ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೊಡಾಫೋನ್ ಫೌಂಡೇಶನ್ ವತಿಯಿಂದ ವೊಡಾಫೋನ್ ಐಡಿಯಾ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಶಿಕ್ಷಕರಿಗಾಗಿ ಕೊಡಮಾಡುವ 2021ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್. ಗಂಗೊಳ್ಳಿ ಅವರು ಪಡೆದುಕೊಂಡಿದ್ದಾರೆ. ಈ ಬಾರಿ ಭಾರತದ 22 ರಾಜ್ಯಗಳಲ್ಲಿನ ಒಟ್ಟು 110 ಶಿಕ್ಷಕರಿಗೆ ಈ ಪುರಸ್ಕಾರವನ್ನು ನೀಡಲಾಗಿದೆ. ಶಿಕ್ಷಕರ ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲಿನ ಬಹುಮುಖ ಪ್ರತಿಭೆಯ ಸಾಧನೆಗಳನ್ನು ಗಮನಿಸಿ ಹಾಗು ಅವರ ಶೈಕ್ಷಣಿಕ ಕೌಶಲ್ಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಉದ್ದೇಶದೊಂದಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಜ್ಜಾಡಿಯ ಮಾರಿಕಾಂಬ ಮಹಿಳಾ ಸಹಕಾರಿ ಸಂಘದ 2020-21ನೇ ಸಾಲಿನ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕರಾದ ವಿಜಯ ಬಿ.ಗಾಣಿಗ, ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ಶಾರದಾ, ಶಾಂತ, ಚೌಕಿ ಪುಷ್ಪಾ ಖಾರ್ವಿ, ಲಲಿತಾ ಖಾರ್ವಿ, ಶ್ಯಾಮಲಾದೇವಿ, ರತ್ನಾ ಟಿ.ದೇವಾಡಿಗ, ಶಾಂತ ಮರಾರಿ ನಾಯ್ಕ್ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ 2020-21ನೇ ಸಾಲಿನ ಲೆಕ್ಕಪರಿಶೋಧನೆ ವರದಿ ಮಂಡಿಸಿದರು. ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಭಾಸ್ಕರ ಗಾಣಿಗ ಕೊಡಪಾಡಿ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕಿ ರೇಖಾ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗೋಶಾಲೆಗಳಲ್ಲಿನ ಗೋವುಗಳ ಪಾಲನೆಯನ್ನು ಸೇವಾ ಮನೋಭಾವದಿಂದ ಯಾವುದೇ ಪ್ರತಿಫಲಗಳನ್ನು ಬಯಸದೇ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ನಡೆದ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಸರಕಾರ ಜಾನುವಾರು ಹತ್ಯ ಪ್ರತಿಬಂಧಕ ಕಾಯ್ದೆ ಹಾಗೂ ಸಂರಕ್ಷಣೆ ಕಾನೂನು ಜಾರಿಗೆ ತಂದಿದೆ. ಗೋರಕ್ಷಣೆಗಾಗಿ ಸರಕಾರ ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಲು ಮುಂದಾಗಿದ್ದು ಪ್ರತಿ ಜಿಲ್ಲೆಗೆ ಮೊದಲನೇ ಹಂತದಲ್ಲಿ ೨೪ ಲಕ್ಷ ರೂಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ಅನೇಕ ದಾನಿಗಳು ಇದ್ದಾರೆ, ಅವರ ಸಹಕಾರ ಹಾಗೂ ಜನರ ಸಹಭಾಗಿತ್ವದೊಂದಿಗೆ ಗೋಶಾಲೆಗಳನ್ನು ನಿರ್ವಹಣೆ ಮಾಡಬೇಕು ಎಂದ ಅವರು ಸರಕಾರ ಪಶುಗಳ ನಿರ್ವಹಣೆಗೆ ದಿನಕ್ಕೆ 17.50 ರೂಗಳನ್ನು ನೀಡಲು ನಿಗದಿಪಡಿಸಿದೆ. ಆದರೆ ಪಶುಗಳ ನಿರ್ವಹಣೆಗೆ ಇದು ಸಾಕಾಗುವುದಿಲ್ಲ ಹೆಚ್ಚಿನ ಅನುದಾನ ಬೇಕು ಎಂಬ ಬಗ್ಗೆ ಸಂಘ ಸಂಸ್ಥೆಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ‘ನಿರ್ಮಲ ದೇಗುಲ’ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯ ನಡೆಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ, ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ ಸತೀಶ್ ಶೆಟ್ಟಿ, ಉಪನ್ಯಾಸಕರಾದ ಸುಕುಮಾರ ಶೆಟ್ಟಿ, ಕಮಲಶಿಲೆ, ರಸಿಕ್ ಶೆಟ್ಟಿ, ಹಾಗೂ ದೇವಾಲಯದ ಅರ್ಚಕರಾದ ದಯಾನಂದ ಜೋಗಿ ಮತ್ತು ಕುಟುಂಬಸ್ಥರು, ಸ್ವರಾಜ್ಯ 75 ಕಾರ್ಯಕ್ರಮದ ಸಂಚಾಲಕ ಪ್ರದೀಪ್ ಕುಮಾರ್ ಬಸ್ರೂರು ಮತ್ತು ತಂಡದ ಸದಸ್ಯರಾಸ ಸಂತೋಷ ನೇರಳಕಟ್ಟೆ, ಸಂತೋಷ ಬಳ್ಳೂರು, ಭಾರ್ಗವ ಜೋಗಿ, ಸತೀಶ್ ಗುಂಡ್ಮಿ, ಭರತ್ ಗುಡಿಗಾರ್, ಪ್ರಶಾಂತ್ ಖಾರ್ವಿ, ರಾಘವೇಂದ್ರ ಬಳ್ಳೂರು, ಹಿರಿಯರಾದ ನಾಗಪ್ಪ ಬಿಲ್ಲವ, ಸುರೇಶ್ ಬಳ್ಕೂರು ಶಿಬಿರದಲ್ಲಿ ಭಾಗಿಯಾಗಿ ಕಾಲೇಜಿನ ಎನ್.ಎಸ್.ಎಸ್ ಘಟಕದ ಸ್ವಯಂ ಸೇವಕರ ಜೊತೆ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಎನ್.ಎಸ್.ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರಲ್ಲಿ ಅಭಿವೃಧ್ದಿ ಚಟುವಟಿಕೆಗಳನ್ನು ಕೈಗೊಳ್ಳಲು ಹೆಚ್ಚಿನ ರಿಯಾಯಿತಿಗಳು ದೊರೆಯಲಿದ್ದು, ಈ ಕುರಿತು ತಯಾರಿಸಿದ ಕರಡು ಯೋಜನೆಯ ಕುರಿತಂತೆ ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರ ಪ್ರಕಾರ ತಯಾರಿಸಿದ, ಕರಡು ಕರಾವಳಿ ವಲಯ ನಿರ್ವಹಣಾ ಯೋಜನೆಯ ಸಾರ್ವಜನಿಕ ಅಹವಾಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಡು ಯೋಜನೆಯಲ್ಲಿ, ಉಬ್ಬರವಿಳಿತದ ಪ್ರಭಾವಕ್ಕೆ ಒಳಗಾದ ಜಲನಿಕಾಯಗಳ ಭರತರೇಖೆಯಿಂದ 100ಮೀ ವರೆಗೆ ಇದ್ದ ಸಿಆರ್ಝಡ್ ಪ್ರದೇಶವನ್ನು 50ಮೀ. ಗೆ ಕಡಿಮೆಗೊಳಿಸಿದೆ, ಕುದ್ರು ದ್ವೀಪಗಳಿಗೆ ಇದ್ದ 100ಮೀ ವರೆಗೆ ಇದ್ದ ಸಿಆರ್ಝಡ್ ಪ್ರದೇಶವನ್ನು 20ಮೀ ಗೆ ಕಡಿಮೆಗೊಳಿಸಿದೆ. ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಅಥವಾ ಸ್ಥಳೀಯ ನಗರಾಭಿವೃಧ್ದಿ ಯೋಜನಾ ಪ್ರಾಧಿಕಾರಕ್ಕೆ ಸೇರಿಸಿ ಘೋಷಣೆಯಾದ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ರಿಂದ 2ಕ್ಕೆ ಬದಲಾಯಿಸಲಾಗಿದೆ, 2011 ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭತ್ತ ಕಟಾವು ಯಂತ್ರದ ದಲ್ಲಾಲಿಗಳು ಕಟಾವಿಗೆ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ಖಂಬದಕೋಣೆ ರೈ.ಸೇ.ಸ. ಸಂಘದ ಸದಸ್ಯರು ಪ್ರತಿ ವರ್ಷವು ದೂರು ನೀಡುತ್ತಿದ್ದು, ಈ ವರ್ಷದ ಭತ್ತ ಕಟಾವು ಯಂತ್ರದ ಬಾಡಿಗೆ ಬೆಲೆ ನಿಗದಿಪಡಿಸುವ ಸಂದರ್ಭದಲ್ಲಿ ಖಂಬದಕೋಣೆ ರೈ.ಸೇ.ಸ ಸಂಘದ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸುವಂತೆ ಖಂಬದಕೋಣೆ ರೈತರ ಸೇವಾ ಸಹಾಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ರೈತಕೂಟದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಹಾಗೂ ಕೃಷಿ ನಿರ್ದೇಶಕರಲ್ಲಿ ಮನವಿ ಮಾಡಿದೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 9 ಗ್ರಾಮಗಳ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು ಸುಮಾರು 32 ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಒಳಗೊಂಡಿದೆ ಈ 9 ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 4800 ಎಕರೆಗೂ ಮಿಕ್ಕಿ ಕೃಷಿ ಭೂಮಿಯಲ್ಲಿ ಭತ್ತ, ನೆಲಗಡಲೆ, ಉದ್ದು ಇತ್ಯಾದಿ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಸಂಘದಲ್ಲಿ ನಿರಂತರವಾಗಿ ಒಂದು ವರ್ಷದಿಂದ ಹಾಗೂ ಕಳೆದ ರೈತಕೂಟದ ಮಾಸಿಕ ಸಭೆಯಲ್ಲಿ ಭತ್ತ ಕಠಾವು ಯಂತ್ರದ ಬಾಡಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ – 66 ಅಪಘಾತಗಳ ಆಗರವಾಗಿ ಪರಿಣಮಿಸುತ್ತಿದೆ. ನಿರಂತರವಾಗಿ ಈ ಭಾಗದಲ್ಲಿ ಸಂಭವಿಸುತ್ತಿರುವ ಅಪಘಾತದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಗಂಭೀರವಾಗಿ ಗಾಯಗೊಂಡಿದ್ದಾರೆ ಅಲ್ಲದೇ ಹಲವಾರು ಜಾನುವಾರುಗಳು ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಆಗ್ರಹಿಸಿದ್ದಾರೆ. ಶಿರೂರಿನಿಂದ ಆರಂಭಿಸಿ ತಲ್ಲೂರು ತನಕವೂ ರಾ.ಹೆ-66 ಅವ್ಯವಸ್ಥೆ ಎದ್ದು ಕಾಣುತ್ತಿದೆ. ತರಾತುರಿಯಲ್ಲಿ ಕಾಮಗಾರಿ ಮುಗಿಸಿ ಟೋಲ್ ಸಂಗ್ರಹಿಸುತ್ತಿರುವ ಗುತ್ತಿಗೆ ಕಂಪೆನಿಗೆ ಹೆದ್ದಾರಿ ಕಾಮಗಾರಿಯಲ್ಲಿನ ಲೋಪ ಕಾಣದಿರುವುದು ದುರಂತವೇ ಸರಿ. ಶಿರೂರಿನಿಂದ ಬೈಂದೂರಿಗೆ ತೆರಳುವ ಹೆದ್ದಾರಿಯ ಒತ್ತಿನಣೆ ತಿರುವಿನಲ್ಲಿ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿದ್ದು, ಹಲವು ಪ್ರಾಣಹಾನಿಯೂ ಆಗಿದೆ. ಕಳೆದೊಂದು ವಾರದಲ್ಲಿಯೇ ಒತ್ತಿನಣೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎರಡು ಅಫಘಾತಗಳು ಸಂಭವಿಸಿದೆ. ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ವಾಹನ ಅಪಘಾತ ಸಂಭವಿಸುತ್ತಿದ್ದು, ಇನ್ನಾದರೂ ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬೈಂದೂರು, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬೀಸ್ ಮಾಹಿತಿ ಶಿಬಿರ ಹಮ್ಮಿಕೊಳ್ಳಲಾಯಿತು. ಬೈಂದೂರು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ರೇಬೀಸ್ ಮಾರಕ ರೋಗದ ಕುರಿತು ಮನೋಜ್ಞವಾಗಿ ಮಾಹಿತಿ ನೀಡಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನಾವಳಿಗಳಲ್ಲಿ ಪಾಲ್ಗೊಂಡರು. ಈ ಸಂದರ್ಭ ಮಾಹಿತಿ ಶಿಬಿರದಲ್ಲಿ ಮ್ಯಾಕೋಡ್ ಕೆ. ಎಮ್. ಎಪ್ ಡೈರಿ ಕಾರ್ಯದರ್ಶಿ ಕುಶಾಲ ಗಾಣಿಗ, ಹಿರಿಯ ಪಶು ಪರೀಕ್ಷಾಧಿಕಾರಿ ಪ್ರಶಾಂತ್ ಕುಲಕರ್ಣಿ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಆರ್.ಕೆ ಬಿಲ್ಲವ ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯ ರಾಜೀವ ಶೆಟ್ಟಿ, ಮುಖ್ಯ ಶಿಕ್ಷಕ ರವೀದಾಸ್ ಶೆಟ್ಟಿ, ಶಿಕ್ಷಕ ರಾಜಾರಾಮ ಭಟ್ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ರೋಸಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಕಾರಂತ ಟ್ರಸ್ಟ್(ರಿ)ಉಡುಪಿ ಇವರ ಸಹಯೋಗದಲ್ಲಿ ನಡೆಯುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ 17ನೇ ವರ್ಷದ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಶೀರ್ಷಿಕೆ ನಿರೂಪಿತ-2021(ಎಣೆಯಿಲ್ಲದ ಚಕಿತ) ಅನಾವರಣವನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅವರು ಅನಾವರಣಗೊಳಿಸಿದರು. ಕಾರಂತ ಹುಟ್ಟೂರ ಪ್ರಶಸ್ತಿ 2021ನೆ ಸಾಲಿನಲ್ಲಿ 140ಕ್ಕೂ ಮಿಕ್ಕಿ ತೂಗುಸೇತುವೆ ನಿರ್ಮಿಸಿ ಸಾಧನೆ ಮಾಡಿದ ಗಿರೀಶ್ ಭಾರಧ್ವಜ್ ಅವರಿಗೆ ಅಕ್ಟೋಬರ್ 10 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನೀಡಲಾಗುವುದು ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಮಾತನಾಡಿ ಕಾರಂತೋತ್ಸವ ಅಕ್ಟೋಬರ್ 1ರಿಂದ 10 ತನಕ ನಡೆಯಲಿದ್ದು ವೆಬಿನಾರ್, ಸಂಗೀತ ಲಹರಿ, ಕಾರಂತ ಚಿಂತನ, ಯಕ್ಷಗುಂಜನ, ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮ ಆನ್ಲೈನ್ ನಡೆಯಲಿದ್ದು ಕಾರಂತ ಥೀಮ್ ಪಾರ್ಕ್ ಫೇಸ್ ಬುಕ್ ಹಾಗೂ ಯುಟ್ಯೂಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ ಮತ್ತು ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಎಚ್.ಗಣೇಶ ಕಾಮತ್ ಶುಭಾಶಂಸನೆಗೈದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಮತ್ತು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಪೌಷ್ಟಿಕ ಆಹಾರದ ಮಾಹಿತಿ, ಪ್ರಾತ್ಯಕ್ಷಿಕೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ…
