೆ ಮಾಡಲು, ನಮ್ಮಿಂದ ದೂರ ಹೋಗುವಂತೆ ಮಾಡಲು ಕೆಲವು ಉಪಾಯಗಳಿವೆ. ಈ ಸಣ್ಣ ಸರೀಸೃಪಗಳನ್ನು ಕೊಲ್ಲದೆ, ಮನೆಯಿಂದ ಹೊರಗೆ ಓಡಿಸುವುದಕ್ಕೆ ಕೆಲವು ಸರಳ ಮನೆಮದ್ದುಗಳನ್ನು ಕೊಡುತ್ತಿದ್ದೇವೆ ನೋಡಿ. ಪೆಪ್ಪರ್ ಸ್ಪ್ರೇ ಬಳಸಿ: ಕಾಳುಮೆಣಸು ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಇರುತ್ತದೆ. ಈ ಕಾಳು ಮೆಣಸು ಹಲ್ಲಿಗಳಿಗೆ ಕಿರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪಶು ಪಾಲನಾ ಇಲಾಖಾ ವತಿಯಿಂದ, ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ನೋಂದಾಯಿತ ಟ್ರಸ್ಟ್‌ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಮೂರು ವರ್ಷಗಳಿಂದ 50 ಕ್ಕೂ ಹೆಚ್ಚು ಸ್ವದೇಶಿ ಜಾನುವಾರುಗಳನ್ನು ಪೋಷಿಸುತ್ತಿರುವ ಅರ್ಹ ನೋಂದಾಯಿತ ಟ್ರಸ್ಟ್‌ಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯತ್‌ನ ದಾರಿದೀಪ ನಿರ್ವಹಣೆಗಾಗಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ 25 ಸಾವಿರ ರೂ. ಕೊಡುಗೆಯಾಗಿ ನೀಡಲಾಯಿತು. ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶಪಾಲ ಸುವರ್ಣ ಬ್ಯಾಂಕಿನ ವತಿಯಿಂದ 25 ಸಾವಿರ ರೂ. ಚೆಕ್‌ನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅವರಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಹಸ್ತಾಂತರಿಸಿದರು. ಗ್ರಾಮ ಪಂಚಾಯತ್ ಕೋರಿಕೆ ಮೇರೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿದೀಪ ನಿರ್ವಹಣೆಗೆ ಬ್ಯಾಂಕ್ ವತಿಯಿಂದ ಕೊಡುಗೆಯನ್ನು ನೀಡಲಾಗಿದ್ದು, ಉತ್ತಮ ಗುಣಮಟ್ಟದ ದಾರಿದೀಪಗಳನ್ನು ಅಳವಡಿಸಿ ಸುವ್ಯವಸ್ಥಿತವಾಗಿ ಇದರ ನಿರ್ವಹಣೆ ಮಾಡಬೇಕು. ಗಂಗೊಳ್ಳಿ ಗ್ರಾಮದ ಅಭಿವೃದ್ಧಿ ಬ್ಯಾಂಕ್ ವತಿಯಿಂದ ಹಾಗೂ ವೈಯಕ್ತಿಕವಾಗಿ ಸಹಕಾರ ನೀಡಲಾಗುವುದು ಎಂದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ಗಣೇಶ ಶೆಣೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಕೇಶವ ಖಾರ್ವಿ, ಪ್ರಶಾಂತ ಖಾರ್ವಿ, ಮಂತಿ ಶ್ರೀನಿವಾಸ ಖಾರ್ವಿ, ಬಿ.ರಾಘವೇಂದ್ರ ಪೈ, ಪಿಡಿಒ ಉಮಾಶಂಕರ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವಾತಂತ್ರ್ಯ ನಂತರ ದೇಶವನ್ನು ಆಳಿದ ಸರಕಾರಗಳು ಭಾರತ ದೇಶಕ್ಕೆ ಮತ್ತು ಜನತೆಗೆ ಏನು ಮಾಡಿಲ್ಲ ಬಿಜೆಪಿಗೆ ಅಧಿಕಾರ ಕೊಟ್ಟರೆ ದೇಶದ ಎಲ್ಲಾ ಪ್ರಚೆಗಳನ್ನು 5 ವರ್ಷಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೆವೆಂದು ಜನರನ್ನು ಭ್ರಮಾ ಲೋಕದಲ್ಲಿ ತೆಲಿಸಿ ಅಧಿಕಾರಕ್ಕೆ ಬಂದ ನರೇಂದ್ರ ಮೋಧಿ ನೇತ್ರತ್ವದ ಬಿಜೆಪಿ ಸರಕಾರ ನೋಟ್ ಬ್ಯಾನ್, ಜಿಎಸ್‍ಟಿಯಂತಹ ಅವೈಜ್ಞಾನಿಕ ಮಸೂದೆ ಜ್ಯಾರಿ ಮಾಡುವ ಜೊತೆಗೆ ಕರೋನಾದಂತಹ ಮಹಾಮಾರಿ ಸಾಂಕ್ರಾಮಿಕ ರೋಗ ಇರುವ ಸಂದರ್ಭದಲ್ಲಿ ಜನತೆ ಆಹಾರ ವಸ್ತು ಖರಿದಿಗೆ ಕಷ್ಟದಲ್ಲಿರುವಾಗ ನಿರಂತರ ಡಿಸೇಲ್, ಪೆಟೊಲ್, ಗ್ಯಾಸ್ ದರ ಎರಿಸಿ ತನ್ನನ್ನು ಅಧಿಕಾರ ದಲ್ಲಿ ಕೂರಿಸಿದ ಪ್ರಜೆಗಳನ್ನು ಸಂಕಷ್ಟಕ್ಕೆ ತಂದು ನಿಲ್ಲಿಸಿದ್ದಾರೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಹೇಳಿದರು. ತೈಲ ಬೆಲೆ ಏರಿಕೆಯ 3ನೇ ದಿನದ ಪ್ರತಿಭಟನೆಯ ಪ್ರಯುಕ್ತ ಹುಣ್ಸೆಮಕ್ಕಿ ಇಂಡಿಯಾನ್ ಆಯಿಲ್ ಪಂಪ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಗ್ಯಾಸ್ ಸಿಲಿಂಡರ್ ಗೆ 400 ರೂಪಾಯಿ ಇದ್ದಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಬೋಳಂಬಳ್ಳಿ ದೇವಸ್ಥಾನ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಪಡಿತರ ಅಕ್ಕಿ ಆಹಾರ ಇಲಾಖೆ ನಿರೀಕ್ಷಕರು ಪೋಲೀಸ್ ಸಹಕಾರದಲ್ಲಿ ಮಂಗಳವಾರ ಸಂಜೆ ದಾಳಿ ನಡೆಸಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಕುಂದಾಪುರ ಅಹಾರ ನಿರೀಕ್ಷಕ ಸುರೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಒಟ್ಟು 3.60 ಲಕ್ಷ ಮೌಲ್ಯದ 300 ಚೀಲದ 150 ಕ್ವಿಂಟಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಬೈಂದೂರು ಆಹಾರ ನಿರೀಕ್ಷಕ ವಿನಯ ಕುಮಾರ್, ಸಿಬ್ಬಂದಿಗಳಾದ ಪುನೀತ್, ವಿನೂತ, ಬೈಂದೂರು ಠಾಣೆಯ ಮಹಾಬಲ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
